Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಗೃ-ಹಲಕ್ಷ್ಮಿ’ ಹಣದಿಂದ ರೊಟ್ಟಿ ಕೇಂದ್ರ...

‘ಗೃ-ಹಲಕ್ಷ್ಮಿ’ ಹಣದಿಂದ ರೊಟ್ಟಿ ಕೇಂದ್ರ ಆರಂಭ

ಭೀಮಾಶಂಕರ ಪಾಣೇಗಾಂವಭೀಮಾಶಂಕರ ಪಾಣೇಗಾಂವ18 May 2026 7:58 AM IST
share
‘ಗೃ-ಹಲಕ್ಷ್ಮಿ’ ಹಣದಿಂದ ರೊಟ್ಟಿ ಕೇಂದ್ರ ಆರಂಭ

‌ಕುಷ್ಟಗಿ: ಜಿಲ್ಲೆಯ ಕುಷ್ಟಗಿಯ ತೆಗ್ಗಿನ ಓಣಿಯ ಒಂದೇ ಕುಟುಂಬದ ಮೂವರು ಮಹಿಳೆಯರು ‘ಗೃಹಲಕ್ಷಿ’ ಯೋಜನೆಯಡಿ ಪ್ರತಿ ತಿಂಗಳು ದೊರೆಯುತ್ತಿದ್ದ ರೂ.2 ಸಾವಿರ ನೆರವನ್ನು ಉಳಿತಾಯ ಮಾಡಿಕೊಂಡು, ಇಂದು ಸ್ವಂತ ಉದ್ಯಮ ಕಟ್ಟಿ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಟ್ಟಿದ್ದಾರೆ.

ಮಖ್ತೂಂ ಬಿ. ಕೊಪ್ಪದ, ಸಾಜನಬಿ ದಾದಿಬಾಯಿ ಮತ್ತು ಹುಸೇನಬಿ ಕಮ್ಮಾರ ಎಂಬ ಮೂವರು ಸೇರಿ ಆರಂಭಿಸಿರುವ ‘ಗೃಹಲಕ್ಷ್ಮಿ ರೊಟ್ಟಿ ಕೇಂದ್ರ’ ಈಗ ಕುಷ್ಟಗಿಯಲ್ಲಿ ಚರ್ಚೆಯ ವಿಷಯವಾಗಿದೆ.

ಸಾಮಾನ್ಯ ಕುಟುಂಬ ಹಿನ್ನೆಲೆಯ ಈ ಮಹಿಳೆಯರು, ಸರಕಾರದಿಂದ ಬಂದ ನೆರವನ್ನು ತಲಾ ರೂ. 58 ಸಾವಿರದಂತೆ ಉಳಿತಾಯ ಮಾಡಿದ್ದರು. ಮೂವರ ಉಳಿತಾಯ ಒಟ್ಟುಗೂಡಿ ರೂ. 1.74 ಲಕ್ಷವಾಯಿತು. ಉಳಿದ ಹಣವನ್ನು ತಮ್ಮ ಶ್ರಮ ಮತ್ತು ನೆರವಿನಿಂದ ಸೇರಿಸಿ, ಸುಮಾರು 2 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಹುಬ್ಬಳ್ಳಿಯಿಂದ ಅತ್ಯಾಧುನಿಕ ರೊಟ್ಟಿ ತಯಾರಿಕಾ ಯಂತ್ರವನ್ನು ಖರೀದಿಸಿದರು.

ಮೊದಲು ಮನೆಯ ಕೆಲಸಗಳಲ್ಲಿ ಸೀಮಿತವಾಗಿದ್ದ ಈ ಮಹಿಳೆಯರು ಈಗ ತಮ್ಮದೇ ಉದ್ಯಮ ನಡೆಸುತ್ತಿದ್ದಾರೆ. ಬೆಳಗ್ಗಿನಿಂದಲೇ ರೊಟ್ಟಿ ತಯಾರಿಕಾ ಕೇಂದ್ರದಲ್ಲಿ ಕಾರ್ಯನಿರತರಾಗಿರುವ ಅವರು, ಸ್ಥಳೀಯ ಬೇಡಿಕೆಗೆ ಅನುಗುಣವಾಗಿ ರೊಟ್ಟಿಗಳನ್ನು ಪೂರೈಸುತ್ತಿದ್ದಾರೆ. ಒಂದು ರೊಟ್ಟಿಗೆ 4ರೂ.ನಂತೆ ದಿನಕ್ಕೆ 700-800 ರೊಟ್ಟಿಗಳನ್ನು ಮಾರುತ್ತಿದ್ದಾರೆ. ಉದ್ಯಮದಿಂದ ಆದಾಯವೂ ಬರತೊಡಗಿದ್ದು, ಕುಟುಂಬದ ಆರ್ಥಿಕ ಸ್ಥಿತಿಯೂ ಉತ್ತಮಗೊಂಡಿದೆ

ಸಚಿವೆ ಮೆಚ್ಚುಗೆ

ಮಹಿಳೆಯರ ಈ ಸಾಧನೆ ರಾಜ್ಯ ಮಟ್ಟದಲ್ಲೂ ಗಮನ ಸೆಳೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಮಹಿಳೆಯರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

‘ಗ್ಯಾರಂಟಿ ಯೋಜನೆಗಳು ಕೇವಲ ಉಚಿತ ಕೊಡುಗೆಗಳಲ್ಲ, ಅವು ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸ್ವಾವಲಂಬನೆಗೆ ದಾರಿದೀಪ ಎಂಬುದಕ್ಕೆ ಈ ಸಾಧಕ ಮಹಿಳೆಯರೇ ಪ್ರತ್ಯಕ್ಷ ಸಾಕ್ಷಿ. ಇವರ ಈ ಹೊಸ ಹೆಜ್ಜೆಗೆ ಹಾಗೂ ಉದ್ಯಮಶೀಲತೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಇವರ ಸಾಧನೆ ನಾಡಿನ ಸಾವಿರಾರು ಮಹಿಳೆಯರಿಗೆ ಪ್ರೇರಣೆಯಾಗಲಿ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನನ್ನ ತಂಗಿ, ಅತ್ತಿಗೆ ಹಾಗೂ ನನಗೆ ಗೃಹಲಕ್ಷ್ಮಿ ಯೋಜನೆಯಡಿ ಸಿಗುವ ಎಲ್ಲಾ ಕಂತುಗಳ ಹಣ ಸೇರಿಸಿ ರೊಟ್ಟಿ ತಯಾರಿಸುವ ಯಂತ್ರವನ್ನು ಖರೀದಿಸಿದೆವು. ಇದರಿಂದ ನಮ್ಮ ಜೀವನಕ್ಕೆ ಒಂದು ದಾರಿಯಾಗಿದೆ, ನಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಗೃಹಲಕ್ಷ್ಮೀ ಯೋಜನೆಯಡಿ ನೆರವು ನೀಡಿದ್ದಕ್ಕಾಗಿ ಸರಕಾರಕ್ಕೆ ಧನ್ಯವಾದಗಳು.

-ಮಖ್ತೂಂ ಬಿ. ಕುಷ್ಟಗಿ

Tags

Roti KendraGrihalakshmi
share
ಭೀಮಾಶಂಕರ ಪಾಣೇಗಾಂವ
ಭೀಮಾಶಂಕರ ಪಾಣೇಗಾಂವ
Next Story
X