Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರೌದ್ರಾವತಿ ನದಿಗೆ ಮರುಜೀವ: ಸ್ವಚ್ಛತಾ...

ರೌದ್ರಾವತಿ ನದಿಗೆ ಮರುಜೀವ: ಸ್ವಚ್ಛತಾ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ

ಭೀಮರಾಯ ಕುಡ್ಡಳ್ಳಿ ಕಾಳಗಿಭೀಮರಾಯ ಕುಡ್ಡಳ್ಳಿ ಕಾಳಗಿ5 Nov 2026 12:08 PM IST
share
ರೌದ್ರಾವತಿ ನದಿಗೆ ಮರುಜೀವ: ಸ್ವಚ್ಛತಾ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ

ಕಾಳಗಿ: ಭೀಕರ ಬರಗಾಲದ ಹಿನ್ನೆಲೆಯಲ್ಲಿ ರೌದ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ಇದರಿಂದ ಮುಂದಿನ ದಿನಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆಯಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲ ವೃದ್ಧಿ ಹಾಗೂ ನದಿಯ ಪುನಶ್ಚೇತನದ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ಹಾಗೂ ಜಿಪಂ ಮಾಜಿ ಸದಸ್ಯ ರಾಜೇಶ್ ಗುತ್ತೇದಾರ ಕಾಳಗಿ ಅವರು ವಿಶೇಷ ಕಾಳಜಿ ವಹಿಸಿ ನದಿಯ ಹೂಳು ತೆಗೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ.

1972ರ ಬರಗಾಲದ ಸಂದರ್ಭದಲ್ಲಿಯೂ ಮಳಖೇಡ ಸಿಮೆಂಟ್ ಕಾರ್ಖಾನೆಗೆ ಪ್ರತಿನಿತ್ಯ ನೀರು ಪೂರೈಸಿದರೂ ರೌದ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರಲಿಲ್ಲ ಎನ್ನಲಾಗಿದೆ. ಆದರೆ, ಕಾಲಕ್ರಮೇಣ ನಿರ್ಲಕ್ಷ್ಯದಿಂದಾಗಿ ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳು, ಬಟ್ಟೆ ಚಿಂದಿಗಳು ಹಾಗೂ ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯಲಾಗುತ್ತಿದೆ. ಅಲ್ಲದೆ, ನದಿಯ ದಡದಲ್ಲಿ ಜಾಲಿ ಗಿಡಗಳು ಹಾಗೂ ಕಂಟಿಗಳು ಬೆಳೆದು, ಹೂಳು ತುಂಬಿಕೊಂಡ ಪರಿಣಾಮ ನೈಸರ್ಗಿಕ ನೀರಿನ ಝರಿಗಳು ಮುಚ್ಚಿಹೋಗಿವೆ. ಇದರಿಂದ ನದಿ ತನ್ನ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ.

ಈ ಪರಿಸ್ಥಿತಿಯನ್ನು ಮನಗಂಡ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರು ಸರಕಾರದ ಅನುದಾನಕ್ಕಾಗಿ ಕಾಯದೆ ಸ್ವಂತ ಖರ್ಚಿನಲ್ಲಿ ಎರಡು ಬೃಹತ್ ಹಿಟಾಚಿ ಯಂತ್ರಗಳನ್ನು ಬಳಸಿಕೊಂಡು ನದಿಯ ಹೂಳು ತೆಗೆಯುವ ಕಾರ್ಯ ಆರಂಭಿಸಿದ್ದಾರೆ. ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಕಳೆದ 15 ದಿನಗಳಿಂದ ಹಿಟಾಚಿ ಯಂತ್ರಗಳ ಮೂಲಕ ವಿಷ್ಣು ತೀರ್ಥ ಪುಷ್ಕರಣಿ, ಕೋಟಿ ಕಾಳೇಶ್ವರ ಪುಷ್ಕರಣಿ, ಗಡಗಿ ಬಾವಿ, ಕಾಳೇಶ್ವರ ಪುಷ್ಕರಣಿ ಹಾಗೂ ರೌದ್ರಾವತಿ ನದಿಯ ಹೂಳು ತೆಗೆಯುವ ಕಾರ್ಯ ಭರದಿಂದ ಸಾಗಿದೆ. ನದಿಯ ಪುನಶ್ಚೇತನ ಕಾರ್ಯದಿಂದ ಮತ್ತೆ ನೀರಿನ ಝರಿಗಳು ಕಾಣಿಸಿಕೊಳ್ಳುತ್ತಿರುವುದನ್ನು ವೀಕ್ಷಿಸಲು ಪ್ರತಿದಿನ ನೂರಾರು ಸಾರ್ವಜನಿಕರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

ನದಿಯಲ್ಲಿ ಹೆಚ್ಚುತ್ತಿರುವ ನೀರಿನ ಪ್ರಮಾಣ

ಹಿಂದೆಂದೂ ಕಾಣದಷ್ಟು ಪ್ರಮಾಣದಲ್ಲಿ ನೀರು ಕುಸಿದಿದ್ದ ರೌದ್ರಾವತಿ ನದಿಯಲ್ಲಿ ಹೂಳು ತೆಗೆಯುವ ಕಾರ್ಯ ಆರಂಭವಾದ ಬಳಿಕ ನೈಸರ್ಗಿಕ ಝರಿಗಳಿಂದ ನೀರು ಚಿಮ್ಮಲಾರಂಭಿಸಿದೆ. ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

ಕಾಳಗಿ ಸೇರಿದಂತೆ ಸುತ್ತಮುತ್ತಲಿನ ನೂರಾರು ರೈತರು ಕೃಷಿಗಾಗಿ ರೌದ್ರಾವತಿ ನದಿಯ ನೀರನ್ನೇ ಅವಲಂಬಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನದಿಯ ನೀರಿನ ಪ್ರಮಾಣ ಕುಸಿದಿದ್ದರಿಂದ ರೈತರು ಆತಂಕಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಿಪಂ ಮಾಜಿ ಸದಸ್ಯ ರಾಜೇಶ್ ಗುತ್ತೇದಾರ ಅವರು ನದಿಯ ಹೂಳು ತೆಗೆದು ಕೃಷಿಗೆ ನೀರಿನ ಕೊರತೆಯಾಗದಂತೆ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ.

ನದಿ ಪುನಶ್ಚೇತನಕ್ಕೆ ಸಾರ್ವಜನಿಕರ ಮೆಚ್ಚುಗೆ

ನೈಸರ್ಗಿಕ ನೀರಿನ ಝರಿಗಳಿಂದ ಹೆಸರುವಾಸಿಯಾಗಿದ್ದ ರೌದ್ರಾವತಿ ನದಿಯಲ್ಲಿ ಮಳೆಗಾಲದಲ್ಲಿಯೇ ನೀರಿನ ಪ್ರಮಾಣ ಕುಸಿದಿದ್ದರಿಂದ ಬೇಸಿಗೆಯಲ್ಲಿ ಪರಿಸ್ಥಿತಿ ಹೇಗಿರಬಹುದು ಎಂಬ ಆತಂಕ ಸ್ಥಳೀಯರನ್ನು ಕಾಡಿತ್ತು. ಇದೀಗ ನಡೆಯುತ್ತಿರುವ ಹೂಳೆತ್ತುವ ಕಾರ್ಯಕ್ಕೆ ಪಟ್ಟಣದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೈತರ ಕೃಷಿಗೆ ಆಧಾರವಾಗಿರುವ ರೌದ್ರಾವತಿ ನದಿಯಲ್ಲಿ ಹೂಳು ತೆಗೆಯುತ್ತಿರುವುದರಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ವರ್ಷ ಮಳೆ ಕೈಕೊಟ್ಟಿರುವುದರಿಂದ ರೈತರು ನದಿಯ ನೀರನ್ನೇ ಅವಲಂಬಿಸಿದ್ದಾರೆ. ಬೆಳೆಗಳಿಗೆ ನೀರು ಹರಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು.

-ಶಿವರಾಯ ಬೊಮ್ಮಣ್ಣಿ, ರೈತ

ರೌದ್ರಾವತಿ ನದಿಯ ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರೂ ಜಲಸಂರಕ್ಷಣೆಗೆ ಮುಂದಾಗಬೇಕು. ನದಿಯಲ್ಲಿನ ಸಂಪೂರ್ಣ ಹೂಳು ತೆಗೆದು ಪುನಶ್ಚೇತನಗೊಳಿಸುವ ಕಾರ್ಯ ನಡೆಯುತ್ತಿದೆ. ನದಿಯ ಪಕ್ಕದಲ್ಲಿ

ರುವ ಪುಷ್ಕರಣಿಗಳಿಗೂ ಮರುಜೀವ ನೀಡಲಾಗುತ್ತಿದೆ. ಕಾಳೇಶ್ವರ ದೇವಸ್ಥಾನದ ಆವರಣದಲ್ಲಿರುವ ನೀರಿನ ಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಮುಂದಿನ ಎಂಟು ತಿಂಗಳಲ್ಲಿ ರೌದ್ರಾವತಿ ನದಿಯ ಸಂಪೂರ್ಣ ಚಿತ್ರಣವೇ ಬದಲಾಗಲಿದೆ.

-ರಾಜೇಶ್ ಜಗದೇವ ಗುತ್ತೇದಾರ

ಜಿಪಂ ಮಾಜಿ ಸದಸ್ಯ, ಕಾಳಗಿ

ರೌದ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಕುಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಹಾಗೂ ಜಿಪಂ ಮಾಜಿ ಸದಸ್ಯ ರಾಜೇಶ್ ಗುತ್ತೇದಾರ ಅವರು ಊರಿನ ಮೇಲಿನ ವಿಶೇಷ ಕಾಳಜಿಯಿಂದ ಸ್ವಂತ ಹಣದಲ್ಲಿ ನದಿಯ ಹೂಳು ತೆಗೆಯುವ ಕಾರ್ಯ ಕೈಗೊಂಡಿದ್ದಾರೆ.

-ಶರಣಪ್ಪ ಬೆಲೂರ

ಉಪಾಧ್ಯಕ್ಷರು, ಪಟ್ಟಣ ಪಂಚಾಯತ್, ಕಾಳಗಿ

share
ಭೀಮರಾಯ ಕುಡ್ಡಳ್ಳಿ ಕಾಳಗಿ
ಭೀಮರಾಯ ಕುಡ್ಡಳ್ಳಿ ಕಾಳಗಿ
Next Story
X