Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 1.15 ಲಕ್ಷ ವೈಯಕ್ತಿಕ ಶೌಚಾಲಯಗಳ ಸಮೀಕ್ಷೆ...

1.15 ಲಕ್ಷ ವೈಯಕ್ತಿಕ ಶೌಚಾಲಯಗಳ ಸಮೀಕ್ಷೆ ಪೂರ್ಣ

ವಾರ್ತಾಭಾರತಿ ಫಲಶ್ರುತಿ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು29 Sept 2026 2:18 PM IST
share
1.15 ಲಕ್ಷ ವೈಯಕ್ತಿಕ ಶೌಚಾಲಯಗಳ ಸಮೀಕ್ಷೆ ಪೂರ್ಣ

ರಾಯಚೂರು : ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಜಿಪಂ ಆದೇಶದ ಮೇರೆಗೆ ಜಿಲ್ಲೆಯ ಎಲ್ಲಾ ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು ಸಮೀಕ್ಷೆ ಕೈಗೊಂಡು 1.15 ಲಕ್ಷ ವೈಯಕ್ತಿಕ ಶೌಚಾಲಯಗಳ ಪರಿಶೀಲನೆ ಮಾಡಿದ್ದಾರೆ.

ರಾಯಚೂರನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಎಂದು ಘೋಷಣೆ ಮಾಡಿದರೂ ಕಾಲಕಾಲಕ್ಕೆ ಪರಿಶೀಲನೆ ನಡೆಸದೆ ಜಿಪಂ ಕಡತ ಹಾಗೂ ಮಾಹಿತಿ ನಿರ್ವಾಹಣಾ ವ್ಯವಸ್ಥೆಯಲ್ಲಿ ದಾಖಲಿಸಿದ ಅಂಕಿ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಿತ್ತು. ಇದು ಅನೇಕ ಅನುಮಾನ ಮೂಡಿಸಿತ್ತು. ಈ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ ಸೆ.16ರಂದು ‘ಸ್ವಚ್ಛ ಭಾರತ ಮಿಷನ್‌ನಲ್ಲಿ ಭಾರಿ ಅವ್ಯವಹಾರ?’ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ಈ ಕುರಿತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೂ ರಾಜ್ಯ ಸರಕಾರಕ್ಕೆ ಪತ್ರ ಬರೆದು ತನಿಖೆಗೆ ಒತ್ತಾಯಿಸಿದ್ದರು.

ಇದರಿಂದ ಎಚ್ಚೆತ್ತ ರಾಯಚೂರು ಜಿಪಂ ಸಿಇಒ ಅವರು ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಪ್ರತಿಯೊಂದು ಅರ್ಹ ಕುಟುಂಬಕ್ಕೂ ವೈಯಕ್ತಿಕ ಗೃಹ ಶೌಚಾಲಯದ ಸೌಲಭ್ಯ ತಲುಪಿದೆಯೇ ಹಾಗೂ ನಿರ್ಮಿಸಲಾಗಿರುವ ಶೌಚಾಲಯಗಳು ಪ್ರಸ್ತುತ ಬಳಕೆಯಲ್ಲಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ರಾಯಚೂರು ಜಿಪಂನಿಂದ ‘‘ನಿರ್ಮಲ ರಾಯಚೂರು’’ ಮೊಬೈಲ್ ಆ್ಯಪ್ ಮೂಲಕ ಮನೆ-ಮನೆ ಸಮೀಕ್ಷೆ ಅಭಿಯಾನ ಹಮ್ಮಿಕೊಂಡಿದ್ದಾರೆ.

ಮನೆ-ಮನೆ ಭೇಟಿ ಹಾಗೂ ತಂತ್ರಜ್ಞಾನದ ಬಳಕೆ: ಜಿಲ್ಲೆಯ ಗ್ರಾಪಂ ವ್ಯಾಪ್ತಿಯಲ್ಲಿ ವಿಶೇಷ ಸಮೀಕ್ಷಾ ತಂಡಗಳನ್ನು ರಚಿಸಲಾಗಿದ್ದು, ಸದಸ್ಯರು ಪ್ರತಿಯೊಂದು ಮನೆಗೆ ಕಡ್ಡಾಯವಾಗಿ ಭೇಟಿ ನೀಡಿ ಶೌಚಾಲಯಗಳ ಭೌತಿಕ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ನಿರ್ಮಲಾ ರಾಯಚೂರು ಮೊಬೈಲ್ ಆ್ಯಪ್‌ನಲ್ಲಿ ಸ್ಥಳದಲ್ಲೇ ಮಾಹಿತಿ ದಾಖಲಿಸುತ್ತಿದ್ದಾರೆ. ನೈಜ ಸಮಯದಲ್ಲಿ ಮಾಹಿತಿ ಸಂಗ್ರಹಿಸಿ, ಗ್ರಾಪಂ ಹಾಗೂ ತಾಲೂಕುವಾರು ಪ್ರಗತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಜಿಲ್ಲೆಯ 179 ಗ್ರಾಪಂಗಳಲ್ಲಿ ಸೆ.21ರಿಂದ ಸಮೀಕ್ಷೆ ಪ್ರಾರಂಭವಾಗಿದ್ದು, 15 ದಿನಗಳ ಕಾಲ ಸಮಗ್ರ ಸಮೀಕ್ಷಾ ಕಾರ್ಯ ನಡೆಯಲಿದೆ. ತಾಪಂ ಹಾಗೂ ಜಿಪಂ ಮಟ್ಟದ ಅಧಿಕಾರಿಗಳು ಸಮೀಕ್ಷಾ ಕಾರ್ಯವನ್ನು ನೇರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಗ್ರಾಪಂ ಹಾಗೂ ತಾಲೂಕುವಾರು ಮಾಹಿತಿ ಕ್ರೋಢೀಕರಿಸಿ ಅಂತಿಮ ವರದಿಯನ್ನು ಜಿಪಂಗೆ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ ಸಿಇಒ ಈಶ್ವರ್ ಕಯಮಾರ ಕಾಂದೂ ತಿಳಿಸಿದ್ದಾರೆ.

1.15 ಲಕ್ಷಕ್ಕೂ ಅಧಿಕ ಶೌಚಾಲಯಗಳ ಸಮೀಕ್ಷೆ ಪೂರ್ಣ: ಇದೀಗ ಜಿಲ್ಲೆಯ ಒಟ್ಟು 3,02,753 ವೈಯಕ್ತಿಕ ಗೃಹ ಶೌಚಾಲಯಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈಗಾಗಲೇ 1,15,282 ಶೌಚಾಲಯಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನೂ 1,87,471 ಶೌಚಾಲಯಗಳ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ.

ತಾಲೂಕುವಾರು ಪೂರ್ಣಗೊಂಡ ಸಮೀಕ್ಷೆಯ ವಿವರ

ದೇವದುರ್ಗ: 19,313, ಲಿಂಗಸುಗೂರು: 19,611, ಮಾನ್ವಿ: 7,174, ಮಸ್ಕಿ: 15,315

ರಾಯಚೂರು: 23,868, ಸಿಂಧನೂರು: 22,208

ಸಿರವಾರ: 7,793

ರಾಯಚೂರು ಜಿಲ್ಲೆಯನ್ನು ಸಂಪೂರ್ಣ ಬಹಿರ್ದೆಸೆ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದೇವೆ. ಹೀಗಾಗಿ ವೈಯಕ್ತಿಕ ಶೌಚಾಲಯಗಳ ಸ್ಥಿತಿಗತಿ ಪರಿಶೀಲನೆ ನಡೆಸಲಾಗುತ್ತಿದೆ. ನಿರ್ಮಲ ರಾಯಚೂರು ಆ್ಯಪ್ ಮೂಲಕ ಪ್ರತಿದಿನ ಸರಿಸುಮಾರು 1000 ರಿಂದ 1,500 ಸದಸ್ಯರು ಶೌಚಾಲಯಗಳ ಮನೆ-ಮನೆ ಸಮೀಕ್ಷೆ ಮಾಡುತ್ತಿದ್ದಾರೆ. ಸಮೀಕ್ಷೆಯ ಮೂಲಕ ದಾಖಲೆಗಳಲ್ಲಿರುವ ಮಾಹಿತಿಯನ್ನು ವಾಸ್ತವ ಸ್ಥಿತಿಯೊಂದಿಗೆ ಪರಿಶೀಲಿಸಿ, ಶೌಚಾಲಯಗಳ ಲಭ್ಯತೆ, ಬಳಕೆ ಹಾಗೂ ಸ್ಥಿತಿಗತಿಗಳ ಕುರಿತು ನಿಖರ ಮಾಹಿತಿ ಸಂಗ್ರಹಿಸಲಾಗುತ್ತಿದೆ.

- ಈಶ್ವರ್ ಕುಮಾರ ಕಾಂದೂ

ಜಿಪಂ ಸಿಇಒ ರಾಯಚೂರು

share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X