Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರು: ಶಿಕ್ಷಕರ ಕೊರತೆಯಿಂದ ನಲುಗಿದ...

ರಾಯಚೂರು: ಶಿಕ್ಷಕರ ಕೊರತೆಯಿಂದ ನಲುಗಿದ ಶಾಲೆಗಳು

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು10 Jun 2026 3:04 PM IST
share
ರಾಯಚೂರು: ಶಿಕ್ಷಕರ ಕೊರತೆಯಿಂದ ನಲುಗಿದ ಶಾಲೆಗಳು
318 ಶೂನ್ಯ ಶಿಕ್ಷಕ ಶಾಲೆಗಳು, 255 ಏಕೋಪಾಧ್ಯಾಯ ಶಾಲೆಗಳು

ರಾಯಚೂರು: ಜಿಲ್ಲೆಯಲ್ಲಿ ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಕುಸಿತಗೊಂಡಿರುವುದು ಆತಂಕ ಮೂಡಿಸಿದ್ದು, 318 ಶಾಲೆಗಳು ಶೂನ್ಯ ಶಿಕ್ಷಕರಿಂದಲೇ ಕಾರ್ಯನಿರ್ವಹಿಸುತ್ತಿರುವುದು ಹಾಗೂ 255 ಏಕೋಪಾಧ್ಯಾಯ ಶಾಲೆಗಳು ಇರುವುದರಿಂದ ಮಕ್ಕಳ ಕಲಿಕೆಗೆ ಗಂಭೀರ ತೊಡಕು ಉಂಟಾಗಿದೆ ಎಂದು ಪಾಲಕರು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬೇಸಿಗೆ ರಜೆ ಬಳಿಕ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಿಕ್ಷಣ ಇಲಾಖೆ ಸಿಹಿ ಹಂಚಿ, ಮಕ್ಕಳನ್ನು ಶಾಲೆಗೆ ಆಕರ್ಷಿಸುವ ಕಾರ್ಯಕ್ರಮಗಳನ್ನು ನಡೆಸಿದೆ. ಉಚಿತ ಪಠ್ಯಪುಸ್ತಕ, ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆದರೂ ಶಿಕ್ಷಕರ ಕೊರತೆಯಿಂದ ಮಕ್ಕಳ ಹಾಜರಾತಿ ಕಡಿಮೆಯಾಗುತ್ತಿದೆೆ.

ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಒಟ್ಟು 5,624 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಪ್ರಾಥಮಿಕ ಶಾಲೆಗಳ 8,460 ಅನುಮೋದಿತ ಹುದ್ದೆಗಳಲ್ಲಿ ಕೇವಲ 3,900 ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ 4,560 ಹುದ್ದೆಗಳು ಖಾಲಿಯಾಗಿವೆ. ಪ್ರೌಢಶಾಲೆಗಳ 2,239 ಹುದ್ದೆಗಳಲ್ಲಿ 1,175 ಶಿಕ್ಷಕರು ಮಾತ್ರ ಇದ್ದು, 1,064 ಹುದ್ದೆಗಳು ಖಾಲಿ ಇವೆ.

ಇದಕ್ಕಿಂತ ಗಂಭೀರ ವಿಚಾರವೆಂದರೆ, ಮಕ್ಕಳಿಗೆ ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯಡಿ ಪ್ರತೀ ಶಾಲೆಯಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ವಿಷಯವಾರು ಶಿಕ್ಷಕರ ನೇಮಕ ಕಡ್ಡಾಯವಾಗಿದ್ದರೂ, ವಾಸ್ತವದಲ್ಲಿ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿದೆ. ದೇವದುರ್ಗ ತಾಲೂಕಿನಲ್ಲಿ ಮಾತ್ರವೇ 105 ಶೂನ್ಯ ಶಿಕ್ಷಕ ಶಾಲೆಗಳಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತದೆ.

ಇದಲ್ಲದೆ, ಜಿಲ್ಲೆಯಲ್ಲಿ 243 ಪ್ರಾಥಮಿಕ ಹಾಗೂ 12 ಪ್ರೌಢ ಶಾಲೆಗಳು ಸೇರಿ ಒಟ್ಟು 255 ಏಕೋಪಾಧ್ಯಾಯ ಶಾಲೆಗಳಿದ್ದು, ಒಂದೇ ಶಿಕ್ಷಕರು ಎಲ್ಲಾ ತರಗತಿಗಳಿಗೆ ಬೋಧನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ಮಕ್ಕಳ ಮೂಲಭೂತ ಕಲಿಕೆಯೇ ಹಿಂದುಳಿದಿದೆ. 2024ರ ASER ಸಮೀಕ್ಷೆಯ ಪ್ರಕಾರ ಶೇ.70ರಷ್ಟು ಮಕ್ಕಳಿಗೆ ಓದಲು ಹಾಗೂ ಬರೆಯಲು ಬಾರದಿರುವುದು ಶಿಕ್ಷಣದ ಗುಣಮಟ್ಟದ ಕುಸಿತಕ್ಕೆ ಸಾಕ್ಷಿಯಾಗಿದೆ.

ಹಿಂದಿನ ವರ್ಷಗಳಲ್ಲಿ ಫಲಿತಾಂಶಗಳು ಅತ್ಯಂತ ಕಳಪೆಯಾಗಿದ್ದವು. ಈ ವರ್ಷ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದ್ದರೂ, ಶಿಕ್ಷಕರ ಕೊರತೆ ಇದ್ದರೂ ಫಲಿತಾಂಶ ಹೇಗೆ ಸುಧಾರಿಸಿದೆ ಎಂಬುದರ ಕುರಿತು ಪ್ರಶ್ನೆಗಳು ಎದ್ದಿವೆ. ಶಿಕ್ಷಣ ಇಲಾಖೆ ಮಾತ್ರ ತನ್ನ ಸಾಧನೆಯನ್ನು ಹೊಗಳಿಕೊಳ್ಳುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ. ಕಳೆದ ವರ್ಷ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆ ನೀಡಲಾಗಿದ್ದರೂ, ಈ ವರ್ಷವೂ ಅತಿಥಿ ಶಿಕ್ಷಕರನ್ನೇ ನೇಮಿಸಿ ಶಿಕ್ಷಣ ಮುಂದುವರಿಸಲಾಗುತ್ತಿದೆ. ಇದು ಸರಕಾರದ ನಿರ್ಲಕ್ಷ್ಯ ನೀತಿಗೆ ಉದಾಹರಣೆಯಾಗಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ಜಿಲ್ಲೆಯಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದಾಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ಹೇಗೆ? ಸರಕಾರ ಹೊಸ ಯೋಜನೆ ರೂಪಿಸುವುದೊಂದಿಗೆ ಶಾಲೆಗಳ ಮೂಲ ಸೌಕರ್ಯ ಸಮಸ್ಯೆಗಳನ್ನು ಪರಿಹರಿಸಬೇಕು.

-ಹಯ್ಯಾಳಪ್ಪ

ವಿದ್ಯಾರ್ಥಿ ಸಂಘಟನೆ ಮುಖಂಡ

ಶಾಲೆಗಳ ಮೂಲಸೌಕರ್ಯ ಸುಧಾರಣೆ ಹಾಗೂ ಖಾಲಿ ಹುದ್ದೆಗಳ ಭರ್ತಿ ತಕ್ಷಣವಾಗಬೇಕು. ಸರಕಾರಿ ಶಾಲೆಗಳ ಕಡೆಗಣನೆ ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿಯಾಗಿದೆ.

-ವೀರೇಶ್ ಎನ್.ಎಸ್, ಎಐಡಿವೈಒ ಮುಖಂಡ

ಶೂನ್ಯ ಶಿಕ್ಷಕರು ಇರುವ ಶಾಲೆಗಳು

ಜಿಲ್ಲೆಯ ಐದು ಶೈಕ್ಷಣಿಕ ಕ್ಷೇತ್ರಗಳಲ್ಲಿ ಒಟ್ಟು 294 ಪ್ರಾಥಮಿಕ ಶಾಲೆಗಳು ಶಿಕ್ಷಕರಿಲ್ಲದೇ ಕಾರ್ಯನಿರ್ವಹಿಸುತ್ತಿವೆ. ಇದಲ್ಲದೆ ಕ್ಷೇತ್ರವಾರು ವಿವರ ಹೀಗಿದೆ: ದೇವದುರ್ಗ-115, ಲಿಂಗಸುಗೂರು-46, ಮಾನ್ವಿ -60, ರಾಯಚೂರು-28, ಸಿಂಧನೂರು-45.

ಪ್ರೌಢಶಾಲೆಗಳಲ್ಲಿಯೂ ಇದೇ ಸಮಸ್ಯೆ ಮುಂದುವರಿದಿದ್ದು, ಒಟ್ಟು 24 ಶಾಲೆಗಳು ಶೂನ್ಯ ಶಿಕ್ಷಕರ ಸ್ಥಿತಿಯಲ್ಲಿವೆ. ದೇವದುರ್ಗ-6, ಲಿಂಗಸುಗೂರು -4, ಮಾನ್ವಿ-3, ರಾಯಚೂರು-1, ಸಿಂಧನೂರು-10 ಶಾಲೆಗಳಲ್ಲಿ ಸಮಸ್ಯೆ ಗಂಭೀರವಾಗಿದೆ.

ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ

ಒಬ್ಬ ಶಿಕ್ಷಕರನ್ನೇ ಅವಲಂಬಿಸಿ ನಡೆಯುತ್ತಿರುವ ಶಾಲೆಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿದೆ.ಮ ಜಿಲ್ಲೆಯಲ್ಲಿ ಒಟ್ಟು 243 ಪ್ರಾಥಮಿಕ ಶಾಲೆಗಳು ಏಕೋಪಾಧ್ಯಾಯ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಕ್ಷೇತ್ರವಾರು ವಿವರ: ದೇವದುರ್ಗ-59, ಲಿಂಗಸುಗೂರು-48, ಮಾನ್ವಿ-54, ರಾಯಚೂರು-30, ಸಿಂಧನೂರು-52. ಪ್ರೌಢಶಾಲೆಗಳ ಪೈಕಿ 12 ಶಾಲೆಗಳು ಏಕೋಪಾಧ್ಯಾಯ ವ್ಯವಸ್ಥೆಯಲ್ಲಿ ನಡೆಯುತ್ತಿವೆ. ದೇವದುರ್ಗ-2, ಲಿಂಗಸುಗೂರು-3, ಮಾನ್ವಿ-1, ರಾಯಚೂರು -5, ಸಿಂಧನೂರು-1 ಶಾಲೆಗಳಲ್ಲಿ ಶಿಕ್ಷಕರ ಕೊರತೆ ಮುಂದುವರಿದಿದೆ.

Tags

RaichurSchoolteacher
share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X