Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಜ್ಯದಲ್ಲಿ ಹೃದಯಾಘಾತದಿಂದ...

ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳ

ಕಳೆದೆರಡು ವರ್ಷಗಳಲ್ಲಿ ಕೊಡಗಿನಲ್ಲಿ 62 ಮಂದಿ ಬಲಿ

ವಾರ್ತಾಭಾರತಿವಾರ್ತಾಭಾರತಿ3 July 2025 3:01 PM IST
share
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯ ನೆರೆಯ ಜಿಲ್ಲೆ ಹಾಸನದಲ್ಲಿ ಸರಣಿ ಹೃದಯಾಘಾತದಿಂದ ಯುವಕ-ಯುವತಿಯರು ಸಾವನ್ನಪ್ಪುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲೆಡೆ ಹೃದಯಾಘಾತದ ಬಗ್ಗೆ ಮತ್ತಷ್ಟು ಆತಂಕವುಂಟಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು 62 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, 62 ಮಂದಿಯ ವಯೋಮಾನದ ಮಾಹಿತಿ ಇಲ್ಲವೆಂದು ಜಿಲ್ಲೆಯ ಆರೋಗ್ಯ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 27 ಮಂದಿ, 2024-25ನೇ ಸಾಲಿನಲ್ಲಿ 32 ಹಾಗೂ ಪ್ರಸಕ್ತ ವರ್ಷ ಹೃದಯಾಘಾತದಿಂದ 3 ಮೂವರು ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಹಾಸನದಲ್ಲಿ ಹೃದಯಾಘಾತದ ಪ್ರಕರಣಗಳ ಅಸಲಿ ಕಾರಣ ತಿಳಿಯಲು ರಾಜ್ಯ ಸರಕಾರ ಮುಂದಾಗಿದ್ದು, ತಜ್ಞರ ಸಮಿತಿ ರಚಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಜಯದೇವ ಹೃದ್ರೋಗ ಸಂಸ್ಥೆಯ ತಜ್ಞರು ಸೇರಿದಂತೆ ಒಟ್ಟು 10 ಜನರ ತಂಡವನ್ನು ರಚನೆಗೆ ರಾಜ್ಯ ಸರಕಾರದ ಆದೇಶಿಸಲಾಗಿದೆ.

ದಾರಿ ಮಧ್ಯದಲ್ಲೇ ಉಸಿರು ಚೆಲ್ಲುತ್ತಿರುವ ಜೀವಗಳು: ಕೊಡಗು ಜಿಲ್ಲೆಯಲ್ಲಿ ಹೃದಯ ಸಂಬಂಧಿತ ರೋಗಗಳಿಗೆ ಚಿಕಿತ್ಸೆ ನೀಡಲು ಹೃದ್ರೋಗ ತಜ್ಞರು ಸಂಖ್ಯೆ ಕಡಿಮೆ ಇದೆ. ಕೊಡಗು ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಹೃದ್ರೋಗ ಸಂಬಂಧಿಸಿದ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಆಧುನಿಕ ತಂತ್ರಜ್ಞಾನದ ವ್ಯವಸ್ಥೆಗಳಿಲ್ಲ. ಜಿಲ್ಲೆಯ ಜನತೆ ಹೃದಯ ಸಂಬಂಧಿಸಿದ ಕಾಯಿಲೆಗೆ ಪಕ್ಕದ ಮೈಸೂರು ಮತ್ತು ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಯ ಆಸ್ಪತ್ರೆಯನ್ನೇ ಅವಲಂಬಿಸಬೇಕಾಗಿದೆ. ಹೃದಯಾಘಾತ ಸಂಬಂಧವಿಸಿದರೆ ಜಿಲ್ಲೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ, ಪಕ್ಕದ ಮೈಸೂರು ಮತ್ತು ಮಂಗಳೂರು ಆಸ್ಪತ್ರೆಗೆ ರವಾನಿಸುವ ದಾರಿ ಮಧ್ಯದಲ್ಲೇ ಅನೇಕ ಮಂದಿ ಮೃತಪಟ್ಟಿರುವ ಹಲವಾರು ನಿದರ್ಶನಗಳು ನಡೆದಿವೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಹಲವರು ವರ್ಷಗಳಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕೆಂಬ ಕೂಗು ಇದೆ. ಆದರೆ, ಕನಸು ಕೇವಲ ಕನಸಾಗಿಯೇ ಉಳಿದಿದೆ. ಹೃದಯಾಘಾತ ಉಂಟಾದರೆ ಜಿಲ್ಲಾಸ್ಪತ್ರೆಯಲ್ಲೇ ಸಕಾಲದಲ್ಲಿ ಚಿಕಿತ್ಸೆ ಸಿಗುವ ಆಧುನಿಕ ತಂತ್ರಜ್ಞಾನದ ವ್ಯವಸ್ಥೆ ಪ್ರಸಕ್ತ ದಿನಗಳಲ್ಲಿ ಅತ್ಯಗತ್ಯವಾಗಿದೆ.

ಕಾರ್ಯರೂಪಕ್ಕೆ ಬಾರದ ಅತ್ಯಾಧುನಿಕ ಹೃದ್ರೋಗ ಘಟಕ: 2024ರ ರಾಜ್ಯ ಬಜೆಟ್‌ನಲ್ಲಿ ಮಡಿಕೇರಿ ಶಾಸಕರ ಮುತುವರ್ಜಿಯಿಂದ ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಸಗಿ ಸಹ ಭಾಗಿತ್ವದಲ್ಲಿ (ಪಿಪಿಪಿ ಮಾದರಿ) ಹೃದ್ರೋಗ ಘಟಕ ಆರಂಭಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ, ಈ ಯೋಜನೆ ಇದುವರೆಗೆ ಕಾರ್ಯರೂಪಕ್ಕೆ ಬಂದಿಲ್ಲ.

ಹೃದ್ರೋಗ ಘಟಕದ ಆರಂಭಗೊಂಡರೆ ಜಿಲ್ಲೆಯ ಜನತೆಗೆ ಸ್ಟಂಟ್ ಅಳವಡಿಕೆವರೆಗಿನ ಹೃದಯ ಸಂಬಂಧಿತ ಚಿಕಿತ್ಸೆ ಮಡಿಕೇರಿಯಲ್ಲಿ ಲಭ್ಯವಿರುತ್ತಿತ್ತು. ಇಂದಿಗೂ ಹೃದಯಾಘಾತ ಸಂಭವಿಸಿದರೆ ಜಿಲ್ಲೆಯ ಜನತೆ ಮೈಸೂರು ,ಮಂಗಳೂರು ಆಸ್ಪತ್ರೆಗಳ ಮಾರ್ಗ ಮಧ್ಯದಲ್ಲಿ ಉಸಿರು ಚೆಲ್ಲುತ್ತಿದ್ದಾರೆ.

ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗುತ್ತಿದ್ದಂತೆ ಸದ್ಯ 86 ತಾಲೂಕು ಆಸ್ಪತ್ರೆಗಳಲ್ಲಿರುವ ಸ್ಟೆಮಿ ಯೋಜನೆಯನ್ನು ಇನ್ನೂ ಮುಂದೆ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆಯನ್ನು ದೊರೆಯುವಂತೆ ಆದೇಶಿಸಲಾಗಿದೆ.

ಸ್ಟೆಮಿ ಯೋಜನೆಯು ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ರೂಪಿಸಲಾದ ಚಿಕಿತ್ಸಾ ವಿಧಾನ. ಹೃದಯಾಘಾತದ ಲಕ್ಷಣಗಳಾದ ಎದೆನೋವು, ಉಸಿರಾಟ ತೊಂದರೆ ಇರುವ ರೋಗಿಗಳು ತಾಲೂಕು ಆಸ್ಪತ್ರೆಗೆ ತೆರಳಿದಾಗ ತಕ್ಷಣವೇ ಇಸಿಜಿ ಪರೀಕ್ಷೆ ನಡೆಸಿ ಆ ಮಾಹಿತಿಯನ್ನು ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞರಿಗೆ ರವಾನಿಸಲಾಗುತ್ತದೆ. ರಾಜ್ಯದಲ್ಲಿ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕೋವಿಡ್ ಲಸಿಕೆಯ ಪರಿಣಾಮ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಜೀವನ ಶೈಲಿಯಲ್ಲಿನ ಬದಲಾವಣೆಗಳು, ಆಹಾರ ಕ್ರಮದಲ್ಲಿ ಬದಲಾವಣೆಗಳು ಎಂಬಿತ್ಯಾದಿ ನಾನಾ ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಬಗ್ಗೆ ಎಲ್ಲರಲ್ಲೂ ಆತಂಕವುಂಟು ಮಾಡಿದೆ. ಕೊಡಗು ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಹೃದ್ರೋಗ ಘಟಕ ಸ್ಥಾಪನೆಗೆ ಸರಕಾರ 10 ಕೋಟಿ ರೂ. ಮೀಸಲಿಟ್ಟಿದೆ. ಸದ್ಯದಲ್ಲೇ ಹೃದ್ರೋಗ ಘಟಕ ಸ್ಥಾಪನೆಯಾಗಲಿದೆ. ಹೃದಯ ಸಂಬಂಧಿಸಿದ ರೋಗಗಳಿಗೆ ವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ದಿನಗಳಲ್ಲಿ ಚಿಕಿತ್ಸೆ ಸಿಗಲಿದೆ.

-ಡಾ.ಲೋಕೇಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X