Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಒಬಿಸಿ-ಅಲ್ಪಸಂಖ್ಯಾತರ ವಸತಿ ಶಾಲಾ...

ಒಬಿಸಿ-ಅಲ್ಪಸಂಖ್ಯಾತರ ವಸತಿ ಶಾಲಾ ಮಕ್ಕಳಿಗೆ ಅಂಟಿದ ಚರ್ಮರೋಗ

ಸಮೀರ್ ದಳಸನೂರುಸಮೀರ್ ದಳಸನೂರು23 Aug 2025 2:36 PM IST
share
ಒಬಿಸಿ-ಅಲ್ಪಸಂಖ್ಯಾತರ ವಸತಿ ಶಾಲಾ ಮಕ್ಕಳಿಗೆ ಅಂಟಿದ ಚರ್ಮರೋಗ

ಬೆಂಗಳೂರು: ‘ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ವಸತಿ ಶಾಲಾ ಮಕ್ಕಳಲ್ಲಿ ಚರ್ಮ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ವರ್ಷಕ್ಕೆ ಮೂರು ಬಾರಿ ಚರ್ಮರೋಗ ತಜ್ಞರಿಂದ ಮಕ್ಕಳನ್ನು ತಪಾಸಣೆ ನಡೆಸಬೇಕು’ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯ ಸರಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ.

ಶುಕ್ರವಾರ ವಿಧಾನ ಮಂಡಲ ಉಭಯ ಸದನಗಳಲ್ಲಿ ‘ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ’ ಸಮಿತಿಯ ಎರಡನೇ ವರದಿಯನ್ನು ಮಂಡಿಸಲಾಯಿತು. ಇದರಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಮುದಾಯದ ಏಳಿಗೆಗಾಗಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಲಾಗಿದೆ.

ವಸತಿ ಶಾಲೆಗಳಲ್ಲಿರುವ ಮಕ್ಕಳಿಗೆ ಹೆಚ್ಚಾಗಿ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ, ಚರ್ಮರೋಗ ಕಂಡುಬರುತ್ತಿರುವುದು ಆತಂಕ ಹೆಚ್ಚಿಸಿದೆ. ಹೀಗಾಗಿ, ಆರೋಗ್ಯ ಇಲಾಖೆಯಿಂದ ವರ್ಷಕ್ಕೆ ಕನಿಷ್ಠ ಎರಡು ಅಥವಾ ಮೂರು ಬಾರಿ ಚರ್ಮರೋಗ ತಜ್ಞರಿಂದ ತಪಾಸಣೆ, ಚರ್ಮದ ಜೊತೆಗೆ ಔಷಧಿಗಳನ್ನು ಒದಗಿಸುವಂತೆ ಸಮಿತಿ ಶಿಫಾರಸು ಮಾಡಿದೆ.

ಪ್ರತಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ನಿಲಯಗಳಲ್ಲಿ ಸುಮಾರು 150 ರಿಂದ 200 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಾರೆ. ಅವರಿಗೆ ಜಿಲ್ಲಾ ಆಸ್ಪತ್ರೆಗಳಲ್ಲಿ ತಿಂಗಳಿಗೊಮ್ಮೆ ಅಥವಾ 15 ದಿನಗಳಿಗೊಮ್ಮೆ ಆರೋಗ್ಯ ತಪಾಸಣೆ ಸೌಲಭ್ಯ ಒದಗಿಸುವಂತೆಯೂ ಸಮಿತಿ ಸೂಚಿಸಿದೆ.

ವಸತಿ ಶಾಲೆಗಳಲ್ಲಿರುವ ಮಕ್ಕಳು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಕಣ್ಣಿಗೆ ಬಹಳ ಸಮಸ್ಯೆ ಆಗುತ್ತಿದೆ. ಹಾಗಾಗಿ ಕಡ್ಡಾಯವಾಗಿ ಮಕ್ಕಳ ಕಣ್ಣಿನ ಪರೀಕ್ಷೆ ಮಾಡಿಸುವಂತಹ ಕಾರ್ಯಕ್ರಮ ಮಾಡಿದರೆ ಉಪಯೋಗವಾಗಲಿದೆ.

ಅದೇ ರೀತಿ, ಎಪ್ರಿಲ್‌ನಿಂದ ಜುಲೈವರೆಗೆ ಈ ನಾಲ್ಕು ತಿಂಗಳಲ್ಲಿ ಆಕಸ್ಮಿಕವಾಗಿ ಕಾಯಿಲೆಗಳು ಹೆಚ್ಚು ಕಾಣಿಸಿಕೊಳ್ಳುತ್ತದೆ. ‘ಕವಸಾಕಿ’ ಕಾಯಿಲೆಯಿಂದ ಉರಿಯೂತ ಸಮಸ್ಯೆ ಜಾಸ್ತಿಯಾಗಿದೆ. ಹಾಗಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿ ಐವಿಜಿ ಮಾತ್ರೆಗಳನ್ನು ಸಿಗುವಂತೆ ವ್ಯವಸ್ಥೆ ಮಾಡಲು ಸಮಿತಿಯ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ.

ಕ್ರೈಸ್‌ನ (ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವಸತಿ ಶಾಲೆಗಳ ಮಕ್ಕಳಿಗೆ ನಿಯಮಿತವಾಗಿ ವೈದ್ಯಕೀಯ ತಪಾಸಣೆಗಳನ್ನು ಮೂರು ತಿಂಗಳಿಗೊಮ್ಮೆ ಮಾಡಬೇಕು ಎಂದು ಸಮಿತಿ ಶಿಫಾರಸಿನಲ್ಲಿ ಉಲ್ಲೇಖಿಸಿದೆ.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X