Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಲಂಬಾಣಿ ಕಸೂತಿ ಕಲೆಗೆ ರಾಜ್ಯಮಟ್ಟದ ಗೌರವ...

ಲಂಬಾಣಿ ಕಸೂತಿ ಕಲೆಗೆ ರಾಜ್ಯಮಟ್ಟದ ಗೌರವ : ಕೌಶಲ್ಯ ಕರ್ನಾಟಕ ಪ್ರಶಸ್ತಿಗೆ ಸಂಡೂರಿನ ಸೋನಿಯಾ ಗಾಂಧಿ ಸ್ವಸಹಾಯ ಗುಂಪು ಆಯ್ಕೆ

►ಮಹಿಳೆಯರ ಕೌಶಲ್ಯಕ್ಕೆ ಸಂದ ಮನ್ನಣೆ ►ಕಸೂತಿ ಕಲೆಯ ಮೂಲಕ ಉದ್ಯೋಗ ಸೃಷ್ಟಿ, ಆರ್ಥಿಕ ಸ್ವಾವಲಂಬನೆಗೆ ಹೊಸ ಮುನ್ನುಡಿ

ಕೆ.ಮಹಮ್ಮದ್ ಖಾಸೀಂಕೆ.ಮಹಮ್ಮದ್ ಖಾಸೀಂ2 Nov 2026 2:49 PM IST
share
ಲಂಬಾಣಿ ಕಸೂತಿ ಕಲೆಗೆ ರಾಜ್ಯಮಟ್ಟದ ಗೌರವ : ಕೌಶಲ್ಯ ಕರ್ನಾಟಕ ಪ್ರಶಸ್ತಿಗೆ ಸಂಡೂರಿನ ಸೋನಿಯಾ ಗಾಂಧಿ ಸ್ವಸಹಾಯ ಗುಂಪು ಆಯ್ಕೆ

ಸಂಡೂರು/ಬಳ್ಳಾರಿ: ಗ್ರಾಮೀಣ ಮಹಿಳೆಯರ ಪರಿಶ್ರಮ, ಸಂಘಟನಾ ಶಕ್ತಿ ಹಾಗೂ ಸಾಂಪ್ರದಾಯಿಕ ಕಲೆಯ ಮೇಲಿನ ಅಭಿಮಾನಕ್ಕೆ ಇದೀಗ ರಾಜ್ಯಮಟ್ಟದ ಮನ್ನಣೆ ದೊರೆತಿದೆ.

ಲಂಬಾಣಿ ಕಸೂತಿ ಕಲೆಯನ್ನು ಜೀವನೋಪಾಯದ ಸಾಧನವನ್ನಾಗಿಸಿಕೊಂಡು, ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಗಮನಾರ್ಹ ಸಾಧನೆ ಮಾಡಿರುವ ಸಂಡೂರು ತಾಲೂಕಿನ ಸುಶೀಲಾನಗರ ಗ್ರಾಮದ ಸೋನಿಯಾ ಗಾಂಧಿ ಸ್ವಸಹಾಯ ಗುಂಪು 2026-27ನೇ ಸಾಲಿನ ಪ್ರತಿಷ್ಠಿತ ‘ಕೌಶಲ್ಯ ಕರ್ನಾಟಕ ಪ್ರಶಸ್ತಿ’ಗೆ ಆಯ್ಕೆಯಾಗಿದೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಅಡಿಯಲ್ಲಿ ಬಳ್ಳಾರಿ ಜಿಲ್ಲೆಯಿಂದ ಕೃಷಿಯೇತರ ಜೀವನೋಪಾಯ ವಿಭಾಗದಲ್ಲಿ ಈ ಗುಂಪು ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂಡೂರು ತಾಲೂಕಿನ ಹೆಮ್ಮೆಗೆ ಮತ್ತೊಂದು ಗರಿ ಮೂಡಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ವಸಹಾಯ ಗುಂಪುಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ನ.೫ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕೌಶಲ್ಯ ಸಮಿಟ್ ಕಾರ್ಯಕ್ರಮದ ಅಂಗವಾಗಿ ಪ್ರಶಸ್ತಿ ಪ್ರದಾನಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲೆಯಿಂದ ಕೃಷಿ ಹಾಗೂ ಕೃಷಿಯೇತರ ಜೀವನೋಪಾಯ ವಿಭಾಗಗಳಲ್ಲಿ ತಲಾ ಒಂದು ಅತ್ಯುತ್ತಮ ಸ್ವಸಹಾಯ ಗುಂಪನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಸೋನಿಯಾ ಗಾಂಧಿ ಸ್ವಸಹಾಯ ಗುಂಪು ಕೃಷಿಯೇತರ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಸಾಂಪ್ರದಾಯಿಕ ಕಲೆಗೆ ಆಧುನಿಕ ಸ್ಪರ್ಶ: ಮಾರುಕಟ್ಟೆಯಲ್ಲಿ ಲಂಬಾಣಿ ಉತ್ಪನ್ನಗಳ ಮೆರುಗು

ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಕಸೂತಿ ಕಲೆಗೆ ತನ್ನದೇ ಆದ ಸಾಂಸ್ಕೃತಿಕ ಮಹತ್ವ ಮತ್ತು ವೈಶಿಷ್ಟ್ಯವಿದೆ. ಈ ಕಲೆಯನ್ನು ಇಂದಿನ ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ರೂಪಿಸಿ, ವಿವಿಧ ವಿನ್ಯಾಸಗಳ ಉತ್ಪನ್ನಗಳನ್ನು ತಯಾರಿಸುವ ಮೂಲಕ ಸೋನಿಯಾ ಗಾಂಧಿ ಸ್ವಸಹಾಯ ಗುಂಪಿನ ಮಹಿಳೆಯರು ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ.

ಜಿಲ್ಲೆ, ರಾಜ್ಯ ಹಾಗೂ ಅಂತರ್‌ರಾರಾಜ್ಯ ಮಟ್ಟಗಳಲ್ಲಿ ನಡೆಯುವ ಸರಸ್ ಮೇಳಗಳಲ್ಲಿ ಭಾಗವಹಿಸಿ, ತಮ್ಮ ಕೈಯಿಂದ ತಯಾರಿಸಿದ ಉತ್ತಮ ಗುಣಮಟ್ಟದ ಲಂಬಾಣಿ ಕಸೂತಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗುಂಪಿಗೆ ವ್ಯಾಪಾರ ವಹಿವಾಟಿನ ಅವಕಾಶಗಳು ವಿಸ್ತರಿಸುವುದರ ಜೊತೆಗೆ ಸ್ಥಳೀಯ ಕಲೆಗೆ ವ್ಯಾಪಕ ಪ್ರಚಾರ ದೊರೆಯುತ್ತಿದೆ. ವಿಶೇಷವೆಂದರೆ, ತಮ್ಮ ಗುಂಪಿನ ಸದಸ್ಯೆಯರಿಗೆ ಮಾತ್ರವಲ್ಲದೆ ಇತರ ಸ್ವಸಹಾಯ ಗುಂಪುಗಳ ಮಹಿಳೆಯರಿಗೂ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಸಾಮೂಹಿಕ ಆರ್ಥಿಕ ಪ್ರಗತಿಗೆ ಕೊಡುಗೆ ನೀಡುತ್ತಿದ್ದಾರೆ.

ಭಾಗ್ಯಬಾಯಿ ಅವರ ಸಂಘಟನಾ ಶಕ್ತಿ : ಗ್ರಾಮದಲ್ಲಿ ಕಸೂತಿ ಕೇಂದ್ರ ಸ್ಥಾಪನೆಯ ಕನಸು

ಈ ಸಾಧನೆಯ ಹಿಂದೆ ಸ್ವಸಹಾಯ ಗುಂಪಿನ ಸದಸ್ಯೆ ಭಾಗ್ಯಬಾಯಿ ಅವರ ನಿರಂತರ ಪರಿಶ್ರಮ ಮತ್ತು ಸಂಘಟನಾ ಸಾಮರ್ಥ್ಯ ಪ್ರಮುಖವಾಗಿದೆ. ಮಹಿಳೆಯರನ್ನು ಒಗ್ಗೂಡಿಸಿ ಅವರಲ್ಲಿರುವ ಸಾಂಪ್ರದಾಯಿಕ ಕೌಶಲ್ಯಕ್ಕೆ ಉದ್ಯೋಗದ ರೂಪ ನೀಡುವಲ್ಲಿ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಕೇವಲ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟಕ್ಕೆ ಸೀಮಿತವಾಗದೆ, ಗ್ರಾಮದ ಇನ್ನಷ್ಟು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂಬ ಆಶಯ ಅವರದ್ದಾಗಿದೆ.

ಈ ನಿಟ್ಟಿನಲ್ಲಿ ಸುಶೀಲಾನಗರದಲ್ಲಿಯೇ ಪ್ರತ್ಯೇಕ ಲಂಬಾಣಿ ಕಸೂತಿ ಕೇಂದ್ರ ಸ್ಥಾಪಿಸಿ, ಮಹಿಳೆಯರಿಗೆ ನಿರಂತರ ಉದ್ಯೋಗ ಹಾಗೂ ಆದಾಯದ ಮೂಲ ಕಲ್ಪಿಸುವ ಗುರಿಯನ್ನು ಅವರು ಹೊಂದಿದ್ದಾರೆ. ಕುಟುಂಬದ ಸದಸ್ಯರು, ಕಿತ್ತೂರು ರಾಣಿ ಚೆನ್ನಮ್ಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಕಾರ ಈ ಸಾಧನೆಗೆ ಬೆನ್ನೆಲುಬಾಗಿದೆ ಎಂದು ಭಾಗ್ಯಬಾಯಿ ತಿಳಿಸಿದ್ದಾರೆ.

share
ಕೆ.ಮಹಮ್ಮದ್ ಖಾಸೀಂ
ಕೆ.ಮಹಮ್ಮದ್ ಖಾಸೀಂ
Next Story
X