Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಧಾನಸೌಧದಲ್ಲಿ ಸಚಿವರ ಕೊಠಡಿಗಳಿಗೆ...

ವಿಧಾನಸೌಧದಲ್ಲಿ ಸಚಿವರ ಕೊಠಡಿಗಳಿಗೆ ಕೋಟ್ಯಂತರ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿ

ಅಮ್ಜದ್ ಖಾನ್ ಎಂ.ಅಮ್ಜದ್ ಖಾನ್ ಎಂ.12 Aug 2026 1:57 PM IST
share
ವಿಧಾನಸೌಧದಲ್ಲಿ ಸಚಿವರ ಕೊಠಡಿಗಳಿಗೆ ಕೋಟ್ಯಂತರ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರಕಾರದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡವರಿಗೆ ಹಂಚಿಕೆ ಮಾಡಿರುವ ಕೊಠಡಿಗಳನ್ನು ಕೋಟ್ಯಂತರ ರೂ. ವೆಚ್ಚದಲ್ಲಿ ನವೀಕರಣ ಮಾಡುತ್ತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ಒಂದೆಡೆ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿ ತಲೆದೋರಿದ್ದು, ಬರಗಾಲದಿಂದಾಗಿ ರೈತರು ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿಧಾನಸೌಧದಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಸಚಿವರು ತಮ್ಮ ಕೊಠಡಿಗಳನ್ನು ನವೀಕರಣಗೊಳಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ವಿಧಾನಸೌಧದಲ್ಲಿ ಸಚಿವರಿಗೆ ಹಂಚಿಕೆಯಾಗಿರುವ ಕೆಲವು ಕೊಠಡಿಗಳಲ್ಲಿ ಒಳಾಂಗಣ ವಿಸ್ತೀರ್ಣ ಹೆಚ್ಚಿಸಲು ಸಮೀಪದ ಕೊಠಡಿಗಳ ಗೋಡೆಗಳನ್ನು ಒಡೆಯಲಾಗುತ್ತಿದೆ. ಇದರಿಂದಾಗಿ ವಿಧಾನಸೌಧದ ಕಟ್ಟಡ ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುವಂತಾಗಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ನವೀಕರಣ ಕಾಮಗಾರಿಯ ನೆಪದಲ್ಲಿ ಸಚಿವರ ಕೊಠಡಿಗಳಲ್ಲಿ ಒಳಾಂಗಣ ವಿನ್ಯಾಸ, ಶೌಚಾಲಯ ಹಾಗೂ ನೆಲಕ್ಕೆ ಹೊಸ ಟೈಲ್ಸ್, ವಿಶ್ರಾಂತಿ ಕೊಠಡಿ, ಸಂದರ್ಶಕರ ಕೊಠಡಿ ರಚನೆ ಮಾಡಲಾಗುತ್ತಿದೆ. ಅಲ್ಲದೇ ಹೊಸದಾಗಿ ಐಷಾರಾಮಿ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ.

ವಿಧಾನಸೌಧದ 330 ಮತ್ತು 330ಎ ಕೊಠಡಿಗಳ ಮಧ್ಯಭಾಗದ ಗೋಡೆ ಒಡೆದು ಹಾಕಲಾಗಿದೆ. ಅದೇ ರೀತಿ ವಿಕಾಸಸೌಧದಲ್ಲಿನ ಸಚಿವರ ಕೊಠಡಿಗಳಲ್ಲೂ ಸೌಂದರ್ಯೀಕರಣದ ಉದ್ದೇಶದಿಂದ ಗೋಡೆಗಳು ಹಾಗೂ ಕಪಾಟುಗಳಿಗೆ ಪಾಲಿಶ್, ವಿದ್ಯುದೀಕರಣ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.

ಸಮ್ಮೇಳನ ಸಭಾಂಗಣ ನವೀಕರಣ:

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದ (ಕೊಠಡಿ ಸಂಖ್ಯೆ 334) ನವೀಕರಣ ಕಾಮಗಾರಿಗೂ ಕೋಟ್ಯಂತರ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಎಚ್.ಸಿ. ಬಾಲಕೃಷ್ಣ ಅವರಿಗೆ ವಿಧಾನಸೌಧದಲ್ಲಿ ಹಂಚಿಕೆ ಮಾಡಿರುವ ಕೊಠಡಿ ಸಂಖ್ಯೆ 339, 339ಎ, ಬಸವಂತಪ್ಪ ಅವರಿಗೆ ಹಂಚಿಕೆ ಮಾಡಿರುವ ಕೊಠಡಿ ಸಂಖ್ಯೆ 343, 343ಎ, ವಿಕಾಸಸೌಧದಲ್ಲಿ ಬಸವರಾಜ ರಾಯರೆಡ್ಡಿ ಅವರಿಗೆ ಹಂಚಿಕೆ ಮಾಡಿರುವ ಕೊಠಡಿ ಸಂಖ್ಯೆ 406, 407ರಲ್ಲಿಯೂ ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರರಾಗಿರುವ ನಿವೃತ್ತ ಐಎಎಸ್‌ ಅಧಿಕಾರಿ, ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ (ಬಿಬಿಸಿ) ಅಧ್ಯಕ್ಷ ಎಲ್‌.ಕೆ. ಅತೀಕ್‌ ಸೇರಿದಂತೆ ಮುಖ್ಯಮಂತ್ರಿಯ ಸಲಹೆಗಾರರಿಗೆ ನೀಡಿರುವ ಕೊಠಡಿಗಳಲ್ಲೂ ಗೋಡೆಗಳನ್ನು ಒಡೆದು ನವೀಕರಣ ಕೆಲಸ ನಡೆಯುತ್ತಿದೆ.

share
ಅಮ್ಜದ್ ಖಾನ್ ಎಂ.
ಅಮ್ಜದ್ ಖಾನ್ ಎಂ.
Next Story
X