Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರು ಜಿಲ್ಲೆಯಲ್ಲಿ ಭತ್ತದ ಕೊರತೆ :...

ರಾಯಚೂರು ಜಿಲ್ಲೆಯಲ್ಲಿ ಭತ್ತದ ಕೊರತೆ : ಉತ್ತರ ಪ್ರದೇಶದಿಂದ 2,184 ಟನ್ ಭತ್ತ ಖರೀದಿಸಿದ ರೈಸ್ ಮಿಲ್ ಮಾಲಕರು

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ19 Nov 2026 3:30 PM IST
share
ರಾಯಚೂರು ಜಿಲ್ಲೆಯಲ್ಲಿ ಭತ್ತದ ಕೊರತೆ : ಉತ್ತರ ಪ್ರದೇಶದಿಂದ 2,184 ಟನ್ ಭತ್ತ ಖರೀದಿಸಿದ ರೈಸ್ ಮಿಲ್ ಮಾಲಕರು

ರಾಯಚೂರು: ಜಿಲ್ಲೆಯಲ್ಲಿ ಈ ಬಾರಿ ಮಳೆಯ ಕೊರತೆಯಿಂದ ತೀವ್ರ ಬರ ಆವರಿಸಿದ್ದು ಮಳೆಯಾಶ್ರಿತ ಪ್ರದೇಶದಲ್ಲಿ ಭತ್ತದ ಬೆಳೆ ಬಿತ್ತನೆ ಕೊರತೆಯಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಕ್ಕಿ ಗಿರಣಿ ಮಾಲಕರು ಉತ್ತರ ಪ್ರದೇಶದಿಂದ ಗೂಡ್ಸ್ ರೈಲಿನ ಮೂಲಕ ಭತ್ತ ಆವಕ ಮಾಡಿಕೊಂಡಿದ್ದಾರೆ.

ಉತ್ತರ ಪ್ರದೇಶದ ಅಮೇತಿ ಜಿಲ್ಲೆಯ ಗೌರಿಗಂಜ್ ತಾಲೂಕಿನಿಂದ ಜಿಲ್ಲೆಯ ನಾಲ್ಕೈದು ರೈಸ್ ಮಿಲ್ ಮಾಲಕರು ಇತ್ತೀಚೆಗೆ ಗೂಡ್ಸ್ ರೈಲಿನ ಮೂಲಕ 12 ರೇಕ್ (42 ಬೋಗಿಗಳಲ್ಲಿ) 2184 ಟನ್ ಭತ್ತ ಖರೀದಿ ಮಾಡಿದ್ದಾರೆ. ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಅತಿ ಹೆಚ್ಚು ಭತ್ತ ಬೆಳೆಯಲಾಗುತ್ತಿದ್ದು ಈ ಬಾರಿ ಮಳೆಯ ಕೊರತೆಯಿಂದ ಭತ್ತದ ಕೊರತೆಯಾಗಬಹುದು ಎಂಬ ಮುಂದಾಲೋಚನೆಯಿಂದ ಭತ್ತ ಖರೀದಿಸಲಾಗಿದೆ ಎನ್ನಲಾಗಿದೆ.

ರಾಯಚೂರಿನ ಎಪಿಎಂಸಿಗೆ ಪಕ್ಕದ ಆಂಧ್ರಪ್ರದೇಶ, ತೆಲಂಗಾಣದ ರೈತರು ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭತ್ತ ಮಾರಾಟ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಉತ್ತರ ಪ್ರದೇಶದಿಂದ ಭತ್ತ ಖರೀದಿಸಿದ್ದು ಐತಿಹಾಸಿಕವಾಗಿದೆ. ಜಿಲ್ಲೆಯಲ್ಲಿ ಅಂದಾಜು 120 ರೈಸ್ ಮಿಲ್‌ಗಳಿದ್ದು ಇಲ್ಲಿ ತಯರಾಗುವ ಸೋನಾ ಮಸೂರಿ ಅಕ್ಕಿ ಶ್ರೀಲಂಕಾ, ಬಾಂಗ್ಲಾದೇಶ ಸೇರಿ ಅನೇಕ ಹೊರ ದೇಶಗಳಿಗೂ ರಫ್ತಾಗುತ್ತದೆ.

ಮಳೆ ಕೊರತೆಯಾಗಿದ್ದರಿಂದ ಭತ್ತದ ಬೆಳೆ ಕಡಿಮೆಯಾಗಿ ರೈಸ್ ಮಿಲ್ ಗಳು ಬಂದ್ ಆಗಬಹುದು ಎಂದು ಮಾಲಕರು ಆತಂಕಕ್ಕೆ ಗುರಿಯಾಗಿ ಹೊರ ರಾಜ್ಯದಿಂದ ಖರೀದಿ ಮಾಡಿದ್ದಾರೆ. ಜಿಲ್ಲೆಯ ರೈಸ್ ಮಿಲ್‌ಗಳಲ್ಲಿ ಸುಮಾರು 3000 ಕಾರ್ಮಿಕರು ಕೆಲಸ ಮಾಡುತ್ತಿದ್ದು ಈ ಪೈಕಿ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿ ಉತ್ತರ ಭಾರತದ ಕಾರ್ಮಿಕರೇ ಎರಡು ಸಾವಿರ ಮಂದಿ ಇದ್ದಾರೆ. ಇವರಿಗೆಲ್ಲಾ ವರ್ಷಪೂರ್ತಿ ಕೆಲಸ ನೀಡಬೇಕಿದೆ. ಎರಡು ಮೂರು ತಿಂಗಳು ಕೆಲಸ ಬಂದ್ ಮಾಡಿ ತವರು ಜಿಲ್ಲೆಗೆ ಹೋದರೆ ಮತ್ತೆ ವಾಪಸ್ ಬರುವುದೇ ಅನುಮಾನ. ಹೀಗಿರುವಾಗ ಯಾವುದೇ ಕಾರಣಕ್ಕೂ ರೈಸ್ ಮಿಲ್‌ಗಳನ್ನು ಬಂದ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈಸ್ ಮಿಲ್ ಮಾಲಕರೊಬ್ಬರು ತಿಳಿಸಿದರು.

15 ದಿನಗಳ ಹಿಂದೆ ಹೊಸಭತ್ತ ಬಂದಿದೆ. ನಮ್ಮಲ್ಲಿ ನಿಗದಿ ಮಾಡಿದ್ದಷ್ಟೇ ಭತ್ತ ಖರೀದಿ ಮಾಡುತ್ತಿದ್ದೇವೆ. ಭತ್ತದ ಕೊರತೆಯಾಗಬಹುದು ಎಂಬ ಆತಂಕದಿಂದ ಉತ್ತರ ಪ್ರದೇಶದಿಂದ ಭತ್ತ ಖರೀದಿ ಮಾಡಿದ್ದೇವೆ, ಈಗ ಆಂಧ್ರಪ್ರದೇಶ, ತೆಲಂಗಾಣದಿಂದ ರಾಯಚೂರು ಎಪಿಎಂಸಿಗೆ ಭತ್ತ ಆವಕವಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಭತ್ತ ಖರೀದಿಗೆ ಸರಕಾರ ಇಷ್ಟೇ ಅಂತ ನಿಗದಿ ಮಾಡಬಾರದು. ಇದರಿಂದ ರೈಸ್ ಮಿಲ್‌ಗಳಿಗೆ ಮುಂದೆ ಭತ್ತ ಕೊರತೆಯಾಗಿ ಅಕ್ಕಿ ಉತ್ಪಾದನೆ ಕಡಿಮೆ ಆಗಲಿದೆ. ಇದು ಅಕ್ಕಿ ಏರಿಕೆಗೂ ಕಾರಣಬಾಗಬಹುದು.

<ಸಾವಿತ್ರಿ ಪುರುಷೋತ್ತಮ,

ಕರ್ನಾಟಕ ರಾಜ್ಯ ಅಕ್ಕಿ ಗಿರಣಿ ಮಾಲಕರ ಸಂಘದ ಕಾರ್ಯಾಧ್ಯಕ್ಷ.

ಅಕ್ಕಿ ಉದ್ಯಮದಲ್ಲಿ ಹೊಸ ಐತಿಹಾಸಿಕ ಬೆಳವಣಿಗೆ

ಉತ್ತರ ಪ್ರದೇಶದಿಂದ ಕರ್ನಾಟಕದ ರಾಯಚೂರಿಗೆ ರೈಲಿನ ಮೂಲಕ ಭತ್ತದ ದಾಸ್ತಾನು ಬಂದಿರುವುದು ಜಿಲ್ಲೆಯ ಕೃಷಿ ವ್ಯಾಪಾರ ಮತ್ತು ಅಕ್ಕಿ ಉದ್ಯಮ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ರಾಯಚೂರು ಜಿಲ್ಲೆ ಭತ್ತದ ಉತ್ಪಾದನೆ ಮತ್ತು ಅಕ್ಕಿ ಉದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂತಹ ಜಿಲ್ಲೆಗೆ ಉತ್ತರ ಭಾರತದ ಉತ್ತರ ಪ್ರದೇಶದಿಂದ ರೈಲ್ವೆ ಸರಕು ಸಾಗಣೆ ಮೂಲಕ ಭತ್ತ ಆಗಮಿಸಿರುವುದು ಅಂತರ್‌ರಾಜ್ಯ ಕೃಷಿ ವ್ಯಾಪಾರಕ್ಕೆ ಹೊಸ ಅವಕಾಶಗಳನ್ನು ತೆರೆದಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಭತ್ತ ಹಾಗೂ ಹತ್ತಿ ಹೆಚ್ಚಾಗಿ ಬೆಳೆಯಲಾಗುತ್ತದೆ. ನೀರಾವರಿ ಪ್ರದೇಶವಿರುವುದರಿಂದ ಇದು ಭತ್ತ ಬೆಳೆಯಲು ಪ್ರಮುಖ ಕಾರಣವೂ ಒಂದು. ಕರ್ನಾಟಕ ರಾಜ್ಯಕ್ಕೆ ಉತ್ತರ ಪ್ರದೇಶದಿಂದ ರೈಲಿನ ಮೂಲಕ ಭತ್ತ ಸಾಗಣೆ ಮಾಡುವುದರಿಂದ ಹೆಚ್ಚಿನ ಪ್ರಮಾಣದ ಕೃಷಿ ಉತ್ಪನ್ನಗಳನ್ನು ಕಡಿಮೆ ಸಮಯದಲ್ಲಿ ಮತ್ತು ವ್ಯವಸ್ಥಿತವಾಗಿ ಸಾಗಿಸಲು ಸಾಧ್ಯವಾಗುತ್ತದೆ. ರಸ್ತೆ ಸಾರಿಗೆಗೆ ಪರ್ಯಾಯವಾಗಿ ರೈಲ್ವೆ ಸರಕು ಸಾಗಣೆ ಬಳಸುವುದರಿಂದ ದೊಡ್ಡ ಪ್ರಮಾಣದ ವ್ಯಾಪಾರ ವಹಿವಾಟಿಗೆ ಅನುಕೂಲವಾಗಬಹುದು ಎಂದು ಹೇಳಲಾಗುತ್ತಿದೆ.

ಈ ಬಾರಿ ಮಳೆ ಕೊರತೆಯಿಂದ ಭತ್ತದ ಬೆಳೆ ಕಡಿಮೆಯಾಗಿದೆ. ಹೀಗಾಗಿ ರೈಸ್ ಮಿಲ್ ಮಾಲಕರು ಹೊರ ರಾಜ್ಯದಿಂದ ಭತ್ತ ಖರೀದಿ ಮಾಡಿದ್ದು, ಇದರಿಂದ ಇಲ್ಲಿನ ರೈತರಿಗೆ ಸಮಸ್ಯೆಯಾಗುವುದಿಲ್ಲ,

<ಚಾಮರಸ ಮಾಲಿ ಪಾಟೀಲ್,

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ

share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬವಸಾಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X