Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 15ನೇ ಹಣಕಾಸು ಆಯೋಗದ ಅನುದಾನ ಸ್ಥಗಿತ:...

15ನೇ ಹಣಕಾಸು ಆಯೋಗದ ಅನುದಾನ ಸ್ಥಗಿತ: ಗ್ರಾ.ಪಂ. ನಿರ್ವಹಣೆಗೆ ಸಂಕಷ್ಟ

ಬೀದಿದೀಪ, ಕುಡಿಯುವ ನೀರಿನ ಮೋಟರ್ ದುರಸ್ತಿಗೂ ಹಣವಿಲ್ಲ

ಪ್ರಶಾಂತ್ ಚವ್ಹಾಣಪ್ರಶಾಂತ್ ಚವ್ಹಾಣ29 Sept 2026 2:37 PM IST
share
15ನೇ ಹಣಕಾಸು ಆಯೋಗದ ಅನುದಾನ ಸ್ಥಗಿತ: ಗ್ರಾ.ಪಂ. ನಿರ್ವಹಣೆಗೆ ಸಂಕಷ್ಟ

ಯಡ್ರಾಮಿ: ಕೇಂದ್ರ ಸರಕಾರದ 15ನೇ ಹಣಕಾಸು ಆಯೋಗದ ಅನುದಾನ ಕಳೆದ ಒಂದೂವರೆ ವರ್ಷದಿಂದ ಬಾರದ ಹಿನ್ನೆಲೆಯಲ್ಲಿ ತಾಲೂಕಿನ ಬಹುತೇಕ ಗ್ರಾಮ ಪಂಚಾಯತ್‌ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿನ ಮೋಟಾರ್ ದುರಸ್ತಿ, ಬೀದಿದೀಪ ನಿರ್ವಹಣೆ, ವಿದ್ಯುತ್ ಬಿಲ್ ಪಾವತಿ ಸೇರಿದಂತೆ ದಿನನಿತ್ಯದ ಕಚೇರಿ ನಿರ್ವಹಣೆಗೂ ಹಣದ ಕೊರತೆ ಎದುರಿಸುತ್ತಿವೆ.

ತಾಲೂಕಿನ ಶೇ.90ರಷ್ಟು ಗ್ರಾಮ ಪಂಚಾಯತ್‌ಗಳು 15ನೇ ಹಣಕಾಸು ಆಯೋಗದ ಅನುದಾನವನ್ನೇ ದೈನಂದಿನ ನಿರ್ವಹಣೆಗೆ ಅವಲಂಬಿಸಿವೆ. 2025ರ ಏಪ್ರಿಲ್‌ನಿಂದ ಅನುದಾನ ಬಿಡುಗಡೆಯಾಗದಿರುವುದು ಪಂಚಾಯತ್‌ಗಳಿಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ.

ವಿದ್ಯುತ್ ಬಿಲ್ ಬಾಕಿ: ಹಲವು ಪಂಚಾಯತ್‌ಗಳು ಏಳೆಂಟು ತಿಂಗಳಿಂದ ಬೀದಿದೀಪ ಹಾಗೂ ಕುಡಿಯುವ ನೀರಿನ ಪಂಪ್‌ಸೆಟ್‌ಗಳ ವಿದ್ಯುತ್ ಬಿಲ್ ಪಾವತಿಸಿಲ್ಲ. ಲಕ್ಷಾಂತರ ರೂ. ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ನೋಟಿಸ್ ನೀಡುತ್ತಿದ್ದಾರೆ. ಆದರೂ ಕೇಂದ್ರ ಸರಕಾರ ಪಾವತಿಸಬೇಕಾದ ಅನುದಾನ ನೀಡುತ್ತಿಲ್ಲ ಎನ್ನಲಾಗಿದೆ.

ಬೀದಿದೀಪ, ಮೋಟಾರ್ ದುರಸ್ತಿಗೂ ಹಣವಿಲ್ಲ: ಸಕಾಲ ಯೋಜನೆಯಡಿ ಬೀದಿದೀಪ ಕೆಟ್ಟರೆ ಮೂರು ದಿನಗಳಲ್ಲಿ ದುರಸ್ತಿ ಮಾಡಬೇಕಿದೆ. ಆದರೆ ಹಿಂದಿನ ದುರಸ್ತಿ ಕಾಮಗಾರಿಗಳ ಬಿಲ್‌ಗಳೇ ಬಾಕಿ ಇರುವುದರಿಂದ ಹೊಸದಾಗಿ ಕೆಲಸ ಮಾಡಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ. ಕುಡಿಯುವ ನೀರಿನ ಮೋಟಾರ್ ಕೆಟ್ಟರೂ ದುರಸ್ತಿ ಮಾಡಿಸುವುದು ಪಂಚಾಯತ್‌ಗಳಿಗೆ ಸವಾಲಾಗಿದೆ.

ಸ್ಥಳೀಯವಾಗಿ ಸಂಗ್ರಹವಾಗುವ ವರಮಾನದಲ್ಲಿ ಶೇ.53ರಷ್ಟು ಸರಕಾರಕ್ಕೆ ಪಾವತಿಸಿದ ಬಳಿಕ ಉಳಿಯುವ ಶೇ.47ರಷ್ಟು ಹಣದಲ್ಲಿ ಹೊರಗುತ್ತಿಗೆ ನೌಕರರ ವೇತನ ಸೇರಿದಂತೆ ಇತರೆ ನಿರ್ವಹಣಾ ವೆಚ್ಚಗಳನ್ನು ಭರಿಸಬೇಕಾಗಿದೆ. ಇದರಿಂದ ಕಂಪ್ಯೂಟರ್ ದುರಸ್ತಿ, ಆ್ಯಂಟಿ ವೈರಸ್ ಅಳವಡಿಕೆ ಸೇರಿದಂತೆ ಸಣ್ಣಪುಟ್ಟ ಕಚೇರಿ ಕೆಲಸಗಳಿಗೂ ಹಣದ ಕೊರತೆ ಉಂಟಾಗಿದೆ. ಗ್ರಾಮಸಭೆ ಅಥವಾ ಕಚೇರಿಗೆ ಬರುವವರಿಗೆ ಕಾಫಿ, ಟೀ ವ್ಯವಸ್ಥೆ ಮಾಡಲೂ ಕಷ್ಟವಾಗಿದೆ ಎಂದು ಪಿಡಿಒಗಳು ಅಳಲು ತೋಡಿಕೊಂಡಿದ್ದಾರೆ.

ಇದರ ಜತೆಗೆ ತಾಲೂಕಿನಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಬೇಸಿಗೆಗೂ ಮುನ್ನವೇ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈ ಸಂದರ್ಭದಲ್ಲಿ ಪಂಚಾಯತ್‌ಗಳಿಗೆ ಅನುದಾನದ ಕೊರತೆ ಮುಂದುವರಿದರೆ ಕುಡಿಯುವ ನೀರು ಪೂರೈಕೆ ಸೇರಿದಂತೆ ಮೂಲಸೌಕರ್ಯಗಳ ನಿರ್ವಹಣೆಯ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ಕೇಂದ್ರ ಸರಕಾರ ತನ್ನ ಪಾಲಿನ ಅನುದಾನ ನೀಡದೆ ಇರುವುದರಿಂದ ಇದೀಗ ಗ್ರಾಮ ಪಂಚಾಯತ್ ನಿರ್ವಹಣೆ ಸವಾಲಾಗಿದೆ. ಬೀದಿದೀಪಗಳು ಕೆಟ್ಟು ತಿಂಗಳಾದರೂ ರಿಪೇರಿ ಮಾಡಿಸಲು ಸಾಧ್ಯವಾಗುತ್ತಿಲ್ಲ. ಬರ ಎದುರಾಗಿರುವ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಮೋಟಾರ್ ಕೆಟ್ಟರೆ ದುರಸ್ತಿ ಮಾಡಿಸಲು ಸಾಧ್ಯವಾಗದ ಪರಿಸ್ಥಿತಿ ಬಂದೊದಗಿದೆ.

-ಹೆಸರು ಹೇಳಲು ಇಚ್ಛಿಸದ ಪಿಡಿಒ

share
ಪ್ರಶಾಂತ್ ಚವ್ಹಾಣ
ಪ್ರಶಾಂತ್ ಚವ್ಹಾಣ
Next Story
X