Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಲಿ

ರಾಷ್ಟ್ರಪತಿಗಳು ಮಧ್ಯಪ್ರವೇಶಿಸಲಿ

ವಾರ್ತಾಭಾರತಿವಾರ್ತಾಭಾರತಿ16 July 2026 10:54 AM IST
share
ರಾಷ್ಟ್ರಪತಿಗಳು ಮಧ್ಯಪ್ರವೇಶಿಸಲಿ

ನೀಟ್ ಪರೀಕ್ಷೆಯೂ ಸೇರಿ ಹಲವು ಪರೀಕ್ಷೆಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆಯ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ವಿರೋಧಿಸಿ ದಿಲ್ಲಿಯ ಜಂತರ್‌ಮಂಥರ್‌ನಲ್ಲಿ ಸೋನಮ್ ವಾಂಗ್ಚುಕ್ ಅವರು ಉಪವಾಸ ಸತ್ಯಾಗ್ರಹ ಕೈಗೊಂಡು ಹದಿನೆಂಟು ದಿನಗಳು ದಾಟಿವೆ. ಆದರೆ ಇದುವರೆಗೂ ಸರಕಾರ ಯಾವ ಸ್ಪಂದನವನ್ನೂ ಮಾಡಿಲ್ಲ. ಅವರ ಆರೋಗ್ಯ ಕ್ಷೀಣಿಸುತ್ತಿದ್ದು ಸರಕಾರ ತಕ್ಷಣ ಅವರ ಮನವಿಗೆ ಕಿವಿಗೊಟ್ಟು ಅವರ ಪ್ರಾಣಕ್ಕೆ ಸಂಚಕಾರವಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಈ ವೈಫಲ್ಯದ ಪರಿಣಾಮವಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಅತೀವ ದುಃಖದ ಸಂಗತಿಯಾಗಿದ್ದು ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ಅತ್ಯಂತ ಅಮಾನವೀಯ ನಡೆಯಾಗಿದೆ. ಸೋನಮ್ ವಾಂಗ್ಚುಕ್ ಅವರ ಆಗ್ರಹವು, ದೇಶದ ಎಲ್ಲಾ ಪೋಷಕರು ಮತ್ತು ವಿದ್ಯಾರ್ಥಿಗಳ ಆಗ್ರಹವೂ ಆಗಿದೆ. ಉನ್ನತ ಶಿಕ್ಷಣದ ಸಂಪೂರ್ಣ ವ್ಯವಸ್ಥೆಯೇ ಕುಸಿದು ಹೋಗಿದ್ದು ಇದನ್ನು ತಕ್ಷಣ ಸರಿಪಡಿಸಿ ನಾಗರಿಕರಿಗೆ ನ್ಯಾಯ ಒದಗಿಸಬೇಕಾದದ್ದು ಚುನಾಯಿತ ಸರಕಾರಗಳ ಕರ್ತವ್ಯವಾಗಿದ್ದು ಇದಕ್ಕೆ ಕುರುಡು/ಕಿವುಡಾಗಿ ವರ್ತಿಸುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಶಿಕ್ಷಣ ವ್ಯವಸ್ಥೆಯ ಖಾಸಗೀಕರಣದಿಂದ ಕೈಗೆಟುಕದಿರುವಂತಾಗಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಶಿಕ್ಷಣದ ಸೀಟು ಲಭ್ಯತೆಯ ಅವಕಾಶವನ್ನು ವಿಕೇಂದ್ರೀಕರಣದಿಂದ ಕೇಂದ್ರೀಕರಣಗೊಳಿಸಿ ಅವಕಾಶಗಳ ಸಮತೋಲನವನ್ನು ಹದಗೆಡಿಸಿರುವುದು ನಡೆಯುತ್ತಿದೆ. ಸುಧಾರಣೆಗಿಂತಲೂ ಅವ್ಯವಸ್ಥೆ ಮತ್ತು ಅದರೆಡೆಗಿನ ನಿರ್ಲಕ್ಷ್ಯವನ್ನು ಭಾರತ ಸರಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಸಂಬಂಧಪಟ್ಟ ಮಂತ್ರಿಗಳ ಕಾರ್ಯಕ್ಷಮತೆ ಸಂಶಯಕ್ಕೀಡಾಗಿದ್ದು ಪ್ರತಿಭಟನಾಕಾರರ ಬೇಡಿಕೆಗಳು ನ್ಯಾಯಬದ್ಧವಾಗಿದೆ. ಈ ಕಾರಣದಿಂದ ಸರಕಾರವು ತಕ್ಷಣವೇ ಪ್ರತಿಭಟನಾಕಾರರ ಜೊತೆಗೆ ಮಾತುಕತೆ ಆರಂಭಿಸಿ ಬೇಡಿಕೆಗಳ ಕಡೆಗೆ ಗಮನ ಹರಿಸಿ ಪ್ರಜೆಗಳ ಅಹವಾಲನ್ನು ಗೌರವಿಸಬೇಕು ಮತ್ತು ಇದಕ್ಕಾಗಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ.

1. ಸೋನಮ್ ವಾಂಗ್ಚುಕ್ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿ ಕೂಡಲೇ ಮಾತುಕತೆ ಆರಂಭಿಸಬೇಕು.

2. ಪರೀಕ್ಷಾ ಅಕ್ರಮಗಳನ್ನು ಸರಿಯಾಗಿ ತನಿಖೆ ನಡೆಸಿ ತಕ್ಷಣದಿಂದಲೇ ಸುಧಾರಣೆಗಳನ್ನು ಮಾಡಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು.

3. ನೀಟ್ ಪರೀಕ್ಷೆಗಳನ್ನು ರದ್ದು ಪಡಿಸಿ ಪ್ರತೀ ರಾಜ್ಯಕ್ಕೂ ನ್ಯಾಯ ಸಲ್ಲುವಂತೆ ವಿಕೇಂದ್ರೀಕರಣ ಮಾಡಿ ಮುಂದೆ ಇಂತಹ ಪರಿಸ್ಥಿತಿಗಳು ನಿರ್ಮಾಣವಾಗದಂತೆ ನೋಡಿಕೊಳ್ಳಬೇಕು.

4. ಹೆಚ್ಚು ಹೆಚ್ಚು ಸರಕಾರಿ ಕಾಲೇಜುಗಳನ್ನು ತೆರೆದು, ನಿಪುಣ ಅಧ್ಯಾಪಕ ವರ್ಗಗಳ ನೇಮಕಾತಿ ಮಾಡಬೇಕು.

5. ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅವಕಾಶ ಹಾಗೂ ಉದ್ಯೋಗದ ಅವಕಾಶವನ್ನು ಹೆಚ್ಚಿಸುವುದಕ್ಕಾಗಿ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ ನಿಗದಿ ಪಡಿಸಬೇಕು.

ಕರ್ನಾಟಕದ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿ ಯುವಜನರು, ಸಾಮಾಜಿಕ ಕಾರ್ಯಕರ್ತರು, ಗೃಹಿಣಿಯರು ಮತ್ತು ಹಲವು ವಲಯದ ಸಹಿ ಹಾಕಿರುವ 250ಕ್ಕೂ ಹೆಚ್ಚಿನ ಪ್ರಜೆಗಳ ಪರವಾಗಿ

-ಡಾ. ಸಬಿತಾ ಬನ್ನಾಡಿ

ನಿವೃತ್ತ ಪ್ರಾಧ್ಯಾಪಕರು ಹಾಗೂ ಲೇಖಕರು

ಶಿವಮೊಗ್ಗ

Tags

President
share
ವಾರ್ತಾಭಾರತಿ
ವಾರ್ತಾಭಾರತಿ
Next Story
X