Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ವೇತನ...

ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ವೇತನ ತಾರತಮ್ಯ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು10 May 2026 2:24 PM IST
share
ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ವೇತನ ತಾರತಮ್ಯ
ನೀರಾವರಿ ಅಧಿಕಾರಿಗಳಿಂದ ಸುಳ್ಳು ಮಾಹಿತಿ; ಕಾರ್ಮಿಕರು ಆಕ್ರೋಶ

ರಾಯಚೂರು: ತುಂಗಭದ್ರಾ ನೀರಾವರಿ ಯೋಜನೆ ವಿವಿಧ ಉಪ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ವೇತನ ಹಾಕಿದ್ದು, ಕಾರ್ಮಿಕ ನ್ಯಾಯಾಲಯದ ಆದೇಶದ ಮೇರೆಗೆ ವೇತನ ಹಾಕದೇ ತಾರತಮ್ಯ ಮಾಡಿದ್ದು, ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತುಂಗಭದ್ರಾ ನೀರಾವರಿ ಯೋಜನೆ ವಿವಿಧ ಉಪ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಬಾಕಿ ವೇತನ ಪಾವತಿ ಮಾಡುವಲ್ಲಿ ವಿಳಂಬ ಧೋರಣೆ ಖಂಡಿಸಿ ವಾರ್ತಾಭಾರತಿ ಪತ್ರಿಕೆಯಲ್ಲಿ ನಿರಂತರ ವರದಿಯ ಬಳಿಕ ವೇತನ ಪಾವತಿ ಮಾಡಲಾಗಿತ್ತು. ಆದರೆ ವೇತನ ಪಾವತಿ ವಿಳಂಬ ಖಂಡಿಸಿ ಕಾರ್ಮಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ಗಿಲ್ಲೆಸುಗೂರು ವಲಯ ಸೇರಿ ಕೆಲವೆಡೆ ವೇತನ ತಡೆ ಹಿಡಿಯಲಾಗಿತ್ತು.

ನ್ಯಾಯಾಲಯದ ಅದೇಶದ ಪ್ರಕಾರ ವೇತನ ಪಾವತಿ ಮಾಡಬೇಕಿದ್ದರೂ ಪಾವತಿ ಮಾಡಿರಲಿಲ್ಲ, ಬುಧವಾರ ಹಾಗೂ ಗುರುವಾರ ಕೆಲ ಕಾರ್ಮಿಕರಿಗೆ ಮನಸೋಇಚ್ಛೆ ವೇತನ ಪಾವತಿ ಮಾಡಿದ್ದು, ನ್ಯಾಯಾಲಯದ ಅದೇಶ ಉಲ್ಲಂಘನೆ ಮಾಡಿದ್ದಲ್ಲದೇ ಬಚವಾಗಲು ಮನಸಿಗೆ ಬಂದಂತೆ ಹಣ ಹಾಕಿದ್ದಾರೆ. ಆಮೂಲಕ ಕಾರ್ಮಿಕರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ.

ಎಂಜಿನಿಯರ್‌ಗಳಿಗೆ ಶೋಕಾಸ್ ನೋಟೀಸ್: ಕಾರ್ಮಿಕರು ಸಲ್ಲಿಸಿದ ದೂರಿನ ಮೇರೆಗೆ ಕಲಬುರಗಿ ಉಪ ಕಾರ್ಮಿಕ ಆಯುಕ್ತ ಮುಂದೆ ದಾಖಲಾಗಿದ್ದ ಪ್ರಕರಣದಲ್ಲಿ ವಿಚಾರಣೆ ನಡೆಸಿ, ವೇತನ ಪಾವತಿ ಕಾಯ್ದೆ ಅನ್ವಯ 30 ದಿನಗಳ ಒಳಗಾಗಿ ಕಾರ್ಮಿಕರಿಗೆ ಬಾಕಿ ವೇತನ ಪಾವತಿಸಬೇಕು ಎಂದು ಸ್ಪಷ್ಟ ಆದೇಶ ಹೊರಡಿಸಿದ್ದರು.

ಉಪ ಕಾರ್ಮಿಕ ಆಯುಕ್ತರ ಆದೇಶ ಹೊರಬಂದಿದ್ದರೂ ವೇತನ ಪಾವತಿ ಮಾಡಿಲ್ಲ ಎಂದು ಯರಮರಸ್, ಕವಿತಾಳ, ತುರ್ವಿಹಾಳ, ಆರ್‌ಡಿಎಸ್, ತುರ್ವಿಹಾಳ ಜವಳಗೇರಾ ಹಾಗೂ ಇತರೆ ವಲಯದ ನೀರಾವರಿ ಅಧಿಕಾರಿಗಳು ಆದೇಶ ಪಾಲನೆ ಮಾಡದೇ ಕಾಲಹರಣ ಮಾಡಿದ್ದರು. ಹೀಗಾಗಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ನೋಟೀಸ್‌ಗೆ ಉತ್ತರಿಸದ ಅನೇಕ ಅಭಿಯಂತರರು ಈಗ ಅರ್ಧಮರ್ಧ ವೇತನ ಪಾವತಿಸಿ ಕಾರ್ಮಿಕರಲ್ಲಿ ಒಡಕು ಮೂಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸುಳ್ಳು ಮಾಹಿತಿ ನೀಡಿ, ದಿಕ್ಕು ತಪ್ಪಿಸುತ್ತಿರುವ ಅಧಿಕಾರಿಗಳು: ವೇತನ ಪಾವತಿಯಲ್ಲಿ ವ್ಯತ್ಯಾಸ ಉಂಟಾದ ಬಗ್ಗೆ ವಾರ್ತಾಭಾರತಿಯಿಂದ ಕೇಳಲಾದ ಪ್ರಶ್ನೆಗೆ ಯರಮರಸ್ ಅಧೀಕ್ಷಕ ಅಭಿಯಂತರ ಸತ್ಯನಾರಾಯಣ ಶೆಟ್ಟಿ ಹಾಗೂ ಗಿಲ್ಲೆಸುಗೂರು ವಲಯದ ಶಾಂತರಾಜ ಅವರು ಎಲ್ಲಾ ವಲಯಗಳಿಗೆ ‘ಬೇರೆ ಬೇರೆ ಗುತ್ತೇದಾರರು ಇರುವುದರಿಂದ ವೇತನ ಪಾವತಿಯಲ್ಲಿ ವಿಳಂಬವಾಗಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ.

ವಾಸ್ತವವಾಗಿ, ಕಾರ್ಮಿಕ ಮುಖಂಡರು ಹಾಗೂ ಸ್ಥಳೀಯ ಮೂಲಗಳ ಪ್ರಕಾರ ಯರಮರಸ್ ಮತ್ತು ಆರ್‌ಡಿಎಸ್ ಎರಡು ಉಪ ವಿಭಾಗಗಳಿಗೆ ಟಿ.ಪ್ರಕಾಶ್ ಎಂಬ ಒಬ್ಬರೇ ಗುತ್ತೇದಾರರಾಗಿದ್ದು, ಅಧಿಕಾರಿಗಳು ವಾಸ್ತವಾಂಶ ಮುಚ್ಚಿಟ್ಟು ಸುಳ್ಳು ಮಾಹಿತಿ ನೀಡುವ ಮೂಲಕ ಸಾರ್ವಜನಿಕರನ್ನು ಹಾಗೂ ಮಾಧ್ಯಮಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಕರೆ ಸ್ವೀಕರಿಸದ ಸಹಾಯಕ ಕಾರ್ಯಪಾಲಕ ಅಭಿಯಂತರ: ಆರ್‌ಡಿಎಸ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಶಾಂತರಾಜ್ ಅವರಿಗೆ ಈ ಕುರಿತಂತೆ ಹಲವು ಬಾರಿ ಕರೆ ಮಾಡಿದರೂ ಕಳೆದ 2-3 ದಿನಗಳಿಂದ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ,

ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ,‘ಕಾರ್ಮಿಕ ನ್ಯಾಯಾಲಯ ಮತ್ತು ಕಾರ್ಮಿಕ ಇಲಾಖೆಯ ಆದೇಶಗಳನ್ನೇ ಪಾಲಿಸದ ಅಧಿಕಾರಿಗಳಿಂದ ಸಾಮಾನ್ಯ ಕಾರ್ಮಿಕರಿಗೆ ಯಾವ ರೀತಿಯ ನ್ಯಾಯ ಮತ್ತು ಭದ್ರತೆ ನಿರೀಕ್ಷಿಸಲು ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ.

ಕಾರ್ಮಿಕರಿಗೆ ಬಾಕಿ ವೇತನ ಪಾವತಿ ಮಾಡುವಲ್ಲಿ ಕಾರ್ಮಿಕರಲ್ಲಿ ವ್ಯತ್ಯಾಸ ಮಾಡಿದ ಬಗ್ಗೆ ಗಮನಕ್ಕೆ ಬಂದಿದೆ. ಯಾವ ವಲಯದ ಅಧಿಕಾರಿಗಳು, ಎಷ್ಟು ಕಾರ್ಮಿಕರಿಗೆ ಕಡಿಮೆ ವೇತನ ಹಾಕಿರುವ ಬಗ್ಗೆ ಮಾಹಿತಿ ಪಡೆದು ಮೇಲಧಿಕಾರಿಗಳಿಗೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು.

-ಎಂ.ಎಸ್ ಗೋಡೆಕರ್

ಕಾರ್ಯಪಾಲಕ ಅಭಿಯಂತರರು ಯರಮರಸ್ ವಿಭಾಗ

Tags

Wage discriminationTungabhadrairrigation workers
share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X