Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶತಮಾನದ ಹೊಸ್ತಿಲಲ್ಲಿ ಉಸ್ಮಾನಿಯಾ ...

ಶತಮಾನದ ಹೊಸ್ತಿಲಲ್ಲಿ ಉಸ್ಮಾನಿಯಾ ಮಾರುಕಟ್ಟೆ: ಆಧುನಿಕ ಸ್ಪರ್ಶಕ್ಕೆ ಪಾಲಿಕೆ ಸಜ್ಜು

ಜಿ+3 ಕಟ್ಟಡ ನಿರ್ಮಾಣಕ್ಕೆ 35 ಕೋಟಿ ರೂ. ಡಿಪಿಆರ್ ಒಂದೇ ಸೂರಿನಡಿ ತರಕಾರಿ, ಮಾಂಸ, ಹೂವಿನ ವ್ಯಾಪಾರ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು13 Nov 2026 3:04 PM IST
share
ಶತಮಾನದ ಹೊಸ್ತಿಲಲ್ಲಿ ಉಸ್ಮಾನಿಯಾ  ಮಾರುಕಟ್ಟೆ: ಆಧುನಿಕ ಸ್ಪರ್ಶಕ್ಕೆ ಪಾಲಿಕೆ ಸಜ್ಜು

ರಾಯಚೂರು, ನ.12: ಸುಮಾರು ಒಂದು ಶತಮಾನದ ಇತಿಹಾಸ ಹೊಂದಿರುವ ನಗರದ ಹೃದಯಭಾಗದ ಉಸ್ಮಾನಿಯಾ ತರಕಾರಿ ಮಾರುಕಟ್ಟೆಗೆ ಆಧುನಿಕ ಸ್ಪರ್ಶ ನೀಡಲು ರಾಯಚೂರು ಮಹಾನಗರ ಪಾಲಿಕೆ ಮುಂದಾಗಿದೆ. ಮಾರುಕಟ್ಟೆಯನ್ನು ಪುನರ್ ಅಭಿವೃದ್ಧಿಗೊಳಿಸಿ, ಜಿ+3 ಮಾದರಿಯ ಸುಸಜ್ಜಿತ ಕಟ್ಟಡ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಅರ್ಬನ್ ಚಾಲೆಂಜ್ ಫಂಡ್ ಯೋಜನೆಯಡಿ 35 ಕೋಟಿ ರೂ. ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ.

1928ರಲ್ಲಿ ಅಂದಿನ ಹೈದರಾಬಾದ್ ಸಂಸ್ಥಾನದ ಏಳನೇ ನಿಝಾಮ ಮೀರ್ ಉಸ್ಮಾನ್ ಅಲಿ ಖಾನ್ ಅವರು ಉಸ್ಮಾನಿಯಾ ಮಾರುಕಟ್ಟೆಯನ್ನು ಸ್ಥಾಪಿಸಿದ್ದರು. ಅಂದಿನಿಂದ ಇಂದಿನವರೆಗೆ ರಾಯಚೂರು ನಗರದ ಪ್ರಮುಖ ವ್ಯಾಪಾರ ಕೇಂದ್ರವಾಗಿ ಗುರುತಿಸಿಕೊಂಡಿರುವ ಈ ಮಾರುಕಟ್ಟೆ, ರೈತರು, ಹಮಾಲಿ ಕಾರ್ಮಿಕರು, ಸಗಟು ಮತ್ತು ಚಿಲ್ಲರೆ ವ್ಯಾಪಾರಸ್ಥರು ಸೇರಿದಂತೆ ನೂರಾರು ಕುಟುಂಬಗಳ ಜೀವನಾಧಾರವಾಗಿದೆ.

ಕಾಲ ಬದಲಾದಂತೆ ನಗರದ ಜನಸಂಖ್ಯೆ, ಗ್ರಾಹಕರು ಮತ್ತು ವ್ಯಾಪಾರಿಗಳ ಸಂಖ್ಯೆ ಹೆಚ್ಚಾಗಿದ್ದರೂ ಮಾರುಕಟ್ಟೆಯ ಮೂಲಸೌಕರ್ಯದಲ್ಲಿ ನಿರೀಕ್ಷಿತ ಬದಲಾವಣೆಗಳಾಗಿಲ್ಲ. ಮಾರುಕಟ್ಟೆಯ ಮುಂಭಾಗ ಮತ್ತು ಹಿಂಭಾಗದಲ್ಲಿ ರಸ್ತೆಗಳಿದ್ದರೂ ವಾಹನಗಳ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ನಿತ್ಯದ ತೊಂದರೆಯಾಗಿದೆ. ತರಕಾರಿ ವ್ಯಾಪಾರದ ಜತೆಗೆ ಒಣಹಣ್ಣು, ಬಟ್ಟೆ, ಹಣ್ಣು-ಹಂಪಲು ಮತ್ತು ಮಾಂಸದ ಅಂಗಡಿಗಳೂ ಒಂದೇ ಪ್ರದೇಶದಲ್ಲಿರುವುದರಿಂದ ಮಾರುಕಟ್ಟೆ ಸದಾ ಜನಜಂಗುಳಿಯಿಂದ ಕೂಡಿರುತ್ತದೆ.

ಮಾರುಕಟ್ಟೆ ವಿಸ್ತರಣೆಯ ಉದ್ದೇಶದಿಂದ ಕಾಟೆ ದರ್ವಾಜಾ ಹಿಂಭಾಗದಲ್ಲಿ ನಗರಸಭೆಯ ಆಡಳಿತಾವಧಿಯಲ್ಲಿ ಪ್ರತ್ಯೇಕ ರೈತ ಮಾರುಕಟ್ಟೆ ನಿರ್ಮಿಸಲಾಗಿತ್ತು. ಆದರೂ ವ್ಯಾಪಾರಿಗಳಿಗೆ ಸಾಕಷ್ಟು ಸ್ಥಳಾವಕಾಶ ಇಲ್ಲದ ಕಾರಣ ಅನೇಕರು ರಸ್ತೆ ಬದಿಯಲ್ಲೇ ಕುಳಿತು ತರಕಾರಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸ್ವಚ್ಛತೆ ಕಾಪಾಡುವುದು, ಗುಣಮಟ್ಟದ ತರಕಾರಿ ಮಾರಾಟ ಮಾಡುವುದು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸುವುದು ಸವಾಲಾಗಿದೆ.

ಜಿ+3 ಕಟ್ಟಡ ನಿರ್ಮಾಣಕ್ಕೆ ಯೋಜನೆ

ಉಸ್ಮಾನಿಯಾ ಮಾರುಕಟ್ಟೆ ಹಾಗೂ ರೈತ ಮಾರುಕಟ್ಟೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಪಾಲಿಕೆ ಯೋಜನೆ ರೂಪಿಸಿದೆ. ಪ್ರಸ್ತುತ ಮಾರುಕಟ್ಟೆಯ ಸಮೀಪ ಲಭ್ಯವಿರುವ ಸುಮಾರು ಒಂದೂವರೆ ಎಕರೆ ಜಾಗವನ್ನು ಬಳಸಿಕೊಂಡು, ಮಧ್ಯದ ರಸ್ತೆಯನ್ನು ಬಂದ್ ಮಾಡಿ ವಿಶಾಲ ಪ್ರದೇಶದಲ್ಲಿ ಜಿ+3 ಮಾದರಿಯ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ.

ಯೋಜನೆಯ ಪ್ರಕಾರ ನೆಲಮಹಡಿಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗುವುದು. ಮೊದಲ ಮಹಡಿಯಲ್ಲಿ ಮೊಟ್ಟೆ, ಮೀನು, ಕೋಳಿ ಮತ್ತು ಕುರಿ ಮಾಂಸದ ವ್ಯಾಪಾರಕ್ಕೆ ಪ್ರತ್ಯೇಕ ಮಳಿಗೆಗಳನ್ನು ನಿರ್ಮಿಸಲಾಗುವುದು. ಮೇಲಿನ ಮಹಡಿಗಳಲ್ಲಿ ಹೂವು ಹಾಗೂ ತರಕಾರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವ ಯೋಜನೆ ಇದೆ. ಇದರಿಂದ ವಿವಿಧ ವ್ಯಾಪಾರ ಚಟುವಟಿಕೆಗಳು ಒಂದೇ ಸೂರಿನಡಿ ನಡೆಯಲಿದ್ದು, ಗ್ರಾಹಕರಿಗೂ ಅನುಕೂಲವಾಗಲಿದೆ.

ಪಾರ್ಕಿಂಗ್, ಕೋಲ್ಡ್ ಸ್ಟೋರೇಜ್ ವ್ಯವಸ್ಥೆ

ಹೊಸ ಮಾರುಕಟ್ಟೆಯಲ್ಲಿ ಅಂಡರ್ಗ್ರೌಂಡ್ ಪಾರ್ಕಿಂಗ್, ಮಲ್ಟಿಲೆವೆಲ್ ಪಾರ್ಕಿಂಗ್, ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಕಲ್ಪಿಸಲು ಯೋಜಿಸಲಾಗಿದೆ. ಜತೆಗೆ ಸ್ಟೀಲ್ ಗ್ರೇಟೆಡ್ ಚರಂಡಿ, ತರಕಾರಿ ಮತ್ತು ಮಾರುಕಟ್ಟೆಯ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನೂ ರೂಪಿಸಲಾಗುವುದು. ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಅಲ್ಲಿಯೇ ಸಂಸ್ಕರಿಸಿ ವಿಲೇವಾರಿ ಮಾಡುವ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ.

ಪ್ರಸ್ತುತ ಪಾರ್ಕಿಂಗ್ ಸಮಸ್ಯೆ ಹಾಗೂ ಅಸ್ವಚ್ಛ ವಾತಾವರಣದಿಂದಾಗಿ ಗ್ರಾಹಕರು ಮಾರುಕಟ್ಟೆಗೆ ಬರಲು ಹಿಂದೇಟು ಹಾಕುವ ಪರಿಸ್ಥಿತಿಯಿದೆ. ನಗರದ ವಿವಿಧೆಡೆ ತರಕಾರಿ ಮಾರಾಟ ಕೇಂದ್ರಗಳು ಬೆಳೆದಿದ್ದರೂ ಕೇಂದ್ರ ಭಾಗದಲ್ಲಿರುವ ಉಸ್ಮಾನಿಯಾ ಮಾರುಕಟ್ಟೆಗೆ ಇಂದಿಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬರುತ್ತಾರೆ. ಹೀಗಾಗಿ ಮಾರುಕಟ್ಟೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ.

ನಗರದ ಜನರಿಗೆ ಸ್ವಚ್ಛ ಪರಿಸರದಲ್ಲಿ ಗುಣಮಟ್ಟದ ತರಕಾರಿ ದೊರೆಯುವಂತೆ ಹಾಗೂ ವ್ಯಾಪಾರಿಗಳಿಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಯೋಜನೆಯ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ.

ಉಸ್ಮಾನಿಯಾ ಮಾರುಕಟ್ಟೆಯ ಇತಿಹಾಸ

ಒಂದು ಕಾಲದಲ್ಲಿ ರಾಯಚೂರು ಜಿಲ್ಲಾ ಕೇಂದ್ರದ ಸುತ್ತಮುತ್ತಲಿನ ಹಳ್ಳಿಗಳ ರೈತರು ತೀನ್ ಖಂದಿಲ್ ಬಳಿಯ ರಸ್ತೆಯ ಬದಿಯಲ್ಲಿ ಕುಳಿತು ತರಕಾರಿ ಮಾರಾಟ ಮಾಡುತ್ತಿದ್ದರು. ತರಕಾರಿ ಮಾರಾಟಕ್ಕೆ ಸ್ವಚ್ಛ ಹಾಗೂ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಅಂದಿನ ಹೈದರಾಬಾದ್ ಸಂಸ್ಥಾನದ ಏಳನೇ ನಿಝಾಮ ಮೀರ್ ಉಸ್ಮಾನ್ ಅಲಿ ಖಾನ್ ಅವರು 1928ರಲ್ಲಿ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ನಿರ್ಮಿಸಿಕೊಟ್ಟಿದ್ದರು.

ಅಂದಿನಿಂದ ಈ ಮಾರುಕಟ್ಟೆ ನಗರದ ಪ್ರಮುಖ ವ್ಯಾಪಾರ ಕೇಂದ್ರವಾಗಿ ಬೆಳೆದುಬಂದಿದೆ. ಇದು ಕೇವಲ ತರಕಾರಿ ಮಾರಾಟದ ಸ್ಥಳವಾಗಿರದೆ ರೈತರು, ಹಮಾಲಿ ಕಾರ್ಮಿಕರು, ಸಗಟು ಮತ್ತು ಚಿಲ್ಲರೆ ವ್ಯಾಪಾರಸ್ಥರ ಬದುಕಿಗೆ ಆಸರೆಯಾಗಿದೆ. ಆನ್ಲೈನ್ ವ್ಯಾಪಾರ, ಹೋಮ್ ಡೆಲಿವರಿ ಹಾಗೂ ಶಾಪಿಂಗ್ ಮಾಲ್ಗಳ ಪೈಪೋಟಿಯ ನಡುವೆಯೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿರುವುದು ಮಾರುಕಟ್ಟೆಯ ವಿಶೇಷತೆಯಾಗಿದೆ ಎಂದು ಹಿರಿಯ ನಾಗರಿಕರಾದ ಮುಹಮ್ಮದ್ ಸಾದಿಕ್ ಮತ್ತು ಬಾಬುಮಿಯಾ ಅಭಿಪ್ರಾಯಪಟ್ಟಿದ್ದಾರೆ.

ಉಸ್ಮಾನಿಯಾ ತರಕಾರಿ ಮಾರುಕಟ್ಟೆ ರಾಯಚೂರು ನಗರದ ಪ್ರಮುಖ ಕೇಂದ್ರವಾಗಿದೆ. ಇಂತಹ ಐತಿಹಾಸಿಕ ಸ್ಥಳವನ್ನು ಇದುವರೆಗೆ ಕಡೆಗಣಿಸಲಾಗಿತ್ತು. ತಡವಾಗಿಯಾದರೂ ಮಹಾನಗರ ಪಾಲಿಕೆ ಅಭಿವೃದ್ಧಿಗೆ ಮುಂದಾಗಿರುವುದು ಸ್ವಾಗತಾರ್ಹ. ಮಾರುಕಟ್ಟೆಯ ಮೂಲಸೌಕರ್ಯ ಸುಧಾರಣೆಯಾದರೆ ವ್ಯಾಪಾರಿಗಳಿಗೂ ಗ್ರಾಹಕರಿಗೂ ಅನುಕೂಲವಾಗಲಿದೆ.

-ಬಾಬುಮಿಯಾ, ರಾಯಚೂರು ನಿವಾಸಿ.

ಉಸ್ಮಾನಿಯಾ ಮಾರುಕಟ್ಟೆಗೆ ಈಗ 98 ವರ್ಷಗಳ ಇತಿಹಾಸವಿದೆ. ಐತಿಹಾಸಿಕ ವ್ಯಾಪಾರ ಕೇಂದ್ರವನ್ನು ಅಭಿವೃದ್ಧಿಪಡಿಸಲು ಅರ್ಬನ್ ಚಾಲೆಂಜ್ ಫಂಡ್ ಯೋಜನೆಯಡಿ 35 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಹೆಚ್ಚುವರಿ ಅನುದಾನ ಕೋರಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು.

-ಜುಬಿನ್ ಮೊಹಪಾತ್ರ, ಆಯುಕ್ತ, ರಾಯಚೂರು ಮಹಾನಗರ ಪಾಲಿಕೆ

share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು

ಬವಸಾಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Next Story
X