Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಎಸ್‌ಐಆರ್’ ಇಂದು ಮೊದಲ ಹಂತ ಮುಕ್ತಾಯ

‘ಎಸ್‌ಐಆರ್’ ಇಂದು ಮೊದಲ ಹಂತ ಮುಕ್ತಾಯ

ಮನೋಜ್ ಆಜಾದ್ಮನೋಜ್ ಆಜಾದ್17 Aug 2026 10:00 AM IST
share
‘ಎಸ್‌ಐಆರ್’ ಇಂದು ಮೊದಲ ಹಂತ ಮುಕ್ತಾಯ
►ಅವಧಿ ವಿಸ್ತರಣೆಗೆ ಆಗ್ರಹ ►ಪೂರ್ಣ ಪರಿಶೀಲನೆಗೂ ಮುನ್ನವೇ 1.08ಕೋಟಿ ಮತದಾರರು ಡಿಲೀಟ್?

ಬೆಂಗಳೂರು, ಆ.16: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‌ಐಆರ್)ಯ ಮೊದಲ ಹಂತದ ಮನೆ-ಮನೆ ಗಣತಿ ಹಾಗೂ ಡಿಜಿಟೈಸೇಷನ್ ಪ್ರಕ್ರಿಯೆ ಆ.17ಕ್ಕೆ ಮುಕ್ತಾಯಗೊಳ್ಳಲಿದ್ದು, ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಅವಧಿ ವಿಸ್ತರಿಸಬೇಕೆಂಬ ಕೂಗು ವಿವಿಧ ಸಂಘಟನೆಗಳ ಮುಖಂಡರಿಂದ ಕೇಳಿಬಂದಿದೆ.

ಚುನಾವಣಾ ಆಯೋಗ ಆ.16ರಂದು ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಜೂ.16ರಂದು ರಾಜ್ಯದ ಮತದಾರರ ಪಟ್ಟಿಯಲ್ಲಿ 5,54,32,314 ಮತದಾರರು ಇದ್ದರು. ಆದರೆ ಆ.15ರ ವರೆಗೆ 4,45,97,719 ಮತದಾರರ ಗಣತಿ ನಮೂನೆಗಳು ಮಾತ್ರ ಡಿಜಿಟಲೀಕರಣ ಆಗಿದ್ದು, ಇದು ಶೇ.80.45ರಷ್ಟಾಗಿದೆ. ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳ್ಳುವುದಕ್ಕಿಂತ ಮೊದಲೇ ಮತ್ತು ಮೊದಲ ಹಂತ ಮುಕ್ತಾಯಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಸುಮಾರು 1.083 ಕೋಟಿ ಮತದಾರರು ಮತಪಟ್ಟಿಯಿಂದ ಡಿಲೀಟ್ ಆಗಿದ್ದಾರೆ.

ಮೊದಲ ಹಂತ ಮುಕ್ತಾಯ :

ಎಎಸ್‌ಡಿಡಿಒ-ಡಿಲೀಟ್ ಆದ ಪಟ್ಟಿಯಲ್ಲಿ ಶಾಶ್ವತ ಸ್ಥಳಾಂತರ ಆದವರು 65,62,586(ಶೇ.11.84), ಪತ್ತೆಯಾಗದ/ಗೈರು ಆದವರು 15,30,449(ಶೇ.2.76), ಮೃತಪಟ್ಟವರು 16,38,600(ಶೇ.2.96), ಈಗಾಗಲೇ ಬೇರೆಡೆ ನೋಂದಾಯಿತರಾಗಿರುವವರು(ನಕಲಿ) 7,07,095(ಶೇ.1.28), ಇತರೆ ವರ್ಗಕ್ಕೆ ಸೇರಿದವರು 3,95,865(ಶೇ.0.71).

ಎಎಸ್‌ಡಿಡಿಒ ಪಟ್ಟಿಯಲ್ಲಿ 65.62 ಲಕ್ಷ ಮಂದಿಯನ್ನು ‘ಶಾಶ್ವತ ಸ್ಥಳಾಂತರ’ ಎಂದು ಗುರುತಿಸಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಸ್ವಂತ ಮನೆ ಇಲ್ಲದೆ ಉದ್ಯೋಗ, ಕೂಲಿ, ವಲಸೆ ಸೇರಿದಂತೆ ವಿವಿಧ ಕಾರಣಗಳಿಂದ ಸ್ಥಳ ಬದಲಾಯಿಸುವ ಅಲೆಮಾರಿ ಹಾಗೂ ವಲಸೆ ಸಮುದಾಯಗಳ ಮತದಾರರು, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಮತ್ತು ಉದ್ಯೋಗಕ್ಕಾಗಿ ತಾತ್ಕಾಲಿಕವಾಗಿ ಸ್ಥಳಾಂತರಗೊಂಡವರನ್ನು ಸರಿಯಾಗಿ ಪರಿಶೀಲಿಸದೆ ‘ಶಾಶ್ವತ ಸ್ಥಳಾಂತರ’, ‘ಗೈರು’ ಎಂದು ಗುರುತಿಸಿರುವುದು ಅವೈಜ್ಞಾನಿಕ ಮತ್ತು ಕಾನೂನು ಬಾಹಿರ ಎಂದು ನಾಗರಿಕ ಮತಕಾವಲು ಸಮಿತಿಯ ಕೆ.ಎಲ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಧಿ ವಿಸ್ತರಣೆಗೆ ಆಗ್ರಹ :

ಮನೆ-ಮನೆ ಗಣತಿ ಮತ್ತು ಡಿಜಿಟೈಸೇಷನ್‌ಗೆ ನಿಗದಿಪಡಿಸಿರುವ ಅವಧಿ ಆ.17ಕ್ಕೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಉಳಿದಿರುವ ಸುಮಾರು 1.08 ಕೋಟಿ ಮತದಾರರ ಮಾಹಿತಿಯನ್ನು ಆತುರದಲ್ಲಿ ಪೂರ್ಣಗೊಳಿಸುವ ಬದಲು ಸಮರ್ಪಕ ಪರಿಶೀಲನೆಗೆ ಹೆಚ್ಚುವರಿ ಕಾಲಾವಕಾಶ ನೀಡಬೇಕು. ಶಾಶ್ವತ ಸ್ಥಳಾಂತರ, ಗೈರು ಸೇರಿದಂತೆ ವಿವಿಧ ಕಾರಣಗಳಿಂದ ಮತದಾರರನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ತಪ್ಪುಗಳಾಗುವ ಸಾಧ್ಯತೆ ಇರುವುದರಿಂದ, ಪ್ರತಿಯೊಬ್ಬ ಮತದಾರನಿಗೂ ತನ್ನ ವಿವರಗಳನ್ನು ಪರಿಶೀಲಿಸಿಕೊಳ್ಳಲು ಹಾಗೂ ತಪ್ಪಾಗಿ ಗುರುತಿಸಿದ್ದರೆ ಸರಿಪಡಿಸಿಕೊಳ್ಳಲು ಸಮಯ ನೀಡಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರುಗಳು ಆಗ್ರಹಿಸಿದ್ದಾರೆ.

ಆಯೋಗದ ಅಂಕಿ-ಅಂಶಗಳೇ ಪ್ರಕ್ರಿಯೆಯ ವೇಗ ಮತ್ತು ವ್ಯಾಪ್ತಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ. ಒಂದು ಕಡೆ ಶೇ.100ರಷ್ಟು ಗಣತಿ ನಮೂನೆಗಳನ್ನು ಮುದ್ರಿಸಿ ವಿತರಿಸಲಾಗಿದೆ ಎಂದು ಹೇಳಲಾಗುತ್ತಿದ್ದರೆ, ಇನ್ನೊಂದೆಡೆ ಆ.15ರ ವರೆಗೆ ಕೇವಲ ಶೇ.80.45ರಷ್ಟು ಮಾತ್ರ ಡಿಜಿಟೈಸ್ ಆಗಿದೆ. ಹೀಗಾಗಿ ಉಳಿದ ಶೇ.19.55ರಷ್ಟು ಮತದಾರರ ಮಾಹಿತಿಯ ಪರಿಶೀಲನೆ ಮತ್ತು ಡಿಜಿಟೈಸೇಷನ್‌ನ್ನು ಒಂದೇ ದಿನದಲ್ಲಿ ಪೂರ್ಣಗೊಳಿಸುವುದು ಪ್ರಾಯೋಗಿಕವಾಗಿ ಸಾಧ್ಯವೇ? ಎಂದು ಜಮಾಅತೆ ಇಸ್ಲಾಮ್ ಹಿಂದ್‌ನ ಮುಹಮ್ಮದ್ ಯೂಸುಫ್ ಕನ್ನಿ ಪ್ರಶ್ನಿಸಿದ್ದಾರೆ.

‘ರೋಲ್ ಬ್ಯಾಕ್’ ಮಾಡಿಕೊಳ್ಳಲು ಕೆಲವೇ ಗಂಟೆಗಳು ಬಾಕಿ :

ಎಎಸ್‌ಡಿಡಿಒ ಪಟ್ಟಿಯಲ್ಲಿ ಬಿಎಲ್‌ಒಗಳು ಮತದಾರರ ಮಾಹಿತಿಯನ್ನು ತಪ್ಪಾಗಿ ಗುರುತಿಸಿದ್ದಲ್ಲಿ, ಮತದಾರರು ಆ.5ರಿಂದ ಆ.17ರೊಳಗೆ ಬಿಎಲ್‌ಒಗಳನ್ನು ಸಂಪರ್ಕಿಸಿ ‘ರೋಲ್‌ಬ್ಯಾಕ್’ ಮಾಡಿಕೊಳ್ಳಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಲಾಗಿತ್ತು. ಮತದಾರರು ರೋಲ್ ಬ್ಯಾಕ್ ಮಾಡಿಕೊಳ್ಳಲು ಕೇವಲ ಕೆಲವು ಗಂಟೆಗಳು ಮಾತ್ರ ಉಳಿದಿವೆ.

ಎರಡು ಬಾರಿ ದಿನಾಂಕ ವಿಸ್ತರಣೆ :

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಜೂ.30ರಂದು ಪ್ರಾರಂಭವಾಗಿ ಜು.29ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಮೊದಲ ಬಾರಿಗೆ ಜು.15ರಂದು 10 ದಿನಗಳ ಕಾಲ ಅವಧಿ ವಿಸ್ತರಿಸಿ, ಕೊನೆಯ ದಿನಾಂಕವನ್ನು ಆ.8ಕ್ಕೆ ಮುಂದೂಡಲಾಯಿತು. ನಂತರದಲ್ಲಿ ಎರಡನೇ ಬಾರಿಗೆ ಆ.7 ರಂದು ಎಎಸ್‌ಡಿಡಿಒ ಪಟ್ಟಿಯ ಗೊಂದಲದಿಂದ ಅರ್ಹ ಮತದಾರರು ಮತಪಟ್ಟಿಯಿಂದ ಬಿಟ್ಟು ಹೋಗಬಾರದೆಂಬ ಉದ್ದೇಶದೊಂದಿಗೆ ಆ.17ರ ವರಗೆ ಅವಧಿ ವಿಸ್ತರಣೆ ಮಾಡಲಾಯಿತು. ಇದೀಗ ರಾಜ್ಯದ ಅಂತಿಮ ಮತದಾರರ ಪಟ್ಟಿಯು ಅ.27ರಂದು ಪ್ರಕಟಗೊಳ್ಳಲಿದೆ.

Tags

SIR
share
ಮನೋಜ್ ಆಜಾದ್
ಮನೋಜ್ ಆಜಾದ್
Next Story
X