Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 3 ಕಿ.ಮೀ. ನಡೆದು ನೀರು ತರುವ ಸುಂಠಾಣ...

3 ಕಿ.ಮೀ. ನಡೆದು ನೀರು ತರುವ ಸುಂಠಾಣ ತಾಂಡದ ಜನರು!

ಎಂಟು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ; ಗ್ರಾಪಂಗೆ ಬೀಗ ಜಡಿಯುವ ಎಚ್ಚರಿಕೆ

ಭೀಮರಾಯ ಕುಡ್ಡಳ್ಳಿ ಕಾಳಗಿಭೀಮರಾಯ ಕುಡ್ಡಳ್ಳಿ ಕಾಳಗಿ13 Oct 2026 12:34 PM IST
share
3 ಕಿ.ಮೀ. ನಡೆದು ನೀರು ತರುವ ಸುಂಠಾಣ ತಾಂಡದ ಜನರು!

ಕಾಳಗಿ: ತಾಲೂಕಿನ ಕೋಡ್ಲಿ ಗ್ರಾಪಂ ವ್ಯಾಪ್ತಿಯ ಸುಂಠಾಣ ಬಡಾ ತಾಂಡದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ನೀರಿಗಾಗಿ ಸುಮಾರು 3 ಕಿ.ಮೀ. ದೂರದ ಸುಂಠಾಣ ಗ್ರಾಮಕ್ಕೆ ತೆರಳಿ ನೀರು ಹೊತ್ತು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸದಿದ್ದರೆ ಕೋಡ್ಲಿ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ತಾಂಡದ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

ಸುಮಾರು 300ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ತಾಂಡಕ್ಕೆ ಹುಲಸಗೂಡ ಕ್ರಾಸ್‌ನಿಂದ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಆದರೆ, ವಾರದ ಹಿಂದೆ ನೀರಿನ ಪೈಪ್‌ಲೈನ್ ಒಡೆದುಹೋಗಿರುವುದರಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ತಾಂಡದಲ್ಲಿ ಮೂರು ಕಡೆ ಕುಡಿಯುವ ನೀರಿನ ಬೋರ್‌ವೆಲ್ ಸಂಪರ್ಕಗಳಿದ್ದರೂ, ಮೋಟಾರ್‌ಗಳಿಲ್ಲದ ಕಾರಣ ನೀರು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಯನ್ನು ಪಿಡಿಒ ಗಮನಕ್ಕೆ ತಂದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ತಾಂಡದ ಜನರು ಆರೋಪಿಸಿದ್ದಾರೆ. ರೈತರೊಬ್ಬರ ಹೊಲದಲ್ಲಿ ಪೈಪ್‌ಲೈನ್ ಒಡೆದಿದ್ದು, ದುರಸ್ತಿಗೆ ರೈತ ಅವಕಾಶ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತನ ವಿರುದ್ಧ ದೂರು ನೀಡಿ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆಯೇ ಹೊರತು, ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಯಿಲ್ಲದೆ ಬರದ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ, ಲಭ್ಯವಿರುವ ನೀರಿನ ವ್ಯವಸ್ಥೆಯನ್ನೂ ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳೆದ ಎಂಟು ದಿನಗಳಿಂದ ಮಹಿಳೆಯರು ಮತ್ತು ನಿವಾಸಿಗಳು ಸುಡುಬಿಸಿಲಿನಲ್ಲಿ ಮೂರು ಕಿ.ಮೀ. ದೂರ ನಡೆದು ನೀರು ಹೊತ್ತು ತರುತ್ತಿದ್ದಾರೆ. ಜನರು ಮಾತ್ರವಲ್ಲದೆ ಜಾನುವಾರುಗಳಿಗೂ ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಗ್ರಾಪಂಗೆ ಬೀಗ ಜಡಿಯುವ ಎಚ್ಚರಿಕೆ: ಕುಡಿಯುವ ನೀರಿನ ಸಮಸ್ಯೆಯಿಂದ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ತಾಂಡದ ನಿವಾಸಿಗಳು, ಕೂಡಲೇ ಪೈಪ್‌ಲೈನ್ ದುರಸ್ತಿಗೊಳಿಸಿ ನೀರು ಪೂರೈಕೆ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ. ಸಮಸ್ಯೆ ಬಗೆಹರಿಸದಿದ್ದರೆ ಕೋಡ್ಲಿ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಂಟು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದರೂ ಅಧಿಕಾರಿಗಳು ಪರಿಹಾರ ಕಲ್ಪಿಸಿಲ್ಲ. ಪ್ರತಿದಿನ ಮೂರು ಕಿ.ಮೀ. ದೂರದಿಂದ ನೀರು ಹೊತ್ತು ತರುವಂತಾಗಿದೆ. ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಗ್ರಾಪಂ ಕಚೇರಿಗೆ ಬೀಗ ಜಡಿಯಲಾಗುವುದು ಎಂದು ಸುಂಠಾಣ ಬಡಾ ತಾಂಡದ ನಿವಾಸಿ ಹಾಗೂ ಕೋಡ್ಲಿ ಗ್ರಾಪಂ ಮಾಜಿ ಸದಸ್ಯೆ ಲಕ್ಷ್ಮೀ ಸಂತೋಷ ರಾಠೋಡ ಎಚ್ಚರಿಕೆ ನೀಡಿದ್ದಾರೆ.

ತಾಂಡದ ನಿವಾಸಿಗಳಾದ ಸಂಗೀತಾ ರಾಮದಾಸ್, ಇಮಲಾಬಾಯಿ ಗೋಪಾಲ, ಇಂದಿಬಾಯಿ ದೇವಜೀ, ಅನೀತಾ ಪಾಂಡು, ಸಕ್ಕುಬಾಯಿ ಜಯರಾಮ್, ಜಾಲಾಬಾಯಿ ರಾಮಚಂದ್ರ, ರಮಕಿಬಾಯಿ ಭೀಮು, ಅನುಷಾಬಾಯಿ ಭವನಸಿಂಗ್ ಹಾಗೂ ಪ್ರೇಮಕುಮಾರ ಸುಂಠಾಣ ಇದ್ದರು.

share
ಭೀಮರಾಯ ಕುಡ್ಡಳ್ಳಿ ಕಾಳಗಿ
ಭೀಮರಾಯ ಕುಡ್ಡಳ್ಳಿ ಕಾಳಗಿ
Next Story
X