Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೆಟ್ಟಕೋಟೆ ರೈತನ ಹೊಸ ಪ್ರಯತ್ನಕ್ಕೆ ಒಲಿದ...

ಬೆಟ್ಟಕೋಟೆ ರೈತನ ಹೊಸ ಪ್ರಯತ್ನಕ್ಕೆ ಒಲಿದ ಪಿಂಕ್ ತಳಿ

► ತೈವಾನ್ ಪಿಂಕ್ ಸೀಬೆ ಬೆಳೆಗೆ ನರೇಗಾ ಸಾಥ್

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.29 Jan 2024 12:53 PM IST
share
ಬೆಟ್ಟಕೋಟೆ ರೈತನ ಹೊಸ ಪ್ರಯತ್ನಕ್ಕೆ ಒಲಿದ ಪಿಂಕ್ ತಳಿ

ಹೊಸಕೋಟೆ, ಜ.28: ಕೃಷಿಯಲ್ಲಿ ಹೊಸ ಆವಿಷ್ಕಾರಗಳಿಗೆ ಹೆಸರುವಾಸಿಯಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತನೊಬ್ಬರು ಎಲ್ಲೋ ದೂರದ ತೈವಾನ್ ತಂತ್ರಜ್ಞಾನದ ಸೀಬೆಹಣ್ಣು ಬೆಳೆಯಲ್ಲಿ ಭರ್ಜರಿ ಇಳುವರಿ ಪಡೆದು ಗಮನ ಸೆಳೆದಿದ್ದಾರೆ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಚನ್ನೇಗೌಡ ಎಂಬವರಿಗೆ ಭರ್ಜರಿ ಇಳುವರಿ ಪಡೆಯಲು ನರೇಗಾ ಯೋಜನೆ ಸಾಥ್ ನೀಡಿತ್ತು ಎಂಬುದು ವಿಶೇಷ.

ಕೃಷಿ ಭೂಮಿ ರೈತರ ಪ್ರಯೋಗ ಶಾಲೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಹಾದಿಯಲ್ಲಿ ಸಾಗಿದ ಚನ್ನೇಗೌಡ ಅವರು, ತಮ್ಮ 2 ಎಕರೆ ಜಮೀನಿನಲ್ಲಿ ತೈವಾನ್ ಪಿಂಕ್ ತಳಿಯ ಸೀಬೆ(ಚೇಪೆ ಹಣ್ಣು) ಬೆಳೆದು ಆದಾಯ ಕಂಡುಕೊಂಡಿದ್ದಾರೆ. ಹೆಚ್ಚು ನೀರು ಬಯಸದ ಸೀಬೆ ಬಯಲು ಸೀಮೆಗೆ ಹೇಳಿ ಮಾಡಿಸಿದ ಬೆಳೆ. ದೇವನಹಳ್ಳಿ ತಾಲೂಕಿನಲ್ಲಿ ರೇಷ್ಮೆ, ಗುಲಾಬಿ, ದ್ರಾಕ್ಷಿ ದಾಳಿಂಬೆ ಸೇರಿದಂತೆ ಇತರ ತೋಟಗಾರಿಕೆ ಬೆಳೆ ಬೆಳೆಯುವವರೇ ಹೆಚ್ಚು. ಆದರೆ, ಸೀಬೆ ಬೆಳೆಯುವವರ ಸಂಖ್ಯೆ ತೀರಾ ಕಡಿಮೆ. ನರೇಗಾ ಸಹಕಾರದೊಂದಿಗೆ ತೈವಾನ್ ಸೀಬೆ ಬೆಳೆದ ಈ ರೈತನ ತೋಟದ ಇಳುವರಿ ಕಂಡು ಅಕ್ಕಪಕ್ಕ ತೋಟದವರು ಈ ಬೆಳೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತೋಟಗಾರಿಕೆ ಇಲಾಖೆ ಸಹಕಾರದೊಂದಿಗೆ ನರೇಗಾ ಯೋಜನೆಯಡಿ ಸೌಲಭ್ಯ ಪಡೆದ ಈ ರೈತ, ತೈವಾನ್ ಪಿಂಕ್ ತಳಿಯ ಸೀಬೆ ಸಸಿಗಳನ್ನು ಕೋಲ್ಕತಾ ನಗರದಿಂದ ಪ್ರತೀ ಸಸಿಗೆ 120 ರೂ.ನಂತೆ ಹಣ ಪಾವತಿಸಿ ಡೋರ್ ಡೆಲಿವರಿ ಪಡೆದು, ತನ್ನ 2 ಎಕರೆಯಲ್ಲಿ ಈ ತಳಿ ನೆಟ್ಟು ಬೆಳೆದಿದ್ದು, ಭರ್ಜರಿ ಫಸಲು ಕೈಗೆ ಸಿಕ್ಕಿದೆ.

ನರೇಗಾ ಯೋಜನೆ ರೈತರ ಆರ್ಥಿಕ ಪ್ರಗತಿಗೆ ಆಶಾಕಿರಣವಾಗಿದೆ. ಅಧಿಕ ಸಾಂದ್ರ ಪದ್ಧತಿಯಲ್ಲಿ ನಾಟಿ ಮಾಡಿದ್ದು, ತೈವಾನ್ ಪಿಂಕ್ ತಳಿಯ 1,500

ಸೀಬೆ ಸಸಿಗಳನ್ನು ನಾಟಿ ಮಾಡಿ ಹನಿ ನೀರಾವರಿ ಪದ್ಧತಿ ಅಳವಡಿಸಿದ್ದಾರೆ. ಗಿಡಗಳು ಕಾಯಿ ಬಿಟ್ಟು ತಾಳಿಕೊಳ್ಳುವ ಸಾಮರ್ಥ್ಯ ಬರುವವರೆಗೂ ಅಂದರೆ 9ತಿಂಗಳಿಂದ ಹಿಂದೆಯನ್ನು ಕಿತ್ತು ಹಾಕಿದ್ದರು. 3 ತಿಂಗಳ ಹಿಂದೆಯಷ್ಟೇ ಬೆಳೆದ ಒಂದೆಗಳನ್ನು ಉಳಿಸಿಕೊಂಡಿದ್ದಾರೆ. ಸೀಬೆ ಹಣ್ಣನ್ನು ಊಜಿ ನೊಣ ಹಾಗೂ ಕೀಟಗಳಿಂದ ರಕ್ಷಿಸಿಕೊಳ್ಳಲು ಸ್ಪಾಂಜ್ ಅಳವಡಿಸಿದ್ದಾರೆ. ಇದರಿಂದ ಕಾಯಿ ಹಾಳಾಗುವುದು ಕಡಿಮೆ. ಪಕ್ಷಿಗಳ ಕಾಟದಿಂದಲೂ ಹಣ್ಣುಗಳನ್ನು ರಕ್ಷಿಸಿಕೊಳ್ಳಲು ಅನುಕೂಲವಾಗಿದೆ.

ಎಲ್ಲೆಲ್ಲಿ ಮಾರಾಟ?

ತೈವಾನ್ ಪಿಂಕ್ ವಾರ್ಷಿಕವಾಗಿ 2 ಬೀಡುಗಳಲ್ಲಿ ಒಟ್ಟಾರೆ 8-10ಟನ್ ಹಣ್ಣನ್ನು ಕಟಾವು ಮಾಡಿ ಬೆಂಗಳೂರು, ಚೆನ್ನೈ, ಹೈದರಾಬಾದ್ ನಗರಗಳಿಗೆ ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್‌ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಸೀಬೆ ಹಣ್ಣು 100-250 ಗ್ರಾಂ ತೂಗುವುದೇ ಹೆಚ್ಚು. ಈ ತೈವಾನ್ ತಳಿಯ ಪ್ರತೀ ಹಣ್ಣು ಕನಿಷ್ಟ 600 ಗ್ರಾಂನಿಂದ 1 ಕೆಜಿ ತೂಕವಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ 85-90 ರೂ. ದರವಿದೆ. ಉತ್ತಮ ಬೇಡಿಕೆ ಇರುವುದರಿಂದ ಹೆಚ್ಚಿನ ಆದಾಯ ಲಭಿಸುತ್ತಿದೆ. ಸೀಬೆ ಬೆಳೆಯಲ್ಲಿ ವರ್ಷಕ್ಕೆ 2 ಫಸಲು ಪಡೆಯಬಹುದು. ಫಸಲು ಬಂದಾಗ ವಾರಕ್ಕೆ 1ಬಾರಿ ಇಳುವರಿ ಕಟಾವಿಗೆ ಸಿಗುತ್ತದೆ.

ಬೇರೆ ಬೆಳೆಗಳಿಗೆ ಹೋಲಿಸಿದರೆ ಸೀಬೆ ಕೃಷಿಯ ನಿರ್ವಹಣೆ ವೆಚ್ಚ ಕಡಿಮೆ ಎಂಬುದು ಅವರ ಅನುಭವ. ಸಾವಯವ ಗೊಬ್ಬರವನ್ನೇ ಬಳಸುತ್ತಿದ್ದಾರೆ. ಈ ಗಿಡಕ್ಕೆ ರಸಗೊಬ್ಬರ ಹಾಕಬೇಕು. ಇಲ್ಲವಾದರೆ ಗಿಡಗಳು ಸತ್ತು ಹೋಗುತ್ತವೆ. ಸೀಬೆ ಫಸಲು ಸರಿಯಾಗಿ ಬರುವುದಿಲ್ಲ ಎಂದು ಗಿಡ ಪೂರೈಸಿದವರು ಹೇಳಿದ್ದರು. ಆದರೆ, ನಾನು ಯಾವುದೇ ಕಾರಣಕ್ಕೂ ರಸಗೊಬ್ಬರ ಹಾಕುವುದಿಲ್ಲ ಎಂದು ನಿರ್ಧರಿಸಿ, ಸಾವಯವ ಗೊಬ್ಬರ ಹಾಕುತ್ತಾ ಬಂದಿದ್ದೇನೆ. ಫಸಲು ಚೆನ್ನಾಗಿದೆ.

?ಚನ್ನೇಗೌಡ | ರೈತ

ಜಿಲ್ಲೆಯ ತೋಟಗಾರಿಕೆ ಬೆಳೆಗಳನ್ನು ಮಾವು, ಗುಲಾಬಿ, ಸೀಬೆ, ದ್ರಾಕ್ಷಿ, ನುಗ್ಗೆ ಉತ್ತೇಜಿಸಲು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಣ್ಣ ರೈತರಿಗೆ ಜೀವಿತಾವಧಿಯಲ್ಲಿ

5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು.

?ಡಾ. ಅನುರಾಧ ಕೆ.ಎನ್ | ಜಿಪಂ ಸಿಇಒ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X