Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಜಯನಗರ ಕ್ಯಾಂಪ್ ಶಾಲೆ ತಾತ್ಕಾಲಿಕ...

ವಿಜಯನಗರ ಕ್ಯಾಂಪ್ ಶಾಲೆ ತಾತ್ಕಾಲಿಕ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ1 July 2026 2:36 PM IST
share
ವಿಜಯನಗರ ಕ್ಯಾಂಪ್ ಶಾಲೆ ತಾತ್ಕಾಲಿಕ ಸ್ಥಳಾಂತರ

ರಾಯಚೂರು : ಇಲ್ಲಿನ ವಿಜಯನಗರ ಕ್ಯಾಂಪ್ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಸಮೀಪದ ಹುಣಸೆಹಾಳ ಹುಡಾ ಗ್ರಾಮದ ಶಾಲೆಗೆ ಸ್ಥಳಾಂತರ ಮಾಡಲಾಗಿದೆ.

21 ಮಕ್ಕಳಿರುವ ವಿಜಯನಗರ ಕ್ಯಾಂಪ್ ಶಾಲೆಯಲ್ಲಿ1ರಿಂದ 5ನೇ ತರಗತಿ ಇದ್ದು ಇಬ್ಬರು ಖಾಯಂ ಶಿಕ್ಷಕರಿದ್ದಾರೆ. ಎರಡು ಕೊಠಡಿಗಳಿದ್ದರೂ ಶಿಥಿಲಾವಸ್ಥೆಯಲ್ಲಿರುವುದರಿಂದ ಜೀವ ಭಯದಿಂದ ವಿದ್ಯಾರ್ಥಿಗಳು ಮರದ ನೆರಳಿನಲ್ಲಿ ಇನ್ನು ಕೆಲವು ವಿದ್ಯಾರ್ಥಿಗಳು ಶಾಲೆಯ ವರಾಂಡದಲ್ಲಿ ಕುಳಿತು ಪಾಠ ಕೇಳುತ್ತಿದ್ದರು.

ಈ ಕುರಿತು ವಾರ್ತಾಭಾರತಿ ಪತ್ರಿಕೆಯಲ್ಲಿ ಜೂನ್ 23ರಂದು ‘ಶಿಥಿಲಾವಸ್ಥೆಯಲ್ಲಿರುವ ವಿಜಯನಗರ ಕ್ಯಾಂಪ್ ಶಾಲೆ, ಜೀವ ಭಯದಲ್ಲಿ ಬಯಲಲ್ಲೇ ಬೋಧನೆ’ ಎಂಬ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿತ್ತು. ಇದಕ್ಕೆ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ ವೈಷ್ಣವಿ ಸ್ಪಂದಿಸಿ ಶಾಲೆಯ ವಾಸ್ತಾವಾಂಶವನ್ನು ಪರಿಶೀಲಿಸಿ ನಿಯಮಾನುಸಾರ ತಕ್ಷಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಮುಖ್ಯ ಅಪರ ಕಾರ್ಯದರ್ಶಿಗೆ ಪತ್ರ ಬರೆದು ಡಿಡಿಪಿಐಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಸಿಆರ್‌ಪಿ ಅವರೊಂದಿಗೆ ಭೇಟಿ ನೀಡಿ ಪಾಲಕರೊಂದಿಗೆ ತುರ್ತು ಸಭೆ ನಡೆಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷತಾ ಹಿನ್ನೆಲ್ಲೆ ವಿಜಯನಗರ ಕ್ಯಾಂಪ್ ಶಾಲೆಯನ್ನು ತಾತ್ಕಾಲಿಕವಾಗಿ 1ಕಿ.ಮೀ ದೂರದ ಹುಣಸೆಹಾಳಹುಡಾ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳಾಂತರಿಸಿದ್ದಾರೆ.

ಅಲ್ಲದೇ ಕೆಎಸ್‌ಆರ್‌ಟಿಸಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ವಿಜಯನಗರ ಕ್ಯಾಂಪ್ ಶಾಲೆಯ ಮಕ್ಕಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿದ್ದಾರೆ. ಪ್ರತಿದಿನ ಮಕ್ಕಳು ಬಸ್ ನಲ್ಲಿಯೇ ಶಾಲೆಗೆ ಹೋಗುತ್ತಿದ್ದಾರೆ.

ವಿಜಯನಗರ ಕ್ಯಾಂಪ್ ಶಾಲೆಯ ತರಗತಿಯ ಸುಗಮವಾಗಿ ಪುನರಾರಾಂಭ ಮಾಡುವವರೆಗೆ ಹುಣಸೆಹಾಳ ಹುಡಾ ಶಾಲೆಗೆ ಸ್ಥಳಾಂತರ ಮಾಡಿದ ಬಳಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಜಿಪಂ ಸಿಇಒಗೆ ಪತ್ರ ಬರೆದು ಸಿಎಸ್‌ಆರ್ ಅನುದಾನದಲ್ಲಿ ನೆರವು ಕೋರಿದ ಹಿನ್ನೆಲೆ ಟಿಐಡಿಇ ಸಂಸ್ಥೆಯ ಸಿಎಸ್‌ಆರ್ ನಿಧಿಯಲ್ಲಿ ಕಂಟೇನರ್ ಕೊಠಡಿಗಳನ್ನು ನಿರ್ಮಾಣಕ್ಕೆ ಭರವಸೆ ನೀಡಿದ್ದಾರೆ. ಶೀಘ್ರವೇ ಕೆಲಸಗಳು ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯನಗರ ಕ್ಯಾಂಪ್ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಸ್ಕಿಹಾಳ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವದರಿಂದ ಕಂಟೇನರ್ ಕೊಠಡಿಗಳ ನಿರ್ಮಾಣಕ್ಕೆ ಜಿ.ಪಂ ಸಿಇಒ ಅವರು ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹುಣಸೆಹಾಳ ಹುಡಾ ಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿದೆ.

-ಮಲ್ಲಿಕಾರ್ಜುನ

ಡಿಡಿಪಿಐ(ಆಡಳಿತ) ಶಾಲಾ ಶಿಕ್ಷಣ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X