Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನನ್ನ ನೆನಪಿನಲ್ಲಿ ನೀನು ಕಣ್ಣೀರು...

ನನ್ನ ನೆನಪಿನಲ್ಲಿ ನೀನು ಕಣ್ಣೀರು ಹಾಕಬೇಡ, ಮನಸ್ಸು ನೋಯಿಸಿಕೊಳ್ಳಬೇಡ

ಬಿ. ಶ್ರೀಪಾದ ಭಟ್ಬಿ. ಶ್ರೀಪಾದ ಭಟ್28 July 2024 1:15 PM IST
share
ನನ್ನ ನೆನಪಿನಲ್ಲಿ ನೀನು ಕಣ್ಣೀರು ಹಾಕಬೇಡ, ಮನಸ್ಸು ನೋಯಿಸಿಕೊಳ್ಳಬೇಡ
ತಮ್ಮ ರೇಶ್ಮೆಯಂತಹ ನುಣುಪಾದ ಧ್ವನಿಯಲ್ಲಿ ಹತಾಶಗೊಂಡ ಮನಸ್ಸಿನ, ಮುರಿದ ಹೃದಯದ ಭಾವನೆಗಳನ್ನು ನಮ್ಮೊಳಗೆ ಆಳವಾಗಿ ತೇಲಿ ಬಿಡುವ ತಲಾತ್ ಒಬ್ಬ ಸದಾ ಕಾಡುವ ಹಾಡುಗಾರ. ಅವರ ಎಲ್ಲಾ ಹಾಡುಗಳಲ್ಲಿ ಉರ್ದು ಭಾಷೆಯನ್ನು ಬಳಸಿಕೊಂಡು, ಹೊರಹೊಮ್ಮಿಸುವ ಶೈಲಿ ಅನನ್ಯವಾದದ್ದು. ಉರ್ದು ಭಾಷೆ ತಲಾತ್ ಧ್ವನಿಯಲ್ಲಿ ತನ್ನ ಎಲ್ಲಾ ಗುಣಗಳೊಂದಿಗೆ ನಮ್ಮೊಳಗೆ ಇಳಿಯುತ್ತಾ ಹೋಗುತ್ತದೆ.

ಆತ ಲಕ್ನೊ ಬಾಯ್. ಹೆಸರು ತಲಾತ್ ಮಹಮೂದ್. ತನ್ನ 16ನೇ ವಯಸ್ಸಿನಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಪರಿಣಿತಿ ಸಾಧಿಸಿದ ಈ ಲಕ್ನೊ ಬಾಯ್ ಗಝಲ್ ಹಾಡುವುದರಲ್ಲಿ ಜನಪ್ರಿಯನಾಗಿದ್ದ. ಆತನ 17ನೇ ವಯಸ್ಸಿನಲ್ಲಿಯೇ ಎಚ್‌ಎಂವಿ ಮೂಲಕ ಗಝಲ್ ಹಾಡುಗಳ ಡಿಸ್ಕ್ ಬಿಡುಗಡೆಯಾಗಿತ್ತು. ಆ 40ರ ದಶಕದ ಪ್ರಖ್ಯಾತ ಗಝಲ್ ಹಾಡುಗಾರ ಉಸ್ತಾದ್ ಬರ್ಖಾತ್ ಅಲಿ ಖಾನ್‌ನೊಂದಿಗೆ ಈ ಲಕ್ನೊ ಬಾಯ್ ಗಝಲ್ ಹಾಡುಗಳನ್ನು ಗುನುಗುನಿಸುತ್ತಿದ್ದರು. 40ರ ದಶಕದ ಮಧ್ಯ ಭಾಗದಲ್ಲಿ ಮುಂಬೈಗೆ ಬಂದ ತಲಾತ್‌ಗೆ ಆಗಿನ ಹಿಂದಿ ಸಿನೆಮಾದ ಸಂಗೀತ ನಿರ್ದೇಶಕರು ತೀರಾ ತೆಳುವಾದ ಧ್ವನಿ ಕಂಪಿಸುತ್ತದೆ ಎಂದು ಮೂದಲಿಸಿ ಅವಕಾಶಗಳನ್ನು ನಿರಾಕರಿಸಿದ್ದರು. ಕಡೆಗೆ 1949ರಲ್ಲಿ ಅನಿಲ್ ಬಿಶ್ವಾಸ್ ಸಂಗೀತ ನಿರ್ದೇಶನದ, ದಿಲೀಪ್ ಕುಮಾರ್ ಅಭಿನಯದ ‘ಆರ್ಜೂ’ ಸಿನೆಮಾಕ್ಕೆ ‘ಐ ದಿಲ್ ಮುಜೆ ಐಸೆ ಜಗಾ ಲೇ ಚಲ್’ ಎನ್ನುವ ಹಾಡನ್ನು ಹಾಡುವ ಅವಕಾಶ ದೊರಕಿತು. ಮುಂದೆ ಸುಮಾರು ಮೂರು ದಶಕಗಳ ಕಾಲ ಗಝಲ್, ಸಿನೆಮಾ ಹಾಡುಗಳನ್ನು ಹಾಡಿದ ತಲಾತ್ ಮಹಮೂದ್ ತುಂಬಾ ಸರಳ ಮತ್ತು ಸಹಜ ಗಾಯಕರಾಗಿದ್ದರು. ಇವರ ಧ್ವನಿ ಮತ್ತು ಮೃದು ವ್ಯಕ್ತಿತ್ವ ಶಾಸ್ತ್ರೀಯ ಸಂಗೀತಕ್ಕೆ ಸರಿ ಎಂದು ಟೀಕಿಸುವವರಿಗೆ ಅತ್ಯುತ್ತಮ ಹಿಂದಿ ಹಾಡುಗಳನ್ನು ಹಾಡಿ ಬಾಯಿ ಮುಚ್ಚಿಸಿದ್ದರು. ತಲಾತ್ ಮಹಮೂದ್ ಅವರು ಪದಗಳನ್ನು ಬಳಸಿಕೊಳ್ಳುವ ಶೈಲಿ, ಸ್ವರ ಪ್ರಯೋಗದ ಶೈಲಿ, ಧ್ವನಿಯ ಏರಿಳಿತದ ಶೈಲಿ 40, 50ರ ದಶಕದ ಹಿಂದಿ ಹಾಡುಗಳಿಗೆ ಹೊಸ ಕಂಪನವನ್ನು ತಂದು ಕೊಟ್ಟವು.

ತಲಾತ್ ಮಹಮೂದ್‌ಗೆ 24 ಫೆಬ್ರವರಿ 2024ರಂದು ನೂರು ವರ್ಷಗಳು ತುಂಬಿದವು.

50ರ ದಶಕದ ಆರಂಭದಲ್ಲಿ ಬಿಡುಗಡೆಯಾದ ದಿಲೀಪ್ ಕುಮಾರ್ ಅಭಿನಯದ ‘ದಾಗ್’ ಸಿನೆಮಾಕ್ಕೆ ‘ಐ ಮೇರಿ ದಿಲ್ ಕಹೀ ಔರ್ ಚಲ್, ಗಮ್ ದುನಿಯಾ ಸೆ ದಿಲ್ ಭರ್ ಗಯಾ’ ಎನ್ನುವ ಹಾಡನ್ನು ಭೈರವಿ ರಾಗದಲ್ಲಿ ಹಾಡಿದರೆ, ಅದೇ ಸಮಯದಲ್ಲಿ ದೇವ್ ಆನಂದ್ ಅಭಿನಯದ ‘ಟ್ಯಾಕ್ಸಿ ಡ್ರೈವರ್’ ಸಿನೆಮಾಕ್ಕೆ ಹಾಡಿದ ‘ಜಾಯೆತೊ ಜಾಯೆ ಕಹಾ, ಸಮ್‌ಜೇಗಾ ಕೌನ್ ಯಹಾ’ ಎನ್ನುವ ಹಾಡನ್ನು ಜಾನ್‌ಪುರಿ ರಾಗದಲ್ಲಿ ಹಾಡಿದ್ದರು. ತಲಾತ್ ಎಂತಹ ಆಳದಲ್ಲಿ ಮತ್ತು ಮಾಧುರ್ಯದಲ್ಲಿ ಹಾಡಿದರೆಂದರೆ ಎರಡೂ ಹಾಡುಗಳು ವಿಭಿನ್ನ ನಾಯಕರ ಉದಾಸ, ಆಲಸ್ಯದ ಮನಸ್ಥಿತಿಯನ್ನು ಒಂದೇ ಸ್ತರದಲ್ಲಿ ಕೇಳುಗರಿಗೆ ತಲುಪಿಸುತ್ತಿದ್ದವು. ದಿಲೀಪ್ ಕುಮಾರ್ ಮತ್ತು ದೇವ್ ಆನಂದ್ ಸಮಾನ ದುಃಖಿಗಳಾಗಿಯೇ ನಮಗೆ ಕಂಡು ಬರುತ್ತಿದ್ದರು. ತಲಾತ್‌ರ ಪ್ರತಿಭೆ ಮತ್ತು ಪರಿಪೂರ್ಣತೆ ಇದನ್ನು ಸಾಧ್ಯವಾಗಿಸಿತ್ತು. 1953ರಲ್ಲಿ ಬಿಡುಗಡೆಗೊಂಡ ‘ಫುಟ್‌ಪಾತ್’ ಸಿನೆಮಾಕ್ಕೆ ದಿಲೀಪ್ ಕುಮಾರ್ ಅಭಿನಯದ, ಖಯ್ಯಾಮ್ ಸಂಗೀತ ನೀಡಿದ ಶಾಮ್ ಎ ಗಮ್ ಕಿ ಕಸಮ್, ಆಜ್ ಗಮ್‌ಗೀ ಹೈ ಹಮ್ ಎನ್ನುವ ಹಾಡನ್ನು ತಮ್ಮ ಒಳದ್ರವ್ಯವನ್ನು ಬಳಸಿ ಹಾಡಿದ್ದರು. ಅದಕ್ಕೆ ದಿಲೀಪ್ ಕುಮಾರ್ ಅಭಿನಯವೂ ಅಷ್ಟೇ ಸರಿಸಾಟಿಯಾಗಿತ್ತು. ಆ ಹಾಡು ಅತ್ಯುತ್ತಮ ಹಿಂದಿ ಸಿನೆಮಾ ಗಜಲ್‌ಗಳಲ್ಲಿ ಒಂದು. ಇಂದಿಗೂ ‘ಶಾಮ್ ಎ ಗಮ್ ಕಿ ಕಸಮ್’ ಹಾಡು, ತಲಾತ್ ದ್ವನಿ ನಮ್ಮನ್ನು ಕಾಡುತ್ತದೆ, ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತದೆ. ಹೌದು ತಲಾತ್ ಮಹಮೂದ್ ಧ್ವನಿ ನಮ್ಮನ್ನು ಮತ್ತೊಂದು ಲೋಕಕ್ಕೆ ಕೊಂಡೊಯ್ಯತ್ತದೆ. ಅದೇ ಕಾಲದ ರಾಜೇಂದ್ರ ಕ್ರಿಷ್ಣನ್ ಸಂಗೀತ ನೀಡಿದ ‘ದೇಖ್ ಕಬೀರಾ ರೋಯಾ’ ಸಿನೆಮಾದಲ್ಲಿ ಮಿಶ್ರ ಬಾಗೇಶ್ವರಿ ರಾಗದಲ್ಲಿ ಹಾಡಿದ ‘ಹಮ್‌ಸೆ ಆಯಾ ನ ಗಯಾ, ತುಮ್‌ಸೆ ಬುಲಾಯಾ ನ ಗಯಾ’ ಎನ್ನುವ ಹಾಡು ಹಗುರವಾದ ಮನಸ್ಥಿತಿಯಲ್ಲಿ, ನಿರುಮ್ಮಳ ಭಾವದಲ್ಲಿ ಪ್ರಾರಂಭವಾಗುತ್ತಾ ಕಡೆಗೆ ‘ದಾಗ್ ಜೊ ತುಮ್ನೆ ದಿಯಾ, ದಿಲ್ ಸೆ ಮಿಠಾಯ ನ ಗಯಾ’ ಎಂದು ಭಾರವಾಗುತ್ತ ಕಳೆದುಕೊಂಡಿದ್ದು, ಪಡೆದುಕೊಂಡಿದ್ದಾದರೂ ಏನು ಎನ್ನುವ ಮನಸ್ಥಿತಿಯೊಂದಿಗೆ ಮುಗಿಯುತ್ತದೆ. ಇಲ್ಲಿ ಸ್ವರಚಿಹ್ನೆಗಳನ್ನು ಗುನುಗುತ್ತಾ ರಾಗದ ಸಂಕೀರ್ಣತೆಯನ್ನು ತಿಳಿಗೊಳಿಸಿದ್ದು ಇಂದಿಗೂ ವಿಸ್ಮಯ. ಈ ಎರಡೂ ಭಾವಗಳನ್ನು, ಪಡೆದುಕೊಂಡ, ಕಳೆದುಕೊಂಡ ಮನಸ್ಥಿತಿಯನ್ನು ತಲಾತ್ ತನ್ನ ಧ್ವನಿಯಲ್ಲಿ, ಅದ್ಭುತವಾದ ಏರಿಳಿತಗಳ ಮೂಲಕ ನಮಗೆ ದಾಟಿಸುತ್ತಾ ಹೋಗುತ್ತಾರೆ. ಹೌದು ಈ ಧ್ವನಿ ನಮಗೆ ಎಲ್ಲಾ ಭಾವಗಳನ್ನು ದಾಟಿಸುತ್ತಾ ಹೋಗುತ್ತದೆ. ಅದೂ ಹೇಗೆ, ನಾವೂ ಅವರೊಂದಿಗೆ ಕಂಪಿಸುವ ಹಾಗೆ.

1955ರಲ್ಲಿ ಬಿಡುಗಡೆಗೊಂಡ ‘ಬಾರಾದರಿ’ ಸಿನೆಮಾದ, ನಾಶಾದ್ (ನೌಶಾದ್ ಅಲ್ಲ) ಸಂಗೀತ ನೀಡಿದ ‘ತಸವೀರ್ ಬನಾತಾ ಹೂ, ತಸವೀರ್ ನಹೀ ಬನತೀ, ಎಕ್ ಖ್ವಾಬ್ ಸೆ ದೇಖಾ ಹೈ, ತಾಬೀರ್ ನಹೀ ಬನತೀ’ ಎನ್ನುವ ಹಾಡು ತಲಾತ್ ಧ್ವನಿಯ ಒಂದು ಕ್ಲಾಸಿಕ್. ಅದನ್ನು ರೇಶ್ಮೆಯಂತಹ ನುಣುಪಿನ ಧ್ವನಿಯಲ್ಲಿ ಹಾಡಿದ ತಲಾತ್ ‘ದಮ್ ಭರ್ ಕೆ ಲಿಯೆ ಮೇರಿ, ದುನಿಯಾ ಮೆ ಚಲೇ ಆವೋ’ ಎಂದು ಹಗುರ ಅಂದರೆ ಹಗುರ ಧ್ವನಿಯಲ್ಲಿ ಕರೆಯುವಾಗ ನಾವು ಆಗಲೇ ಆ ದುನಿಯಾದಲ್ಲಿ ಸೇರಿ ಹೋಗಿರುತ್ತೇವೆ.

‘ಛಾಯಾ’ ಸಿನೆಮಾದ ‘ಇತನಾನ ಮುಜೆಸೆ ತು ಪ್ಯಾರ್ ಬಡಾ, ತೊ ಮೈ ಎಕ್ ಬಾದಲ್ ಆವಾರ’, ‘ಸುಜಾತಾ’ ಸಿನೆಮಾದ ‘ಜಲ್ತೇ ಹೈ ಜಿಸ್ಕೆ ಲಿಯೇ’, ‘ಉಸ್ನೆ ಕಹಾ ಥಾ’ ಸಿನೆಮಾದ ‘ಆಹಾ ರಿಮ್ ಜಿಮ್ ಕೆ ಯೆ ಪ್ಯಾರೆ ಪ್ಯಾರೆ ಗೀತ್ ಲಿಯೆ’, ‘ಮಧೋಶ್’ ಸಿನೆಮಾದ ‘ಮೇರೆ ಯಾದ್ ಮೆ ತುಮ್ನಾ ಆಸೂ ಬಹಾ ನ, ನ ದಿಲ್ ಕೋ ಜಲಾನ, ಮುಜೇ ಭೂಲ್ ಜಾನಾ’, ‘ಬಾಬುಲ್’ ಸಿನೆಮಾದ ‘ಮಿಲ್ತೆ ಹಿ ಆಂಖೇ, ದಿಲ್ ಹುವಾ ದೀವಾನಾ ಕಿಸಿ ಕಾ’ ಮತ್ತು ಮುಂತಾದ ಹಾಡುಗಳು ಅವರ ಮಹತ್ವದ, ಮನಸೂರೆಗೊಳ್ಳುವ ಹಾಡುಗಳು. ಮಿರ್ಝಾ ಗಾಲಿಬ್‌ನ ‘ದಿಲ್ ಎ ನಾದಾನ್ ತುಜೆ ಹುವಾ ಕ್ಯಾ ಹೈ’ ಹಾಡಿಗೆ 69 ವರ್ಷಗಳಾದರೂ ತನ್ನ ತಾರುಣ್ಯ ಕಳೆದುಕೊಂಡಿಲ್ಲ. ಅರುವತ್ತರ ದಶಕದಲ್ಲಿ ರೋಮ್ಯಾಂಟಿಕ್‌ನ ‘ಯಾಹೂ’ ಅಬ್ಬರ ಶುರುವಾಗಿ ಮೆಲು ದನಿಯ ತಲಾತ್‌ಗೆ ಬೇಡಿಕೆ ಕಡಿಮೆಯಾಗುತ್ತಾ ಬಂದರೂ ಸಹ ‘ಜಹಾ ಆರಾ’ ಸಿನೆಮಾದಲ್ಲಿ ಹಾಡಿದ ‘ಫಿರ್ ವಹೀ ಶಾಮ್ ವಹೀ ಗಮ್’ ಹಾಡು ಹಿಂದಿನ ಮಾಧುರ್ಯ ಕಳೆದುಕೊಂಡಿರಲಿಲ್ಲ. ತಮ್ಮ ರೇಶ್ಮೆಯಂತಹ ನುಣುಪಾದ ಧ್ವನಿಯಲ್ಲಿ ಹತಾಶಗೊಂಡ ಮನಸ್ಸಿನ, ಮುರಿದ ಹೃದಯದ ಭಾವನೆಗಳನ್ನು ನಮ್ಮೊಳಗೆ ಆಳವಾಗಿ ತೇಲಿ ಬಿಡುವ ತಲಾತ್ ಒಬ್ಬ ಸದಾ ಕಾಡುವ ಹಾಡುಗಾರ. ಅವರ ಎಲ್ಲಾ ಹಾಡುಗಳಲ್ಲಿ ಉರ್ದು ಭಾಷೆಯನ್ನು ಬಳಸಿಕೊಂಡು, ಹೊರಹೊಮ್ಮಿಸುವ ಶೈಲಿ ಅನನ್ಯವಾದದ್ದು. ಉರ್ದು ಭಾಷೆ ತಲಾತ್ ಧ್ವನಿಯಲ್ಲಿ ತನ್ನ ಎಲ್ಲಾ ಗುಣಗಳೊಂದಿಗೆ ನಮ್ಮೊಳಗೆ ಇಳಿಯುತ್ತಾ ಹೋಗುತ್ತದೆ.

ಐವತ್ತರ ಆ ದಶಕದಲ್ಲಿ ಸಾಹಿರ್, ಕೈಫಿ ಅಜ್ಮಿ, ಖಯ್ಯಾಮ್, ನೌಶಾದ್, ಮಜರೂಹ್ ಸುಲ್ತಾನ್ ಪುರಿ, ಶೈಲೇಂದ್ರ, ಹಸರತ್ ಜೈಪುರಿ, ಮಹಮದ್ ರಫಿ, ಮುಕೇಶ್, ಶಕೀಲ್ ಬದಾಯೆ, ಸಿ.ರಾಮಚಂದ್ರ, ಮದನ್ ಮೋಹನ್, ಗುಲಾಮ್ ಮಹಮ್ಮದ್, ಶಂಕರ್ ಜೈಕಿಶನ್, ಲತಾ ಮಂಗೇಶ್ಕರ್, ಮನ್ನಾಡೆರಂತಹ ಮಹಾನ್ ಸಂಗೀತ ನಿರ್ದೇಶಕರು, ಕಲಾವಿದರು, ಕವಿಗಳೊಂದಿಗೆ ಹಾಡಿದ ತಲಾತ್ ಮರೆಯಲಾಗದ ಹಾಡುಗಾರ. ಮನುಷ್ಯನ ಮನಸ್ಸು ಜೀವಂತಿಕೆಯಾಗಿರುವವರೆಗೂ ತಲಾತ್‌ರ veಟveಣಥಿ ಧ್ವನಿಗೆ ಮಾರು ಹೋಗುತ್ತಲೇ ಇರುತ್ತದೆ. ಕಾವ್ಯವನ್ನು ಮತ್ತೊಂದು ಸ್ತರಕ್ಕೆ ಎತ್ತರಿಸುವ ತಲಾತ್ ಮಹಮೂದ್‌ರವರ ಧ್ವನಿ ನಮ್ಮನ್ನು ಕಾಡುತ್ತಲೇ ಇರುತ್ತದೆ. ಅವರ ಗಝಲ್ ಘರಾಣವು ಮುಂದೆ ಜಗಜಿತ್ ಸಿಂಗ್, ಮೆಹಂದಿ ಹಸನ್ ತರಹದ ಗಾಯಕರಿಗೆ ಸ್ಫೂರ್ತಿಯಾಗಿದೆ.

ಈ ಲಕ್ನೊ ಬಾಯ್ ನಮ್ಮನ್ನು ಅಗಲಿ 26 ವರ್ಷಗಳಾದವು. ಆದರೆ ತಲಾತ್ ಹಾಡಿದ ಮನಸ್ಸಿನೊಳಗೆ ಆಸೆಗಳು ಬೇಯುತ್ತಿವೆ, ಕಣ್ಣಿನೊಳಗಡೆ ಕಣ್ಣೀರು ಬಾಕಿ ಇದೆ, ನಾನು ಮತ್ತು ನನ್ನ ಒಂಟಿತನ ಮಾತ್ರ ಇಲ್ಲಿದೆ ಸಾಲುಗಳು ಸದಾ ನಮ್ಮೊಂದಿಗೆ...

share
ಬಿ. ಶ್ರೀಪಾದ ಭಟ್
ಬಿ. ಶ್ರೀಪಾದ ಭಟ್
Next Story
X