Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಎಸ್‍ಐಆರ್’ ಜನ ಸಾಮಾನ್ಯರಲ್ಲಿ ಭಯದ...

‘ಎಸ್‍ಐಆರ್’ ಜನ ಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿರುವ ನೋಟಿಸ್: ಅಡೂರ್ ಬಿ.ಇಬ್ರಾಹೀಂ

ಅಮ್ಜದ್ ಖಾನ್ ಎಂಅಮ್ಜದ್ ಖಾನ್ ಎಂ11 Sept 2026 11:38 AM IST
share
‘ಎಸ್‍ಐಆರ್’ ಜನ ಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿರುವ ನೋಟಿಸ್: ಅಡೂರ್ ಬಿ.ಇಬ್ರಾಹೀಂ

ಬೆಂಗಳೂರು, ಸೆ.10: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿ ಮೂಲಕ ಮತದಾರರಿಗೆ ನೀಡುತ್ತಿರುವ ನೋಟಿಸ್‍ನಲ್ಲಿರುವ ಸೂಚನೆಗಳು ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿಸುವಂತಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಅಡೂರ್ ಬಿ.ಇಬ್ರಾಹೀಂ ಬೇಸರ ವ್ಯಕ್ತಪಡಿಸಿದ್ದಾರೆ.

‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಅವರು, ‘ಸಾರ್ವಜನಿಕ ನೌಕರನಿಗೆ ತಪ್ಪು ಮಾಹಿತಿ ನೀಡುವುದು ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 217ರ ಅಡಿಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗುವ ಕ್ರಿಮಿನಲ್ ಅಪರಾಧವಾಗಿದೆ. ಮತದಾರರ ಪಟ್ಟಿಯಲ್ಲಿನ ಯಾವುದೇ ನಮೂದನ್ನು ಸಿದ್ಧಪಡಿಸುವ, ಪರಿಷ್ಕರಿಸುವ, ಸರಿಪಡಿಸುವ, ಸೇರಿಸುವ ಅಥವಾ ಕೈಬಿಡುವ ಸಂಬಂಧ ಯಾವುದೇ ಸುಳ್ಳು ಘೋಷಣೆಯನ್ನು ನೀಡುವುದು 1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಜೈಲು ಶಿಕ್ಷೆ ಅಥವಾ ದಂಡ, ಎರಡೂ ಶಿಕ್ಷೆಗೆ ಗುರಿಯಾಗಬಹುದಾದ ಅಪರಾಧವಾಗಿದೆ’ ಎಂದು ನೋಟಿಸ್‍ನಲ್ಲಿ ಸೂಚನೆ ನೀಡಿದ್ದಾರೆ ಎಂದರು.

ಅಲ್ಲದೇ, ‘ವಿಚಾರಣೆಯ ಸಮಯದಲ್ಲಿ ಮಾಡಿದ ಘೋಷಣೆಗಳನ್ನು ಬೆಂಬಲಿಸಲು ನೀವು ಸಲ್ಲಿಸಿದ ಎಲ್ಲ ದಾಖಲೆಗಳನ್ನು ಸ್ವತಂತ್ರ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಇಲಾಖೆಗಳಿಗೆ ಕಳುಹಿಸಲಾಗುವುದು. ಯಾವುದೇ ದಾಖಲೆ ಅಥವಾ ಘೋಷಣೆಯು ನಕಲಿ, ಸುಳ್ಳು, ಕಟ್ಟುಕಥೆ ಅಥವಾ ಉದ್ದೇಶಪೂರ್ವಕವಾಗಿ ತಪ್ಪಾಗಿದೆ ಎಂದು ಕಂಡುಬಂದಲ್ಲಿ, ಭಾರತೀಯ ನ್ಯಾಯ ಸಂಹಿತೆ ಮತ್ತು ಅನ್ವಯವಾಗುವ ಇತರೆ ಯಾವುದೇ ಕಾನೂನಿನ ನಿಬಂಧನೆಗಳ ಅನುಸಾರವಾಗಿ ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಪ್ರಾರಂಭಿಸಬಹುದು’ ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ನಾಗರಿಕರಾಗಿ, ತೆರಿಗೆ ಪಾವತಿದಾರರಾಗಿ, ತಮ್ಮ ಹಕ್ಕನ್ನು ಉಳಿಸಿಕೊಳ್ಳಬೇಕಾದ ಜನರಿಗೆ ಚುನಾವಣಾ ಆಯೋಗದಿಂದ ಕಳುಹಿಸುತ್ತಿರುವ ನೋಟಿಸ್‍ನಲ್ಲಿರುವ ಸೂಚನೆಗಳು ಆತಂಕ, ಅಭದ್ರತೆಗೆ ಕಾರಣವಾಗುತ್ತಿದೆ. 30-35 ವರ್ಷಗಳ ಕಾಲ ಸರಕಾರಿ ಅಧಿಕಾರಿಯಾಗಿ ಕೆಲಸ ಮಾಡಿರುವ ನನಗೆ ಚುನಾವಣಾ ಆಯೋಗ ನೀಡಿರುವ ನೋಟಿಸ್ ನೋಡಿದಾಗ ಆತಂಕವಾಯಿತು ಎಂದು ಇಬ್ರಾಹೀಂ ತಿಳಿಸಿದರು.

ಹಿಂದಿನ ಎಸ್‍ಐಆರ್ ಸಮಯದಲ್ಲಿ ಸಿದ್ಧಪಡಿಸಿದ ಮತದಾರರ ಪಟ್ಟಿಯೊಂದಿಗೆ ನಿಮ್ಮ ಹೆಸರು ಹೊಂದಾಣಿಕೆ ಆಗುತ್ತಿಲ್ಲ ಎಂದು ಮತದಾರರ ನೋಂದಣಾಧಿಕಾರಿ ನೋಟಿಸ್ ನೀಡಿದ್ದಾರೆ. 2003-06ರವರೆಗೆ ನಾನು ಮೈಸೂರು ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿಯಾಗಿ, 2013-14ರವರೆಗೆ ಮಂಗಳೂರು ಜಿಲ್ಲಾಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಅವರು ಹೇಳಿದರು.

ಆರು ವರ್ಷಗಳಿಂದ ಮೈಸೂರಿನ ನಿವಾಸಿಯಾಗಿದ್ದೇನೆ. ಇದೀಗ ನನಗೆ ಸೆ.29ರಂದು ಚುನಾವಣಾ ಆಯೋಗ ಪಟ್ಟಿ ಮಾಡಿರುವ ಮೂಲ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನರಸಿಂಹರಾಜ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಇಬ್ರಾಹೀಂ ತಿಳಿಸಿದರು.

Tags

SIRnoticecommon peopleAdoor B. Ibrahim
share
ಅಮ್ಜದ್ ಖಾನ್ ಎಂ
ಅಮ್ಜದ್ ಖಾನ್ ಎಂ
Next Story
X