Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರು: ಮೂರು ತಿಂಗಳಾದರೂ ಪೂರ್ಣಗೊಳ್ಳದ...

ರಾಯಚೂರು: ಮೂರು ತಿಂಗಳಾದರೂ ಪೂರ್ಣಗೊಳ್ಳದ ಅಂಬೇಡ್ಕರ್ ವೃತ್ತದ ಕಾಮಗಾರಿ; ಹೋರಾಟಗಾರರಲ್ಲಿ ಅಸಮಾಧಾನ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು13 Oct 2026 12:49 PM IST
share
ರಾಯಚೂರು: ಮೂರು ತಿಂಗಳಾದರೂ ಪೂರ್ಣಗೊಳ್ಳದ ಅಂಬೇಡ್ಕರ್ ವೃತ್ತದ ಕಾಮಗಾರಿ; ಹೋರಾಟಗಾರರಲ್ಲಿ ಅಸಮಾಧಾನ

ರಾಯಚೂರು : ನಗರದ ಹೃದಯಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ನವೀಕರಣ ಕಾಮಗಾರಿ ಆರಂಭವಾಗಿ ಮೂರು ತಿಂಗಳು ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಕಾಮಗಾರಿ ವಿಳಂಬದ ಬಗ್ಗೆ ಅಂಬೇಡ್ಕರ್ ಅನುಯಾಯಿಗಳು, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1992ರಲ್ಲಿ ಅಂದಿನ ಶಾಸಕ ಎ. ಪಾಪಾರೆಡ್ಡಿ ಹಾಗೂ ನಗರಸಭೆ ಅಧ್ಯಕ್ಷ ಎಂ. ಈರಣ್ಣ ಅವರ ಅಧಿಕಾರಾವಧಿಯಲ್ಲಿ ಅಂಬೇಡ್ಕರ್ ವೃತ್ತ ನಿರ್ಮಿಸಿ, ಪುತ್ಥಳಿ ಸ್ಥಾಪಿಸಲಾಗಿತ್ತು. ವರ್ಷಗಳ ಬಳಿಕ ನಗರದ ಬೆಳವಣಿಗೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಳದಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ವೃತ್ತದ ಆಧುನೀಕ

ರಣಕ್ಕೆ ಜಿಲ್ಲಾಡಳಿತ ಮುಂದಾಗಿತ್ತು. ಜುಲೈ 1ರಂದು ವೃತ್ತವನ್ನು ತೆರವುಗೊಳಿಸಿ, ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.

ಪುತ್ಥಳಿ ಮರುಸ್ಥಾಪನೆಗೆ ಅಗತ್ಯವಾದ ತಳಪಾಯ ನಿರ್ಮಾಣಕ್ಕೇ ಸುಮಾರು ಎರಡು ತಿಂಗಳು ಕಳೆದಿದೆ ಎನ್ನಲಾಗಿದ್ದು, ಉಳಿದ ಕಾಮಗಾರಿ ಯಾವ ಹಂತದಲ್ಲಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಮೂರು ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳ್ಳುವ ಲಕ್ಷಣಗಳು ಕಾಣಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ನಗರದ ಪ್ರಮುಖ ರಸ್ತೆಯಲ್ಲಿರುವ ಈ ವೃತ್ತ ಜಿಲ್ಲೆಗೆ ಆಗಮಿಸುವವರ ಗಮನ ಸೆಳೆಯುವ ಸ್ಥಳವಾಗಿದೆ. ಬಸ್ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಬರುವ ಪ್ರಯಾಣಿಕರು ಸೇರಿದಂತೆ ಪ್ರತಿದಿನ ಸಾವಿರಾರು ಜನರು ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಈ ಹಿಂದೆ ವೃತ್ತದಲ್ಲಿದ್ದ ಅಂಬೇಡ್ಕರ್ ಪುತ್ಥಳಿಯನ್ನು ತೆರವುಗೊಳಿಸಿ ತಿಂಗಳುಗಳೇ ಕಳೆದಿದ್ದರೂ, ಹೊಸದಾಗಿ ಪುತ್ಥಳಿ ಪ್ರತಿಷ್ಠಾಪಿಸಲು ದಿನಾಂಕ ನಿಗದಿಯಾಗಿಲ್ಲ. ಇದರಿಂದ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಮೂಡಿವೆ.

ಪುತ್ಥಳಿ ತೆರವುಗೊಳಿಸುವ ಸಂದರ್ಭದಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಿ, ಶೀಘ್ರ ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ದಲಿತಪರ ಸಂಘಟನೆಗಳ ಮುಖಂಡರು ಮತ್ತು ಹಿರಿಯ ಹೋರಾಟಗಾರರ ಸಭೆಯಲ್ಲಿ ಭರವಸೆ ನೀಡಿದ್ದರು. ಆದರೆ, ಪುತ್ಥಳಿ ತೆರವುಗೊಳಿಸುವಾಗ ಇದ್ದ ಉತ್ಸಾಹ ಕಾಮಗಾರಿ ಪೂರ್ಣಗೊಳಿಸುವಲ್ಲಿ ಕಾಣಿಸುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.

ಕಾಮಗಾರಿ ವಿಳಂಬಕ್ಕೆ ಆಡಳಿತಾತ್ಮಕ ತೊಂದರೆಯೇ, ಅನುದಾನ ಬಿಡುಗಡೆಯಾಗಿಲ್ಲವೇ ಅಥವಾ ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟಪಡಿಸಬೇಕಿದೆ. ಕಾಮಗಾರಿಗೆ ಎಷ್ಟು ಅನುದಾನ ಮಂಜೂರಾಗಿದೆ, ಯಾವ ಇಲಾಖೆಯ ಅಡಿಯಲ್ಲಿ ಕಾಮಗಾರಿ ನಡೆಯುತ್ತಿದೆ, ಲೋಕೋಪಯೋಗಿ ಇಲಾಖೆ ಅಥವಾ ಮಹಾನಗರ ಪಾಲಿಕೆಯಲ್ಲಿ ಯಾವ ಸಂಸ್ಥೆ ಜವಾಬ್ದಾರಿ ಹೊತ್ತಿದೆ, ಗುತ್ತಿಗೆದಾರರು ಯಾರು, ಕಾಮಗಾರಿ ಪೂರ್ಣಗೊಳಿಸಲು ನಿಗದಿಪಡಿಸಿರುವ ಗಡುವು ಎಷ್ಟು ಹಾಗೂ ಇದುವರೆಗೆ ಎಷ್ಟು ಹಣ ಬಿಡುಗಡೆಯಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ.

ದೊಡ್ಡ ದೊಡ್ಡ ಕಾಮಗಾರಿಗಳು ಹಾಗೂ ರಸ್ತೆ ನಿರ್ಮಾಣ ಕಾರ್ಯಗಳನ್ನು ಕೆಲವೇ ದಿನಗಳಲ್ಲಿ ಪೂರ್ಣ

ಗೊಳಿಸಿದ ಉದಾಹರಣೆಗಳಿರುವಾಗ, ಒಂದು ವೃತ್ತದ ನವೀಕರಣ ಮತ್ತು ಸೌಂದರ್ಯೀಕರಣಕ್ಕೆ ಮೂರು ತಿಂಗಳು ಬೇಕೇ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಮುಂದಿಟ್ಟಿದ್ದಾರೆ. ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೂಡಲೇ ಮಧ್ಯಪ್ರವೇಶಿಸಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಅಂಬೇಡ್ಕರ್ ಪುತ್ಥಳಿಯನ್ನು ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X