Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮರಳು ಅಭಾವ;‌ ಅನುದಾನಕ್ಕೆ ಕೊಕ್ :...

ಮರಳು ಅಭಾವ;‌ ಅನುದಾನಕ್ಕೆ ಕೊಕ್ : ಇಕ್ಕಟ್ಟಿನಲ್ಲಿ ವಸತಿ ಯೋಜನೆ ಫಲಾನುಭವಿಗಳು

ಎಂ.ಡಿ. ಮಾಶಾಕ್ ಚಿತ್ತಾಪುರಎಂ.ಡಿ. ಮಾಶಾಕ್ ಚಿತ್ತಾಪುರ25 Dec 2025 2:47 PM IST
share
ಮರಳು ಅಭಾವ;‌ ಅನುದಾನಕ್ಕೆ ಕೊಕ್ : ಇಕ್ಕಟ್ಟಿನಲ್ಲಿ ವಸತಿ ಯೋಜನೆ ಫಲಾನುಭವಿಗಳು

ಚಿತ್ತಾಪುರ: ಮನೆ ಛತ್ತಿನ ಹಂತಕ್ಕೆ ತಲುಪಿದೆ. ಪ್ಲಾಸ್ಟರ್ ಮಾಡಲು ಮರಳಿಲ್ಲ. ಕಟ್ಟಡ ಪೂರ್ಣಗೊಳಿಸಲೂ ಆಗುತ್ತಿಲ್ಲ. ಬುಟ್ಟಿ ಮರಳೂ ಕೈಗೆಟುಕುತ್ತಿಲ್ಲ. ವಸತಿ ಯೋಜನೆಯಡಿ ನಿರ್ಮಿಸುವ ನಮ್ಮ ಮನೆಯ ಅನುದಾನ ಹಿಂದಿರುಗುವ ಭೀತಿ ಕಾಡುತ್ತಿದೆ ಎನ್ನುತ್ತಿದ್ದಾರೆ ಫಲಾನುಭವಿಗಳು.

ತಾಲೂಕಿನಲ್ಲಿ ಕಳೆದ 8-10ತಿಂಗಳಿನಿಂದ ಮರಳು ಅಭಾವದಿಂದ ಮನೆ, ವಾಣಿಜ್ಯ ಮಳಿಗೆ ನಿರ್ಮಾಣ ಸೇರಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಪ್ರಧಾನಮಂತ್ರಿ ಆವಾಸ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ,ದೇವರಾಜ ಅರಸು ವಸತಿ ಯೋಜನೆ, ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಲು ಮರಳಿಗೆ ಪರದಾಡುವಂತಾಗಿದೆ. ಬಹಳಷ್ಟು ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಮರಳಿನ ಕೊರತೆ ತಲೆನೋವಾಗಿ ಪರಿಣ

ಮಿಸಿದೆ. ವಸತಿ ಯೋಜನೆಯಡಿ ಮಂಜೂರಾದ ಮನೆಗಳನ್ನು ಫಲಾನುಭವಿಗಳು ನಿಗಧಿತ ಅವಧಿಯೊಳಗೆ ಮುಗಿಸಬೇಕು. ಇಲ್ಲವಾದಲ್ಲಿ ಸಹಾಯಧನ ಸಿಗದೆ ಅನುದಾನ ವಾಪಸ್ ಹೋಗುವ ಸಾಧ್ಯತೆ ಇರುವುದರಿಂದ ಫಲಾನುಭವಿಗಳು ಕಂಗಾಲಾಗಿದ್ದಾರೆ. ಇನ್ನೊಂದೆಡೆ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಿಕೊಡಲು ಗುತ್ತಿಗೆದಾರರು ಪರದಾಡುತ್ತಿದ್ದಾರೆ.

ಗಣಿಕಾರಿಕೆ ಬಂದ್:

ತಾಲೂಕಿನಲ್ಲಿ ಮರಳು ಕೊರತೆ ಹೆಚ್ಚಾಗಿದೆ. ತಾಲೂಕಿನಲ್ಲೀಗ ಮರಳು ಗಣಿಗಾರಿಕೆ ಬಂದ್ ಇರುವುದರಿಂದ ಎಲ್ಲೆಡೆ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿದ್ದು, ಜನಸಾಮಾನ್ಯರಿಗೆ ನಾನಾ ವಸತಿ ಯೋಜನೆಯಡಿ ಮಂಜೂರಾದ ಮನೆ ಹಾಗೂ ಸ್ವಂತ ಮನೆ ನಿರ್ಮಾಣಕ್ಕೂ ತೊಡಕುಂಟಾಗಿದೆ.

ಮರಳು ಗಣಿಗಾರಿಕೆ ಸ್ಥಗಿತದಿಂದ ಕಟ್ಟಡ ಕಾರ್ಮಿಕರು, ಮರಳು ಸಾಗಣೆದಾರರು, ಟ್ರ್ಯಾಕ್ಟರ್ ಮಾಲೀಕರು, ಟಿಪ್ಪರ್ ಮಾಲೀಕರು ಕೆಲಸವಿಲ್ಲದೆ ಜೀವನ ನಿರ್ವಹಣೆಗೆ ಕಷ್ಟಪಡುವಂತಾಗಿದೆ.

ಕಾರ್ಮಿಕರಿಗೆ ಕೆಲಸವಿಲ್ಲ: ಇತ್ತ ಮರಳು ಗಣಿಗಾರಿಕೆ ಸ್ಥಗಿತದಿಂದ ಕೆಲಸವಿಲ್ಲದೆ ಖಾಲಿ ಕೂರುವಂತಾಗಿದೆ. ಸಕಾಲಕ್ಕೆ ಮರಳು ದೊರಕಿದರೆ ಕಟ್ಟಡ ಕಾರ್ಮಿಕರು ದಿನವೂ 400-500 ರೂಪಾಯಿ ಆದಾಯ ಪಡೆಯುತ್ತಿದ್ದೇವು. ಆದಾಯವಿಲ್ಲದೆ ಕಷ್ಟದ ಜೀವನ ಸಾಗಿಸುವಂತಾಗಿದೆ ಎನ್ನುತ್ತಾರೆ ಟ್ರ್ಯಾಕ್ಟರ್, ಟಿಪ್ಪರ್ ಚಾಲಕರು.

ಕ್ರಮ ಕೈಗೊಳ್ಳಿ: ತಾಲೂಕಿನಲ್ಲಿ ಸೃಷ್ಟಿಯಾಗಿರುವ ಕೃತಕ ಮರಳು ಅಭಾವ ತಡೆದು, ತುರ್ತಾಗಿ ಮರಳು ಸಿಗುವಂತಾಗಲು ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ಖಾಸಗಿ, ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಮರಳಿನ ಪೂರೈಕೆಯಲ್ಲಿ ಆಗಿರುವ ತೀವ್ರ ಕೊರತೆ ಗಮನಹರಿಸಿ, ತಾಲೂಕಿನಲ್ಲಿ ಅಗತ್ಯವಿರುವ ಮರಳನ್ನು ಜಿಲ್ಲಾ ಉಸ್ತುವಾರಿ ಸಮಿತಿ ಗುರುತಿಸಿ ಮುಡಬೂಳ, ಭಾಗೋಡಿ, ದಂಡೋತಿ, ಕಾಟಮದೇವರಹಳ್ಳಿ ಹಾಗೂ ಕದ್ದರಗಿ ಸೇರಿ ವಿವಿಧೆಡೆ ಇರುವ ಬ್ಲಾಕ್‌ಗಳಲ್ಲಿ ಮರಳು ಎತ್ತುವಳಿ ಮಾಡಿ, ಬಹಿರಂಗ ಹರಾಜು ಕರೆದು ಸರ್ಕಾರಿ ಮರಳು ಬ್ಲಾಕ್‌ಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಬೇಕಿದೆ. ಅಲ್ಲದೆ ತಾಲೂಕಿನ ಮರಳನ್ನು ಬೇರೆಡೆ ಸಾಗಿಸದೆ ತಾಲೂಕು ಹಾಗೂ ಜಿಲ್ಲಾ ವ್ಯಾಪ್ತಿಯ ಕಾಮಗಾರಿ ನಿರ್ವಹಣೆಗೆ ಬಳಸುವಂತೆ ಸೂಚಿಸಬೇಕು ಎಂದು ಮರಳು ಸಾಗಣೆದಾರರು ಆಗ್ರಹಿಸಿದ್ದಾರೆ.

ನಾವು ಮನೆ ಕಟ್ಟಡ ಕೆಲಸ ಮಾಡೋರು. ಕೆಲಸ ಹಿಡಿದ ಮೇಲೆ ಮನೆಯ ಮಾಲೀಕರು ಮರಳಿಲ್ಲ, ಮರಳು ಬಂದ ಮೇಲೆ ಕೆಲಸಕ್ಕೆ ಬನ್ನಿ ಎನ್ನುತ್ತಿದ್ದಾರೆ. ಹೀಗಾಗಿ ಜೀವನ ನಡೆಸುವುದು ತುಂಬ ಕಷ್ಟವಾಗಿದೆ.

-ಮಕ್ಬೂಲ್ ಗೌಂಡಿ (ಮೇಸ್ತ್ರಿ)

ಕಳೆದ ಕೆಲ ದಿನಗಳ ಹಿಂದೆಯೇ ಮರಳು ಎತ್ತುವಳಿ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸರ್ವೇ ಪ್ರಾರಂಭಿಸಲಾಗಿದೆ. ವರದಿ ಬಂದ ತಕ್ಷಣ ಜನೇವರಿ ತಿಂಗಳಲ್ಲಿ ಮರಳುಗಾರಿಕೆಗೆ ಅವಕಾಶ ಕಲ್ಪಿಸಿಕೊಡಲಾಗುವುದು.

ಸೋಮಶೇಖರ ಎಂ. ಉಪನಿರ್ದೇಶಕರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ

ತಾಲೂಕಿನಲ್ಲಿ 8-10 ತಿಂಗಳಿನಿಂದ ಮರಳಿನ ಅಭಾವ ಸೃಷ್ಟಿಯಾಗಿದ್ದು, ಈ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಆದಷ್ಟು ಬೇಗನೆ ಸ್ಥಗಿತ ಆಗಿರುವ ಮರಳು ಬ್ಲಾಕ್‌ಗಳನ್ನು ಪುನಃ ಪ್ರಾರಂಭಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತು ಕಟ್ಟಡ ಕಾರ್ಮಿಕರು, ಟ್ರ್ಯಾಕ್ಟರ್, ಟಿಪ್ಪರ್ ಮಾಲೀಕರಿಗೆ ಅನುಕೂಲ ಕಲ್ಪಿಸಬೇಕು.

-ರಾಜಶೇಖರ, ಸ್ಥಳೀಯ ನಿವಾಸಿ

ಮನೆ ಕಟ್ಟುವ ಕೆಲಸ ಒಂದು ವರ್ಷದ ಹಿಂದೆ ಶುರು ಮಾಡಿದ್ದೇವೆ. ಆದರೆ ಇಲ್ಲಿಯವರೆಗೆ ಮುಗಿಯುತ್ತಿಲ್ಲ. ಮನೆ ಕಟ್ಟಲು ಮರಳು ಖಾಲಿ ಆಗಿದೆ. ಹೆಚ್ಚು ದುಡ್ಡು ಕೊಟ್ಟರೂ ಸಿಗುತ್ತಿಲ್ಲ.

-ಶೈಬಾಝ್, ಮನೆ ಕಟ್ಟಡ ಮಾಲೀಕ

share
ಎಂ.ಡಿ. ಮಾಶಾಕ್ ಚಿತ್ತಾಪುರ
ಎಂ.ಡಿ. ಮಾಶಾಕ್ ಚಿತ್ತಾಪುರ
Next Story
X