Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕರ್ನಾಟಕ ತಂಡವನ್ನು ಮುನ್ನಡೆಸಲಿರುವ...

ಕರ್ನಾಟಕ ತಂಡವನ್ನು ಮುನ್ನಡೆಸಲಿರುವ ‘ವಿಜಯಪುರ’ದ ಕುವರಿ

ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಟಿ-20 ಕ್ರಿಕೆಟ್ ಟೂರ್ನಿ

ಅನಿಲ್‌ ಶಿಂಧೆಅನಿಲ್‌ ಶಿಂಧೆ28 Sept 2026 2:59 PM IST
share
ಕರ್ನಾಟಕ ತಂಡವನ್ನು ಮುನ್ನಡೆಸಲಿರುವ ‘ವಿಜಯಪುರ’ದ ಕುವರಿ

ವಿಜಯಪುರ: ಕನಸು ಕಾಣುವುದಷ್ಟೇ ಅಲ್ಲ, ಅದನ್ನು ನನಸಾಗಿಸುವ ಛಲ, ಪರಿಶ್ರಮ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಹುದು ಎಂಬುದಕ್ಕೆ ಉತ್ತರ ಕರ್ನಾಟಕದ ಶ್ರೇಯಾ ಚೌವ್ಹಾಣ್ ಸಾಕ್ಷಿಯಾಗಿದ್ದಾರೆ. 19 ವರ್ಷದೊಳಗಿನ ಬಿಸಿಸಿಐ ಮಹಿಳಾ ಟಿ-20 ಕ್ರಿಕೆಟ್ ಟೂರ್ನಿಗೆ ಕರ್ನಾಟಕ ತಂಡದ ನಾಯಕಿಯಾಗಿ ಶ್ರೇಯಾ ಆಯ್ಕೆಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ಕೂಡಗಿಯ ಎನ್‌ಟಿಪಿಸಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂತೋಷಕುಮಾರ ಚೌವ್ಹಾಣ್ ಹಾಗೂ ಶಶಿಕಲಾ ದಂಪತಿಯ ಎರಡನೇ ಪುತ್ರಿ ಶ್ರೇಯಾ, ಸಾಲು ಸಾಲು ಸವಾಲುಗಳ ನಡುವೆಯೂ ಕ್ರಿಕೆಟ್ ನಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಕ್ರಿಕೆಟನ್ನೇ ಉಸಿರಾಗಿಸಿಕೊಂಡಿರುವ ಅವರು, ವಿಜಯಪುರದ ಜಲನಗರದ ನಿವಾಸಿ.

ಶ್ರೇಯಾ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಎಸ್.ಟಿ. ಜೋಸೆಫ್ ಖಾಸಗಿ ಶಾಲೆಯಲ್ಲಿ ಪೂರ್ಣಗೊಳಿಸಿದ್ದು, ಸದ್ಯ ಎಸ್.ಜೆ.ಬಿ. ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶಿಕ್ಷಣ ಮುಂದುವರಿಸಿದ್ದಾರೆ. ವಿದ್ಯಾಭ್ಯಾಸದ ಜತೆಗೆ ಕ್ರಿಕೆಟ್ ಅಭ್ಯಾಸಕ್ಕೂ ಹೆಚ್ಚಿನ ಆದ್ಯತೆ ನೀಡುತ್ತಿರುವ ಅವರು, ಕುಟುಂಬದ ಬೆಂಬಲ ಹಾಗೂ ವಿವಿಧ ಸಂಸ್ಥೆಗಳ ಸಹಕಾರದಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಅಕ್ಟೋಬರ್ 9ರಿಂದ ಚಂಡೀಗಢದಲ್ಲಿ ನಡೆಯಲಿರುವ ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ನಾಯಕಿಯಾಗಿ ಮುನ್ನಡೆಸುವ ಜವಾಬ್ದಾರಿ ಇದೀಗ ಶ್ರೇಯಾ ಹೆಗಲೇರಿದೆ.

ತಂದೆಯ ಕನಸು, ಮಗಳ ಪರಿಶ್ರಮ

ಮಗಳ ಕ್ರೀಡಾ ಆಸಕ್ತಿಗೆ ಆರಂಭದಿಂದಲೂ ಬೆಂಬಲವಾಗಿ ನಿಂತಿರುವ ತಂದೆ ಸಂತೋಷಕುಮಾರ, ಶ್ರೇಯಾ ಅವರ ಸಾಧನೆಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಶಾಲಾ-ಕಾಲೇಜು ಮಟ್ಟದ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಮಗಳು ಭಾಗವಹಿಸಿ ಸಾಧನೆ ಮಾಡುತ್ತಿದ್ದಂತೆ, ಕ್ರಿಕೆಟ್‌ನಲ್ಲಿ ಮತ್ತಷ್ಟು ಮುಂದುವರಿಯುವಂತೆ ಉತ್ತೇಜಿಸಿದ್ದಾರೆ.

ತಂದೆಯ ಪ್ರೋತ್ಸಾಹ ಹಾಗೂ ಕುಟುಂಬದ ಬೆಂಬಲದಿಂದ ಪ್ರೇರಣೆ ಪಡೆದ ಶ್ರೇಯಾ ನಿರಂತರ ಅಭ್ಯಾಸದ ಮೂಲಕ ತಮ್ಮ ಆಟವನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದ್ದಾರೆ. ಇದೀಗ ಬಿಸಿಸಿಐ ಟಿ-20 ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ.

ಹಲವು ಹಂತಗಳಲ್ಲಿ ತರಬೇತಿ

ವಿಜಯಪುರದಲ್ಲಿ ತರಬೇತುದಾರ ಮುರಳಿ ಬೀಳಗಿ ಅವರ ಮಾರ್ಗದರ್ಶನದಲ್ಲಿ ಕ್ರಿಕೆಟ್‌ನ ಶಿಸ್ತುಬದ್ಧ ತರಬೇತಿ ಆರಂಭಿಸಿದ ಶ್ರೇಯಾ, ಬಳಿಕ ಓಂ ಕ್ರಿಕೆಟ್ ಅಕಾಡೆಮಿ ಹಾಗೂ ಸ್ಪೋರ್ಟ್ಸ್ ಅರೇನಾದಲ್ಲೂ ತರಬೇತಿ ಪಡೆದಿದ್ದಾರೆ. ಸದ್ಯ ಬೆಂಗಳೂರಿನ ನೈಸ್ ಕ್ರಿಕೆಟ್ ಅಕಾಡೆಮಿಯಲ್ಲಿ ಅರ್ಜುನ್ ದೇವ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಲೀಗ್ ಪಂದ್ಯಗಳಲ್ಲಿ ಉತ್ತಮ ಕ್ಯಾಚ್ ಗಳು, ಸ್ಟಂಪಿಂಗ್ ಗಳ ಜತೆಗೆ ಬಿರುಸಿನ ಬ್ಯಾಟಿಂಗ್ ಮೂಲಕ ಆಯ್ಕೆ ಸಮಿತಿಯ ಗಮನ ಸೆಳೆದಿದ್ದಾರೆ. ಹಲವು ಪಂದ್ಯಗಳಲ್ಲಿ ನಿರ್ಣಾಯಕ ರನ್ ಗಳಿಸಿ ತಂಡದ ಇನ್ನಿಂಗ್ಸ್ ಗೆ ಮುನ್ನಡೆ ನೀಡಿರುವ ಅವರು, ಸಂಕಷ್ಟದಲ್ಲಿದ್ದ ತಂಡವನ್ನು ಗೆಲುವಿನ ದಡ ಸೇರಿಸಿದ ಸಾಧನೆಯನ್ನೂ ಮಾಡಿದ್ದಾರೆ.

ಅಂದು ರಾಜೇಶ್ವರಿ, ಇಂದು ಶ್ರೇಯಾ

ವಿಜಯಪುರದ ಹೆಮ್ಮೆಯ ಕ್ರಿಕೆಟಿಗರಾದ ರಾಜೇಶ್ವರಿ ಗಾಯಕವಾಡ್ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ನಲ್ಲೂ ಆಡಿದ್ದಾರೆ. ಇದೀಗ ಇದೇ ಜಿಲ್ಲೆಯ ಮತ್ತೊಬ್ಬ ಪ್ರತಿಭೆ ಶ್ರೇಯಾ ಚೌವ್ಹಾಣ್ ಮಹಿಳಾ ಕ್ರಿಕೆಟ್‌ನಲ್ಲಿ ಭರವಸೆಯ ಆಟಗಾರ್ತಿಯಾಗಿ ಮುನ್ನಡೆಯುತ್ತಿದ್ದಾರೆ.

ಕರ್ನಾಟಕದ 19 ವರ್ಷದೊಳಗಿನ ಮಹಿಳಾ ಟಿ-20 ತಂಡದ ನಾಯಕಿಯಾಗಿ ಆಯ್ಕೆಯಾಗಿರುವುದು ಶ್ರೇಯಾ ಅವರ ಕ್ರಿಕೆಟ್ ಪಯಣದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

ಶ್ರೇಯಾ ಚೌವ್ಹಾಣ್ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಟಿ-20 ತಂಡದ ನಾಯಕಿಯಾಗಿ ಆಯ್ಕೆಯಾಗಿರುವುದು ಸಂತಸದ ಸಂಗತಿ. ಹಿಂದಿನ ಪಂದ್ಯಗಳಲ್ಲಿ ಅವರು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಪ್ರತಿಯೊಂದು ಅಭ್ಯಾಸವನ್ನೂ ಅತ್ಯಂತ ಜವಾಬ್ದಾರಿಯಿಂದ ಕೈಗೊಂಡಿದ್ದಾರೆ. ಬ್ಯಾಟಿಂಗ್ ಜತೆಗೆ ವಿಕೆಟ್ ಕೀಪಿಂಗ್‌ನಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಅವರ ಪರಿಶ್ರಮ ಹಾಗೂ ನಾಯಕತ್ವ ಗುಣ ತಂಡಕ್ಕೆ ಬಲ ನೀಡಲಿದೆ ಎಂಬ ವಿಶ್ವಾಸವಿದೆ.

-ಅರ್ಜುನ್ ದೇವ ನಾಗೇಂದ್ರ, ನೈಸ್ ಕ್ರಿಕೆಟ್ ಕೋಚ್, ಬೆಂಗಳೂರು

share
ಅನಿಲ್‌ ಶಿಂಧೆ
ಅನಿಲ್‌ ಶಿಂಧೆ
Next Story
X