Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗಿಡ, ಮರ ಬೆಳೆಸಿ ಪ್ರಾಣಿ, ಪಕ್ಷಿಗಳಿಗೆ...

ಗಿಡ, ಮರ ಬೆಳೆಸಿ ಪ್ರಾಣಿ, ಪಕ್ಷಿಗಳಿಗೆ ನೀರುಣಿಸುತ್ತಿರುವ ರಮೇಶ್

-ಕುಂಟನಹಳ್ಳಿ ಮಲ್ಲೇಶ್-ಕುಂಟನಹಳ್ಳಿ ಮಲ್ಲೇಶ್25 Aug 2025 12:45 PM IST
share
ಗಿಡ, ಮರ ಬೆಳೆಸಿ ಪ್ರಾಣಿ, ಪಕ್ಷಿಗಳಿಗೆ ನೀರುಣಿಸುತ್ತಿರುವ ರಮೇಶ್

ಮಂಡ್ಯ: ಜಿಲ್ಲೆಯ ಐತಿಹಾಸಿಕ ಪ್ರವಾಸಿ ಕೇಂದ್ರ ಶ್ರೀರಂಗಪಟ್ಟಣ. ಪಕ್ಕದ ಚಂದಗಾಲು ಗ್ರಾಮದ ವೈ.ರಮೇಶ್ ತನ್ನ ಪತ್ನಿಯೊಂದಿಗೆ ಈ ಪಟ್ಟಣದಲ್ಲಿದ್ದಾರೆ. ತನ್ನ ಪರಿಸರ ಕಾಳಜಿಯಿಂದ ರಮೇಶ್ ಮನೆಮಾತಾಗಿದ್ದಾರೆ. ಇವರನ್ನು ಪರಿಸರ ರಮೇಶ್ ಎಂದೇ ಕರೆಯಲಾಗುತ್ತದೆ. ಮರಗಳನ್ನು ನೆಟ್ಟು ಬೆಳೆಸುವುದು, ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ನೀರು ನೀಡುವ ಕಾಯಕವನ್ನು ಹತ್ತು ವರ್ಷಗಳಿಂದ ನಿರಂತರವಾಗಿ ಮಾಡುತ್ತಿದ್ದಾರೆ. ಇವರು ಈವರೆಗೆ ಸುಮಾರು 10 ಸಾವಿರ ಗಿಡಗಳನ್ನು ನೆಟ್ಟು, ನೀರು, ಗೊಬ್ಬರ ಹಾಕಿ ಬೆಳೆಸಿದ್ದಾರೆ.

ಶ್ರೀರಂಗಪಟ್ಟಣ ಸಮೀಪದ ಕರಿಘಟ್ಟ ಬೆಟ್ಟದ ಅರಣ್ಯ ಪ್ರದೇಶದಲ್ಲಿ, ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ ಆವರಣ, ಸಂತೆ ಮೈದಾನ, ಕ್ರೀಡಾಂಗಣ, ಶಾಲಾ-ಕಾಲೇಜು ಆವರಣದಲ್ಲಿ ಇವರು ಬೆಳೆಸಿರುವ ಮರಗಳು ಪ್ರವಾಸಿ ಕೇಂದ್ರ ಶ್ರೀರಂಗಪಟ್ಟಣವನ್ನು ಮತ್ತಷ್ಟು ಅಂದಗೊಳಿಸಿವೆ. ಇದಲ್ಲದೆ, ಶ್ರೀರಂಗಪಟ್ಟಣ ತಾಲೂಕಿನ ಶಾಲಾ-ಕಾಲೇಜು ಮತ್ತು ಸಾರ್ವಜನಿಕರ ಸ್ಥಳಗಳಲ್ಲೂ ನೂರಾರು ಮರಗಳನ್ನು ಬೆಳೆಸಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರಲ್ಲಿ ಪರಿಸರ ಕಾಳಜಿ ಮೂಡಿಸುತ್ತಿದ್ದಾರೆ. ಯಾವುದೇ ಸಂಘ ಸಂಸ್ಥೆ, ಸರಕಾರದ ನೆರವಿಲ್ಲದೆ ತನ್ನ ದುಡಿಮೆಯಿಂದ ರಮೇಶ್ ಈ ಕಾಯಕ ಮಾಡುತ್ತಿರುವುದು ವಿಶೇಷ.

ಕರಿಘಟ್ಟ ಬೆಟ್ಟದ ಮೀಸಲು ಅರಣ್ಯ ಪ್ರದೇಶದಲ್ಲಿ ಹಲವು ಬಗೆಯ ಗಿಡಗಳನ್ನು ನೆಟ್ಟು ಬೆಳೆಸುತ್ತಿರುವ ಅವರು ಕಾವೇರಿ ನದಿಯಿಂದ ನೀರನ್ನು ತೆಗೆದುಕೊಂಡು ಬೆಟ್ಟಕ್ಕೆ ಹೊತ್ತು ಗಿಡಗಳನ್ನು ಬೆಳೆಸಿದ್ದಾರೆ. ಪತಿಯ ಪರಿಸರ ಕಾಳಜಿಗೆ ಅವರ ಪತ್ನಿ ಅನುಪಮಾ ಹೆಗಲಾಗಿದ್ದಾರೆ.

ಶ್ರೀರಂಗಪಟ್ಟಣದ ಮೈದಾನದಲ್ಲಿ ಪ್ರತಿವಾರ ಸಂತೆ ನಡೆಯುತ್ತದೆ. ಈ ಮೈದಾನದಲ್ಲಿ ಯಾವುದೇ ಮರಗಳಿಲ್ಲ. ಬಿಸಿಲಿನಲ್ಲೇ ವ್ಯಾಪಾರ ನಡೆಯುತ್ತಿತ್ತು. ಕೆಲವರು ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದರು. ಈ ಮೈದಾನದಲ್ಲಿ ಹೊಂಗೆಯ ಮರಗಳನ್ನು ಬೆಳೆಸಿದರೆ ಅನುಕೂಲವಾಗುತ್ತದೆಂದು ಮನಗಂಡ ರಮೇಶ್, ಸಸಿಗಳನ್ನು ನೆಡಲು ಮುಂದಾದರು. ಇದಕ್ಕೆ ವ್ಯಾಪಾರಸ್ಥರಿಂದ ವಿರೋಧ ಬಂತಂತೆ. ಹೇಗೋ ಅವರ ಮನವೊಲಿಸಿ ಮರಗಳನ್ನು ನೆಟ್ಟು ಬೆಳೆಸಿದರು. ಈಗ ಆ ಮರಗಳೇ ವ್ಯಾಪಾರಸ್ಥರಿಗೆ ನೆರಳಾಗಿವೆ. ಮರ ಬೆಳೆಸಲು ವಿರೋಧಿಸಿದ್ದ ಅದೇ ವ್ಯಾಪಾರಸ್ಥರು ಈಗ ರಮೇಶ್ ಅವರ ಕೆಲಸವನ್ನು ಶ್ಲಾಘಿಸುತ್ತಿದ್ದಾರೆ.

ಗೂಡ್ಸ್ ಆಟೊವೊಂದೇ ರಮೇಶ್ ಅವರ ಜೀವನ ನಿರ್ವಹಣೆಗೆ ಇರುವ ಏಕೈಕ ಆಸ್ತಿ. ಆಟೊದಲ್ಲಿ ಶುದ್ಧ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ತುಂಬಿಕೊಂಡು ಪಟ್ಟಣದ ಮನೆಗಳು, ಅಂಗಡಿ, ಹೊಟೇಲ್‌ಗಳಿಗೆ ನಿತ್ಯ ಹಾಕುತ್ತಾರೆ.

ಪ್ರಶಸ್ತಿಗಳು: ರಮೇಶ್ ಅವರ ಪರಿಸರ ಕಾಳಜಿಗೆ ನೂರಾರು ಪ್ರಶಸ್ತಿಗಳು ಅರಸಿ ಬಂದಿವೆ. ರಾಜ್ಯ ಸರಕಾರ ಕೊಡಮಾಡುವ ರಾಜ್ಯ ಪರಿಸರ ಪ್ರಶಸ್ತಿ(2024), ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಎಚ್.ಹೊನ್ನಯ್ಯ ದತ್ತಿ ಪ್ರಶಸ್ತಿ, ಕೊಪ್ಪಳದ ಗವಿಮಠದ ಗವಿಶ್ರೀ ಪ್ರಶಸ್ತಿ, ಕೊಳ್ಳೇಗಾಲದ ಕಾನ್ಸಿ ಫೌಂಡೇಷನ್‌ನ ವಿಜಯ ಪ್ರಶಸ್ತಿ, ಕ್ಯಾತನಹಳ್ಳಿಯ ಹಸಿರು ನಕ್ಷತ್ತ ಕೆ.ಎಸ್.ಪುಟ್ಟಣ್ಣಯ್ಯ ಪ್ರಶಸ್ತಿ ಸಹಿತ ಸಂಘ ಸಂಸ್ಥೆಗಳ ಪ್ರಶಸ್ತಿ, ಸನ್ಮಾನಕ್ಕೆ ರಮೇಶ್ ಭಾಜನರಾಗಿದ್ದಾರೆ.

share
-ಕುಂಟನಹಳ್ಳಿ ಮಲ್ಲೇಶ್
-ಕುಂಟನಹಳ್ಳಿ ಮಲ್ಲೇಶ್
Next Story
X