Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ...

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ತುಂಗಭದ್ರ ಜಲಾಶಯ : ನೂತನ ಕ್ರಸ್ಟ್‌ ಗೇಟ್‌ಗಳ ಲೋಕಾರ್ಪಣೆ

ಮುಹಮ್ಮದ್ ಅಖೀಲ್ ಉಡೇವುಮುಹಮ್ಮದ್ ಅಖೀಲ್ ಉಡೇವು26 Jun 2026 10:26 AM IST
share
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ತುಂಗಭದ್ರ ಜಲಾಶಯ : ನೂತನ ಕ್ರಸ್ಟ್‌ ಗೇಟ್‌ಗಳ ಲೋಕಾರ್ಪಣೆ
► ಮೂರು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಜಲಶಕ್ತಿ ಸಚಿವರ ಉಪಸ್ಥಿತಿ ► 30 ಟಿಎಂಸಿ ನೀರು ಉಳಿಸಲು ಮೂರು ರಾಜ್ಯಗಳ ಒಪ್ಪಿಗೆ: ಯೋಜನೆ ರೂಪಿಸಲು ತೀರ್ಮಾನ

ಕೊಪ್ಪಳ : ಲಕ್ಷಾಂತರ ರೈತರು ಮತ್ತು ಜನರ ಜೀವನಾಡಿಯಾದ ತುಂಗಭದ್ರಾ ಜಲಾಶಯದ ಹಳೆಯ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಬದಲಿಸಲಾಗಿದ್ದು, ಇದರ 17,18,19 ಮತ್ತು 20ನೇ ಕ್ರಸ್ಟ್ ಗೇಟ್‌ಗಳನ್ನು ಎತ್ತುವ ಮೂಲಕ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಜಲಶಕ್ತಿ ಸಚಿವರು ನೂತನ ಗೇಟ್‌ಗಳನ್ನು ಲೋಕಾರ್ಪಣೆ ಮಾಡಿದರು.

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಸೇರಿದಂತೆ ಮೂರು ರಾಜ್ಯಗಳ ಸಚಿವರು ಮತ್ತು ಶಾಸಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಕೇವಲ ಗೇಟ್‌ಗಳ ಲೋಕಾರ್ಪಣೆ ಮಾತ್ರವಲ್ಲದೆ, ಕಾಗದದಲ್ಲಿ ಉಳಿದಿದ್ದ ನವಲಿ ಜಲಾಶಯಕ್ಕೆ ಮತ್ತೆ ಮರು ಜೀವ ಸಿಗುವ ಲಕ್ಷಣಗಳು ಗೋಚರಿಸಿದೆ.

ಗೇಟ್‌ಗಳ ಲೋಕಾರ್ಪಣೆಗೂ ಮುನ್ನ ಜಿಲ್ಲೆಯ ಮುನೀರಾಬಾದ್‌ನ ಐಆರ್‌ಬಿ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಆಂಧ್ರ ಸಿಎಂ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಮತ್ತು ಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್ ಅವರು ಒಂದು ಗಂಟೆಗೂ ಹೆಚ್ಚು ಸಮಯ ಸಭೆ ನಡೆಸಿದ್ದು, ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗಿ ಹರಿದು ಹೋಗುವ 30 ಟಿಎಂಸಿಯಷ್ಟು ನೀರನ್ನು ತಡೆದು ಅದನ್ನು ಕೃಷಿ ಸೇರಿದಂತೆ ವಿವಿಧ ಕಾರ್ಯ ಗಳಿಗೆ ಬಳಸಿಕೊಳ್ಳಲು ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಇದರಿಂದ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ. ಆದರೆ ಪೋಲಾಗುವ ನೀರನ್ನು ಹೇಗೆ ತಡೆಯಬೇಕೆಂಬುವುದು ನಿರ್ಧಾರವಾಗಿಲ್ಲ. ನವಲಿ ಸಮನಾಂತರ ಜಲಾಶಯ, ಹೂಳೆತ್ತುವ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಲಾಗಿದೆ. ಹೇಗೆ ನೀರನ್ನು ತಡೆಯಬೇಕು ಎಂಬುವುದರ ಕುರಿತು ಯೋಜನೆಗಳನ್ನು ಮೂರು ರಾಜ್ಯಗಳು ರೂಪಿಸಿ ಕೇಂದ್ರ ಸರಕಾರದ ಅನುಮೋದನೆಯನ್ನು ಪಡೆದುಕೊಂಡು ನಂತರ ಕಾಮಗಾರಿಯನ್ನು ಆರಂಭಿಸಿಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟಾರೆ, ಪೋಲಾಗುವ ನೀರನ್ನು ತಡೆದು ಬಳಸಿಕೊಳ್ಳಲಾಗುವುದೆಂದು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಲೋಕಾರ್ಪಣೆಯ ನಂತರ ನಡೆದ ವೇದಿಕೆ ಕಾರ್ಯಕ್ರಮದ ತಮ್ಮ ಭಾಷಣವನ್ನು ಒತ್ತಿ ಹೇಳಿದ್ದಾರೆ. ವೇದಿಕೆಯ ಮೇಲೆ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ, ಆಂಧ್ರಪ್ರದೇಶದ ಜಲಸಂಪನ್ಮೂಲ ಇಲಾಖೆ ಸಚಿವ ಡಾ. ನಿಮ್ಮಲ ರಾಮನಾಯ್ಡು, ಆಂಧ್ರಪ್ರದೇಶದ ಹಣಕಾಸು, ಯೋಜನೆ, ವಾಣಿಜ್ಯ ತೆರಿಗೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಪಯ್ಯವುಲ ಕೇಶವ್, ತೆಲಂಗಾಣದ ನೀರಾವರಿ ಇಲಾಖೆ ಹಾಗೂ ಸಿಎಡಿ ಸಚಿವ ಎನ್.ಉತ್ತಮ್ ಕುಮಾರ ರೆಡ್ಡಿ, ಕೊಪ್ಪಳದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಸಂಸದ ಕೆ. ರಾಜಶೇಖರ ಹಿಟ್ನಾಳ್, ಬಳ್ಳಾರಿ ಸಂಸದ ಈ. ತುಕಾರಾಮ್, ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಶಿವರಾಜ ಎಸ್. ತಂಗಡಗಿ, ಮುನಿರಾಬಾದ್ ತುಂಗಾಭದ್ರಾ ಯೋಜನೆ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನ್‌ಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಶಾಸಕ ಹೆಚ್.ಆರ್. ಗವಿಯಪ್ಪ, ಎಂ.ಪಿ. ಲತಾ ಮಲ್ಲಿಕಾರ್ಜುನ, ವಿಧಾನಪರಿಷತ್ ಶಾಸಕರುಗಳಾದ ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಬಸನಗೌಡ ಬಾದರ್ಲಿ ಹಾಗೂ ಎನ್.ಎಸ್. ಬೋಸರಾಜು, ಮಾಜಿ ಸಚಿವ ಹೆಚ್.ಕೆ. ಪಾಟೀಲ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ, ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಇತಿಹಾಸ ನಿರ್ಮಾಣ: ಡಿ.ಕೆ. ಶಿವಕುಮಾರ್

ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಇದು ದಕ್ಷಿಣ ಭಾರತದ ಐತಿಹಾಸಿಕ ಕಾರ್ಯಕ್ರಮ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ತುಂಗಭದ್ರಾ ಅಣೆಕಟ್ಟು ರಕ್ಷಣೆ ಮಾಡಲಾಗಿದೆ. ಸಿ.ಆರ್. ಪಾಟೀಲ್ ನೇತೃತ್ವದಲ್ಲಿ ಚಂದ್ರಬಾಬು ನಾಯ್ಡು, ರೇವಂತ್ ರೆಡ್ಡಿ ಅವರು ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಇತಿಹಾಸ ನಿರ್ಮಿಸಿದ್ದೇವೆ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಹೇಳುತ್ತಿರುತ್ತೇನೆ. ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಸೇರಿ ಮೂರು ರಾಜ್ಯಗಳ ರಕ್ಷಣೆ ಮಾಡಿದ್ದೇವೆ’ ಎಂದು ಡಿಕೆಶಿ ಹೇಳಿದರು. ಈ ಅಣೆಕಟ್ಟಿನ 33 ಟಿಎಂಸಿ ನೀರನ್ನು ಉಳಿಸುವ ಬಗ್ಗೆ ರೈತ ಮುಖಂಡರು ಸಲ್ಲಿಸಿರುವ ಮನವಿ ಸೇರಿದಂತೆ ಯಾವ ರೀತಿ ರಕ್ಷಿಸಿ, ರೈತ ಕುಟುಂಬಗಳನ್ನು ಕಾಪಾಡಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ನಾವೆಲ್ಲರೂ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ, ಇಂದು ನಾವು ಒಂದು ತಾಸುಗಳ ಕಾಲ ಮಾಡಿರುವ ಚರ್ಚೆ ದೇಶದ ನೀರಾವರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ಇತಿಹಾಸದ ಪುಟಕ್ಕೆ ಸೇರಲಿದೆ. ‘ನಮ್ಮ ನೀರು, ನಮ್ಮ ಹಕ್ಕು’ ಆಶಯದ ಅಡಿ ಮೂರು ರಾಜ್ಯಗಳ ರೈತರ ರಕ್ಷಣೆಗೆ ನಾವು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದೇವೆ’’ ಎಂದರು.

ಗೋದಾವರಿ-ಕಾವೇರಿ ನದಿಗಳ ಜೋಡಣೆಗೆ ನಾಯ್ಡು ಮನವಿ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮಾತನಾಡಿ, ಉತ್ತರ ಪ್ರದೇಶ-ಮಧ್ಯಪ್ರದೇಶ ನಡುವಿನ ಕೆನ್-ಬೆತ್ವಾ ಹಾಗೂ ರಾಜಸ್ಥಾನ-ಮಧ್ಯಪ್ರದೇಶ ನಡುವಿನ ಪಾರ್ವತಿ-ಕಾಳಿಸಿಂಧು-ಚಂಬಲ್ ನದಿ ಜೋಡಣೆ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಮಾದರಿಯಲ್ಲಿ, ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರಕಾರ ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.

ದೇಶದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನದಿಗಳ ಜೋಡಣೆ ಅತ್ಯಗತ್ಯವಾಗಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜ್ಯಕ್ಕೆ ಅನ್ಯಾಯವಾಗಬಾರದು. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಸುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ಅಗತ್ಯವಿದ್ದರೆ ತಮಿಳುನಾಡಿಗೂ ನೀರು ಒದಗಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.

ಮೂರು ತಲೆಮಾರುಗಳ ಸಮಸ್ಯೆಗೆ ಮುಕ್ತಿ: ರೇವಂತ್ ರೆಡ್ಡಿ

ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಮಾತನಾಡಿ ಬಳ್ಳಾರಿ, ಅನಂತಪುರ, ಕರ್ನೂಲ್ ಹಾಗೂ ಪಾಲಮೂರು ಜಿಲ್ಲೆಗಳ ವಲಸೆ ಸಮಸ್ಯೆಗಳು ಮತ್ತು ರೈತರ ಸಂಕಷ್ಟಗಳ ಬಗ್ಗೆ ಸರಕಾರಗಳಿಗೆ ಸಂಪೂರ್ಣ ಅರಿವಿದೆ. ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಲಾಗಿರುವ 33 ಸ್ಪಿಲ್‌ವೇ ಗೇಟ್‌ಗಳು ಜಲಾನಯನ ಪ್ರದೇಶದ ಮೂರು ತಲೆಮಾರುಗಳ ಸಮಸ್ಯೆಗೆ ಮುಕ್ತಿ ನೀಡಲಿದ್ದು, ಲಕ್ಷಾಂತರ ರೈತರ ಕಣ್ಣೀರು ಒರೆಸುವ ಕಾರ್ಯವಾಗಲಿದೆ ಎಂದು ಹೇಳಿದರು.

ವಿಜಯನಗರ ಸಾಮ್ರಾಜ್ಯದ ಸ್ಥಾಪನೆ ಹಾಗೂ 1950ರ ದಶಕದಲ್ಲಿ ಮೈಸೂರು ಮಹಾರಾಜರು ಮತ್ತು ಹೈದರಾಬಾದ್ ನಿಜಾಮರ ಕಾಲದಲ್ಲಿ ತುಂಗಭದ್ರಾ ಜಲಾಶಯ ನಿರ್ಮಾಣ ಆರಂಭವಾದ ದಿನಗಳಷ್ಟೇ ಈ ದಿನವೂ ಐತಿಹಾಸಿಕ ಮಹತ್ವ ಪಡೆದಿದೆ. ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಗೇಟ್‌ಗಳು ಪುನರುಜ್ಜೀವನಗೊಂಡು ಲೋಕಾರ್ಪಣೆಗೊಂಡಿರುವುದು ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದು ರೇವಂತ್ ರೆಡ್ಡಿ ಹೇಳಿದರು. ರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಕುಡಿಯುವ ನೀರು ಮತ್ತು ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಭಾಗದ ಜನರು ಕುಡಿಯುವ ಹಾಗೂ ಕೃಷಿ ನೀರಿನ ಕೊರತೆಯಿಂದ ಜಿಲ್ಲೆ, ರಾಜ್ಯಗಳನ್ನು ದಾಟಿ ವಲಸೆ ಹೋಗುವ ಪರಿಸ್ಥಿತಿ ಇದೆ. ಆದರೆ ನಮಗೆ ಸಿಗಬೇಕಾದ ನೀರು ಸಮುದ್ರ ಪಾಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕೀಯವನ್ನು ಬದಿಗಿಟ್ಟು ರೈತರ ಹಿತದೃಷ್ಟಿಯಿಂದ ಮೂರು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿವೆ. ಇದು ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲೆಯಾಗುವ ದಿನ ಎಂದು ಹೇಳಿದರು.

ರಾಜೋಲಿಬಂಡಾ ಡೈವರ್ಷನ್ ಸ್ಕೀಮ್ (ಆರ್‌ಡಿಎಸ್) ಅಡಿಯಲ್ಲಿ ತೆಲಂಗಾಣಕ್ಕೆ ನಿಗದಿಯಾಗಿರುವ 15.9 ಟಿಎಂಸಿ ನೀರಿನಲ್ಲಿ ರೈತರಿಗೆ ಕೇವಲ 5ರಿಂದ 6 ಟಿಎಂಸಿ ನೀರು ಮಾತ್ರ ಲಭ್ಯವಾಗುತ್ತಿದೆ. ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದು ಹಾಗೂ ನೀರಿನ ಹರಿವಿಗೆ ಅಡ್ಡಿಯಾಗುತ್ತಿರುವ ಸಮಸ್ಯೆಯಿಂದ ಉಳಿದ ನೀರು ದೊರೆಯುತ್ತಿಲ್ಲ. ಈ ಸಮಸ್ಯೆ ಬಗೆಹರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಕೇಂದ್ರ ಸಚಿವರು ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಗಮನಕ್ಕೆ ತರಲಾಗಿದೆ. ಕೃಷ್ಣಾ, ಗೋದಾವರಿ ಹಾಗೂ ತುಂಗಭದ್ರಾ ನದಿ ನೀರಿನ ಹಂಚಿಕೆ ವಿವಾದಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತೆಲಂಗಾಣ ಸರಕಾರ ಬದ್ಧವಾಗಿದೆ ಎಂದು ತೆಲಂಗಾಣ ಸಿಎಂ ಹೇಳಿದರು.

ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ‌ : ಕೇಂದ್ರ ಸಚಿವ ಸಿ.ಆರ್. ಪಾಟೀಲ್

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಮಾತನಾಡಿ ದೇಶದಾದ್ಯಂತ ಇರುವ ಬಹುತೇಕ ಅಣೆಕಟ್ಟುಗಳಲ್ಲಿ ಶೇಕಡಾ 15 ಕ್ಕಿಂತಲೂ ಹೆಚ್ಚು ಹೂಳು ತುಂಬಿಕೊಂಡಿದ್ದು, ಇದರಿಂದ ಜಲಾಶಯಗಳ ನೀರು ಸಂಗ್ರಹಣಾ ಸಾಮರ್ಥ್ಯ ಗಣನೀಯವಾಗಿ ಕುಸಿದಿದೆ. ಈ ಸಮಸ್ಯೆಯನ್ನು ಮನಗಂಡು ದೇಶದ ಅಣೆಕಟ್ಟುಗಳಿಂದ ಹೂಳು ತೆಗೆಯುವ (ಡಿ-ಸಿಲ್ಟಿಂಗ್) ಬೃಹತ್ ಯೋಜನೆಯೊಂದನ್ನು ಕೇಂದ್ರ ಸರಕಾರ ಸಿದ್ಧಪಡಿಸುತ್ತಿದೆ ಎಂದು ಹೇಳಿದರು.

ತುಂಗಭದ್ರಾ ಜಲಾಶಯದಲ್ಲೂ ಶೇ. 15ಕ್ಕಿಂತ ಹೆಚ್ಚು ಹೂಳು ತುಂಬಿಕೊಂಡಿರುವುದನ್ನು ಪ್ರಸ್ತಾಪಿಸಿದ ಅವರು, ಜಲಶಕ್ತಿ ಸಚಿವಾಲಯವು ಹೂಳು ತೆಗೆಯುವ ವಿಶೇಷ ಯೋಜನೆಯನ್ನು ರೂಪಿಸುತ್ತಿದ್ದು, ಈ ಯೋಜನೆಯ ತಾಂತ್ರಿಕ ಸಹಯೋಗವನ್ನು ಕೇಂದ್ರ ಸರಕಾರ ನೀಡಲಿದೆ. ಅನುಷ್ಠಾನದ ಜವಾಬ್ದಾರಿಯನ್ನು ಆಯಾ ರಾಜ್ಯ ಸರಕಾರಗಳು ಹೊರಬೇಕಾಗುತ್ತದೆ. ಈ ಯೋಜನೆ ಯಶಸ್ವಿಯಾದರೆ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯವನ್ನು ಶೇಕಡಾ 25 ರಿಂದ 30 ರಷ್ಟು ಹೆಚ್ಚಿಸಬಹುದಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಂತೆ ದೇಶವನ್ನು ರಸ್ತೆಗಳ ಮೂಲಕ ಹೇಗೆ ಜೋಡಿಸಲಾಗುತ್ತಿದೆಯೋ, ಅದೇ ರೀತಿ ನೀರಿನ ಯೋಜನೆಗಳ ಮೂಲಕವೂ ಇಡೀ ದೇಶವನ್ನು ಬೆಸೆಯಲಾಗುತ್ತಿದೆ. ರೈತರಿಗೆ ಹೆಚ್ಚಿನ ನೀರು ಲಭ್ಯವಾದರೆ, ಅವರು ವರ್ಷಕ್ಕೆ ಒಂದರ ಬದಲು ಎರಡು ಬೆಳೆಗಳನ್ನು ತೆಗೆಯಲು ಸಾಧ್ಯವಾಗುತ್ತದೆ ಮತ್ತು ಇದರಿಂದ ಅವರ ಆದಾಯವೂ ದ್ವಿಗುಣಗೊಳ್ಳುತ್ತದೆ ಎಂದು ಪಾಟೀಲ್ ಹೇಳಿದರು.

Tags

TungabhadraReservoircrest gates
share
ಮುಹಮ್ಮದ್ ಅಖೀಲ್ ಉಡೇವು
ಮುಹಮ್ಮದ್ ಅಖೀಲ್ ಉಡೇವು
Next Story
X