Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೆಳ್ಳುಳ್ಳಿ ಬೀಜದ ಬೆಲೆ ಏರಿಕೆ; ರೈತರಿಗೆ...

ಬೆಳ್ಳುಳ್ಳಿ ಬೀಜದ ಬೆಲೆ ಏರಿಕೆ; ರೈತರಿಗೆ ಬಿತ್ತನೆ ಹೊರೆ

ಕ್ವಿಂಟಾಲ್‌ಗೆ 20 ಸಾವಿರ ರೂ. ತಲುಪಿದ ದರ; ಹಿಂಗಾರು ಬಿತ್ತನೆಗೆ ರೈತರ ಹಿಂದೇಟು

ಮಹಬೂಬ ವಾಲಿಕಾರಮಹಬೂಬ ವಾಲಿಕಾರ10 Oct 2026 2:34 PM IST
share
ಬೆಳ್ಳುಳ್ಳಿ ಬೀಜದ ಬೆಲೆ ಏರಿಕೆ; ರೈತರಿಗೆ ಬಿತ್ತನೆ ಹೊರೆ

ನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬರದ ಹೊಡೆತಕ್ಕೆ ಸಿಲುಕಿ ಬೆಳೆ ಕಳೆದುಕೊಂಡಿರುವ ರೈತರಿಗೆ ಇದೀಗ ಹಿಂಗಾರು ಹಂಗಾಮಿನ ಬೆಳ್ಳುಳ್ಳಿ ಬಿತ್ತನೆ ಬೀಜದ ಬೆಲೆ ಏರಿಕೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಕಳೆದ ವರ್ಷ ಕ್ವಿಂಟಾಲ್‌ಗೆ 3 ಸಾವಿರದಿಂದ 6 ಸಾವಿರ ರೂ.ಗಳಿದ್ದ ಬಿತ್ತನೆ ಬೀಜದ ದರ ಈ ಬಾರಿ 15 ಸಾವಿರದಿಂದ 20 ಸಾವಿರ ರೂ.ಗೆ ಏರಿಕೆಯಾಗಿದ್ದು, ರೈತರು ಬಿತ್ತನೆ ಮಾಡಬೇಕೋ ಬೇಡವೋ ಎಂಬ ಚಿಂತೆಯಲ್ಲಿದ್ದಾರೆ.

ನಿಡಗುಂದಿ ಪಟ್ಟಣದ ಮಾರುಕಟ್ಟೆಯಲ್ಲಿ ಕಳೆದ ವಾರ ಕ್ವಿಂಟಾಲ್‌ಗೆ 10 ಸಾವಿರದಿಂದ 15 ಸಾವಿರ ರೂ. ಇದ್ದ ಬೆಳ್ಳುಳ್ಳಿ ಬೀಜದ ದರ ಶನಿವಾರ 15 ಸಾವಿರದಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3 ಸಾವಿರದಿಂದ 6 ಸಾವಿರ ರೂ.ಗಳಿಗೆ ಬೀಜ ಲಭ್ಯವಿತ್ತು. ದಿಢೀರ್ ಬೆಲೆ ಏರಿಕೆಯಿಂದ ಬೆಳ್ಳುಳ್ಳಿ ಬೆಳೆಯಲು ಮುಂದಾಗಿರುವ ರೈತರ ಕೃಷಿ ವೆಚ್ಚ ಹೆಚ್ಚಾಗಿದೆ.

ಅವಳಿ ಜಿಲ್ಲೆಗಳ ಬೆಳ್ಳುಳ್ಳಿ ವ್ಯಾಪಾರದ ಪ್ರಮುಖ ಕೇಂದ್ರವಾಗಿರುವ ನಿಡಗುಂದಿಯ ಮುದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ವ್ಯಾಪಾರ ನಡೆಯುತ್ತದೆ. ಕಳೆದ 12 ವರ್ಷಗಳಿಂದ ಈ ಮಾರುಕಟ್ಟೆ ಬೆಳೆಗಾರರಿಗೆ ಬಿತ್ತನೆ ಬೀಜ ಖರೀದಿ ಹಾಗೂ ಬೆಳ್ಳುಳ್ಳಿ ಮಾರಾಟಕ್ಕೆ ಪ್ರಮುಖ ಆಸರೆಯಾಗಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಮುದ್ದೇಬಿಹಾಳ ಮತ್ತು ನಿಡಗುಂದಿ ತಾಲೂಕುಗಳ ಹಲವು ಗ್ರಾಮಗಳಲ್ಲಿ ಬೆಳ್ಳುಳ್ಳಿ ಪ್ರಮುಖ ಬೆಳೆಯಾಗಿದೆ. ಇತ್ತೀಚೆಗೆ ಸುರಿದ ಅಲ್ಪ ಮಳೆಯಿಂದ ಜಮೀನುಗಳಲ್ಲಿ ತೇವಾಂಶ ಕಂಡುಬಂದಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ. ಆದರೆ, ಬೀಜದ ಬೆಲೆ ಏರಿಕೆ ಅವರ ಉತ್ಸಾಹಕ್ಕೆ ತಣ್ಣೀರೆರಚಿದೆ.

ಎಕರೆಗೆ 80 ಸಾವಿರ ರೂ.ವರೆಗೆ ವೆಚ್ಚ

ಒಂದು ಎಕರೆ ಬೆಳ್ಳುಳ್ಳಿ ಬೆಳೆಯಲು ಸುಮಾರು ಒಂದು ಕ್ವಿಂಟಾಲ್ ಬಿತ್ತನೆ ಬೀಜ ಬೇಕಾಗುತ್ತದೆ. ಭೂಮಿ ಸಿದ್ಧತೆ, ಬೀಜ, ಗೊಬ್ಬರ, ಔಷಧ ಮತ್ತು ಕೂಲಿ ಸೇರಿದಂತೆ 60 ಸಾವಿರದಿಂದ 80 ಸಾವಿರ ರೂ.ವರೆಗೆ ವೆಚ್ಚವಾಗುತ್ತದೆ. ಉತ್ತಮ ಇಳುವರಿ ಬಂದರೆ ಎಕರೆಗೆ 4ರಿಂದ 6 ಕ್ವಿಂಟಾಲ್ ಬೆಳ್ಳುಳ್ಳಿ ದೊರೆಯುವ ನಿರೀಕ್ಷೆಯಿದೆ. ಆದರೆ, ಬೀಜದ ಬೆಲೆ ಹೆಚ್ಚಳದಿಂದ ಉತ್ಪಾದನಾ ವೆಚ್ಚದ ಹೊರೆ ಮತ್ತಷ್ಟು ಹೆಚ್ಚಾಗಿದೆ.

ಬರದ ಪರಿಣಾಮ ಬೆಳ್ಳುಳ್ಳಿ ಬೆಳೆಯುವ ಪ್ರದೇಶ ಕಡಿಮೆಯಾಗಿದ್ದು, ಮಾರುಕಟ್ಟೆಗೆ ಬರುತ್ತಿರುವ ಬೆಳ್ಳುಳ್ಳಿ ಪ್ರಮಾಣವೂ ಕುಸಿದಿದೆ. ಇದರಿಂದ ಬೆಲೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಬೀಜದ ದರ ಹೆಚ್ಚಳದಿಂದ ಬೆಳೆ ಬೆಳೆಯಲು ಹೆಚ್ಚಿನ ಬಂಡವಾಳ ಹೂಡಬೇಕಾದ ಅನಿವಾರ್ಯತೆ ಎದುರಾಗಿದ್ದು, ಫಸಲು ಬಂದಾಗ ಸೂಕ್ತ ಬೆಲೆ ಸಿಗುವುದೇ ಎಂಬ ಆತಂಕವೂ ರೈತರನ್ನು ಕಾಡುತ್ತಿದೆ.

ಬೆಳ್ಳುಳ್ಳಿ ಬೀಜದ ಬೆಲೆ ಏರಿಕೆಯಿಂದ ಬಿತ್ತನೆಗೆ ಹೆಚ್ಚಿನ ಹಣ ಹೂಡಬೇಕಾಗಿದೆ. ಬೆಳೆ ಬೆಳೆಯಲು ಸಾಲ ಮಾಡಬೇಕು. ಫಸಲು ಬಂದಾಗ ಉತ್ತಮ ಬೆಲೆ ಸಿಗುವ ಭರವಸೆಯೂ ಇಲ್ಲ. ರೈತರ ಕಷ್ಟ ಕೇಳುವವರೇ ಇಲ್ಲದಂತಾಗಿದೆ.

<ಮೆಹಬೂಬ ಗಣಿಯಾರ,

ರೈತ, ಗುಡ್ನಾಳ

ಬರದ ಪರಿಣಾಮ ಬೆಳ್ಳುಳ್ಳಿ ಇಳುವರಿ ಕಡಿಮೆಯಾಗಿ ಮಾರುಕಟ್ಟೆಗೆ ಆವಕ ಕುಸಿದಿದೆ. ಇದರಿಂದ ಬೆಲೆ ಏರಿಕೆಯಾಗಿದೆ. ಬಿತ್ತನೆ ಬೀಜದ ದರವೂ ಹೆಚ್ಚಿರುವುದರಿಂದ ರೈತರು ಹಾಗೂ ಗ್ರಾಹಕರು ಬೆಲೆ ಏರಿಕೆಯ ಬಿಸಿ ಅನುಭವಿಸುವಂತಾಗಿದೆ.

<ಮುಬಾರಕ ಭಗವಾನ್, ವ್ಯಾಪಾರಿ

share
ಮಹಬೂಬ ವಾಲಿಕಾರ
ಮಹಬೂಬ ವಾಲಿಕಾರ
Next Story
X