Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ...

ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಮಣ್ಣ ಹವಳೆ

ಡಾ.ಶಿವರಾಜ ಯತಗಲ್ಡಾ.ಶಿವರಾಜ ಯತಗಲ್14 Nov 2026 10:27 AM IST
share
ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಮಣ್ಣ ಹವಳೆ

ರಾಯಚೂರು : ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಮಣ್ಣ ಹವಳೆಯವರು ಸಾಹಿತ್ಯ, ಶಿಕ್ಷಣ ಮತ್ತು ಸಮಾಜಸೇವಾ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದವರು. ಸಂಶೋಧನೆ ಮತ್ತು ಸೃಜನಶೀಲತೆಯನ್ನು ಒಟ್ಟಿಗೆ ಬೆಳೆಸಿಕೊಂಡಿರುವ ಅವರು, ತಮ್ಮ ಬರವಣಿಗೆಯಲ್ಲಿ ಈ ಎರಡರ ಸಾಮರಸ್ಯವನ್ನು ಮೈಗೂಡಿಸಿಕೊಂಡಿದ್ದಾರೆ.

1941ರ ಫೆಬ್ರವರಿ 2ರಂದು ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನರಸಪ್ಪ ಹವಳೆ ಮತ್ತು ಪಾರ್ವತಮ್ಮ ದಂಪತಿಯ ಪುತ್ರನಾಗಿ ಜನಿಸಿದ ಅವರು, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ರಾಯಚೂರಿನ ಎಲ್‌ವಿಡಿ ಕಾಲೇಜಿನಲ್ಲಿ ಪಿಯುಸಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ 1972ರಲ್ಲಿ ಎಂ.ಎ. ಕನ್ನಡ ಪದವಿ ಪಡೆದರು. 1962ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಪ್ರೌಢಶಾಲಾ ಶಿಕ್ಷಕ ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 1999ರಲ್ಲಿ ನಿವೃತ್ತರಾದರು. 2001ರಿಂದ 2013ರವರೆಗೆ ರಾಯಚೂರಿನ ಮುನ್ನೂರು ಕಾಪು ಶಿಕ್ಷಣ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿದ್ದರು.

‘ಸ್ವಾತಂತ್ರ್ಯ ಹೋರಾಟದಲ್ಲಿ ಗಜೇಂದ್ರಗಡ ಶಿಬಿರ’ ಕೃತಿಯ ಮೂಲಕ ಸಾಹಿತ್ಯ ಕ್ಷೇತ್ರ ಪ್ರವೇಶಿಸಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಪುಂಡಲೀಕಪ್ಪ ಜ್ಞಾನಮೋಠೆ, ಡಾ. ಸಂಗಮೇಶ್ವರ ಸರ್ದಾರ್ ಹಾಗೂ ಹೈದರಾಬಾದ್ ಸಂಸ್ಥಾನದ ವಿಮೋಚನೆಯಲ್ಲಿ ರಾಯಚೂರು ಜಿಲ್ಲೆಯ ಹೋರಾಟ ಸೇರಿದಂತೆ ಹಲವು ವಿಷಯಗಳ ಕುರಿತು ಕೃತಿಗಳನ್ನು ರಚಿಸಿದ್ದಾರೆ. ‘ಸಾಧಕ’, ‘ಚೈತನ್ಯ’, ‘ಮುನ್ನೂರು ಮುಂಗಾರು’, ‘ನೆನಪಿನ ಬುಟ್ಟಿ’, ‘ಮುಂಡರಗಿ ನಾಡ ಸ್ವಾತಂತ್ರ್ಯ ಹೋರಾಟ’, ‘ಮಕ್ಕಳ ರಾಮಾಯಣ’ ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿದ್ದಾರೆ. ನಾಟಕ ಹಾಗೂ ಲೇಖನಗಳನ್ನೂ ರಚಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ವದ ಕೊಡುಗೆ ನೀಡಿರುವ ಅವರು, ದೇಣಿಗೆ ಸಂಗ್ರಹಿಸಿ ರಾಯಚೂರಿನ ಮುನ್ನೂರುವಾಡಿಯಲ್ಲಿ 28 ಕೊಠಡಿಗಳ ಶಾಲೆ ನಿರ್ಮಿಸಿದ್ದಾರೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಬೋಧನಾ ವ್ಯವಸ್ಥೆ ರೂಪಿಸಿದ್ದಾರೆ. 1978ರಿಂದ 1990ರವರೆಗೆ ಸಿಇಟಿ ಮಾದರಿಯ ಪರೀಕ್ಷೆಗಳನ್ನು ನಡೆಸಿದ್ದಾರೆ. ಐದು ನೂರು ವಿದ್ಯಾರ್ಥಿನಿಯರ ಏಕಕಾಲದ ಭರತನಾಟ್ಯ ಸಂಯೋಜಿಸಿದ್ದರು. ಮಕ್ಕಳಿಗಾಗಿ ಗ್ರಂಥಾಲಯ ತೆರೆದರು. 2006ರಿಂದ ರಾಯಚೂರಿನಲ್ಲಿ ರಸಪ್ರಶ್ನೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ಕಲಿಕೆ ಮಾಸಪತ್ರಿಕೆ ತಮ್ಮ ಸಂಪಾದಕತ್ವದಲ್ಲಿ ಹೊರತಂದಿದ್ದಾರೆ. ಪಠ್ಯಪುಸ್ತಕ ರಚನಾ ಸಮಿತಿಗಳಲ್ಲಿ, ನಲಿ-ಕಲಿ ಪಠ್ಯಕ್ರಮದ ರೂಪಿಸುವಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ನಿವೃತ್ತ ನೌಕರರು, ಹಿರಿಯ ನಾಗರಿಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿರುವ ಅವರಿಗೆ 2023ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 1990ರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ, 1986ರ ರಾಜ್ಯ ಶಿಕ್ಷಕ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

Tags

Literary ConferenceRaichur
share
ಡಾ.ಶಿವರಾಜ ಯತಗಲ್
ಡಾ.ಶಿವರಾಜ ಯತಗಲ್
Next Story
X