Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನನೆಗುದಿಗೆ ಬಿದ್ದ ಪಂಡಿತ್ ಪುಟ್ಟರಾಜ...

ನನೆಗುದಿಗೆ ಬಿದ್ದ ಪಂಡಿತ್ ಪುಟ್ಟರಾಜ ಗವಾಯಿ ಸ್ಮಾರಕ ಭವನ

ಫಾರೂಕ್ ಮಕಾನದಾರಫಾರೂಕ್ ಮಕಾನದಾರ19 Jun 2025 2:36 PM IST
share
ನನೆಗುದಿಗೆ ಬಿದ್ದ ಪಂಡಿತ್ ಪುಟ್ಟರಾಜ ಗವಾಯಿ ಸ್ಮಾರಕ ಭವನ

ಗದಗ: ನಾಡಿನ ನಡೆದಾಡುವ ದೇವರೆಂದು ಭಕ್ತರ ಮನದಲ್ಲಿ ಮನೆ ಮಾಡಿ, ಅಂಧ-ಅನಾಥರ ಬಾಳನ್ನು ಬೆಳಗಿ ಅಜರಾಮರರಾದ ಪಂಡಿತ್ ಪುಟ್ಟರಾಜ ಗವಾಯಿಯವರ ಜೀವನ ಲಕ್ಷಾಂತರ ಭಕ್ತರಿಗೆ ಪ್ರೇರಣೆ ನೀಡಿದೆ.

ಆದರೆ, ಕಳೆದ 11 ವರ್ಷಗಳಿಂದ ಆಶ್ರಮದ ಪಕ್ಕದಲ್ಲಿ ಅಪೂರ್ಣಗೊಂಡಿರುವ ಪುಟ್ಟರಾಜರ ಸ್ಮಾರಕ ಭವನವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ತಾಣವಾಗಿಸುವ ಮೂಲಕ ಕಲಾವಿದರಿಗೆ ಹಾಗೂ ಭಕ್ತಸಮೂಹಕ್ಕೆ ಕೈಲಾಸವಾಗಬೇಕಿದ್ದ ಸ್ಮಾರಕ ಭವನ ಈವರೆಗೂ ಪೂರ್ಣಗೊಳ್ಳದಿರುವುದು ಲಕ್ಷಾಂತರ ಭಕ್ತರಲ್ಲಿ ನಿರಾಸೆಯನ್ನುಂಟುಮಾಡಿದೆ.

ನಗರದ ಎಪಿಎಂಸಿಯಲ್ಲಿರುವ ವಿರೇಶ್ವರ ಪುಣ್ಯಾಶ್ರಮಕ್ಕೆ ಹೊಂದಿಕೊಂಡಿರುವ ಈ ಸ್ಮಾರಕಭವನ 27 ಗುಂಟೆ ಪ್ರದೇಶದಲ್ಲಿ ವಿಸ್ತೀರ್ಣಗೊಂಡಿದೆ. 2010ರಲ್ಲಿ ಸ್ಮಾರಕಭವನ ನಿರ್ಮಾಣಕ್ಕೆ ಸರಕಾರ ಆದೇಶ ನೀಡಿ, 2014ರಲ್ಲಿ ಕಾಮಗಾರಿ ಆರಂಭಿಸಿದರೂ ಇವರೆಗೂ ಪೂರ್ಣಗೊಂಡಿಲ್ಲ. ಮೊದಲನೇಯ ಹಂತದಲ್ಲಿ ಅಂದಾಜು 5 ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿ ಮುಗಿದಿದ್ದು, ಹೆಚ್ಚುವರಿಯಾಗಿ 1.24 ಕೋಟಿ ರೂ.ಗಳ ಖರ್ಚಾಗಿದೆ. 2ನೇ ಹಂತದ ಕಾಮಗಾರಿಯಲ್ಲಿ ಪ್ಲೋರಿಂಗ್, ಡಿಸೈನ್ ಮತ್ತು ಫಿನಿಷಿಂಗ್ ಕಾರ್ಯ ಉಳಿದುಕೊಂಡಿದೆ.

ಈ ಸ್ಮಾರಕ ಭವನದ ನೆಲಮಹಡಿಯಲ್ಲಿ ಕಚೇರಿ, ಪಾರ್ಕಿಂಗ್, ವಸತಿ. ಮೊದಲನೇಯ ಮಹಡಿಯಲ್ಲಿ ಆಡಿಟೋರಿಯಂ ಮತ್ತು ಬಾಲ್ಕನಿಯಲ್ಲಿ ಪಂ.ಪುಟ್ಟರಾಜ ಗವಾಯಿಗಳು ನುಡಿಸುತ್ತಿದ್ದ ತಂಬೂರಿ ಮಾದರಿಯನ್ನು ವಿನ್ಯಾಸಗೊಳಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಭಕ್ತರ ಆಸೆಯಂತೆ ಸ್ಮಾರಕಭವನ ನಿರ್ಮಾಣಗೊಂಡು ಜಿಲ್ಲೆಯಲ್ಲಿ ಪ್ರವಾಸಿಗರ ಆಕರ್ಷಣಿಯ ಕೇಂದ್ರ ಬಿಂದು ಆಗಲಿ ಎನ್ನುವುದು ಜಿಲ್ಲೆಯ ಜನರ ಮನದಾಸೆಯೂ ಆಗಿದೆ.

ಈ ಹಿಂದೆ ನಗರಕ್ಕೆ ಆಗಮಿಸಿದ್ದ ಸಚಿವ ಶಿವರಾಜ ತಂಗಡಗಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಅಪೂರ್ಣಗೊಂಡ ಪಂ.ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಪೂರ್ಣಗೊಳಿಸಲು ಅನುದಾನ ನೀಡಿದರೆ ಶೀಘ್ರದಲ್ಲಿ ಲೋಕಾರ್ಪಣೆ ಗೊಳಿಸಲಾಗುವುದು ಎಂದು ಮನವಿ ಮಾಡಿದ್ದರು. ಇದಕ್ಕೆ ಸಚಿವ ತಂಗಡಗಿ ಅವರು, ಸಹ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಅನುದಾನ ನೀಡಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಅಂತಿಮ ಹಂತದ ಕಾಮಗಾರಿಗೆ 5 ಕೋಟಿ ರೂ.ಗಳು ಅನುದಾನ ಬಿಡುಗಡೆಯಾದರೆ ಈ ಸ್ಮಾರಕ ಭವನ ಪೂರ್ಣಗೊಳ್ಳಲಿದೆ. ಆದಷ್ಟು ಬೇಗನೆ ಅನುದಾನ ಬಿಡುಗಡೆಗೊಂಡು ಭಕ್ತರ ಕನಸು ನನಸಾಗಬೇಕಿದೆ.

ಅಂತಿಮ ಹಂತದ ಕಾಮಗಾರಿಗಾಗಿ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ. ಸ್ಮಾರಕ ಭವನ ನಿರ್ಮಾಣಗೊಳ್ಳಲು ಬಾಕಿ ಕಾಮಗಾರಿ ಮೊತ್ತ 1.24 ಕೋ.ರೂಗಳನ್ನು ಕಳೆದ ಮಾರ್ಚ್‌ನಲ್ಲಿ ನೀಡಲಾಗಿದ್ದು, ಅಂತಿಮ ಕಾಮಗಾರಿಗಾಗಿ 5 ಕೋ.ರೂ.ಗಳನ್ನು ಈ ಬಾರಿ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಅಂತಿಮ ಹಂತದ 5 ಕೋ.ರೂ.ಗಳ ಅನುದಾನ ಬಿಡುಗಡೆಯಾದರೆ ಪಿಡಬ್ಲ್ಯೂಡಿ ಅವರಿಗೆ ಗುತ್ತಿಗೆ ನೀಡಿ ಈ ವರ್ಷದಲ್ಲಿ ಸ್ಮಾರಕ ಭವನ ಕಾಮಗಾರಿ ಪೂರ್ಣಗೊಳಿಸಲಾಗುವುದು.

-ವೀರಯ್ಯಸ್ವಾಮಿ ಬಿ., ಗದಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ

share
ಫಾರೂಕ್ ಮಕಾನದಾರ
ಫಾರೂಕ್ ಮಕಾನದಾರ
Next Story
X