Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹೋಟೆಲ್ ಪ್ರವೇಶಾವಕಾಶ ಕಲ್ಪಿಸದೆ...

ಹೋಟೆಲ್ ಪ್ರವೇಶಾವಕಾಶ ಕಲ್ಪಿಸದೆ ಅಸ್ಪಶ್ಯತೆ ಆಚರಣೆ

ಯಾದಗಿರಿಯಲ್ಲಿ ದಲಿತ ಗ್ರಾಹಕರಿಗೆ ಲೋಟದಲ್ಲಿ ನೀರು ಕೊಡಲು ನಿರಾಕರಣೆ

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ1 Nov 2026 9:03 AM IST
share
ಹೋಟೆಲ್ ಪ್ರವೇಶಾವಕಾಶ ಕಲ್ಪಿಸದೆ ಅಸ್ಪಶ್ಯತೆ ಆಚರಣೆ

ಯಾದಗಿರಿ : ಸುರಪುರ ತಾಲೂಕಿನ ಸೂಗೂರು ಗ್ರಾಮದಲ್ಲಿ ದೇವಸ್ಥಾನ ಹಾಗೂ ಹೋಟೆಲ್‌ಗಳಿಗೆ ದಲಿತರಿಗೆ ಪ್ರವೇಶಾವಕಾಶ ಕಲ್ಪಿಸದೆ ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮದ ದಲಿತರ ಆರೋಪಕ್ಕೆ ಪೂರಕವಾಗಿ ತಾಲೂಕು ಮಟ್ಟದ ಅಧಿಕಾರಿಗಳು ಶಾಂತಿ ಸಭೆ ನಡೆಸಿ ಪ್ರವೇಶಾವಕಾಶ ಕಲ್ಪಿಸುವಂತೆ ಹೋಟೆಲ್ ಮಾಲಕರಿಗೆ ಸೂಚಿಸಿದ ನಂತರ ಹೋಟೆಲ್ ಬಾಗಿಲು ಮುಚ್ಚಿದ ಘಟನೆ ವರದಿಯಾಗಿದೆ.

ಜಗ್ ಮೂಲಕ ಕೈಗೆ ನೀರು ಸುರಿದು ಅಸ್ಪಶ್ಯತೆ ಆಚರಣೆ: ಇತ್ತೀಚೆಗೆ ಗ್ರಾಮದ ಹೋಟೆಲ್‌ನಲ್ಲಿ ದಲಿತ ಗ್ರಾಹಕರಿಗೆ ಕುಡಿಯುವ ನೀರನ್ನು ಗ್ಲಾಸ್‌ನಲ್ಲಿ ನೀಡದೆ, ಜಗ್‌ನಿಂದ ಕೈಗೆ ಸುರಿಯುವ ಮೂಲಕ ಅಸ್ಪಶ್ಯತೆ ಆಚರಿಸಲಾಗಿದೆ ಎನ್ನಲಾಗಿದೆ.

ಗ್ರಾಮದಲ್ಲಿ ನಡೆಯುತ್ತಿರುವ ಈ ತಾರತಮ್ಯದ ವಿರುದ್ಧ ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಂವಿಧಾನದ ಸಮಾನತೆಯ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗಿದ್ದು, ಅವುಗಳನ್ನು ಸರಕಾರ ಸಂರಕ್ಷಿಸಬೇಕು. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆೆ.

ಅಧಿಕಾರಿಗಳ ಶಾಂತಿಸಭೆ ಮರುದಿನ ಹೋಟೆಲ್‌ಗಳು ಬಂದ್!

ದಲಿತರಿಗೆ ಹೋಟೆಲ್ ಪ್ರವೇಶ ಕಲ್ಪಿಸುವಂತೆ ಶುಕ್ರವಾರ ಡಿವೈಎಸ್ಪಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು, ತಹಶೀಲ್ದಾರ್, ಪಿಎಸ್‌ಐ, ತಾಪಂ ಸಹಾಯಕ ನಿರ್ದೇಶಕರು, ಗ್ರಾಮ ಆಡಳಿತಾಧಿಕಾರಿ, ಪಿಡಿಒ, ಜೆಇ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದ್ದರು. ಹೋಟೆಲ್ ಮತ್ತು ದೇವಸ್ಥಾನಗಳಿಗೆ ಎಲ್ಲರಿಗೂ ಸಮಾನ ಪ್ರವೇಶ ನೀಡುವಂತೆ ತಿಳಿಹೇಳಿದ್ದರು. ಆದರೆ, ಅಧಿಕಾರಿಗಳ ಸಭೆಯ ಮರುದಿನವೇ ಮಾಲಕರು ಹೋಟೆಲ್‌ಗಳನ್ನು ಬಂದ್ ಮಾಡಿದ್ದಾರೆ. ದಲಿತರು ಹೋಟೆಲ್‌ಗಳಿಗೆ ಕಾಲಿಟ್ಟರೆ ಮೈಲಿಗೆಯಾಗುತ್ತದೆ ಎಂಬ ಮನೋಭಾವದಿಂದ ಹೀಗೆ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೂಗೂರು ಗ್ರಾಮಕ್ಕೆ ಭೇಟಿ ನೀಡಿ, ಅಸ್ಪಶ್ಯತೆ ಆಚರಿಸಿದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ದೇವಸ್ಥಾನ ಪ್ರವೇಶ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ತಾರತಮ್ಯಕ್ಕೆ ಕಡಿವಾಣ ಹಾಕಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

-ನಿಂಗಣ್ಣ ಗೋನಾಲ್,

ಡಿಎಸ್‌ಎಸ್ ಜಿಲ್ಲಾ ಸಂಚಾಲಕ

ದೇವಸ್ಥಾನಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದಲಿತರನ್ನು ಇತರರಂತೆ ಸಮಾನವಾಗಿ ಕಾಣಬೇಕು. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಜಾತಿ ಪದ್ಧತಿ ಮತ್ತು ಅಸ್ಪಶ್ಯತೆ ಮುಂದುವರಿದಿದ್ದು, ಜಾತಿ ತಾರತಮ್ಯ ಸಂಪೂರ್ಣವಾಗಿ ನಿಲ್ಲಬೇಕು.

-ಕಾಶಪ್ಪ ಮಾದಿಗ, ಜಿಲ್ಲಾಧ್ಯಕ್ಷ

ಎಂಆರ್‌ಪಿಎಸ್ ಸಮಿತಿ, ಯಾದಗಿರಿ

ಸೂಗೂರು ಗ್ರಾಮದ ಅಸ್ಪಶ್ಯತೆ ಆಚರಣೆ ವಿಷಯ ಗಮನಕ್ಕೆ ಬಂದಿದೆ. ಡಿವೈಎಸ್ಪಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಹಶೀಲ್ದಾರ್ ಸೇರಿದಂತೆ ಮೂರು ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಸ್ಪಶ್ಯತೆ ಆಚರಣೆ ಮಾಡಿದವರ ವಿರುದ್ಧ ಯಾರಾದರೂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು.

-ಪೃಥ್ವಿಕ್ ಶಂಕರ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಯಾದಗಿರಿ

ಸೂಗೂರು ಗ್ರಾಮದಲ್ಲಿ ಹಲವು ವರ್ಷಗಳಿಂದ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧವಿದೆ. ಸಾರ್ವಜನಿಕ ಹೋಟೆಲ್‌ಗಳಲ್ಲಿಯೂ ತಾರತಮ್ಯವಿದೆ. ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಅಸ್ಪಶ್ಯತೆ ಆಚರಣೆಗೆ ಅಂತ್ಯ ಹಾಡಬೇಕು.

-ರಾಮಪ್ಪ ಕೋರೆ, ಗ್ರಾಮದ ನಿವಾಸಿ

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X