Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸೇಡಂ: ನನೆಗುದಿಗೆ ಬಿದ್ದ ಬಿಇಒ...

ಸೇಡಂ: ನನೆಗುದಿಗೆ ಬಿದ್ದ ಬಿಇಒ ಕಚೇರಿಕಾಮಗಾರಿ

ಸುನೀಲ್ ರಾಣಿವಾಲ್ಸುನೀಲ್ ರಾಣಿವಾಲ್29 April 2026 2:37 PM IST
share
ಸೇಡಂ: ನನೆಗುದಿಗೆ ಬಿದ್ದ ಬಿಇಒ ಕಚೇರಿಕಾಮಗಾರಿ

ಸೇಡಂ: ಪಟ್ಟಣದಲ್ಲಿ ಸುಸಜ್ಜಿತ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಕಚೇರಿ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ಯೋಜನೆಯು ಹಲವು ವರ್ಷಗಳಿಂದ ಪೂರ್ಣಗೊಳ್ಳದೆ ನೆನೆಗುದಿಗೆ ಬಿದ್ದಿರುವುದರಿಂದ ಶಿಕ್ಷಣ ಇಲಾಖೆಯ ಸೇವೆ ಪಡೆಯುವ ಜನರಿಗೆ ತೊಂದರೆ ಉಂಟುಮಾಡುತ್ತಿದೆ.

ಪ್ರಸ್ತುತ ಬಿಇಒ ಕಚೇರಿ ಹಳೆಯ ಜೂನಿಯರ್ ಕಾಲೇಜು ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮೂಲಭೂತ ಸೌಕರ್ಯಗಳ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಶಿಕ್ಷಕರಿಗೆ ಕುಳಿತುಕೊಳ್ಳಲು ಆಸನಗಳಿಲ್ಲ ಮಾತ್ರವಲ್ಲ. ಕುಡಿಯುವ ನೀರಿನ ಸೌಲಭ್ಯವೂ ಲಭ್ಯವಿಲ್ಲ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿಯೇ ಸರಕಾರಿ ಸೇವೆ ಪಡೆಯಬೇಕಾದ ಪರಿಸ್ಥಿತಿ ಮುಂದುವರೆದಿದೆ.

ಮಳಖೇಡ, ಸಂಗಾವಿ ಎಂ, ಹಂಗನಹಳ್ಳಿ, ನಿಲಹಳ್ಳಿ, ಹಂದರಕಿ, ಕೋಡ್ಲಾ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ಮತ್ತು ಶಿಕ್ಷಕರು ಕಚೇರಿಗೆ ಆಗಮಿಸುತ್ತಾರೆ. ಆದರೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ದಿನನಿತ್ಯ ಪರದಾಡುವಂತಾಗಿದೆ.

2022-23ನೇ ಸಾಲಿನ ಡಿಎಮ್‌ಎಫ್ ಯೋಜನೆಯಡಿ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ಹೊಸ ಕಚೇರಿ ನಿರ್ಮಾಣಕ್ಕೆ ಅನುಮೋದನೆ ದೊರೆತಿತ್ತು. ಆಗಿನ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರಿಂದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕಲಬುರಗಿ ಮೂಲದ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿದ್ದರೂ, ಆರಂಭಿಕ ಹಂತದ ಕೆಲಸಗಳ ನಂತರ ಕಾಮಗಾರಿ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ‘ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿಗೆ ಪತ್ರ ಬರೆಯಲಾಗಿದೆ. ಶೀಘ್ರದಲ್ಲೇ ಮರು ಟೆಂಡರ್ ಕರೆಯುವ ಮೂಲಕ ಕಾಮಗಾರಿ ಪುನರಾರಂಭಿಸಲಾಗುವುದು’ ಎಂದು ತಿಳಿಸಿದ್ದಾರೆ.

ಗುತ್ತಿಗೆದಾರರಿಗೆ ಹಲವು ಬಾರಿ ನೋಟಿಸ್ ನೀಡಿದರೂ ಸ್ಪಂದಿಸಿಲ್ಲ. ಅವರ ನಿರ್ಲಕ್ಷ್ಯದಿಂದ ಕಾಮಗಾರಿ ನಿಂತಿದೆ. ಮರು ಟೆಂಡರ್ ಪ್ರಕ್ರಿಯೆ ಆರಂಭಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

-ವಿಶ್ವನಾಥ್, ಎಇಇ

ಇಂಜಿನಿಯರಿಂಗ್ ಉಪವಿಭಾಗ

ಮೂರು-ನಾಲ್ಕು ವರ್ಷಗಳಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಅನುದಾನ ಇದ್ದರೂ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಕಟ್ಟಡವನ್ನು ಪೂರ್ಣಗೊಳಿಸಬೇಕು.

-ವರದಾಸ್ವಾಮಿ ಬಿ.ಹಿರೇಮಠ

ಜಯಕರ್ನಾಟಕ ವೇದಿಕೆ ಉಪಾಧ್ಯಕ್ಷ ಜಯಕರ್ನಾಟಕ ವೇದಿಕೆ ಉಪಾಧ್ಯಕ್ಷ

Tags

SedamBEO officeconstruction
share
ಸುನೀಲ್ ರಾಣಿವಾಲ್
ಸುನೀಲ್ ರಾಣಿವಾಲ್
Next Story
X