Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯುವಕರ ರೀಲ್ಸ್‌ಗಳ ಹುಚ್ಚಾಟಕ್ಕೆ ನೀರಿನ...

ಯುವಕರ ರೀಲ್ಸ್‌ಗಳ ಹುಚ್ಚಾಟಕ್ಕೆ ನೀರಿನ ಟ್ಯಾಂಕ್ ವೇದಿಕೆ

ಜಿಲಾನಸಾಬ್ ಬಡಿಗೇರ್ಜಿಲಾನಸಾಬ್ ಬಡಿಗೇರ್6 Jun 2026 8:10 AM IST
share
ಯುವಕರ ರೀಲ್ಸ್‌ಗಳ ಹುಚ್ಚಾಟಕ್ಕೆ ನೀರಿನ ಟ್ಯಾಂಕ್ ವೇದಿಕೆ
ಜೀವಕ್ಕೆ ಅಪಾಯವಾದರೆ ಯಾರು ಹೊಣೆ?: ಪಾಲಕರ ಪ್ರಶ್ನೆ

ಕಂಪ್ಲಿ : ಪಟ್ಟಣದ ಜನರ ನೀರಿನ ದಾಹ ನೀಗಿಸಲು ಸರಬರಾಜು ಮಾಡುವ ನೀರು ಸಂಗ್ರಹಣ ಘಟಕದ ಬೃಹತ್ ಟ್ಯಾಂಕ್‌ಗಳು ಈಗ ಯುವಕರ ರೀಲ್ಸ್‌ಗಳಿಗೆ ವಿಷಯದ ವೇದಿಕೆಯಂತಾಗಿದ್ದು, ರಕ್ಷಣಾ ಕಂಬಿಗಳಿಲ್ಲದ ಅವು ಯುವಕರ ರೀಲ್ಸ್ ಹುಚ್ಚಾಟಕ್ಕೆ ಕಾರಣವಾಗಿವೆ.

ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವುದಕ್ಕಾಗಿ ವಿವಿಧ ಭಾಗಗಳಲ್ಲಿ ನಾಲ್ಕು ನೀರು ಸಂಗ್ರಹ ಮೇಲ್ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಅಲ್ಲಿ ಸಮರ್ಪಕವಾಗಿ ರಕ್ಷಣಾ ವ್ಯವಸ್ಥೆ ಇಲ್ಲದಿರುವುದರಿಂದ ನೀರು ಬೃಹತ್ ಸಂಗ್ರಹ ಮೇಲ್ತೊಟ್ಟಿಗಳು ಯುವಕರಿಗೆ ರೀಲ್ಸ್ ಮಾಡಲು ಅನುಕೂಲವಾಗಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಬಿಸಿ ಮುಟ್ಟಿಸುತ್ತಿಲ್ಲ.

ಪಟ್ಟಣದಲ್ಲಿ ಸರಾಗವಾಗಿ ಕುಡಿಯುವ ನೀರು ಸರಬರಾಜು ಮಾಡಲು ನಾಲ್ಕು ಮೂಲೆಗಳಲ್ಲಿ ಬೃಹತ್ ನೀರು ಸಂಗ್ರಹ ಮೇಲ್ತೊಟ್ಟಿಗಳನ್ನು ನಿರ್ಮಿಸಲಾಗಿದೆ. ತುಂಗಭದ್ರಾ ನದಿಯಿಂದ ನೀರನ್ನು ಪಟ್ಟಣದ ಮೂಲ ನೀರು ಸಂಗ್ರಹಗಾರಕ್ಕೆ ಸರಬರಾಜು ಮಾಡಿ ಅಲ್ಲಿ ನೀರನ್ನು ಶುದ್ಧೀಕರಿಸಿ ನಂತರ ಮೇಲ್ತೊಟ್ಟಿಗಳಿಗೆ ಸರಬರಾಜು ಮಾಡಲಾಗುತ್ತದೆ. ನಂತರ ಅಲ್ಲಿಂದ ಪಟ್ಟಣದ ವಿವಿಧ ಭಾಗಗಳಿಗೆ ನೀರನ್ನು ಸರಬರಾಜಾಗುತ್ತದೆ.

ಆದರೆ ನೀರು ಸಂಗ್ರಹ ಮೇಲ್ತೊಟ್ಟಿಗಳನ್ನು ನಿರ್ಮಿಸಿದ ಸ್ಥಳದಲ್ಲಿ ಮುಳ್ಳಿನ ಗಿಡಗಂಟೆಗಳು ಬೆಳೆದು ಪರಿಸರವೆಲ್ಲ ಕಾಡಿನಂತಾಗಿದೆ. ಜೊತೆಗೆ ಈ ನೀರು ಸಂಗ್ರಹ ಮೇಲ್ತೊಟ್ಟಿಗಳಿಗೆ ರಕ್ಷಣಾ ಗೋಡೆಗಳು ಇಲ್ಲದೆ ಇರುವುದರಿಂದ ಸಾರ್ವಜನಿಕರು ಬೇಕಾಬಿಟ್ಟಿ ಸಂಚರಿಸುತ್ತಿದ್ದಾರೆ. ರಾತ್ರಿಯಾದರೆ ಕುಡುಕರ ಅಡ್ಡವಾಗುತ್ತದೆೆ. ಮೇಲ್ತೊಟ್ಟಿಯ ಸ್ಥಳದಲ್ಲಿ ತಂತಿ ಬೇಲಿ ಹಾಕಿ ಗೇಟುಗಳನ್ನು ಅಳವಡಿಸಿದ್ದಾರೆ, ಆದರೆ ಅದಕ್ಕೆ ಬೀಗಗಳನ್ನು ಹಾಕದೆ ಇರುವುದರಿಂದ ಸಾರ್ವಜನಿಕರು, ಕಿಡಿಗೇಡಿಗಳು ಅಲ್ಲಿ ವಿವಿಧ ಕಾರ್ಯಗಳಲ್ಲಿ ತೊಡಗಿರುತ್ತಾರೆ. ಇನ್ನು ಕೆಲವರಂತೂ ನೀರು ಸಂಗ್ರಹ ಮೇಲ್ತೊಟ್ಟಿಯ ಮೇಲೆ ಹೋಗಿ ರೀಲ್ಸ್ ಮಾಡುತ್ತಾರೆ.

ಅಕಸ್ಮಾತ್ ರೀಲ್ಸ್ ಮಾಡುವ ಸಂದರ್ಭದಲ್ಲಿ ಮೇಲಿಂದ ಕೆಳಗೆ ಬಿದ್ದರೆ ಗತಿ ಏನು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾದ ಪುರಸಭೆ ಮಾತ್ರ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಜೊತೆಗೆ ನೀರು ಸಂಗ್ರಹ ತೊಟ್ಟಿಗಳಿಗೆ ರಕ್ಷಣಾ ಗೋಡೆಗಳನ್ನು ನಿರ್ಮಿಸುತ್ತಿಲ್ಲ. ಅಪಾಯಗಳು ಸಂಭವಿಸುವ ಮುನ್ನ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಪುರಸಭೆ ವ್ಯಾಪ್ತಿಯಲ್ಲಿ ನಾಲ್ಕು ನೀರು ಸಂಗ್ರಹ ಮೇಲ್ತೊಟ್ಟಿಗಳಿವೆ. ಅಲ್ಲಿ ಗಿಡಗಂಟಿಗಳು ಬೆಳೆದಿದ್ದು, ತೆರವುಗೊಳಿಸಲು ನೈರ್ಮಲ್ಯ ವಿಭಾಗಕ್ಕೆ ಸೂಚಿಸಲಾಗಿದೆ. ಈ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ನಾಮಫಲಕ ಅಳವಡಿಸಲು ತಿಳಿಸಿದ್ದು, ಸಂಗ್ರಹ ತೊಟ್ಟಿಗಳ ತಂತಿ ಬೇಲಿಯನ್ನು ತಾತ್ಕಾಲಿಕವಾಗಿ ಹಾಕಿಸಿ ಬೀಗ ಹಾಕಲಾಗುವುದು ಮತ್ತು ನಿರಂತರ ಕಾವಲು ಮಾಡಲಾಗುವುದು. ಒಂದು ವೇಳೆ ನೀರು ಸಂಗ್ರಹ ಮೇಲ್ತೊಟ್ಟಿ ಮೇಲೆ ಯುವಕರು, ಕಿಡಿಗೇಡಿಗಳು ರೀಲ್ಸ್ ಮಾಡುವುದು ಕಂಡು ಬಂದರೆ ಪೊಲೀಸ್ ಇಲಾಖೆ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

-ಬಿ. ಮಲ್ಲಿಕಾರ್ಜುನ, ಪ್ರಭಾರಿ ಮುಖ್ಯಾಧಿಕಾರಿ, ಪುರಸಭೆ, ಕಂಪ್ಲಿ

share
ಜಿಲಾನಸಾಬ್ ಬಡಿಗೇರ್
ಜಿಲಾನಸಾಬ್ ಬಡಿಗೇರ್
Next Story
X