Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು...

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಆರೋಗ್ಯಕ್ಕೆ ಹಿತಕರ

ಜಿಲಾನಸಾಬ್ ಬಡಿಗೇರ್ಜಿಲಾನಸಾಬ್ ಬಡಿಗೇರ್28 April 2026 9:28 AM IST
share
ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಆರೋಗ್ಯಕ್ಕೆ ಹಿತಕರ
ಫ್ರಿಡ್ಜ್ ನೀರಿಗಿಂತ ಮಡಕೆ ನೀರೇ ಉತ್ತಮ! ಕಾರಣಗಳು ನಿಮಗೆ ಗೊತ್ತಾ?

ಈಗಿನ ಬೇಸಿಗೆ ಕಾಲದಲ್ಲಿ ಎಲ್ಲರೂ ತಂಪಾದ ನೀರನ್ನು ಕುಡಿಯಲು ಬಯಸುತ್ತಾರೆ. ಆರೋಗ್ಯದ ದೃಷ್ಟಿಯಿಂದ ಇತ್ತೀಚಿನ ದಿನಗಳಲ್ಲಿ ಅನೇಕರು ಫ್ರಿಡ್ಜ್ ನೀರಿಗಿಂತ ಮಣ್ಣಿನ ಮಡಕೆಯ ನೀರನ್ನೇ ಹೆಚ್ಚು ಇಷ್ಟಪಡುತ್ತಾರೆ. ಮಡಕೆಯ ನೀರು ತಂಪು ನೀಡುವುದಲ್ಲದೆ, ಆರೋಗ್ಯಕ್ಕೂ ಹಿತಕಾರಿ.

ಮಡಕೆಯಲ್ಲಿ ನೀರು ತುಂಬಿಸುವ ಮುನ್ನ ಸರಿಯಾಗಿ ಸ್ವಚ್ಛಗೊಳಿಸಬೇಕು. ಸರಿಯಾಗಿ ತೊಳೆಯದಿದ್ದರೆ, ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಹೊರಗಿನಿಂದ ಬಂದು ಒಮ್ಮೆಲೇ ತಕ್ಷಣ ಫ್ರಿಡ್ಜ್ ತೆಗೆದು ತಣ್ಣಗಿನ ನೀರನ್ನು ಕುಡಿಯುವುದು ಸಾಮಾನ್ಯ. ಆದರೆ ಅತಿ ಹೆಚ್ಚು ತಣ್ಣಗಿನ ಫ್ರಿಡ್ಜ್ ನೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಕೆಲವು ದುಷ್ಪರಿಣಾಮಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ.

ಮಡಕೆಯ ನೀರನ್ನು ಸರ್ವರೋಗಕ್ಕೂ ಮದ್ದು ಎಂದು ಆಯುರ್ವೇದದಲ್ಲಿ ಹೇಳಲಾಗುತ್ತದೆ. ಅಲ್ಲದೆ ಮಡಿಕೆ ನೀರು ಸಂಪೂರ್ಣವಾಗಿ ನೈಸರ್ಗಿಕವಾಗಿರುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ಹಾನಿ ಮಾಡುವುದಿಲ್ಲ.

ಮಣ್ಣಿನ ಪಾತ್ರೆಯಲ್ಲಿ ನೀರು ಕುಡಿಯುವುದು ದೇಹದ ಚಯಾಪಚಯ ಕ್ರಿಯೆ ಉತ್ತೇಜಿಸುತ್ತದೆ. ಜೊತೆಗೆ ಇದರಲ್ಲಿರುವ ಖನಿಜಾಂಶಗಳು ಜೀರ್ಣ ಶಕ್ತಿ ಹೆಚ್ಚಿಸುತ್ತವೆ.

ನೈಸರ್ಗಿಕವಾಗಿ ಮಣ್ಣಿನ ಪಾತ್ರೆಗಳಲ್ಲಿನ ನೀರು ತಣ್ಣಗಾಗುತ್ತದೆ. ನೀರಿನ ರುಚಿ ಸಿಹಿಯಾಗಿರುತ್ತದೆ. ಬೇಸಿಗೆಯಲ್ಲಿ ಬಿಸಿಲಿನಿಂದ ಕೆಲವು ರೋಗಗಳು ಹರಡುತ್ತವೆ. ಇದನ್ನು ತಡೆಯಲು ಮಣ್ಣಿನ ಮಡಕೆ ನೀರು ಅತ್ಯುತ್ತಮ ನೈಸರ್ಗಿಕ ಔಷಧವಾಗಿದೆ. ಒಂದು ಲೋಟ ನೀರಿನಲ್ಲಿ ಬಾಯಾರಿಕೆ ನೀಗಿಸುತ್ತದೆ.

ಕ್ಷಾರೀಯ ದೇಹದಲ್ಲಿ ಉಷ್ಣ ಮಟ್ಟ ನಿಯಂತ್ರಿಸಲು ಅದು ಸಹಾಯ ಮಾಡುತ್ತದೆ. ಜತೆಗೆ ದೇಹವು ಬಹಳ ಮುಖ್ಯವಾದ ನೀರಿನ ಮಟ್ಟ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಣ್ಣಿನ ಮಡಕೆ ನೀರು ಶೀತ, ಕೆಮ್ಮು, ಒಣ ಗಂಟಲು, ಅಸ್ತಮಾ ಮತ್ತು ಗಂಟಲು ನೋವಿನಂತಹ ಸಮಸ್ಯೆಗಳಿಗೆ ಅತ್ಯುತ್ತಮ ಆಯ್ಕೆಯಾಗಿದೆ.

ನೀರಿನಲ್ಲಿರುವ ವಿಷಕಾರಿ ಅಂಶಗಳನ್ನು ಹೀರಿಕೊಂಡು ನೀರನ್ನು ಶುದ್ಧವಾಗಿಸುವ ಗುಣಗಳು ಮಣ್ಣಿನೊಳಗೆ ಇವೆ ಎಂದು ಹೇಳಲಾಗುತ್ತದೆ. ಇದು ನೀರಿನ ಎಲ್ಲಾ ಅಗತ್ಯ ಸೂಕ್ಷ್ಮ ಪೋಷಕಾಂಶಗಳು ನೀರಿನಲ್ಲಿ ಉಳಿಯಲು ಅನುವು ಮಾಡಿಕೊಡುತ್ತದೆ.

ಪರಿಸರಕ್ಕೂ-ದೇಹಕ್ಕೂ ಮಾರಕ ಪೂರಕ :

ಮಣ್ಣಿನ ಮಡಿಕೆಗಳು ಪರಿಸರ ಸ್ನೇಹಿ. ಪ್ಲಾಸ್ಟಿಕ್ ಬಾಟಲಿ, ಕಂಟೇನರ್‌ಗಳಲ್ಲಿ ನೀರು ಸಂಗ್ರಹಿಸಿಟ್ಟು ಕುಡಿದರೆ ನಮ್ಮ ದೇಹಕ್ಕೂ ಅಪಾಯ. ಪ್ಲಾಸ್ಟಿಕ್ ಹಲವು ರೋಗಗಳಿಗೆ ಮೂಲ. ಹಾಗೇ, ಖಾಲಿಯಾದ ಬಾಟಲಿಗಳನ್ನ ನಾಶ ಮಾಡಲೂ ಸಾಧ್ಯವಿಲ್ಲ. ಸಿಕ್ಕಸಿಕ್ಕಲ್ಲಿ ಎಸೆದರೆ ಪರಿಸರಕ್ಕೆ ಹಾನಿಕಾರಕ. ಹೀಗಾಗಿ ಪರ್ಯಾಯವಾಗಿ ಮಣ್ಣಿನ ಮಡಿಕೆಗಳನ್ನೇ ಬಳಸಿದರೆ ಒಳ್ಳೆಯದು.

Tags

water
share
ಜಿಲಾನಸಾಬ್ ಬಡಿಗೇರ್
ಜಿಲಾನಸಾಬ್ ಬಡಿಗೇರ್
Next Story
X