Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಸ್‌ಐಆರ್: ಇಂದು ನೋಟಿಸ್, ನಾಳೆಯೇ...

ಎಸ್‌ಐಆರ್: ಇಂದು ನೋಟಿಸ್, ನಾಳೆಯೇ ಹಾಜರಾಗುವಂತೆ ಸೂಚನೆ

ನೋಟಿಸ್ ಪಡೆಯಲು ಮತದಾರರನ್ನೇ ಮನೆಗೆ ಕರೆಸಿಕೊಳ್ಳುತ್ತಿರುವ ಬಿಎಲ್‌ಒ: ಆರೋಪ

ಮನೋಜ್ ಆಜಾದ್ಮನೋಜ್ ಆಜಾದ್8 Sept 2026 9:26 AM IST
share
ಎಸ್‌ಐಆರ್: ಇಂದು ನೋಟಿಸ್, ನಾಳೆಯೇ ಹಾಜರಾಗುವಂತೆ ಸೂಚನೆ

ಬೆಂಗಳೂರು : ಪ್ರಸ್ತುತ ಎಸ್‌ಐಆರ್‌ನ ನೋಟಿಸ್ ಹಂತದಲ್ಲಿ ಲಾಜಿಕಲ್ ಡಿಸ್ಕ್ರಿಪೆನ್ಸಿ ಮತ್ತು ಅನ್‌ಮ್ಯಾಪಡ್ ವರ್ಗದ ಮತದಾರರಿಗೆ ವಿಚಾರಣೆ ನಡೆಯುತ್ತಿದ್ದು, ನೋಟಿಸ್ ಪಡೆದವರು ನಿಗದಿತ ದಾಖಲೆಗಳೊಂದಿಗೆ ಸಂಬಂಧಿಸಿದ ಇಆರ್‌ಒ ಅಥವಾ ಎಇಆರ್‌ಒ ಮುಂದೆ ಹಾಜರಾಗಬೇಕಿದೆ. ಈ ಪ್ರಕ್ರಿಯೆಯ ನೋಟಿಸ್ ವಿತರಣೆಯಲ್ಲಿನ ವಿಳಂಬದ ನಡುವೆಯೇ, ನೋಟಿಸ್ ಪಡೆದ ಮರುದಿನವೇ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಮತದಾರರಿಗೆ ಸೂಚಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಬೂತ್‌ವೊಂದರಲ್ಲಿ ಮತದಾರರೊಬ್ಬರು ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಸೆ.7ರಂದು ನೋಟಿಸ್ ನೀಡಲಾಗಿದ್ದು, ಸೆ.8ರಂದು ಅಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ಅಷ್ಟೇ ಅಲ್ಲದೇ, ನೋಟಿಸ್‌ಗಳನ್ನು ಬಿಎಲ್‌ಒಗಳು ಮತದಾರರ ಮನೆಗಳಿಗೆ ತೆರಳಿ ನೀಡಬೇಕೆಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದರೂ, ಬಿಎಲ್‌ಒಗಳು ಮನೆಗಳಿಗೆ ತೆರಳಿ ನೋಟಿಸ್ ನೀಡುವ ಬದಲಿಗೆ, ಮತದಾರರನ್ನೇ ತಮ್ಮ ಬಳಿ ಬಂದು ನೋಟಿಸ್ ಪಡೆದುಕೊಳ್ಳುವಂತೆ ಕರೆ ಮಾಡಿ ಕರೆಸಿಕೊಳ್ಳುತ್ತಿದ್ದಾರೆ ಎಂದು ಎಸ್‌ಐಆರ್ ನೋಟಿಸ್ ಸಂತ್ರಸ್ತ ಮತದಾರರೊಬ್ಬರು ದೂರಿದ್ದಾರೆ.

ಎಸ್‌ಐಆರ್‌ನ ಲಾಜಿಕಲ್ ಡಿಸ್ಕ್ರಿಪೆನ್ಸಿ ಹಾಗೂ ಅನ್‌ಮ್ಯಾಪಡ್ ವರ್ಗದಲ್ಲಿರುವ ಮತದಾರರಿಗೆ ಆ.24 ರಿಂದ ನೋಟಿಸ್ ವಿತರಣೆ ಆರಂಭವಾಗಬೇಕಿತ್ತು. ಆದರೆ ನೋಟಿಸ್ ವಿತರಣೆ ಪ್ರಕ್ರಿಯೆಯು ಮೂರುನಾಲ್ಕು ದಿನಗಳ ನಂತರ ನಡೆದಿರುವುದು ಕಾಣುತ್ತದೆ. ಇದೀಗ ಸಂತ್ರಸ್ತ ಮತದಾರರಿಗೆ ನೋಟಿಸ್ ಪಡೆದ ತಕ್ಷಣವೇ, ಮರುದಿನ ಹಾಜರಾಗುವಂತೆ ಸೂಚಿಸಿದರೆ ಮತದಾರರಿಗೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಕೊಳ್ಳಲು ಸಮಯ ಸಿಗುವುದಿಲ್ಲ. ಹಳೆಯ ದಾಖಲೆಗಳನ್ನು ಪರಿಶೀಲಿಸುವುದು, ಕುಟುಂಬ ಸದಸ್ಯರಿಂದ ಮಾಹಿತಿ ಪಡೆಯುವುದು ಹಾಗೂ ಉದ್ಯೋಗದ ಕಾರಣದಿಂದ ಬೇರೆಡೆ ವಾಸಿಸುತ್ತಿರುವವರು ಸ್ವಂತ ಊರಿಗೆ ಮರಳುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಉದ್ಯೋಗದ ನಿಮಿತ್ತ ನಾನು ಬೇರೆಡೆ ಇದ್ದೇನೆ. ರವಿವಾರ ನೋಟಿಸ್ ಸಿಕ್ಕಿದೆ. ಸೋಮವಾರ ಹಾಜರಾಗುವಂತೆ ಹೇಳಲಾಗಿದೆ. ಊರಿಗೆ ಬರಲು ಹಾಗೂ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲು ಸಮಯ ಬೇಕು. ನೋಟಿಸ್ ನೀಡುವುದರಲ್ಲಿ ತಡ ಮಾಡಿ, ಹಾಜರಾಗುವುದಕ್ಕೆ ಮಾತ್ರ ತುರ್ತು ಮಾಡುವುದು ಯಾವ ನ್ಯಾಯ?

-ಎಸ್‌ಐಆರ್ ನೋಟಿಸ್ ಸಂತ್ರಸ್ತ ಮತದಾರ

ದಾಖಲೆ ಸರಿಪಡಿಸಿಕೊಳ್ಳಲು ಕಾಲಾವಕಾಶ ನೀಡಿ

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಉದ್ದೇಶವೇ ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಉಳಿಯುವಂತೆ ಖಚಿತಪಡಿಸುವುದಾದರೆ, ನೋಟಿಸ್ ಪಡೆದವರಿಗೆ ತಮ್ಮ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಮತ್ತು ಅಗತ್ಯ ದಾಖಲೆಗಳನ್ನು ಒದಗಿಸಲು ಸಮರ್ಪಕ ಕಾಲಾವಕಾಶ ನೀಡಬೇಕು. ವಿಶೇಷವಾಗಿ ಉದ್ಯೋಗ, ಶಿಕ್ಷಣ ಅಥವಾ ಇತರ ಕಾರಣಗಳಿಂದ ಸ್ವಂತ ಊರಿನಿಂದ ದೂರವಿರುವ ಮತದಾರರಿಗೆ ಮರುದಿನವೇ ಹಾಜರಾಗುವಂತೆ ಸೂಚಿಸುವುದು ಪ್ರಾಯೋಗಿಕವಾಗಿ ಕಷ್ಟ. ಹೀಗಾಗಿ ನೋಟಿಸ್ ವಿತರಣೆಯಲ್ಲಿನ ವಿಳಂಬವನ್ನು ಪರಿಗಣಿಸಿ, ಹಾಜರಾಗಲು ಹೆಚ್ಚುವರಿ ಸಮಯ ನೀಡಬೇಕು.

-ಪವನ್ ಕಲ್ಯಾಣ್,ಸದಸ್ಯ, ನಾಗರಿಕ ಮತಕಾವಲು ಸಮಿತಿ

Tags

SIR
share
ಮನೋಜ್ ಆಜಾದ್
ಮನೋಜ್ ಆಜಾದ್
Next Story
X