Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಉಡುಪಿ: ಊಟಕ್ಕಿಲ್ಲದ ಉಪ್ಪಿನಕಾಯಿ ಆಗಿರುವ...

ಉಡುಪಿ: ಊಟಕ್ಕಿಲ್ಲದ ಉಪ್ಪಿನಕಾಯಿ ಆಗಿರುವ ಕುಡಿಯುವ ನೀರಿನ ಘಟಕಗಳು!

ದುರಸ್ತಿ ಕಾಣದ ಶೀತಲೀಕರಣ ಯಂತ್ರಗಳು; ಅರವಟ್ಟಿಗೆ ಸ್ಥಾಪಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 May 2024 1:02 PM IST
share
ಉಡುಪಿ: ಊಟಕ್ಕಿಲ್ಲದ ಉಪ್ಪಿನಕಾಯಿ ಆಗಿರುವ ಕುಡಿಯುವ ನೀರಿನ ಘಟಕಗಳು!

ಉಡುಪಿ: ಸುಡು ಬಿಸಿಲ ಧಗೆಯ ವಾತಾವರಣದಲ್ಲಿ ನೀರಡಿಕೆಯಾದರೆ ಕುಡಿಯಲು ಹನಿ ನೀರು ಸಿಗದ ಪರಿಸ್ಥಿತಿ ಉಡುಪಿ ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಎದುರಾಗಿದೆ. ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಕುಡಿಯುವ ನೀರಿನ ಶೀತಲೀಕರಣ ಯಂತ್ರಗಳಿದ್ದರೂ ಊಟಕಿಲ್ಲದ ಉಪ್ಪಿನ ಕಾಯಿಯಂತಾಗಿವೆ.

ಹಳೆ ಸರಕಾರಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಗಡಿಯಾರ ಗೋಪುರದ ಬಳಿಯ ಪೊಲೀಸ್ ಚೌಕಿ ಮೊದಲಾದ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಕುಡಿಯುವ ನೀರಿನ ಶೀತಲೀಕರಣ ಯಂತ್ರಗಳು ಕೆಟ್ಟು ಹೋಗಿ ವರ್ಷಗಳೇ ಕಳೆದಿವೆ. ಸಾರ್ವಜನಿಕರು ದಾಹ ತೀರಿಸಲು ನೀರಿನ ಘಟಕಗಳತ್ತ ತೆರಳಿ ನಳ ತಿರುಗಿಸಿ ಹನಿ ನೀರು ಸಿಗದೆ ವಾಪಸ್ಸಾಗುವ ದೃಶ್ಯಗಳು ಸಾಮಾನ್ಯವಾಗಿವೆ.

ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿಯೂ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬರುವ ಯಾತ್ರಿಕರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ಉದ್ಭವವಾಗಿದೆ. ಉಷ್ಣ ಹವೆ ವಾತಾವರಣದಿಂದ ಜನರು ಕೆಂಗೆಟ್ಟು ಹೋಗಿದ್ದಾರೆ. ಉಡುಪಿ ಜಿಲ್ಲಾಡಳಿತ, ನಗರಸಭೆ ಈ ಕುರಿತು ತಕ್ಷಣವೇ ಕ್ರಮ ತೆಗೆದುಕೊಂಡು ನಗರದ ಸಾರ್ವಜನಿಕ ಸ್ಥಳಗಳಲ್ಲಿರುವ ಕುಡಿಯುವ ನೀರಿನ ಶೀತಲೀಕರಣ ಯಂತ್ರಗಳನ್ನು ದುರಸ್ತಿಪಡಿಸಬೇಕು. ಅಲ್ಲದೆ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ನೀರಿನ ಅರವಟ್ಟಿಗೆ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X