Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಾಂಪೌಂಡ್ ಇಲ್ಲ, ಭದ್ರತೆಯೂ ಇಲ್ಲ;...

ಕಾಂಪೌಂಡ್ ಇಲ್ಲ, ಭದ್ರತೆಯೂ ಇಲ್ಲ; ಪಾಳುಬಿದ್ದ ತೋಟಗಾರಿಕೆ ಕ್ಷೇತ್ರ

ನಿರ್ವಹಣೆ ಕೊರತೆಯಿಂದ ಸಸಿಗಳಿಗೆ ಹಾನಿ; ಪಿಕ್ನಿಕ್ ತಾಣ ಅಭಿವೃದ್ಧಿಗೆ ಸಾರ್ವಜನಿಕರ ಒತ್ತಾಯ

ಮಹಮ್ಮದ್ ಮುಸ್ತಫಾ ಕಾಟಮಳ್ಳಿಮಹಮ್ಮದ್ ಮುಸ್ತಫಾ ಕಾಟಮಳ್ಳಿ30 Oct 2026 7:45 AM IST
share
ಕಾಂಪೌಂಡ್ ಇಲ್ಲ, ಭದ್ರತೆಯೂ ಇಲ್ಲ; ಪಾಳುಬಿದ್ದ ತೋಟಗಾರಿಕೆ ಕ್ಷೇತ್ರ

ದೇವದುರ್ಗ : ಪಟ್ಟಣದ ತೋಟಗಾರಿಕೆ ಕ್ಷೇತ್ರ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳ ಕೊರತೆಯಿಂದ ಪಾಳುಬಿದ್ದಿದ್ದು, ಕಾಂಪೌಂಡ್ ಹಾಗೂ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಜಾನುವಾರುಗಳು ಸಸಿಗಳನ್ನು ನಾಶಪಡಿಸುತ್ತಿವೆ. ಇನ್ನು ಕೆಲವರು ಆವರಣದೊಳಗೆ ಬಂದು ಮಲವಿಸರ್ಜನೆ ಮಾಡುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಸಮಸ್ಯೆಗಳ ಕುರಿತು ಅಧಿಕಾರಿಗಳು ಗಮನಹರಿಸದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 20 ವರ್ಷಗಳ ಹಿಂದೆ ಪಟ್ಟಣದ ಪ್ರಮುಖ ಪಿಕ್ನಿಕ್ ತಾಣವಾಗಿದ್ದ ತೋಟಗಾರಿಕೆ ಕ್ಷೇತ್ರ ಇಂದು ನಿರ್ವಹಣೆ, ವಿದ್ಯುತ್ ಮತ್ತು ನೀರಿನ ಕೊರತೆಯಿಂದ ತನ್ನ ಹಿಂದಿನ ಕಳೆ ಕಳೆದುಕೊಂಡಿದೆ. ಬೆಳೆಸಿದ ಸಸಿಗಳನ್ನು ಸಂರಕ್ಷಿಸುವಲ್ಲಿಯೂ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಆರೋಪಗಳಿವೆ. ಕಾಂಪೌಂಡ್ ದುರಸ್ತಿ, ಸ್ವಚ್ಛತೆ, ನೀರಿನ ವ್ಯವಸ್ಥೆ ಹಾಗೂ ಕಾವಲುಗಾರರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

20ಕ್ಕೂ ಹೆಚ್ಚು ಬಗೆಯ ಸಸಿಗಳ ಸಂಗ್ರಹ :

ತೋಟಗಾರಿಕೆ ಕ್ಷೇತ್ರದಲ್ಲಿ ಕ್ರೋಟಾನ್, ಅಕಲಿಫಾ, ಮೆಹಂದಿ, ಆಫ್ರಿಕನ್ ಲಿಲ್ಲಿ, ರೇನ್ ಲಿಲ್ಲಿ, ನುಗ್ಗೆ, ಕರಿಬೇವು, ದುಂಡುಮಲ್ಲಿಗೆ, ದಾಸವಾಳ, ಮಲ್ಲಿಗೆ ಸೇರಿದಂತೆ ಹಲವು ಬಗೆಯ ಸಸಿಗಳನ್ನು ಬೆಳೆಸಲಾಗಿದೆ. ಹಸಿರಿನಿಂದ ಕಂಗೊಳಿಸಬೇಕಿದ್ದ ಈ ಸ್ಥಳ ಸೂಕ್ತ ನಿರ್ವಹಣೆಯಿಲ್ಲದೆ ಸೊರಗುತ್ತಿದೆ. ಬೆಳೆದ ಸಸಿಗಳ ಮಾರಾಟ ಹಾಗೂ ತೋಟಗಾರಿಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವೂ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬುದು ಸ್ಥಳೀಯರ ದೂರಾಗಿದೆ.

ಪಟ್ಟಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ವಿಹಾರಕ್ಕೆ ತೆರಳಲು ಸೂಕ್ತ ಸ್ಥಳಗಳ ಕೊರತೆಯಿದೆ. ತೋಟಗಾರಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಉದ್ಯಾನವನದ ಮಾದರಿಯಲ್ಲಿ ರೂಪಿಸಿದರೆ ವಿದ್ಯಾರ್ಥಿಗಳಿಗೆ ಮನರಂಜನೆಯ ಜತೆಗೆ ಸಸ್ಯಗಳ ಕುರಿತು ಪ್ರಾಯೋಗಿಕ ಜ್ಞಾನ ಪಡೆಯಲು ಅವಕಾಶವಾಗಲಿದೆ. ಸಾರ್ವಜನಿಕರಿಗೂ ವಿಶ್ರಾಂತಿ ಪಡೆಯಲು ಉತ್ತಮ ಸ್ಥಳ ದೊರೆಯಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ರೈತರಿಗೆ ಎರೆಹುಳು ಗೊಬ್ಬರದ ಪ್ರಯೋಜನ :

ತೋಟಗಾರಿಕೆ ಕ್ಷೇತ್ರದಲ್ಲಿ ತಯಾರಿಸುವ ಎರೆಹುಳು ಗೊಬ್ಬರವನ್ನು ರೈತರಿಗೆ ಕಡಿಮೆ ದರದಲ್ಲಿ ಒದಗಿಸುವ ವ್ಯವಸ್ಥೆ ಕಲ್ಪಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಸಾವಯವ ತ್ಯಾಜ್ಯವನ್ನು ಎರೆಹುಳುಗಳ ಮೂಲಕ ವಿಘಟಿಸಿ ತಯಾರಿಸುವ ಈ ಗೊಬ್ಬರ ಮಣ್ಣಿನ ಫಲವತ್ತತೆ ಹೆಚ್ಚಿಸಲು, ತೇವಾಂಶ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಸುಧಾರಿಸಲು ಹಾಗೂ ಸಸ್ಯಗಳಿಗೆ ಅಗತ್ಯ ಪೋಷಕಾಂಶಗಳನ್ನು ಒದಗಿಸಲು ಸಹಕಾರಿಯಾಗಿದೆ. ಬೇರಿನ ಬೆಳವಣಿಗೆಗೂ ನೆರವಾಗುತ್ತದೆ.

ಈ ಗೊಬ್ಬರದ ಪ್ರಯೋಜನಗಳ ಕುರಿತು ರೈತರಿಗೆ ಮಾಹಿತಿ ನೀಡುವ ಜತೆಗೆ ಸಸಿಗಳ ಲಭ್ಯತೆ, ಮಾರಾಟ ಮತ್ತು ಸಾವಯವ ಕೃಷಿಯ ಕುರಿತು ಅರಿವು ಮೂಡಿಸುವ ಕೇಂದ್ರವಾಗಿ ತೋಟಗಾರಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಮಂಜೂರಾಗಿದ್ದರೂ ಇನ್ನೂ ಬಿಡುಗಡೆಯಾಗಿಲ್ಲ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು, ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದರ ಜತೆಗೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

-ಖಾದರ್ ಬಾಷಾ, ಹಿರಿಯ ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ, ದೇವದುರ್ಗ

ತೋಟಗಾರಿಕೆ ಕ್ಷೇತ್ರ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಮೂಲಸೌಕರ್ಯ ಮತ್ತು ಸ್ವಚ್ಛತೆಯ ಕೊರತೆಯಿಂದ ಸಸಿಗಳು ಹಾಳಾಗುತ್ತಿವೆ. ಕ್ಷೇತ್ರವನ್ನು ಅಭಿವೃದ್ಧಿಪಡಿಸಿದರೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪಿಕ್ನಿಕ್ ತಾಣವಾಗಿ ಅನುಕೂಲವಾಗಲಿದೆ.

-ಕೆ.ಸುನಿಲ್ ಕುಮಾರ್, ದೇವದುರ್ಗ ರೈಟ್ಸ್ ಸಂಘಟನೆ ಕಾರ್ಯದರ್ಶಿ

ತೋಟಗಾರಿಕೆ ಕ್ಷೇತ್ರ ಪಟ್ಟಣದ ಹೃದಯಭಾಗದಲ್ಲಿದ್ದು, ಜನರು ಬಿಡುವಿನ ವೇಳೆಯಲ್ಲಿ ವಿಶ್ರಾಂತಿ ಪಡೆಯಲು ಅನುಕೂಲಕರ ಸ್ಥಳವಾಗಿದೆ. ಅಲ್ಲಿನ ಸಮಸ್ಯೆಗಳ ಕುರಿತು ಈವರೆಗೆ ಮಾಹಿತಿ ಬಂದಿಲ್ಲ. ಕೂಡಲೇ ಅಧಿಕಾರಿಗಳನ್ನು ಕರೆಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ತೋಟಗಾರಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ರೈತರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಸಿಗಳು, ಗೊಬ್ಬರ ಮತ್ತು ಕೃಷಿ ಪದ್ಧತಿಗಳ ಕುರಿತು ಮಾಹಿತಿ ದೊರೆಯುವ ಕೇಂದ್ರವನ್ನಾಗಿ ರೂಪಿಸಲಾಗುವುದು.

-ಕರೆಮ್ಮ ಜಿ. ನಾಯಕ, ದೇವದುರ್ಗ ಶಾಸಕಿ

Tags

horticulture
share
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
ಮಹಮ್ಮದ್ ಮುಸ್ತಫಾ ಕಾಟಮಳ್ಳಿ
Next Story
X