Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಿತ್ತನೆಗೆ ಸಿದ್ಧತೆ: ಕಲಬುರಗಿ...

ಬಿತ್ತನೆಗೆ ಸಿದ್ಧತೆ: ಕಲಬುರಗಿ ಜಿಲ್ಲೆಯಲ್ಲಿ 8.90 ಲಕ್ಷ ಹೆಕ್ಟೇರ್ ಗುರಿ

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ5 Jun 2026 3:25 PM IST
share
ಬಿತ್ತನೆಗೆ ಸಿದ್ಧತೆ: ಕಲಬುರಗಿ ಜಿಲ್ಲೆಯಲ್ಲಿ 8.90 ಲಕ್ಷ ಹೆಕ್ಟೇರ್ ಗುರಿ
ಬೀಜ-ರಸಗೊಬ್ಬರ ಕೊರತೆ ಇಲ್ಲ; ರೈತರಿಗೆ ಆತಂಕ ಬೇಡವೆಂದ ಇಲಾಖೆ

ಕಲಬುರಗಿ: ಇತ್ತೀಚೆಗೆ ಸುರಿದಿರುವ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳಿಗೆ ಅನ್ನದಾತರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ರೈತರ ಅಗತ್ಯತೆಗಳಿಗೆ ಬೆನ್ನೆಲುಬಾಗಿ ಜಿಲ್ಲಾಡಳಿತ ನಿಂತಿದ್ದು, ಒಟ್ಟಾರೆ 8.90 ಲಕ್ಷ ಹೆಕ್ಟೇರ್ ಬಿತ್ತನೆಯ ಗುರಿ ಹೊಂದಿ ಬಿತ್ತನೆಗೆ ಬೇಕಾಗುವ ಅಗತ್ಯ ಬೀಜ, ರಸಗೊಬ್ಬರ ಹಾಗೂ ಕೃಷಿ ಸಾಮಗ್ರಿಗಳನ್ನು ಪೂರೈಸಲು ಸಿದ್ಧತೆ ಮಾಡಿಕೊಂಡಿದೆ.

ಇತ್ತೀಚೆಗೆ ಸುರಿದ ಮಳೆಯು ಪ್ರಾಥಮಿಕ ಉಳುಮೆಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ ಬಿತ್ತನೆಗೆ ಬೇಕಾಗುವಷ್ಟು ತೇವಾಂಶ ಮಣ್ಣಿನಲ್ಲಿ ಸೃಷ್ಟಿಯಾಗಿಲ್ಲ. ಹಾಗಾಗಿ ಬಿತ್ತನೆ ಕೈಗೊಳ್ಳುವ ರೈತರು ಆತುರ ಪಡಬಾರದು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ. ಕೆಲ ದಿನಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದರೆ ಬಿತ್ತನೆಗೆ ಭೂಮಿ ಹದವಾಗಲಿದೆ. ಆಗ ಕೃಷಿ ಚಟುವಟಿಕೆಗಳು ನಡೆಸಬಹುದು ಎಂದು ಇಲಾಖೆಯ ಮೂಲಗಳು ಹೇಳಿವೆ.

ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಒಟ್ಟು 22,828.03 ಕ್ವಿಂಟಲ್ ಬಿತ್ತನೆ ಬೀಜ ಹಂಚಿಕೆ ಮಾಡಲಾಗಿದೆ. ಇದರಲ್ಲಿ ತೊಗರಿಗೆ 6,011.17 ಕ್ವಿಂಟಲ್, ಹೆಸರಿಗೆ 535.93 ಕ್ವಿಂಟಲ್, ಉದ್ದಿಗೆ 379.40 ಕ್ವಿಂಟಲ್ ಹಾಗೂ ಸೋಯಾಬೀನ್‌ಗೆ 15,681.64 ಕ್ವಿಂಟಲ್ ಸೇರಿದೆ. ಈಗಾಗಲೇ ಒಟ್ಟು 22,608.14 ಕ್ವಿಂಟಲ್ ಬೀಜಗಳ ಇಂಡೆಂಟ್ ನೀಡಲಾಗಿದ್ದು, ಜಿಲ್ಲೆಯ ಎಲ್ಲಾ ರೈತ

ಸಂಪರ್ಕ ಕೇಂದ್ರಗಳಲ್ಲಿ (ಆರ್‌ಎಸ್‌ಕೆ) ಸಮರ್ಪಕವಾಗಿ ದಾಸ್ತಾನು ಮಾಡಲಾಗಿದೆ. ಬಿತ್ತನೆ ಬೀಜದ ಕೊರತೆ ಯಾವುದೇ ರೀತಿಯಲ್ಲಿ ಇಲ್ಲ. ಹೀಗಾಗಿ ರೈತರು ಆತಂಕ ಪಡಬಾರದು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ರಸಗೊಬ್ಬರ ದಾಸ್ತಾನಿನ ಆತಂಕವಿದೆಯೇ?

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಒಟ್ಟು 99,863 ಮೆಟ್ರಿಕ್ ಟನ್ ರಸಗೊಬ್ಬರ ಹಂಚಲಾಗಿದೆ. ಜೂನ್ ತಿಂಗಳ ಕೊನೆಯವರೆಗೆ ಒಟ್ಟು 50,297 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿದ್ದು, 59,402 ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಈಗಾಗಲೇ 21,051 ಮೆಟ್ರಿಕ್ ಟನ್ ರಸಗೊಬ್ಬರ ರೈತರಿಗೆ ವಿತರಿಸಲಾಗಿದೆ. ಬಿತ್ತನೆಗೆ ಬೇಕಾಗುವ ಯೂರಿಯಾ, ಡಿಎಪಿ ಹಾಗೂ ಕಾಂಪ್ಲೆಕ್ಸ್ ರಸಗೊಬ್ಬರ ಸೇರಿದಂತೆ ಒಟ್ಟು 38,351 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ. ಹಾಗಾಗಿ ರಸಗೊಬ್ಬರ ಕುರಿತು ರೈತರು ಆತಂಕ ಪಡಬಾರದು ಎಂದು ಇಲಾಖೆ ತಿಳಿಸಿದೆ.

share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X