Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಾಲೆ ಮಕ್ಕಳಿಗಾಗಿ ವಾಹನ ಖರೀದಿಸಿ ಸ್ವತಃ...

ಶಾಲೆ ಮಕ್ಕಳಿಗಾಗಿ ವಾಹನ ಖರೀದಿಸಿ ಸ್ವತಃ ಚಲಾಯಿಸುವ ಎಸ್‌ಡಿಎಂಸಿ ಅಧ್ಯಕ್ಷೆ!

ಸರಕಾರಿ ಶಾಲೆಗೆ ಮಕ್ಕಳನ್ನು ಸೆಳೆಯಲು ಪ್ರಯೋಗ ► ಶಿರೂರಿನ ಸ.ಹಿ.ಪ್ರಾ.ಶಾಲೆಯಲ್ಲಿ ಸಫಲವಾದ ಸಮಿತಿ

ಯೋಗೀಶ್ ಕುಂಭಾಸಿಯೋಗೀಶ್ ಕುಂಭಾಸಿ24 Jun 2024 3:20 PM IST
share
ಶಾಲೆ ಮಕ್ಕಳಿಗಾಗಿ ವಾಹನ ಖರೀದಿಸಿ ಸ್ವತಃ ಚಲಾಯಿಸುವ ಎಸ್‌ಡಿಎಂಸಿ ಅಧ್ಯಕ್ಷೆ!

ಕುಂದಾಪುರ: ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂಬ ಹಂಬಲ, ದೃಢಸಂಕಲ್ಪ ಮಕ್ಕಳ ಪೋಷಕರಲ್ಲಿ ಮೂಡಿದರೆ ಏನು ಬೇಕಾದರೂ ಸಾಧಿಸಬಹುದು. ಅದರಲ್ಲೂ ಮಹಿಳೆಯೊಬ್ಬರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ ಎಂಬುದಕ್ಕೆ ಬೈಂದೂರು ಶೈಕ್ಷಣಿಕ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿ (ಪೇಟೆ) ಶಿರೂರು ಶಾಲೆ ಮಾದರಿಯಾಗಿದೆ.

ಶಿರೂರು ಸಮೀಪದ ಜೋಗೂರು ನಿವಾಸಿ ಹಾಗೂ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆಯಾಗಿರುವ ಜ್ಯೋತಿ ಜಯರಾಮ ಶೆಟ್ಟಿ ತನ್ನ ಸ್ವಂತ ಖರ್ಚಿನಲ್ಲಿ ಇಕೋ ಕಾರು ಖರೀದಿಸಿ ಕಳೆದೆರಡು ಶೈಕ್ಷಣಿಕ ವರ್ಷಗಳಿಂದ ಪ್ರತಿನಿತ್ಯ 40 ಮಕ್ಕಳನ್ನು ಅವರವರ ಮನೆಗಳಿಂದ ಶಾಲೆಗೆ ಕರೆತಂದು-ಮನೆಗೆ ಬಿಡುವ ಕಾಯಕ ಮಾಡುತ್ತಿದ್ದಾರೆ.

ಶಾಲೆಯ ಇತಿಹಾಸ: ಶಿರೂರು ಮೇಲ್ಪಂಕ್ತಿ ಪೇಟೆ ಶಾಲೆಗೆ 64 ವರ್ಷಗಳ ಇತಿಹಾಸವಿದೆ. ಈ ಹಿಂದೆ ಇಲ್ಲಿಗೆ ಸಮೀಪದ ಮಕ್ಕಳು ಖಾಸಗಿ ಶಾಲೆ ನೆಚ್ಚಿಕೊಂಡಿದ್ದು, ಕಳೆದ ಹತ್ತು ವರ್ಷಗಳಿಂದೀಚೆಗೆ ಶಾಲೆಯಲ್ಲಿ ಅಸ್ತಿತ್ವಕ್ಕೆ ಬಂದ ಶಾಲಾಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ಒಂದಷ್ಟು ಹೊಸ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿ ಆಸುಪಾಸಿನ ಪೋಷಕರ ಮನವೊಲಿಸಿ ಅವರ ಮಕ್ಕಳನ್ನು ಕಳೆದ ಆರು ದಶಕಗಳಿಂದ ಊರಿಗೆ ವಿದ್ಯೆ ಕಲಿಸುತ್ತಿರುವ ಸರಕಾರಿ ಶಾಲೆಗೆ ಕಳಿಸುವಂತೆ ಮನವೊಲಿಸಿತು ಎಂದು ಎಸ್‌ಡಿಎಂಸಿ ಉಪಾಧ್ಯಕ್ಷ ವಿನೋದ್ ಪೂಜಾರಿ ಸಾತೋಡಿ ತಿಳಿಸಿದ್ದಾರೆ.

1ರಿಂದ 7ನೇ ತರಗತಿವರೆಗೆ ಈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೀಗ 65 ವಿದ್ಯಾರ್ಥಿಗಳು ಕಲಿಯುತಿದ್ದು, 15 ಮಂದಿ ಎಲ್‌ಕೆಜಿ-ಯುಕೆಜಿ ಓದುವ ಚಿಣ್ಣರಿದ್ದಾರೆ. ಇಂಗ್ಲಿಷ್ ಕಲಿಕೆಗೂ ಉತ್ತಮ ಅವಕಾಶ ನೀಡಲಾಗುತ್ತಿದೆ ಎಂದು ಪ್ರಭಾರ ಮುಖ್ಯಶಿಕ್ಷಕಿ ಸರಸ್ವತಿ ಮಾಹಿತಿ ನೀಡಿದ್ದಾರೆ.

ಕೊರೋನ ಸಂದರ್ಭ ಹಳ್ಳಿಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ‘ವಿದ್ಯಾಗಮ’ದಡಿ ಶಿಕ್ಷಕರು ಪಾಠ ಮಾಡಬೇಕಿದ್ದಾಗ ಅವರನ್ನು ಸ್ವತಃ ನಾನೇ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದೆ. ಬಳಿಕ ಒಂದು ಬಾಡಿಗೆ ಓಮ್ನಿ ಕಾರು ಹಾಕಿದ್ದು ಇದೀಗಾ ಇಕೋ ಕಾರು ಮೂಲಕ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದೇನೆ. ಸರಕಾರಿ ಶಾಲೆ ಉಳಿಸಿ-ಬೆಳೆಸುವ ಬದ್ಧತೆಯೊಂದಿಗೆ ಪೂರ್ಣ ಇಚ್ಛಾಶಕ್ತಿಯಿಂದ ಈ ಕಾರ್ಯ ಮಾಡುತ್ತಿರುವೆ.

-ಜ್ಯೋತಿ ಜಯರಾಮ ಶೆಟ್ಟಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ

ನಮ್ಮ ಮನೆಯಿಂದ ಮೂರು ಮಕ್ಕಳು ಈ ಶಾಲೆಗೆ ಬರುತ್ತಾರೆ. ಎಸ್‌ಡಿಎಂಸಿ ಅಧ್ಯಕ್ಷರೆ ಪ್ರತಿದಿನ ಮಕ್ಕಳನ್ನು ಶಾಲೆಗೆ ಕರೆದೊಯ್ದು, ಸಂಜೆ ಮನೆಗೆ ಬಿಡುತ್ತಾರೆ. ಇದರಿಂದ ನಮಗೆ ತುಂಬಾ ಅನುಕೂಲವಾಗಿದೆ. ಶೈಕ್ಷಣಿಕ ಗುಣಮಟ್ಟವೂ ಉತ್ತಮವಾಗಿದೆ. ಸರಕಾರಿ ಶಾಲೆ ಇನ್ನೂ ಉನ್ನತ ಮಟ್ಟಕ್ಕೆ ಏರಬೇಕೆಂಬುದು ನಮ್ಮ ಆಶಯ.

- ವಹಿದಾ ಕೋಣ್ಮಕ್ಕಿ, ಪೋಷಕರು

ಎಸ್‌ಡಿಎಂಸಿ ಅಧ್ಯಕ್ಷೆಯೇ ಸಾರಥಿ..!

ಮೊದಲು ಶಾಲೆಗೆ ಮಕ್ಕಳನ್ನು ಕರೆತರಲು ರಿಕ್ಷಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಎಸ್‌ಡಿಎಂಸಿ ಅಧ್ಯಕ್ಷೆ ಜ್ಯೋತಿ ಅವರ ತಲೆಯಲ್ಲಿ ಸ್ವತಃ ತಾನೇ ವಾಹನ ಖರೀದಿಸಿ ಏಕೆ ಮಕ್ಕಳನ್ನು ಶಾಲೆಗೆ ಕರೆತರಬಾರದು ಎಂಬ ಆಲೋಚನೆ ಬರುತ್ತಲೆ, ಇಕೋ ಕಾರು ಖರೀದಿಸುತ್ತಾರೆ.

ಪ್ರತಿನಿತ್ಯ ಬೆಳಗ್ಗೆ ಮೂರು ಟ್ರಿಪ್, ಸಂಜೆ ಮೂರು ಟ್ರಿಪ್ ಮೂಲಕ 40 ಮಕ್ಕಳನ್ನು ಶಾಲೆಗೆ ಕರೆತಂದು, ವಾಪಸ್ ಮನೆಗೆ ಬಿಡುತ್ತಿದ್ದಾರೆ. ವಿಶೇಷವೆಂದರೆ ಅವರೇ ಕಾರನ್ನು ಚಲಾಯಿಸಿಕೊಂಡು ಶಾಲೆಯಿಂದ ಅತೀ ದೂರದ ಹಣೆಬೆಟ್ಟು ಸಹಿತ ಜೋಗೂರು, ಹಣಬರಕೇರಿ, ಮೊಯ್ದಿನ್ ಪುರ, ಕೋಣ್ಮಕ್ಕಿ, ಮಾರ್ಕೆಟ್, ಕೋಣ್ಮಕ್ಕಿ ಕ್ರಾಸ್‌ನಿಂದ ಮಕ್ಕಳನ್ನು ಪಿಕಪ್-ಡ್ರಾಪ್ ಮಾಡುತ್ತಾರೆ. ಅಂದಹಾಗೇ ಜ್ಯೋತಿ ಶೆಟ್ಟಿ ಎಸ್‌ಡಿಎಂಸಿ ಸಮನ್ವಯ ವೇದಿಕೆ ರಾಜ್ಯ ಖಜಾಂಚಿಯಾಗಿರುವುದರ ಜೊತೆಗೆ ಉಡುಪಿ ಜಿಲ್ಲಾಧ್ಯಕ್ಷೆಯೂ ಆಗಿದ್ದಾರೆ.

share
ಯೋಗೀಶ್ ಕುಂಭಾಸಿ
ಯೋಗೀಶ್ ಕುಂಭಾಸಿ
Next Story
X