Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಂತ್ರಿಗಿರಿ ಉಳಿಸಿಕೊಂಡ ತಂಗಡಗಿ;...

ಮಂತ್ರಿಗಿರಿ ಉಳಿಸಿಕೊಂಡ ತಂಗಡಗಿ; ರಾಯರೆಡ್ಡಿಗೆ ಮತ್ತೆ ಅವಕಾಶ

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು5 Aug 2026 10:58 AM IST
share
ಮಂತ್ರಿಗಿರಿ ಉಳಿಸಿಕೊಂಡ ತಂಗಡಗಿ; ರಾಯರೆಡ್ಡಿಗೆ ಮತ್ತೆ ಅವಕಾಶ

ಕೊಪ್ಪಳ: ಜಿಲ್ಲೆಯ ಇಬ್ಬರು ಶಾಸಕರು ಸೋಮವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ,ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ಒಲಿದಿದೆ.

ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕ ಬಸವರಾಜ ರಾಯರೆಡ್ಡಿ ಈ ಮೊದಲು ಉನ್ನತ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಕಳೆದ ಬಾರಿ ಕೈತಪ್ಪಿದ್ದ ಸಚಿವ ಸ್ಥಾನ ಈ ಬಾರಿ ಸಿಕ್ಕಿದೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ 1985ರಿಂದ 1999, 2004-2009, 2013-2018 ಹಾಗೂ 2023ರಲ್ಲಿ 16ನೇ ವಿಧಾನಸಭೆಗೆ ಒಟ್ಟು 6 ಬಾರಿ ಶಾಸಕರಾಗಿದ್ದಾರೆ. 1996 ರಿಂದ 1998 ರವರೆಗೆ ಲೋಕಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, 1994-96 ಮತ್ತು 2016-18ರ ಅವಧಿಯಲ್ಲಿ ರಾಜ್ಯ ಸಂಪುಟದಲ್ಲಿ ಸಚಿವರಾಗಿ, 1989-94ರಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಹಾಗೂ 1998-99ರಲ್ಲಿ ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರಾಗಿಯೂ ಅವರು ಕರ್ತವ್ಯ ನಿರ್ವಹಿಸಿದ್ದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮತ್ತೊಬ್ಬ ಶಾಸಕ ಶಿವರಾಜ್ ತಂಗಡಗಿ ಅವರಿಗೆ ಮತ್ತೊಮ್ಮೆ ಹೈಕಮಾಂಡ್ ಸಚಿವ ಸ್ಥಾನ ನೀಡಿದೆ. ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಿವರಾಜ್ ಸಂಗಪ್ಪ ತಂಗಡಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈಗ ಮತ್ತೆ ಸಿಎಂ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

1971ರ ಜೂನ್ 10ರಂದು ಜನಿಸಿದ ಶಿವರಾಜ್ ತಂಗಡಗಿ ಅವರು ಇಲಕಲ್ಲಿನ ಎಸ್.ವಿ.ಎಂ ಕಾಲೇಜಿನಲ್ಲಿ ಬಿ.ಎಸ್ಸಿ. ವ್ಯಾಸಂಗ ಮಾಡಿದ್ದು, ಕೃಷಿ ಹಾಗೂ ಸ್ವಂತ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ.

2008ರಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕನಕಗಿರಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ಬಳಿಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದರು. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೊಮ್ಮೆ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಮೊದಲ ಸಚಿವ ಸಂಪುಟದಲ್ಲಿ ಅಲ್ಪಾವಧಿಗೆ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ 1,06,164 ಮತ ಪಡೆದು, ಬಿಜೆಪಿ ಅಭ್ಯರ್ಥಿ ಬಸವರಾಜ ಢಡೇಸುಗೂರ ಅವರನ್ನು 42,632 ಮತಗಳ ಅಂತರದಿಂದ ಸೋಲಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕನಕಗಿರಿ ಕ್ಷೇತ್ರದ ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡಿರುವ ಅವರು ತಂಗಡಗಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವ ಹಾಗೂ ಜಿಲ್ಲೆಯಲ್ಲಿನ ರಾಜಕೀಯ ಪ್ರಭಾವದ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿಯೂ ಪ್ರಮುಖ ಖಾತೆ ಪಡೆಯುವ ಸಾಧ್ಯತೆ ಇದೆ.

ಹುಸಿಯಾದ ಹಿಟ್ನಾಳ್‌ ನಿರೀಕ್ಷೆ

ಈ ಬಾರಿ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ನಿರೀಕ್ಷೆ ಹುಸಿಯಾಗಿದೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಘವೇಂದ್ರ ಹಿಟ್ನಾಳ್‌ಗೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೆ ಎಂದು ಅವರ ಅಭಿಮಾನಿಗಳು ಮತ್ತು ಕ್ಷೇತ್ರದ ಜನರು ನಂಬಿದ್ದರು. ಆದ್ರೆ ಸಿಗಲಿಲ್ಲ. ಈ ಬಾರಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶತಾಯ ಗತಾಯ ಪ್ರಯತ್ನ ಮಾಡಿ ವಾರಗಟ್ಟಲೆ ಬೆಂಗಳೂರಿನಲ್ಲೇ ಠಿಕಾಣಿೆ ಹೂಡಿದ್ದರೂ ಕೂಡ ಅವರ ಪ್ರಯತ್ನ ಫಲಿಸಲಿಲ್ಲ. ಕೊಪ್ಪಳ ಜಿಲ್ಲೆಯಾದಾಗನಿಂದಲೂ ಕೊಪ್ಪಳ ಕ್ಷೇತ್ರದ ಯಾವೊಬ್ಬ ಶಾಸಕನಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಯವರ ಗಂಗಾವತಿಯಲ್ಲಿನ ಸೋಲಿಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಅವರೇ ಕಾರಣ ವಾಗಿದ್ದಾರೆ ಎನ್ನುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಬಹುತೇಕ ಜನ ಮೇಲೆ ಮುನಿಸಿಕೊಂಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ಕೊಟ್ಟರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬೀಳಬಹುದು ಎಂದು ಸಚಿವ ಸ್ಥಾನ ತಪ್ಪಿಸಲಾಗಿದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿವೆ.

share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X