Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 36ರ ವಯಸ್ಸಿನಲ್ಲೂ ಚಿನ್ನದ ಓಟ: ಏಶ್ಯನ್...

36ರ ವಯಸ್ಸಿನಲ್ಲೂ ಚಿನ್ನದ ಓಟ: ಏಶ್ಯನ್ ಗೇಮ್ಸ್ ನಲ್ಲಿ ಆರು ಪದಕ ಗೆದ್ದ ಕೊಡಗಿನ ಹೆಮ್ಮೆ ಪೂವಮ್ಮ

ಕೆ.ಎಂ. ಇಸ್ಮಾಯಿಲ್ ಕಂಡಕೆರೆಕೆ.ಎಂ. ಇಸ್ಮಾಯಿಲ್ ಕಂಡಕೆರೆ12 Oct 2026 3:12 PM IST
share
36ರ ವಯಸ್ಸಿನಲ್ಲೂ ಚಿನ್ನದ ಓಟ: ಏಶ್ಯನ್ ಗೇಮ್ಸ್ ನಲ್ಲಿ ಆರು ಪದಕ ಗೆದ್ದ ಕೊಡಗಿನ ಹೆಮ್ಮೆ ಪೂವಮ್ಮ

ಮಡಿಕೇರಿ: ಕೊಡಗಿನ ಮಣ್ಣಿನಲ್ಲಿ ಹುಟ್ಟಿ ಅಂತರ್‌ರಾಷ್ಟ್ರೀಯ ಅತ್ಲೆಟಿಕ್ಸ್ ಲೋಕದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಮಾಚೆಟ್ಟಿರ ಪೂವಮ್ಮ ರಾಜು ಅವರು ಏಶ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಬರೋಬ್ಬರಿ ಆರು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ನಾಲ್ಕು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಸೇರಿದೆ.

36ನೇ ವಯಸ್ಸಿನಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ವಯಸ್ಸು ಕೇವಲ ಸಂಖ್ಯೆ, ಫಿಟ್ನೆಸ್ ಮತ್ತು ಸಾಧನೆಯೇ ಮುಖ್ಯ ಎಂದು ಅವರು ಸಾಬೀತುಪಡಿಸಿದ್ದಾರೆ.

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ತಾಲೂಕಿನಲ್ಲಿ ಜನಿಸಿದ ಮಾಚೆಟ್ಟಿರ ಪೂವಮ್ಮ ರಾಜು ಅವರು ಎಂ.ಆರ್. ಪೂವಮ್ಮ ಮತ್ತು ಜಾಜಿ ದಂಪತಿಯ ಪುತ್ರಿ. ಬಾಲ್ಯದಿಂದಲೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಅವರು ಗೋಣಿಕೊಪ್ಪಲಿನ ಜ್ಞಾನಜ್ಯೋತಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದಾಗಲೇ ಅತ್ಲೆಟಿಕ್ಸ್ ಜೀವನ ಆರಂಭಿಸಿದರು.

ನಂತರ ಮಂಗಳೂರಿನ ಎಸ್‌ಡಿಎಂ ಕಾಲೇಜಿನಲ್ಲಿ ಬಿಸಿನೆಸ್ ಮ್ಯಾನೇಜ್‌ಮೆಂಟ್ ಪದವಿ ಪಡೆದು 400 ಮೀ. ಓಟ ಮತ್ತು ರಿಲೇ ಓಟದಲ್ಲಿ ಪರಿಣತಿ ಸಾಧಿಸಿದರು. ಅವರ ವೈಯಕ್ತಿಕ ಶ್ರೇಷ್ಠ ಸಾಧನೆ 400 ಮೀ. ಓಟದಲ್ಲಿ 51.73 ಸೆಕೆಂಡ್ ಆಗಿದ್ದು, ಇದನ್ನು 2014ರಲ್ಲಿ ದಾಖಲಿಸಿದ್ದರು. 2015ರಲ್ಲಿ ಭಾರತ ಸರಕಾರದಿಂದ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2014ರಲ್ಲಿ ದಕ್ಷಿಣ ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ಏಶ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಪೂವಮ್ಮ, ಟಿಂಟು ಲೂಕಾ, ಮಂದೀಪ್ ಕೌರ್ ಮತ್ತು ಪ್ರಿಯಾಂಕಾ ಪವಾರ್ ಅವರನ್ನೊಳಗೊಂಡ ತಂಡ 3:28.68 ಸೆಕೆಂಡ್ ಸಮಯದೊಂದಿಗೆ ಗೇಮ್ಸ್ ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದಿತ್ತು. ಅದೇ ಕೂಟದಲ್ಲಿ ವೈಯಕ್ತಿಕ 400 ಮೀ.ಓಟದಲ್ಲಿ ಕಂಚಿನ ಪದಕ ಗೆದ್ದಿದ್ದರು. 2018ರಲ್ಲಿ ಇಂಡೋನೇಶ್ಯದ ಜಕಾರ್ತಾದಲ್ಲಿ ನಡೆದ ಕೂಟದಲ್ಲಿ ಮಹಿಳೆಯರ 4x400 ಮೀಟರ್ ರಿಲೇ ಮತ್ತು ಮಿಶ್ರ ರಿಲೇ ಎರಡರಲ್ಲೂ ಚಿನ್ನದ ಪದಕ ಗೆದ್ದಿದ್ದರು.

ಇತ್ತೀಚೆಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ ಏಶ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಪೂವಮ್ಮ, ವಿದ್ಯಾ ರಾಮರಾಜ್, ಪ್ರಾಚಿ ಚೌಧರಿ ಮತ್ತು ಕಿರಣ್ ಪಹಲ್ ಅವರ ನ್ನೊಳಗೊಂಡ ತಂಡ 3:29.69 ಸೆಕೆಂಡ್‌ನಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದಿದ್ದು, ಇದು ಅವರ ಮೂರನೇ ಏಶ್ಯನ್ ಗೇಮ್ಸ್ ರಿಲೇ ಚಿನ್ನವಾಗಿದೆ. ಅದೇ ಕೂಟದ ಮಿಶ್ರ 4x400 ಮೀಟರ್ ರಿಲೇಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಟ್ಟು ಪದಕಗಳ ಸಂಖ್ಯೆಯನ್ನು ಆರಕ್ಕೆ ಏರಿಸಿದ್ದಾರೆ.

ಏಶ್ಯನ್ ಗೇಮ್ಸ್ ಮಾತ್ರವಲ್ಲದೆ 2013, 2015, 2017 ಮತ್ತು 2019ರ ಏಶ್ಯನ್ ಅತ್ಲೆಟಿಕ್ ಚಾಂಪಿಯನ್‌ಶಿಪ್‌ಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದಾರೆ. 2016ರ ರಿಯೋ ಒಲಿಂಪಿಕ್ಸ್ ಮತ್ತು 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. 2008ರ ಕಾಮನ್ವೆಲ್ತ್ ಯೂತ್ ಗೇಮ್ಸ್‌ನಲ್ಲಿ 400 ಮೀ. ಓಟದಲ್ಲಿ ಬೆಳ್ಳಿ ಮತ್ತು 4x100 ಮೀಟರ್ ರಿಲೇಯಲ್ಲಿ ಚಿನ್ನ ಹಾಗೂ 2016ರ ಸೌತ್ ಏಶ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದಾರೆ.

ಈ ಸಾಧನೆಯ ಹಿಂದೆ ಅಪಾರ ತ್ಯಾಗವಿದೆ. ಏಶ್ಯನ್ ಗೇಮ್ಸ್ ಗಾಗಿ ಏಳು ತಿಂಗಳು ಮನೆಗೆ ಹೋಗದೆ ಪೋಲೆಂಡ್‌ನಲ್ಲಿ ಕಠಿಣ ತರಬೇತಿ ಪಡೆದಿದ್ದರು. ಮುಖ್ಯ ಕೋಚ್ ಜಮ್ಮುವಿನ ಜೆಲ್ಲಿ ಲೀ ಹೋಬ್ಲೆ, ರಾಷ್ಟ್ರೀಯ ಕ್ಯಾಂಪ್ ಕೋಚ್ ಗಲಿನಾ, ಸ್ಥಳೀಯ ಕೋಚ್‌ಗಳಾದ ವಸಂತ, ದಿನೇಶ್ ಕುಂದರ್ ಮತ್ತು ನಾಗಪ್ಪ ರಮೇಶ್ ಅವರ ಮಾರ್ಗದರ್ಶನದಲ್ಲಿ ಬೆಳೆದಿದ್ದಾರೆ. ಪತಿ ಕ್ರೀಡಾಪಟು ಜಿತಿನ್ ಪಾಲ್ ಮತ್ತು ಕುಟುಂಬದ ಬೆಂಬಲವೇ ತಮ್ಮ ಶಕ್ತಿ ಎಂದು ಪೂವಮ್ಮ ಹೇಳುತ್ತಾರೆ. ನಾನು ಇನ್ನೂ ಪೀಕ್‌ನಲ್ಲಿದ್ದೇನೆ, 40 ವರ್ಷದವರೆಗೂ ಓಡಬಲ್ಲೆ ಎಂಬುದು ಅವರ ಆತ್ಮವಿಶ್ವಾಸದ ನುಡಿ.

share
ಕೆ.ಎಂ. ಇಸ್ಮಾಯಿಲ್ ಕಂಡಕೆರೆ
ಕೆ.ಎಂ. ಇಸ್ಮಾಯಿಲ್ ಕಂಡಕೆರೆ
Next Story
X