Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ...

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂರ್ಯಕಾಂತಿ ಸೊಬಗು

ಕೃಷಿ ನಡುವೆ ಪ್ರವಾಸಿ ತಾಣವಾಗಿರುವ ಸಿಂಧುವಳ್ಳಿಪುರ

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್28 Sept 2026 3:03 PM IST
share
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂರ್ಯಕಾಂತಿ ಸೊಬಗು

ಮೈಸೂರು: ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರ ಗಮನಸೆಳೆಯುತ್ತಿರುವ ಹೊಸ ಆಕರ್ಷಣೆ ಎಂದರೆ ಸೂರ್ಯಕಾಂತಿ ಹೂಗಳ ಕಲರವ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿಪುರ ಗ್ರಾಮದ ರೈತ ಮಹಿಳೆ ಮಂಜುಳಾ ತಮ್ಮ ಜಮೀನಿನಲ್ಲಿ ಬೆಳೆಸಿರುವ ಸೂರ್ಯಕಾಂತಿ ಛಾಯಾಗ್ರಾಹಕರು, ಪ್ರಕೃತಿ ಪ್ರಿಯರ ಮತ್ತು ಪ್ರವಾಸಿಗರ ನೆಚ್ಚಿನ ತಾಣವಾಗಿದೆ.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಈ ಹೊಲದಲ್ಲಿ ಸಾವಿರಾರು ಸೂರ್ಯಕಾಂತಿ ಹೂಗಳು ಹಳದಿ ಬಣ್ಣದ ಹೊಳಪಿನಿಂದ ಕಂಗೊಳಿಸುತ್ತಿದ್ದು, ಬೆಳಗಿನ ಸೂರ್ಯೋದಯದ ಹೊತ್ತು ಮತ್ತು ಸಂಜೆ ಸೂರ್ಯಾಸ್ತದ ವೇಳೆಯಲ್ಲಿ ಇಡೀ ಪ್ರದೇಶವೇ ಹೂವಿನ ಹಾಸಿಗೆಯಂತೆ ಕಂಗೊಳಿಸುತ್ತಿದೆ. ರಸ್ತೆಯಲ್ಲಿ ಸಾಗುವ ವಾಹನ ಸವಾರರು ಸಹ ಕ್ಷಣಕಾಲ ನಿಂತು ಈ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ವಾರಾಂತ್ಯದ ಶನಿವಾರ ಹಾಗೂ ರವಿವಾರ ಕುಟುಂಬ ಸಮೇತರಾಗಿ, ಯುವಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಫೋಟೊಗ್ರಫಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಆಗಮಿಸುತ್ತಿದ್ದಾರೆ. ಮೊಬೈಲ್ ಹಾಗೂ ಕ್ಯಾಮರಾಗಳಲ್ಲಿ ನೆನಪಿನ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವುದು ಈ ಸ್ಥಳದ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಈ ರಸ್ತೆಯ ಅಕ್ಕ ಪಕ್ಕದ ಹೊಲಗಳಲ್ಲಿ ಬೇರೆಯವರು ಸೂರ್ಯಕಾಂತಿ ಬೆಳೆಯನ್ನು ಹಾಕಿದ್ದರಾದರೂ, ಮಂಜುಳಾ ಅವರ ಜಮೀನಿನಲ್ಲಿ ಮಾತ್ರ ಸೂರ್ಯಕಾಂತಿ ಹೂವು ಕಂಗೊಳಿಸುತ್ತಿದೆ. ಈ ಅವಕಾಶವನ್ನು ರೈತ ಮಹಿಳೆ ಮಂಜುಳಾ ವಿಭಿನ್ನ ರೀತಿಯಲ್ಲಿ ಬಳಸಿಕೊಂಡಿದ್ದಾರೆ. ಜಮೀನಿಗೆ ಭೇಟಿ ನೀಡಿ ಸೂರ್ಯಕಾಂತಿ ಹೊಲದ ನಡುವೆ ಫೋಟೊ ಅಥವಾ ವೀಡಿಯೊ ಚಿತ್ರೀಕರಣ ಮಾಡಿಕೊಳ್ಳುವ ಪ್ರತಿಯೊಬ್ಬರಿಗೆ 50 ರೂ. ಪ್ರವೇಶ ಶುಲ್ಕ ಇಟ್ಟಿದ್ದಾರೆ. ಇದರಿಂದ ಬೆಳೆಗೂ ಮೌಲ್ಯ ದೊರೆಯುವ ಜೊತೆಗೆ ಹೆಚ್ಚುವರಿ ಆದಾಯವೂ ಲಭಿಸುತ್ತಿದೆ. ಒಂದು ತಿಂಗಳಿ ನಿಂದ ಪ್ರತಿದಿನವೂ ಸಾಕಷ್ಟು ಜನರು ಭೇಟಿ ನೀಡುತ್ತಿದ್ದು, ವಾರಾಂತ್ಯದಲ್ಲಿ ಭೇಟಿ ನೀಡುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಹೂಗಳ ನಡುವೆ ನಿಂತು ಫೋಟೊ ತೆಗೆಯುವ ಪ್ರತಿಯೊಬ್ಬರ ಮುಖದಲ್ಲೂ ಸಂತಸದ ನಗು ಮೂಡಿ ಸುತ್ತಿರುವ ಈ ತಾಣ, ಮೈಸೂರು-ಊಟಿ ಹೆದ್ದಾರಿಯ ಹೊಸ ಆಕರ್ಷಣೆಯಾಗಿ ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರವಾಸಿಗರನ್ನು ಸೆಳೆಯುವ ನಿರೀಕ್ಷೆ ಮೂಡಿಸಿದೆ.

ಆದಾಯ ಮಾರ್ಗ

ಕೃಷಿಯೊಂದಿಗೆ ಪ್ರವಾಸೋದ್ಯಮದ ಹೊಸ ಸಾಧ್ಯತೆಯನ್ನು ಪರಿಚಯಿಸಿರುವ ಈ ಪ್ರಯತ್ನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬೆಳೆ ಕೇವಲ ಆಹಾರ ಉತ್ಪಾದನೆಗೆ ಮಾತ್ರ ಸೀಮಿತವಾಗದೆ, ಪ್ರಕೃತಿ ಸೌಂದರ್ಯದ ಮೂಲಕ ಆದಾಯದ ಮತ್ತೊಂದು ಮಾರ್ಗವಾಗಿಯೂ ರೂಪುಗೊಳ್ಳಬಹುದು ಎಂಬುದಕ್ಕೆ ಸಿಂಧುವಳ್ಳಿಪುರದ ಸೂರ್ಯಕಾಂತಿ ಬೆಳೆಯಿರುವ ಕೃಷಿಭೂಮಿ ಉತ್ತಮ ಉದಾಹರಣೆಯಾಗಿದೆ.

Tags

sunflowersMysoreOotyNational Highway
share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X