Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಿಡಗುಂದಿಗೆ ಅಗ್ನಿಶಾಮಕ ಠಾಣೆ ಯಾವಾಗ?

ನಿಡಗುಂದಿಗೆ ಅಗ್ನಿಶಾಮಕ ಠಾಣೆ ಯಾವಾಗ?

► ಮಂಜೂರಾಗಿ ಬಹುದಿನ ಕಳೆದರೂ ಸ್ಥಳದ ಹುಡುಕಾಟದ್ಲೇ ಇಲಾಖೆ ► ಬೆಂಕಿ, ಅಪಘಾತ, ಕಾಲುವೆ ದುರಂತಕ್ಕೆ ದೂರದ ಠಾಣೆಗಳ ಅವಲಂಬನೆ

ಮಹಬೂಬ ವಾಲಿಕಾರಮಹಬೂಬ ವಾಲಿಕಾರ29 Oct 2026 12:35 PM IST
share
ನಿಡಗುಂದಿಗೆ ಅಗ್ನಿಶಾಮಕ ಠಾಣೆ ಯಾವಾಗ?

ನಿಡಗುಂದಿ‌ : ತಾಲೂಕು ಕೇಂದ್ರವಾದ ನಿಡಗುಂದಿ ಪಟ್ಟಣಕ್ಕೆ ಅಗ್ನಿಶಾಮಕ ಠಾಣೆ ಮಂಜೂರಾಗಿ ಬಹುದಿನಗಳೇ ಕಳೆದಿದ್ದರೂ, ಠಾಣೆ ಆರಂಭಕ್ಕೆ ಅಗತ್ಯವಾದ ಸ್ಥಳ ಗುರುತಿಸುವ ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಬೆಂಕಿ ಅವಘಡ, ಕೃಷಿ ಬೆಳೆಗಳಿಗೆ ಬೆಂಕಿ, ಹೆದ್ದಾರಿ ಅಪಘಾತ ಹಾಗೂ ಕಾಲುವೆ ದುರಂತಗಳಂತಹ ತುರ್ತು ಸಂದರ್ಭಗಳಲ್ಲಿ ಸ್ಥಳೀಯವಾಗಿ ತಕ್ಷಣ ನೆರವು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಡಗುಂದಿ ತಾಲೂಕು ವ್ಯಾಪ್ತಿಯಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಬಸವನಬಾಗೇವಾಡಿ ಅಥವಾ ಮುದ್ದೇಬಿಹಾಳದಿಂದ ಅಗ್ನಿಶಾಮಕ ವಾಹನಗಳು ಆಗಮಿಸಬೇಕಾಗಿದೆ. ದೂರದ ಠಾಣೆಯಿಂದ ವಾಹನಗಳು ಘಟನಾ ಸ್ಥಳ ತಲುಪುವಷ್ಟರಲ್ಲಿ ಅಮೂಲ್ಯ ಸಮಯ ವ್ಯರ್ಥವಾಗುವ ಸಾಧ್ಯತೆಯಿದ್ದು, ಬೆಂಕಿ ವೇಗವಾಗಿ ಹರಡಿದರೆ ಮನೆ, ಅಂಗಡಿ, ಗೋದಾಮು ಹಾಗೂ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಹಾನಿಯಾಗುವ ಆತಂಕವಿದೆ.

ಸ್ಥಳೀಯವಾಗಿಯೇ ಅಗ್ನಿಶಾಮಕ ಠಾಣೆ ಕಾರ್ಯನಿರ್ವಹಿಸಿದರೆ ಮಾಹಿತಿ ದೊರೆತ ತಕ್ಷಣ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಬಹುದು. ಇದರಿಂದ ನಷ್ಟದ ಪ್ರಮಾಣ ಕಡಿಮೆ ಮಾಡುವುದರ ಜತೆಗೆ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತ್ವರಿತ ರಕ್ಷಣೆಯೂ ದೊರೆಯಲಿದೆ.

ಕಬ್ಬಿನ ಗದ್ದೆಗಳ ರಕ್ಷಣೆಗೆ ಅಗತ್ಯ

ನಿಡಗುಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್, ತಂತಿಗಳಿಂದ ಉಂಟಾಗುವ ಕಿಡಿ ಅಥವಾ ಇತರ ಕಾರಣಗಳಿಂದ ಕಬ್ಬಿನ ಗದ್ದೆಗಳಿಗೆ ಬೆಂಕಿ ತಗುಲಿದರೆ, ತಿಂಗಳುಗಟ್ಟಲೆ ಶ್ರಮಿಸಿ ಬೆಳೆದ ಬೆಳೆ ಕೆಲವೇ ಕ್ಷಣಗಳಲ್ಲಿ ಸುಟ್ಟುಹೋಗುವ ಅಪಾಯವಿದೆ.

ಒಂದು ಗದ್ದೆಗೆ ಬೆಂಕಿ ತಗುಲಿದರೆ ಗಾಳಿಯ ದಿಕ್ಕಿನಲ್ಲಿ ಪಕ್ಕದ ಹೊಲಗಳಿಗೂ ಬೆಂಕಿ ವ್ಯಾಪಿಸುವ ಸಾಧ್ಯತೆಯಿದೆ. ಇಂತಹ ಸಂದರ್ಭಗಳಲ್ಲಿ ತಕ್ಷಣ ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪದಿದ್ದರೆ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಬೇಕಾಗುತ್ತದೆ. ಸ್ಥಳೀಯ ಠಾಣೆ ಇದ್ದಲ್ಲಿ ಕೃಷಿ ಬೆಳೆಗಳ ರಕ್ಷಣೆಗೆ ತುರ್ತು ನೆರವು ದೊರೆಯಲಿದೆ ಎಂಬುದು ರೈತರ ಅಭಿಪ್ರಾಯ.

ಹೆದ್ದಾರಿ ಅಪಘಾತಗಳಲ್ಲೂ ನೆರವು

ನಿಡಗುಂದಿ ಪಟ್ಟಣವು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-50ಕ್ಕೆ ಹೊಂದಿಕೊಂಡಿರುವುದರಿಂದ ಈ ಮಾರ್ಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ. ಅಪಘಾತ ಸಂಭವಿಸಿದಾಗ ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುವುದು ಅಥವಾ ಪ್ರಯಾಣಿಕರು ವಾಹನಗಳೊಳಗೆ ಸಿಲುಕಿಕೊಳ್ಳುವಂತಹ ಘಟನೆಗಳಲ್ಲಿ ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಬೇಕಾಗುತ್ತದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಗತ್ಯ ರಕ್ಷಣಾ ಉಪಕರಣಗಳು ಇಂತಹ ಸಂದರ್ಭಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಸ್ಥಳೀಯ ಠಾಣೆ ಆರಂಭವಾದರೆ ಅಪಘಾತದ ಸ್ಥಳಕ್ಕೆ ಶೀಘ್ರವಾಗಿ ತಲುಪಿ ಸಂತ್ರಸ್ತರ ರಕ್ಷಣೆಗೆ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ.

ನಿಡಗುಂದಿ ಸುತ್ತಮುತ್ತ ಆಲಮಟ್ಟಿ ಜಲಾಶಯ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಕಾಲುವೆಗಳಿದ್ದು, ಕಾಲುವೆಗಳಲ್ಲಿ ಕಾಲುಜಾರಿ ಬೀಳುವುದು ಸೇರಿದಂತೆ ಜಲ ದುರಂತಗಳು ಸಂಭವಿಸುವ ಸಾಧ್ಯತೆಯಿದೆ. ಇಂತಹ ಘಟನೆಗಳಲ್ಲಿ ಸಂತ್ರಸ್ತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತುರ್ತಾಗಿ ನಡೆಯಬೇಕಾಗುತ್ತದೆ. ಅಗತ್ಯ ಸಿಬ್ಬಂದಿ, ರಕ್ಷಣಾ ದೋಣಿಗಳು ಹಾಗೂ ಇತರ ಉಪಕರಣಗಳು ಸ್ಥಳೀಯವಾಗಿಯೇ ಲಭ್ಯವಿದ್ದರೆ ದುರಂತ ಸಂದರ್ಭಗಳಲ್ಲಿ ಜೀವ ರಕ್ಷಣೆಗೆ ಹೆಚ್ಚಿನ ನೆರವಾಗಲಿದೆ.

ಅಗ್ನಿಶಾಮಕ ಠಾಣೆ ಮಂಜೂರಾಗಿ ಬಹುದಿನಗಳಾದರೂ ಸ್ಥಳ ಗುರುತಿಸುವ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಸಮನ್ವಯದಿಂದ ಸೂಕ್ತ ಸರಕಾರಿ ಜಾಗ ಗುರುತಿಸಿ, ಠಾಣೆಯ ಕಟ್ಟಡ ನಿರ್ಮಾಣ, ಅಗ್ನಿಶಾಮಕ ವಾಹನ, ತರಬೇತಿ ಪಡೆದ ಸಿಬ್ಬಂದಿ ಹಾಗೂ ಅಗತ್ಯ ರಕ್ಷಣಾ ಉಪಕರಣಗಳನ್ನು ಒದಗಿಸಬೇಕು. ಮಂಜೂರಾತಿ ಕಾಗದದಲ್ಲೇ ಉಳಿಯದೆ ಠಾಣೆ ಶೀಘ್ರ ಕಾರ್ಯಾರಂಭ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

share
ಮಹಬೂಬ ವಾಲಿಕಾರ
ಮಹಬೂಬ ವಾಲಿಕಾರ
Next Story
X