Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕುದುರೆಮುಖದ ಬೆಟ್ಟಗಳಲ್ಲಿ...

ಕುದುರೆಮುಖದ ಬೆಟ್ಟಗಳಲ್ಲಿ ‌ʼನೀಲಕುರಿಂಜಿʼಯ ನೀಲಿ ಲೋಕ

►ಚಾರಣಪ್ರಿಯರ ಗಮನ ಸೆಳೆಯುತ್ತಿರುವ ವಿಶೇಷ ಹೂವುಗಳು ►12 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು

ಅಮ್ಜದ್‍ ಖಾನ್ ಎಂ.ಅಮ್ಜದ್‍ ಖಾನ್ ಎಂ.31 Aug 2026 7:30 AM IST
share
ಕುದುರೆಮುಖದ ಬೆಟ್ಟಗಳಲ್ಲಿ ‌ʼನೀಲಕುರಿಂಜಿʼಯ ನೀಲಿ ಲೋಕ

ಬೆಂಗಳೂರು : ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಸುಂದರ ಗಿರಿಧಾಮವಾದ ಕುದುರೆಮುಖದ ಬೆಟ್ಟಗಳಲ್ಲಿ 12 ವರ್ಷಗಳಿಗೊಮ್ಮೆ ಅರಳುವ ಅಪರೂಪದ ನೀಲಕುರಿಂಜಿ(Neelakurinji) ಹೂವುಗಳು ಭವ್ಯವಾಗಿ ಅರಳಿ ನಿಂತಿವೆ. ಈ ನೈಸರ್ಗಿಕ ಅದ್ಭುತದಿಂದಾಗಿ ಇಡೀ ಹಸಿರು ಬೆಟ್ಟಗಳು ನೀಲಿ-ನೇರಳೆ ಬಣ್ಣದ ರೇಷ್ಮೆ ಹಾಸಿನಂತೆ ಕಂಗೊಳಿಸುತ್ತಿದ್ದು, ಚಾರಣಪ್ರಿಯರು ಹಾಗೂ ಪ್ರಕೃತಿ ಪ್ರವಾಸಿಗರ ವಿಶೇಷ ಗಮನ ಸೆಳೆಯುತ್ತಿವೆ.

ಈ ಹಿಂದೆ ಕುದುರೆಮುಖದ ಕೆಲವು ಬೆಟ್ಟ ಪ್ರದೇಶಗಳಲ್ಲಿ ಈ ಹೂವುಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದ್ದರೆ, ಈ ಬಾರಿ ಸೀಮಿತ ಪ್ರಮಾಣದಲ್ಲಿ ಅರಳಿರುವುದು ಕಂಡುಬಂದಿದೆ. ಹಸಿರು ಬೆಟ್ಟಗಳ ನಡುವೆ ಅಲ್ಲಲ್ಲಿ ಅರಳಿರುವ ನೀಲಿನೇರಳೆ ಹೂವುಗಳು ಕುದುರೆಮುಖದ ನೈಸರ್ಗಿಕ ಸೌಂದರ್ಯಕ್ಕೆ ಹೊಸ ಆಕರ್ಷಣೆ ನೀಡುತ್ತಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ವಿವಿಧ ಚಾರಣ ಮಾರ್ಗಗಳಿದ್ದು, ಇಲ್ಲಿನ ಹುಲ್ಲುಗಾವಲು, ಶೋಲಾ ಕಾಡುಗಳು, ಜಲಧಾರೆಗಳು ಹಾಗೂ ಸಮೃದ್ಧ ಜೀವವೈವಿಧ್ಯ ಪ್ರವಾಸಿಗರಿಗೆ ವಿಶಿಷ್ಟ ಅನುಭವ ನೀಡುತ್ತವೆ.

ನೀಲಕುರಿಂಜಿಯ ನೀಲಿ ಲೋಕ: ಪಶ್ಚಿಮ ಘಟ್ಟಗಳ ಬೆಟ್ಟಗಳನ್ನು ನೀಲಿನೇರಳೆ ಬಣ್ಣದಲ್ಲಿ ಕಂಗೊಳಿಸುವ ಅಪರೂಪದ ಹೂವುಗಳೆಂದೇ ನೀಲಕುರಿಂಜಿ ಜನಪ್ರಿಯವಾಗಿವೆ. ಹೂವುಗಳ ಅರಳುವಿಕೆ ಪ್ರಕೃತಿಯ ವಿಶಿಷ್ಟ ಎಕಲಾಜಿಕಲ್ ಸೈಕಲ್‌ನ ಭಾಗವಾಗಿದೆ. ಈ ಅವುಗಳನ್ನು ವೀಕ್ಷಿಸಲು ಬರುವ ಪ್ರವಾಸಿಗರು ಹೂವುಗಳನ್ನು ಕೀಳದಂತೆ, ಗಿಡಗಳಿಗೆ ಹಾನಿ ಮಾಡದಂತೆ ಹಾಗೂ ಪರಿಸರದ ಸ್ವಚ್ಛತೆ ಕಾಪಾಡುವಂತೆ ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ.

ಕರ್ನಾಟಕ ಪ್ರವಾಸೋದ್ಯಮವೂ ಕುದುರೆಮುಖವನ್ನು ಪ್ರಕೃತಿ ಮತ್ತು ಪರಿಸರ ಆಧಾರಿತ ಪ್ರವಾಸೋದ್ಯಮ ತಾಣವಾಗಿ ಗುರುತಿಸಿದೆ.

ಪ್ರವಾಸಿಗರಿಗೆ ಮಾಹಿತಿ ಮತ್ತು ಸೌಲಭ್ಯಕ್ಕೆ ಒತ್ತು:

ನೀಲಕುರಿಂಜಿಯಂತಹ ಅಪರೂಪದ ಹೂವುಗಳ ಅರಳುವಿಕೆ ಹಾಗೂ ಅವುಗಳ ಪರಿಸರ ಮಹತ್ವದ ಕುರಿತು ಪ್ರವಾಸಿಗರಿಗೆ ಸೂಕ್ತ ಮಾಹಿತಿ ಒದಗಿಸುವುದು, ನೈಸರ್ಗಿಕ ತಾಣಗಳಲ್ಲಿ ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಹಾಗೂ ಪ್ರವಾಸಿಗರ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಕುದುರೆಮುಖದ ಬೆಟ್ಟಗಳಲ್ಲಿ ಅರಳಿರುವ ನೀಲಕುರಿಂಜಿಯಂತಹ ಹೂವುಗಳು ಕರ್ನಾಟಕದ ಪ್ರಕೃತಿ ಸಂಪತ್ತಿನ ಅಪೂರ್ವ ಸೌಂದರ್ಯವನ್ನು ನಮಗೆ ಪರಿಚಯಿಸುತ್ತವೆ. ಇಂತಹ ನೈಸರ್ಗಿಕ ವಿಶೇಷತೆಗಳನ್ನು ವೀಕ್ಷಿಸಲು ತೆರಳಿದ ಸಂದರ್ಭದಲ್ಲಿ ಪರಿಸರ ಸ್ನೇಹಿಯಾಗಿರಬೇಕು. ಪ್ರವಾಸಿಗರು ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸುವುದರ ಜೊತೆಗೆ, ಅದರ ಸಂರಕ್ಷಣೆಯ ಜವಾಬ್ದಾರಿಯನ್ನೂ ಅರಿತುಕೊಳ್ಳಬೇಕು.

-ಕೆ.ಜೆ.ಜಾರ್ಜ್, ಇಂಧನ ಹಾಗೂ

ಪ್ರವಾಸೋದ್ಯಮ ಸಚಿವ

ಕುದುರೆಮುಖದಲ್ಲಿ ಈ ಬಾರಿ ಸೀಮಿತ ಪ್ರಮಾಣದಲ್ಲಿ ಕಂಡುಬರುತ್ತಿರುವ ನೀಲಿನೇರಳೆ ಹೂವುಗಳು ಚಾರಣಪ್ರಿಯರು ಮತ್ತು ಪ್ರವಾಸಿಗರಲ್ಲಿ ವಿಶೇಷ ಆಸಕ್ತಿ ಮೂಡಿಸಿವೆ. ಇಂತಹ ನೈಸರ್ಗಿಕ ವಿದ್ಯಮಾನಗಳನ್ನು ಪರಿಸರಸ್ನೇಹಿ ಪ್ರವಾಸೋದ್ಯಮದೊಂದಿಗೆ ಪರಿಚಯಿಸುವ ಅಗತ್ಯವಿದೆ. ಹೂವುಗಳು ಮತ್ತು ಅವುಗಳ ಆವಾಸಸ್ಥಳಕ್ಕೆ ಯಾವುದೇ ಹಾನಿಯಾಗದಂತೆ ಪ್ರವಾಸಿಗರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಮತ್ತು ಸೌಲಭ್ಯಗಳನ್ನು ಒದಗಿಸುವ ಕುರಿತು ಜಿಲ್ಲೆಯ ಪ್ರವಾಸೋ ದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

-ಡಾ.ರಾಮ್ ಪ್ರಸಾತ್ ಮನೋಹರ್,

ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ

share
ಅಮ್ಜದ್‍ ಖಾನ್ ಎಂ.
ಅಮ್ಜದ್‍ ಖಾನ್ ಎಂ.
Next Story
X