Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಿರೂರಿ: ಕುಡಿಯುವ ನೀರಿಗೆ ಹಾಹಾಕಾರ

ಸಿರೂರಿ: ಕುಡಿಯುವ ನೀರಿಗೆ ಹಾಹಾಕಾರ

ಮಧ್ಯರಾತ್ರಿಯಿಂದಲೇ ಕೊಡ ಹಿಡಿದು ಕಾಯುವ ಮಹಿಳೆಯರು

ವೀರಶೆಟ್ಟಿ ಎರಂಡಗೆವೀರಶೆಟ್ಟಿ ಎರಂಡಗೆ12 Nov 2026 2:07 PM IST
share
ಸಿರೂರಿ: ಕುಡಿಯುವ ನೀರಿಗೆ ಹಾಹಾಕಾರ

ಬಸವಕಲ್ಯಾಣ: ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಪಂ ಅಧಿಕಾರಿಗಳು ಹಾಗೂ ರಾಜ್ಯಮಟ್ಟದಲ್ಲಿ ಸಚಿವರು ಹಲವು ಬಾರಿ ಸಭೆ ನಡೆಸಿ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿ ಈ ಸೂಚನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಗ್ರಾಪಂ ಮಟ್ಟದಲ್ಲಿ ಪಿಡಿಒಗಳ ನಿರ್ವಹಣಾ ಲೋಪವೋ ಅಥವಾ ಅಗತ್ಯ ಅನುದಾನ ಸಮರ್ಪಕವಾಗಿ ಬಿಡುಗಡೆಯಾಗದಿರುವುದೋ ಗೊತ್ತಿಲ್ಲ. ಒಟ್ಟಿನಲ್ಲಿ, ಕಲ್ಯಾಣ ಕರ್ನಾಟಕದ ಹಲವು ಒಳಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಮುಂದುವರಿದಿದೆ.

ಕೇವಲ ಒಂದೆರಡು ಕೊಡ ಶುದ್ಧ ಕುಡಿಯುವ ನೀರು ಪಡೆಯಲು ದಿನದ ಅರ್ಧಕ್ಕಿಂತ ಹೆಚ್ಚು ಸಮಯ ಸರತಿ ಸಾಲಿನಲ್ಲಿ ನಿಲ್ಲಬೇಕಾದ ದುಸ್ಥಿತಿ ಹಲವು ಗ್ರಾಮಗಳಲ್ಲಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗಡಿ ಗ್ರಾಮವಾದ ಸಿರೂರಿ ಕೂಡ ಇಂತಹ ಗ್ರಾಮಗಳಲ್ಲೊಂದು.

ಸಿರೂರಿ ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಹನಿ ನೀರಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಗ್ರಾಮಗಳಲ್ಲಿನ ಬಾವಿ ಹಾಗೂ ಬೋರ್‌ವೆಲ್‌ಗಳು ಬತ್ತಿಹೋಗಿವೆ. ಇದರಿಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕೊಹಿನೂರು, ಲಾಡವಂತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವುದು ಹಾಗೂ ಬೋರ್‌ವೆಲ್ ಮತ್ತು ಬಾವಿಗಳನ್ನು ಬಾಡಿಗೆಗೆ ಪಡೆದು ಸಮಸ್ಯೆ ನಿಭಾಯಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ಬೋಸಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರೂರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಗ್ರಾಮದಲ್ಲಿ ಕೇವಲ ಒಂದೇ ಬೋರ್‌ವೆಲ್ ಕಾರ್ಯನಿರ್ವಹಿಸುತ್ತಿದ್ದು, ಅದೂ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ. ಹೀಗಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಗ್ರಾಮಸ್ಥರು ಮಧ್ಯರಾತ್ರಿಯಿಂದಲೇ ಕೊಡಗಳನ್ನು ಹಿಡಿದು ನೀರಿಗಾಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ.

ನೀರಿಗಾಗಿ ಕಾಯುವುದರಲ್ಲೇ ದಿನದ ಬಹುಭಾಗ ಕಳೆಯುವಂತಾಗಿದೆ. ಗ್ರಾಮದಲ್ಲಿ ಮತ್ತೊಂದು ಬೋರ್‌ವೆಲ್ ಕೊರೆಸಲಾಗಿದ್ದರೂ, ಅದಕ್ಕೆ ಗ್ರಾಮ ಪಂಚಾಯಿತಿಯಿಂದ ಇನ್ನೂ ಮೋಟಾರ್ ಅಳವಡಿಸಿಲ್ಲ. ಪಂಚಾಯಿತಿ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆ ಆಲಿಸಿ ಹೋಗುತ್ತಿದ್ದಾರೆಯೇ ಹೊರತು, ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಎರಡು ತಿಂಗಳಿನಿಂದ ನೀರಿನ ಸಮಸ್ಯೆ ಇದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಗ್ರಾಮದ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಜನರೆಲ್ಲರೂ ಒಂದೇ ಬೋರ್‌ವೆಲ್ ಅನ್ನು ಅವಲಂಬಿಸಿದ್ದಾರೆ. ಮತ್ತೊಂದು ಬೋರ್‌ವೆಲ್ ಕೊರೆಸಿದ್ದರೂ ಅದಕ್ಕೆ ಮೋಟಾರ್ ಅಳವಡಿಸಿಲ್ಲ. ಇದರಿಂದಾಗಿ ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ.

-ಜಗದೇವಿ, ಗ್ರಾಮದ ಮಹಿಳೆ

ಸಿರೂರಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಲಾಗುವುದು. ಅಗತ್ಯ ಬಿದ್ದಲ್ಲಿ ನೀರಿನ ಟ್ಯಾಂಕರ್ ಮೂಲಕ ಗ್ರಾಮಸ್ಥರಿಗೆ ನೀರು ಪೂರೈಸಲಾಗುವುದು.

-ರಮೇಶ್ ಸುಲ್ಫಿ, ತಾಪಂ ಇಓ, ಬಸವಕಲ್ಯಾಣ

ರಾತ್ರಿ 1 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸರತಿ ಸಾಲಿನಲ್ಲಿ ನಿಂತರೂ ಕೇವಲ ಎರಡರಿಂದ ಮೂರು ಕೊಡ ನೀರು ಮಾತ್ರ ಸಿಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು.

-ಬೇಗಂ ಬಿ. ಸಿರೂರಿ, ಗ್ರಾಮದ ಮಹಿಳೆ

share
ವೀರಶೆಟ್ಟಿ ಎರಂಡಗೆ
ವೀರಶೆಟ್ಟಿ ಎರಂಡಗೆ
Next Story
X