Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೀನುಗಾರರ ಬದುಕಿಗೂ ತಟ್ಟಿದ ಬರದ ಬಿಸಿ

ಮೀನುಗಾರರ ಬದುಕಿಗೂ ತಟ್ಟಿದ ಬರದ ಬಿಸಿ

ಬತ್ತಿದ ಕೆರೆ, ಮೀನುಗಳ ಸಾವು; ಆದಾಯವಿಲ್ಲದೆ ಕಂಗಾಲಾದ ಕುಟುಂಬಗಳು

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ30 Oct 2026 7:45 AM IST
share
ಮೀನುಗಾರರ ಬದುಕಿಗೂ ತಟ್ಟಿದ ಬರದ ಬಿಸಿ

ಯಾದಗಿರಿ : ಜಿಲ್ಲೆಯಲ್ಲಿ ಬರದ ಪರಿಣಾಮ ರೈತರ ಬದುಕಿಗೆ ಮಾತ್ರ ಸೀಮಿತವಾಗದೆ, ಇದೀಗ ಮೀನುಗಾರರ ಜೀವನೋಪಾಯಕ್ಕೂ ಹೊಡೆತ ನೀಡಿದೆ. ಮಳೆ ಕೊರತೆಯಿಂದ ಕೆರೆಗಳು ಬತ್ತಿಹೋಗಿದ್ದು, ನೀರಿನ ಅಭಾವದಿಂದ ಮೀನುಗಳು ಸಾವನ್ನಪ್ಪುತ್ತಿವೆ. ಇದರಿಂದ ಮೀನುಗಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರದ ನೆರವಿನ ನಿರೀಕ್ಷೆಯಲ್ಲಿವೆ.

ಯಾದಗಿರಿ ತಾಲೂಕಿನ ವರ್ಕನಳ್ಳಿ, ಮೈಲಾಪುರ ಸೇರಿದಂತೆ ಹಲವು ಗ್ರಾಮಗಳ ಕೆರೆಗಳು ನೀರಿಲ್ಲದೆ ಒಣಗಿ ಬಿರುಕು ಬಿಟ್ಟಿವೆ. ಪ್ರತಿವರ್ಷ ಮಳೆಗಾಲದಲ್ಲಿ ನೀರಿನಿಂದ ತುಂಬಿರುತ್ತಿದ್ದ ಕೆರೆಗಳಲ್ಲಿ ಈ ಬಾರಿ ನೀರಿನ ಮಟ್ಟ ಕುಸಿದಿದೆ. ಇದರಿಂದ ಮೀನುಗಳ ಸಂತತಿ ಕಡಿಮೆಯಾಗಿದ್ದು, ಉಳಿದ ಮೀನುಗಳೂ ನೀರಿನ ಅಭಾವ ಹಾಗೂ ಬಿಸಿಲಿನ ತಾಪಕ್ಕೆ ಬಲಿಯಾಗುತ್ತಿವೆ.

ಕೆರೆಗಳಲ್ಲಿ ಮೀನುಗಾರಿಕೆ ನಡೆಸಿ ಕುಟುಂಬ ನಿರ್ವಹಣೆ ಮಾಡುತ್ತಿದ್ದವರು ಮಳೆಗಾಲದಲ್ಲಿ ನೀರು ಸಂಗ್ರಹವಾದ ಬಳಿಕ ಉತ್ತಮ ಆದಾಯದ ನಿರೀಕ್ಷೆಯಲ್ಲಿರುತ್ತಿದ್ದರು. ಆದರೆ, ಈ ಬಾರಿ ಮಳೆಯ ಕೊರತೆಯಿಂದ ಕೆರೆಗಳು ಬತ್ತಿಹೋಗಿರುವುದರಿಂದ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. ಮೀನುಗಳ ಸಾವು ಮತ್ತು ನೀರಿನ ಮಟ್ಟ ಕುಸಿತದಿಂದ ಆದಾಯಕ್ಕೆ ಹೊಡೆತ ಬಿದ್ದಿದ್ದು, ದಿನನಿತ್ಯದ ಖರ್ಚುಗಳನ್ನು ನಿಭಾಯಿಸುವುದೂ ಕಷ್ಟವಾಗಿದೆ.

ಕೃಷಿ ಚಟುವಟಿಕೆಗಳ ಮೇಲೆ ಬರದ ಪರಿಣಾಮ ಬೀರುತ್ತಿರುವಂತೆಯೇ, ಕೆರೆ ಹಾಗೂ ಇತರ ಜಲಮೂಲಗಳನ್ನು ಅವಲಂಬಿಸಿರುವ ಮೀನುಗಾರರ ಬದುಕೂ ಅತಂತ್ರವಾಗಿದೆ. ಮೀನುಗಾರಿಕೆಗೆ ಅಗತ್ಯವಾದ ನೀರಿನ ಮೂಲಗಳೇ ಇಲ್ಲದಂತಾದರೆ ಜೀವನೋಪಾಯಕ್ಕೆ ಪರ್ಯಾಯ ಮಾರ್ಗ ಹುಡುಕಬೇಕಾದ ಅನಿವಾರ್ಯತೆ ಎದುರಾಗಿದೆ.

ಕೆರೆಗಳು ಬತ್ತಿಹೋಗಿ ಮೀನುಗಳು ಸಾವನ್ನಪ್ಪಿರುವುದರಿಂದ ಆರ್ಥಿಕ ನಷ್ಟ ಅನುಭವಿಸುತ್ತಿದ್ದೇವೆ ಎಂದು ಮೀನುಗಾರರು ಅಳಲು ತೋಡಿಕೊಂಡಿದ್ದಾರೆ. ಸರಕಾರವು ಬತ್ತಿಹೋದ ಕೆರೆಗಳ ಸ್ಥಿತಿಗತಿ ಪರಿಶೀಲಿಸಿ, ಮೀನುಗಳ ಸಾವಿನಿಂದ ಉಂಟಾದ ನಷ್ಟವನ್ನು ಅಂದಾಜಿಸಬೇಕು. ಸಂಕಷ್ಟದಲ್ಲಿರುವ ಮೀನುಗಾರರ ಕುಟುಂಬಗಳಿಗೆ ಸೂಕ್ತಪರಿಹಾರ ಘೋಷಿಸಿ, ಜೀವನೋಪಾಯ ಮುಂದುವರಿಸಲು ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿವರ್ಷ ಮೀನುಗಾರಿಕೆ ವೃತ್ತಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಆದರೆ, ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ನದಿ, ಕೆರೆಗಳು ಬತ್ತಿಹೋಗುತ್ತಿವೆ. ನೀರಿನ ಕೊರತೆಯಿಂದ ಮೀನುಗಳೂ ಸಾವನ್ನಪ್ಪುತ್ತಿವೆ. ಇದರಿಂದ ಮೀನುಗಾರಿಕೆ ನಡೆಸಲು ಸಾಧ್ಯವಾಗದೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಸರಕಾರ ನಮ್ಮ ಸಂಕಷ್ಟವನ್ನು ಪರಿಗಣಿಸಿ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು.

-ವಿಶಾಲ್ ಎಸ್., ಮೀನುಗಾರ

ಮೀನುಗಾರರೂ ಕೃಷಿಕರಂತೆಯೇ ಜೀವನೋಪಾಯಕ್ಕಾಗಿ ಪ್ರಕೃತಿಯನ್ನೇ ಅವಲಂಬಿಸಿದ್ದಾರೆ. ಈ ಬಾರಿ ಮಳೆಯ ಕೊರತೆಯಿಂದ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿ ನಷ್ಟ ಅನುಭವಿಸಿದ್ದಾರೆ. ಅದೇ ರೀತಿ ಕೆರೆಗಳು ಬತ್ತಿಹೋಗಿರುವುದರಿಂದ ಮೀನುಗಾರರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೀನುಗಳ ಸಾವು ಹಾಗೂ ಮೀನುಗಾರಿಕೆಗೆ ನೀರಿಲ್ಲದ ಕಾರಣ ಅವರ ಬದುಕು ದುಸ್ತರವಾಗಿದೆ. ಸರಕಾರ ಕೂಡಲೇ ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ಸೂಕ್ತ ಪರಿಹಾರ ಘೋಷಿಸಬೇಕು.

-ರಾಚಣ್ಣಗೌಡ ಮುದ್ನಾಳ, ಬಿಜೆಪಿ ಹಿರಿಯ ಮುಖಂಡ

Tags

fishermendroughtheat
share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X