Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಚಿವ ಸ್ಥಾನಕ್ಕಾಗಿ ರಾಯಚೂರು ನಾಯಕರ...

ಸಚಿವ ಸ್ಥಾನಕ್ಕಾಗಿ ರಾಯಚೂರು ನಾಯಕರ ದಿಲ್ಲಿ-ಬೆಂಗಳೂರು ದೌಡು!

ಬಾವಸಲಿ,ರಾಯಚೂರುಬಾವಸಲಿ,ರಾಯಚೂರು1 Jun 2026 3:43 PM IST
share
ಸಚಿವ ಸ್ಥಾನಕ್ಕಾಗಿ ರಾಯಚೂರು ನಾಯಕರ ದಿಲ್ಲಿ-ಬೆಂಗಳೂರು ದೌಡು!
ಆಕಾಂಕ್ಷಿಗಳ ಪಟ್ಟಿಯಲ್ಲಿರುವ ನಾಯಕರು ಯಾರು?

ರಾಯಚೂರು : ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರಮಾಣವಚನಕ್ಕೆ ತಯಾರಿ ನಡೆಯುತ್ತಿದ್ದು ಜಿಲ್ಲೆಯಲ್ಲಿ ಸಚಿವ ಸ್ಥಾನದ ಚರ್ಚೆ ಗರಿಗೆದರಿದೆ.

ಜಿಲ್ಲೆಯ 7 ವಿಧಾನಸಭೆ ಕ್ಷೇತ್ರದ ಪೈಕಿ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಶಾಸಕರಿದ್ದು, ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದಾರೆ. ಇವರೆಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಮುಖ್ಯವಾಗಿ ಕಾಂಗ್ರೆಸ್‌ನ ನಾಲ್ವರು ಶಾಸಕರೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ಇವರಲ್ಲಿ ಹಿರಿಯಶಾಸಕರಾದ (ಐದು ಬಾರಿ ಶಾಸಕರಾದ) ಸಿಂಧನೂರು ಕ್ಷೇತ್ರದ ಹಂಪನಗೌಡ ಬಾದರ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಿದರೆ ಹಿರಿತನದ ಆಧಾರದಲ್ಲಿ ಇವರಿಗೆ ಸಚಿವ ಸ್ಥಾನ ನೀಡಬಹುದು ಎಂದು ಹೇಳಲಾಗುತ್ತಿದೆ. ಲಿಂಗಾಯತ ಕೋಟಾದಲ್ಲಿ ಹಾಲಿ ಸಚಿವರಲ್ಲಿ ಯಾರನ್ನಾದರೂ ಕೈ ಬಿಟ್ಟರೆ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತೀಚೆಗೆ ಜಿಲ್ಲೆಯ ಲಿಂಗಾಯತ ಸಮಾಜದಿಂದ ಪ್ರೆಸ್ ಮೀಟ್ ಮಾಡಿ ಒತ್ತಾಯವೂ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿರುವ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಇವರಿಗೆ ರಾಜಕೀಯ ಗಾಡ್ ಫಾದರ್ ಎಂಬ ಮಾತಿದ್ದು, ಹೈಕಮಾಂಡ್ ಮನಸು ಮಾಡಿದರೆ ಸಚಿವ ಸ್ಥಾನ ಒಲಿಯಬಹುದು.

ಹಂಪನಗೌಡ ಬಾದರ್ಲಿ ಅವರಿಗೆ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗಬಹುದು ಎಂಬನಿರೀಕ್ಷೆಯಿತ್ತು. ಆದರೆ ಕೊನೆ ಕ್ಷಣದಲ್ಲಿ ಎಂಎಲ್ಸಿ ಎನ್.ಎಸ್.ಭೋಸರಾಜು ಅವರಿಗೆ ಸಚಿವ ಸ್ಥಾನ ಸಿಕ್ಕಿತ್ತು.

ಶಾಸಕರಾಗದಿದ್ದರೂ ಸಚಿವರಾಗಿದ್ದ ಭೋಸರಾಜು: ಕಳೆದ ವಿಧಾನಸಭಾ ಚುನಾವಣೆಯ ವೇಳ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಭೋಸರಾಜು ಅವರ ಹೆಸರೂ ಇತ್ತು. ತೀವ್ರ ಕಸರತ್ತು ನಡೆಸಿದರೂ ಟಿಕೆಟ್ ನೀಡಿರಲಿಲ್ಲ. ಬಳಿಕ ಅವರ ಆಪ್ತರಾದ ಮೊಹಮ್ಮದ್ ಶಾಲಂ ಅವರಿಗೆ ಟಿಕೆಟ್ ನೀಡಿದ್ದರೂ ವರು ಅಲ್ಪಮತಗಳ ಅಂತರದಿಂದ ಸೋತಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸದೇ ಶಾಸಕರಾಗಿರದಿದ್ದರೂ ಹೈಕಮಾಂಡ್ ಕೃಪಾಕಟಾಕ್ಷದಿಂದ ಭೋಸರಾಜು ಅವರಿಗೆ ಸಚಿವ ಸ್ಥಾನ ಒಲಿದಿತ್ತು. ಮೂಲಗಳ ಪ್ರಕಾರ ಭೋಸರಾಜು ಅವರಿಗೆ ಎರೆಡುವರೆ ವರ್ಷ ಮಾತ್ರ ಸಚಿವ ಸ್ಥಾನ ನೀಡುವ ಒಪ್ಪಂದವಾಗಿತ್ತು. ಈಗ ಅದು ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಚಿವ ಸ್ಥಾನ ನೀಡಿದರೆ ಬೇರೆಯವರಿಗೆ ನೀಡಬಹುದು.

ಕಳೆದ ಬಾರಿ ಹಂಪನಗೌಡ ಅವರನ್ನು ಸಮಾಧಾನ ಪಡಿಸಲು ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ಅವರು ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇವರಲ್ಲದೆ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರ ಪೈಕಿ ಎಲ್ಲರೂ ಒಂದಕ್ಕಿಂತ ಹೆಚ್ಚು ಬಾರಿ ಶಾಸಕರಾಗಿದ್ದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಹಂಪಯ್ಯ ನಾಯಕ ಸಾಹುಕಾರ್: ಮಾನ್ವಿ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ ಸಾಹುಕಾರ್ ಅವರು ಕಾಂಗ್ರೆಸ್‌ನಿಂದ ಮೂರು ಬಾರಿ ಶಾಸಕರಾಗಿದ್ದಾರೆ.ಹಿರಿಯರಾದ ಇವರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಎಸ್‌ಟಿ ಕೋಟಾದಲ್ಲಿ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಮಟ್ಟದಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಸನಗೌಡ ದದ್ದಲ್: ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಸನಗೌಡ ದದ್ದಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಇವರು ಕೂಡಾ ಎಸ್‌ಟಿ ಕೋಟಾದಡಿ ಸಚಿವ ಸ್ಥಾನ ನೀಡಬೇಕು ಎಂದು ಪ್ರಯತ್ನ ಪಡುತ್ತಿದ್ದಾರೆ. ಪ್ರಸ್ತುತ ಸಂಪುಟ ದರ್ಜೆಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ದದ್ದಲ್ ತೆರೆಮರೆಯಲ್ಲಿ ಸಚಿವ ಸ್ಥಾನಕ್ಕೆ ಕಸರತ್ತು ನಡೆಸುತ್ತಿದ್ದಾರೆ.

ಬಸನಗೌಡ ತುರ್ವಿಹಾಳ: ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರೂ ಆಗಿರುವ ಮಸ್ಕಿ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಎರಡುಬಾರಿ ಶಾಸಕರಾಗಿದ್ದಾರೆ. ಇವರು ಕೂಡಾ ಎಸ್‌ಟಿ ಕೋಟಾದಲ್ಲಿ ಸಚಿವ ನೀಡಿದರೆ ತಮಗೆ ಆದ್ಯತೆ ನೀಡಬೇಕು ಎಂದು ಹೈಕಮಾಂಡ್‌ಗೆ ಮನವಿ ಮಾಡಿದ್ದು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಎ.ವಸಂತಕುಮಾರ: ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಪಕ್ಷಕ್ಕಾಗಿ ಅನೇಕ ವರ್ಷದುಡಿದಿದ್ದು ತಮಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯನೀಡಬೇಕು ಎಂದು ಮನವಿ ಮಾಡಿದ್ದಾರೆ ಎಂಬ ಮಾತು ಕೇಳುತ್ತಿದೆ. ಪರಿಶಿಷ್ಟ ಜಾತಿಯವರಾದ ವಸಂತ ಕುಮಾರ ಎಸ್‌ಸಿ ಕೋಟಾದಡಿ ಸಚಿವ ಸ್ಥಾನ ನೀಡಬೇಕು ಎಂದು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಬಹಿರಂಗವಾಗಿ ಹೇಳಿಕೆ ನೀಡಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿರುವ ಇವರು ಬಿಜೆಪಿ, ಆರೆಸ್ಸೆಸ್ ನಾಯಕರು ಖರ್ಗೆ ಕುಟುಂಬದ ಬಗ್ಗೆ ಹೇಳಿಕೆ ನೀಡಿದ್ದಲ್ಲಿ ಖಂಡಿಸುವವರಲ್ಲಿ ಮೊದಲಿಗರು. ಖರ್ಗೆ ಅವರು ಮನಸು ಮಾಡಿದರೆ ಅಚ್ಚರಿಯಾಗಿ ಸಚಿವ ಸ್ಥಾನ ಸಿಗಬಹುದು

ಬಸನಗೌಡ ಬಾದರ್ಲಿ: ಹಾಲಿ ಸಚಿವರಾದ ಭೋಸರಾಜು ಅವರು ಎರಡನೇ ಬಾರಿಗೆ ಸಚಿವರಾಗುವ ಆಸೆ ಇಟ್ಟುಕೊಂಡಿದ್ದಾರೆ. ಸಿಂಧನೂರು ತಾಲೂಕಿನವರಾದ ಎಂಎಲ್ಸಿ ಬಸನಗೌಡ ಬಾದರ್ಲಿ ಅವರು ಡಿ.ಕೆ ಶಿವಕುಮಾರ್ ಅವರ ಆಪ್ತರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಯುವ ಘಟಕದ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಇವರು ಕಳೆದ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿ ಬಂಡಾಯ ಎದ್ದಿದ್ದರು. ಪಕ್ಷ ಅವರಿಗೆ ಚುನಾವಣೆ ಬಳಿಕ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಸಮಾಧಾನ ಪಡಿಸಿ ಎಂಎಲ್‌ಸಿ ಮಾಡಿದ್ದರು. ಹಾಲಿ ಶಾಸಕ ಹಾಗೂ ತಾತ ಹಂಪನಗೌಡ ಗೌಡ ಬಾದರ್ಲಿಗೆ ಸೆಡ್ಡು ಹೊಡೆದು ಸಚಿವ ಸ್ಥಾನ ಪಡೆದರೂ ಆಶ್ಚರ್ಯವಿಲ್ಲ. ಪಕ್ಷದ ಹೈಕಮಾಂಡ್ ಜಿಲ್ಲೆಯಿಂದ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕಾದು ನೋಡಬೇಕಿದೆ.

ಸಚಿವ ಸ್ಥಾನ ಹಂಚಿಕೆಯಲ್ಲಿ ಕೇವಲ ಜಿಲ್ಲೆ ಮಾತ್ರವಲ್ಲ, ಜಾತಿ ಸಮೀಕರಣ, ಪ್ರಾದೇಶಿಕ ಸಮತೋಲನ, ಪಕ್ಷದ ನಿಷ್ಠೆ, ಆಡಳಿತ ಸಾಮರ್ಥ್ಯ ಹಾಗೂ ಮುಂದಿನ ಚುನಾವಣಾ ತಂತ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಓಡಾಟ ಅಂತಿಮ ಫಲಿತಾಂಶ ನೀಡುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕಾಂಗ್ರೆಸ್ ಎದುರಿಸುತ್ತಿರುವ ಸವಾಲು

ಕಾಂಗ್ರೆಸ್ ಜಿಲ್ಲಾ ಘಟಕದಲ್ಲಿ ಭಿನ್ನಮತೀಯರ ಕಿತ್ತಾಟ ಹಿಂದಿನಿಂದಲೂ ಇದ್ದು ಸರಕಾರ ರಚನೆಯಾದರೂ ಕೂಡ ಕಡಿಮೆಯಾಗಿಲ್ಲ. ಜಿಲ್ಲೆಯಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಣವಿದ್ದು ಪರಸ್ಪರ ಕಚ್ಚಾಟ ನಡೆಯುತ್ತದೆ. ಇದರಿಂದ ಸಾಮಾನ್ಯ ಕಾರ್ಯಕರ್ತರು ಗೊಂದಲಕ್ಕೆ ಸಿಲುಕುವುದುಂಟು. ಪ್ರಸ್ತುತ ಕಾಂಗ್ರೆಸ್ ಅಧಿಕಾರದಲ್ಲಿದೆ. ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಲ ಹೊಂದಿದ್ದರೂ, ಸಚಿವ ಸಂಪುಟದಲ್ಲಿ ನಿರೀಕ್ಷಿತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಅಸಮಾಧಾನ ಸ್ಥಳೀಯ ಕಾರ್ಯಕರ್ತರಲ್ಲಿ ಇದೆ.

ಮುಂದಿನ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನಿಸಿದರೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ನೀಡುವುದು ಕಾಂಗ್ರೆಸ್‌ಗೆ

ರಾಜಕೀಯ ಅನಿವಾರ್ಯತೆಯೂ ಆಗಿದೆ. ಹಿಂದೆ ಬಿಜೆಪಿ ಆಡಳಿತ ನಡೆಸಿದರೂ ಸಚಿವ ಸ್ಥಾನ ನೀಡಿರಲಿಲ್ಲ. ಈಗ ಇಬ್ಬರಿಗಾದರು ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಒಂದು ವೇಳೆ ರಾಯಚೂರಿಗೆ ಸಚಿವ ಸ್ಥಾನ ನೀಡದಿದ್ದರೆ ಹಾಗೂ ಒಬ್ಬರಿಗೆ ಮಾತ್ರ ನೀಡಿದ್ದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

share
ಬಾವಸಲಿ,ರಾಯಚೂರು
ಬಾವಸಲಿ,ರಾಯಚೂರು
Next Story
X