Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕರ್ನಾಟಕದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ....

ಕರ್ನಾಟಕದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಎಚ್. ನರಸಿಂಹಯ್ಯ

ಪವನ್ ಕಲ್ಯಾಣ್ ಡಿ.ಜಿ. ಅಂಗಜಾಲಪವನ್ ಕಲ್ಯಾಣ್ ಡಿ.ಜಿ. ಅಂಗಜಾಲ31 Jan 2024 10:19 AM IST
share
ಕರ್ನಾಟಕದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಎಚ್. ನರಸಿಂಹಯ್ಯ

ಕರುನಾಡು ಕಂಡ ಶ್ರೇಷ್ಠ ಶಿಕ್ಷಣ ತಜ್ಞ, ವಿಚಾರವಾದಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಅಪ್ಪಟ ಗಾಂಧಿವಾದಿ ಹಾಗೂ ಪದ್ಮ ಭೂಷಣ ಡಾ.ಎಚ್.ನರಸಿಂಹಯ್ಯರವರು ಗತಿಸಿ ಇಂದಿಗೆ 19 ವರ್ಷ.

ಅವಿಭಜಿತ ಕೋಲಾರ ಜಿಲ್ಲೆಯ (ಪ್ರಸಕ್ತ ಚಿಕ್ಕಬಳ್ಳಾಪುರ ಜಿಲ್ಲೆ) ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮದಲ್ಲಿ 1920 ಜೂನ್ 6 ರಂದು ಬಡ ಹಿಂದುಳಿದ ವರ್ಗದ ಕುಟುಂಬದಲ್ಲಿ ಹನುಮಂತಪ್ಪ ಮತ್ತು ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದ ಎಚ್ಚೆನ್ ಅವರು ಈ ನಾಡಿಗಾಗಿ ಅವಿರತ ದುಡಿದವರು.

ತಮ್ಮ ಸರಳ ಬದುಕು, ಉದಾತ್ತ ಮತ್ತು ಪ್ರಖರ ವೈಚಾರಿಕ ಚಿಂತನಾ ಮನೋಭಾವದಿಂದಲೇ ಜನಮಾನಸದಲ್ಲಿ ಸ್ಥಾನ ಪಡೆದಿರುವ ಎಚ್ಚೆನ್ ಸತ್ಯನಿಷ್ಠುರವಾದ ವೈಚಾರಿಕ ಬದ್ಧತೆಯ ಬದುಕಿನ ಮೂಲಕವೇ ಶಿಕ್ಷಣ ಕ್ಷೇತ್ರದಲ್ಲಿ ಮೇರು ಪರ್ವತ ವ್ಯಕ್ತಿತ್ವವಾದವರು.

ವಿದೇಶದಲ್ಲಿ ಉನ್ನತ ವ್ಯಾಸಂಗ, ಉನ್ನತ ಹುದ್ದೆಗಳು, ಅಗಣಿತ ಗೌರವಗಳು ಅರಸಿ ಬಂದರೂ ಬದುಕಿನುದ್ದಕ್ಕೂ ಯಾವತ್ತೂ ಆಡಂಬರ ತೋರದೆ, ಗಾಂಧಿ ಮಾರ್ಗದ ಸರಳ ಬದುಕು ಮೈಗೂಡಿಸಿಕೊಂಡು ಇಡೀ ಜೀವನ ಶಿಕ್ಷಣಕ್ಕೆ ಮೀಸಲಿಟ್ಟು, ಸಂತನ ತೆರದಿ ಬದುಕಿದವರು ಎಚ್ಚೆನ್.

ವಿದ್ಯಾರ್ಥಿ ದೆಸೆಯಲ್ಲಿ ವಿವಿಧ ಉಚಿತ ವಿದ್ಯಾರ್ಥಿನಿಲಯಗಳಲ್ಲಿದ್ದ ನರಸಿಂಹಯ್ಯ ಅವರು ಅಧ್ಯಾಪಕರಾದ ಮೇಲೂ 1946ರಿಂದ ಕೊನೆಯುಸಿರೆಳೆಯುವವರೆಗೂ (2005ರ ಜನವರಿ 31) ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನ ವಿದ್ಯಾರ್ಥಿ ನಿಲಯದ ಪುಟ್ಟ ಕೋಣೆಯಲ್ಲಿಯೇ ಬದುಕಿದ್ದು ಆದರ್ಶದ ಅತ್ಯುನ್ನತ ಮಾದರಿಯಾಗಿದೆ.

ಅವಿವಾಹಿತರಾಗಿದ್ದ ನರಸಿಂಹಯ್ಯನವರು ವಿಜ್ಞಾನ ಮತ್ತು ವೈಜ್ಞಾನಿಕ ವಿಧಾನದಲ್ಲಿ ದೃಢವಾದ ನಂಬಿಕೆ ಹೊಂದಿದ್ದರು. ಶೂನ್ಯದಿಂದ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ಜನರ ಅಜ್ಞಾನವನ್ನು ಬಂಡವಾಳವನ್ನಾಗಿಸಿಕೊಂಡು ಶೋಷಣೆ ಮಾಡುವ ಮೌಢ್ಯದ ವಿರುದ್ಧ ಸತತ ಹೋರಾಡುತ್ತ, ಪಟ್ಟಭದ್ರ ಹಿತಾಸಕ್ತಿಗಳಿಂದ ಮುಗ್ಧ ಜನರನ್ನು ರಕ್ಷಿಸಬೇಕು ಎಂದು ಪ್ರತಿಪಾದಿಸಿದರು.

ಕುಗ್ರಾಮದ ಬಡ ಪೋಷಕರ ದಟ್ಟ ದಾರಿದ್ರ್ಯದ ನಡುವೆಯೂ ತಮ್ಮ ಪ್ರತಿಭೆಯಿಂದಲೇ ಬೆಳೆದ ನರಸಿಂಹಯ್ಯ ಅವರು, ತಮ್ಮ 85 ವರ್ಷಗಳ ಬದುಕಿನಲ್ಲಿ 62 ವರ್ಷಗಳ ಕಾಲ ವಿದ್ಯಾರ್ಥಿನಿಲಯಗಳಲ್ಲೇ ಜೀವನ ನಡೆಸಿದವರು. ಅವರ ಹುಟ್ಟೂರಿನಲ್ಲಿ ಪುಟ್ಟದೊಂದು ಮನೆಯನ್ನು ಹೊರತು ಪಡಿಸಿದರೆ ಅವರ ಕುಟುಂಬಕ್ಕೆ ಒಂದಿಂಚು ಭೂಮಿ ಸಹ ಇಲ್ಲ.

ವಾರಸುದಾರರಿಲ್ಲದ ಅವರ ಮನೆ ಶಿಥಿಲಾವಸ್ಥೆಯಿಂದ ಕುಸಿದು ಬೀಳುವ ಹಂತ ತಲುಪಿತ್ತು. ನಂತರ ಅವರ ಜನ್ಮ ಶತಮಾನೋತ್ಸವದ ನಂತರ ಸ್ಥಳೀಯ ಶಾಸಕ ಶಿವ ಶಂಕರ್ ಮನೆ ಮರು ನಿರ್ಮಾಣ ಮಾಡಿದ್ದಾರೆ.

ಬಾಲ್ಯ ಜೀವನ ಪಥ

ಹುಟ್ಟೂರು ಹೊಸೂರಿನಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ ಮುಗಿಸಿ, 1935ರಲ್ಲಿ ಬೆಂಗಳೂರಿನ ನ್ಯಾಷನಲ್ ಹೈಸ್ಕೂಲಿಗೆ ಸೇರಿದ ನರಸಿಂಹಯ್ಯ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದ ಬಿ.ಎಸ್ಸಿ. (ಆನರ್ಸ್) ಮತ್ತು ಎಂ.ಎಸ್ಸಿ . ಶಿಕ್ಷಣ ಪಡೆದರು.

1946ರಲ್ಲಿ ಬೆಂಗಳೂರು ಬಸವನಗುಡಿ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗುವ ಜತೆಗೆ 12 ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. 1957ರಿಂದ 1960ರ ವರೆಗೆ ಅಮೆರಿಕದ ಓಹಿಯೊ ಸ್ವೇಟ್ ವಿಶ್ವವಿದ್ಯಾನಿಲಯದಲ್ಲಿ ಪರಮಾಣು ಭೌತ ವಿಜ್ಞಾನ ವಿಷಯದಲ್ಲಿ ಪಿ.ಎಚ್‌ಡಿ. ಮಾಡಿದರು.

1962ರಲ್ಲಿ ವಿಜ್ಞಾನದ ಮಹತ್ವ ಪರಿಚಯಿಸಲೆಂದು ಬೆಂಗಳೂರು ಸೈನ್ಸ್ ಫೋರಂ ಹುಟ್ಟು ಹಾಕಿ ಅದರ ಸಂಸ್ಥಾಪಕ ಅಧ್ಯಕ್ಷರಾದರು. ಅದೇ ವರ್ಷ ಸಂಗೀತ, ನಾಟಕ, ನೃತ್ಯ ಮುಂತಾದ ಲಲಿತಕಲೆಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಬೆಂಗಳೂರಿನ ಲಲಿತ ಕಲಾ ಪರಿಷತ್ ಸ್ಥಾಪಿಸಿ, ಅಧ್ಯಕ್ಷರಾಗಿದ್ದರು.

1967-68ರಲ್ಲಿ ಸದರನ್ ಇಲಿನಾಯ್ಸ್ ವಿಶ್ವವಿದ್ಯಾನಿಲಯದಲ್ಲಿ ಒಂದು ವರ್ಷಕಾಲ ಸಂದರ್ಶಕ ಪ್ರಾಧ್ಯಾಪಕರಾಗಿದ್ದ ನರಸಿಂಹಯ್ಯ ಅವರು 1972ರಿಂದ 1977ರ ವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿಯಾಗಿ ವಿಶ್ವವಿದ್ಯಾನಿಲಯದ ಅಭಿವೃದ್ಧಿಗೆ ಅಹರ್ನಿಶಿ ಶ್ರಮಿಸಿದರು.

ಇದರ ನಡುವೆಯೇ 1975ರಿಂದ ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕದ ಅಧ್ಯಕ್ಷರಾಗಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡಿದರು. 1980ರಲ್ಲಿ ರಾಜ್ಯ ಸರಕಾರ ಇವರನ್ನು ವಿಧಾನ ಪರಿಷತ್ತಿಗೆ ನಾಮಕರಣ ಸದಸ್ಯರನ್ನಾಗಿ ಮಾಡಿತ್ತು. 1995ರಲ್ಲಿ ಕೆಲಕಾಲ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.

ದಣಿವರಿಯದ ಈ ಸಾಧಕನಿಗೆ ಹತ್ತು ಹಲವು ಪ್ರಶಸ್ತಿ ಗೌರವಗಳು ಅರಸಿ ಬಂದಿವೆ. ಈ ಪೈಕಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1968), ಪದ್ಮಭೂಷಣ (1984) ಪ್ರಮುಖವಾದವುಗಳು.

85 ವರ್ಷಗಳ ಕಾಲ ಖಾದಿ ಬದುಕು 13 ವರ್ಷದವರಿದ್ದಾಗಲೇ ಖಾದಿ ತೊಡಲು ಪ್ರಾರಂಭಿಸಿದ ನರಸಿಂಹಯ್ಯನವರು, ತಮ್ಮ ಕೊನೆ ಉಸಿರಿರುವವರೆಗೂ ಖಾದಿಯ ಸರಳ ಉಡುಗೆಯಲ್ಲೇ ಸಂತನಂತೆ ಬದುಕಿದರು.

ಬೆಂಗಳೂರಿನ ನ್ಯಾಷನಲ್ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದ ಅವರಿಗೆ ರಾಷ್ಟ್ರೀಯತೆ ವಿಚಾರ ಮೊಳೆಯುತ್ತದೆ. ಸರಳತೆ ಹಾಗೂ ದೃಢ ದೇಶ ಪ್ರೇಮದ ಗಾಂಧೀಜಿ ಅವರ ಬದುಕು ಇವರ ಮೇಲೆ ಆಳವಾದ ಪ್ರಭಾವ ಬೀರಿತ್ತು.

ಕಾಲೇಜು ದಿನಗಳಲ್ಲಿ ಗಾಂಧೀಜಿ ಅವರಿಂದ ಪ್ರೇರಿತರಾಗಿ 1942ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದರ ಪರಿಣಾಮವಾಗಿ ಬೆಂಗಳೂರು, ಮೈಸೂರು ಮತ್ತು ಪುಣೆಯ ಯರವಾಡ ಜೈಲಿನಲ್ಲಿ ಒಟ್ಟು ಸುಮಾರು 9 ತಿಂಗಳ ಕಾರಾಗೃಹವಾಸ ಅನುಭವಿಸಿದ್ದರು. ಪರಿಣಾಮ, ಎರಡು ವರ್ಷಗಳ ವಿದ್ಯಾಭ್ಯಾಸ ನಿಲ್ಲಿಸಬೇಕಾಗಿ ಬಂದರೂ ಧೃತಿಗೆಡದವರು ಎಚ್ಚೆನ್.

ಎಚ್ಚೆನ್ ಅವರ ಬದುಕಿನ ಆದರ್ಶ ಮಾರ್ಗ ಮತ್ತು ವೈಚಾರಿಕತೆ ಪ್ರಜ್ಞೆ ಈಗಿನ ಯುವಕರಿಗೆ ಪಾಠವಾಗಬೇಕಾಗಿದೆ.

share
ಪವನ್ ಕಲ್ಯಾಣ್ ಡಿ.ಜಿ. ಅಂಗಜಾಲ
ಪವನ್ ಕಲ್ಯಾಣ್ ಡಿ.ಜಿ. ಅಂಗಜಾಲ
Next Story
X