Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮುಸ್ಲಿಮರಿಗೆ ಒಬಿಸಿ ಮೀಸಲಾತಿ...

ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಮರುಸ್ಥಾಪನೆಗೆ ಏಕಿಷ್ಟು ವಿಳಂಬ?

ಕೆ.ಎನ್. ಲಿಂಗಪ್ಪಕೆ.ಎನ್. ಲಿಂಗಪ್ಪ28 May 2026 6:10 AM IST
share
ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಮರುಸ್ಥಾಪನೆಗೆ ಏಕಿಷ್ಟು ವಿಳಂಬ?

ಇತ್ತೀಚಿನ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಗೆಲುವಿನ ಅಂತರ ಭಾರೀ ಕುಸಿದಿರುವುದು ಮತ್ತು ಮುಸ್ಲಿಮ್ ಸಂಘಟನೆಗಳು ನಮಗೆ ರಾಜಕೀಯ ಪರ್ಯಾಯಗಳಿವೆ ಎಂದು ಎಚ್ಚರಿಕೆ ನೀಡಿರುವುದನ್ನು ತೀವ್ರವಾಗಿ ಸರಕಾರ ಗಮನಿಸಬೇಕಾಗಿದೆ. ಪಾರಂಪರಿಕವಾಗಿ ಮುಸ್ಲಿಮ್ ಸಮುದಾಯವು ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾ ಬಂದಿರುವುದು ಸರ್ವ ವೇದ್ಯವಾಗಿದೆ.

ಸಮಾವೇಶದಲ್ಲಿ ಹತ್ತು ಬೇಡಿಕೆಗಳನ್ನು ಸರಕಾರಕ್ಕೆ ಮುಸ್ಲಿಮ್ ಸಮುದಾಯ ಮಂಡಿಸಿದೆ.

ಕೇವಲ ಚುನಾವಣೆಗಳಿಗಾಗಿ ಮುಸ್ಲಿಮ್ ಸಮುದಾಯವನ್ನು ಬಳಸಿಕೊಂಡು ಹಕ್ಕುಗಳ ಮರುಸ್ಥಾಪನೆಯ ಸರದಿ ಬಂದಾಗ ಜಾಣ ಮೌನವಹಿಸುವುದು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಯಲ್ಲವೇ?

‘‘ಮುಸ್ಲಿಮರು ಧಾರ್ಮಿಕ ಅಲ್ಪಸಂಖ್ಯಾತರು ಎಂದ ಮಾತ್ರಕ್ಕೆ ಅವರನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ಹೊರಗಿಡಲು ಯಾವುದೇ ಆಧಾರವಿಲ್ಲ. ನಮ್ಮ ಅಭಿಪ್ರಾಯದಲ್ಲಿ ಮುಸ್ಲಿಮ್ ಸಮೂಹಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲು ನಿರ್ಧರಿಸಿರುವ ಸರಕಾರದ ನಿಲುವು ನಿರ್ದಿಷ್ಟವಾಗಿ ಸಮರ್ಥನೀಯ’’ - ಕರ್ನಾಟಕ ಉಚ್ಚ ನ್ಯಾಯಾಲಯ (ಎಸ್.ಸಿ. ಸೋಮಶೇಖರಪ್ಪ vs ಕರ್ನಾಟಕ). ಎಲ್. ಜಿ. ಹಾವನೂರು ಆಯೋಗ ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿರದಿದ್ದರೂ 1977ರಲ್ಲಿ ದೇವರಾಜ ಅರಸು ಸರಕಾರ ಮುಸ್ಲಿಮರನ್ನು ಹಿಂದುಳಿದ ಪಟ್ಟಿಯಲ್ಲಿ ಸೇರಿಸಲು ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯ ಎತ್ತಿ ಹಿಡಿದು ನೀಡಿರುವ ಅಭಿಪ್ರಾಯವಿದು. ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರನ್ನು ಹಿಂದುಳಿದ ವರ್ಗಗಳೆಂದು ಪರಿಗಣಿಸಿ ಮೀಸಲಾತಿ ನೀಡುವುದು ಸಂವಿಧಾನ ವಿರೋಧಿ ಎಂಬ ಅಭಿಪ್ರಾಯ ಇತ್ತೀಚೆಗೆ ಚಾಲನೆಗೆ ಬಂದು ಜಿಜ್ಞಾಸೆ ಉಂಟಾಗಿರುವುದರಿಂದ ಉಚ್ಚ ನ್ಯಾಯಾಲಯದ ಈ ಅಭಿಪ್ರಾಯ ಮಹತ್ವದ್ದಾಗಿದೆ.

ಪ್ರಸ್ತುತ ಅನುಷ್ಠಾನದಲ್ಲಿರುವ ಹಿಂದುಳಿದ ವರ್ಗಗಳಿಗೆ ಅನ್ವಯಿಸುವ ಮೀಸಲಾತಿಯು ನ್ಯಾ. ಒ. ಚಿನ್ನಪ್ಪ ರೆಡ್ಡಿ ವರದಿ ಆಧರಿತವಾಗಿದೆ. ಮೀಸಲಾತಿ ಪಟ್ಟಿಯಲ್ಲಿ ಪ್ರವರ್ಗ -2 ಬಿಯಲ್ಲಿ ಮುಸ್ಲಿಮ್ ಸಮುದಾಯವನ್ನು ಸೇರಿಸಲಾಗಿದೆ. ಅನುಚಾನವಾಗಿ 1994ರಿಂದಲೂ ಮೀಸಲಾತಿ ಸವಲತ್ತನ್ನು ಆ ಸಮುದಾಯ ಪಡೆದುಕೊಂಡು ಬರುತ್ತಿದೆ. ಯಾವ ಒಬ್ಬ ನಾಗರಿಕರೂ ಕೂಡ ಮುಸ್ಲಿಮರಿಗೆ ಸಂಬಂಧಿಸಿದ ಈ ಮೀಸಲಾತಿ ಕೋಟಾವನ್ನು ಯಾವ ವೇದಿಕೆಯಲ್ಲೂ ಪ್ರಶ್ನಿಸಿರುವುದಿಲ್ಲ ಎಂಬುದನ್ನು ಈ ಸಂದರ್ಭದಲ್ಲಿ ದಾಖಲಿಸಬೇಕಾಗುತ್ತದೆ.

ಇಂಥ ಅಸಂದಿಗ್ಧ ಪರಿಸ್ಥಿತಿಯಲ್ಲಿ 2023ರ ಮಾರ್ಚ್ ತಿಂಗಳಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ 2ಬಿಯಲ್ಲಿದ್ದ ಮುಸ್ಲಿಮ್ ಸಮುದಾಯವನ್ನು ಏಕಾಏಕಿ ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆದು ಹಾಕಲಾಯಿತು. ಆ ಸಮುದಾಯಕ್ಕೆ ನಿಗದಿ ಪಡಿಸಿದ್ದ ಮೀಸಲಾತಿ ಕೋಟಾ 4 ಅನ್ನು ಪ್ರವರ್ಗ- 3ಎ ಮತ್ತು ಪ್ರವರ್ಗ- 3 ಬಿಯಲ್ಲಿದ್ದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳನ್ನು ಪ್ರವರ್ಗ- 2 ಬಿಗೆ ವರ್ಗಾಯಿಸಿ ಅವುಗಳಿಗೆ ತಲಾ ಶೇ. 2ರಷ್ಟು ಕೋಟಾವನ್ನು ಹಂಚಿಕೆ ಮಾಡಲಾಯಿತು.

ಹೀಗೆ, ನ್ಯಾಯೋಚಿತವಲ್ಲದ ತೀರ್ಮಾನವನ್ನು ಭಾಜಪ ಸರಕಾರ ತೆಗೆದುಕೊಳ್ಳಲು ಇರುವ ಕಾರಣವೆಂದರೆ ಅದು ಪಕ್ಕಾ ಕ್ಷುದ್ರ ರಾಜಕೀಯ. ಭಾಜಪವು ಮುಸ್ಲಿಮರ ಮೇಲೆ ಅವಕಾಶ ಸಿಕ್ಕಾಗಲೆಲ್ಲಾ ಅಸಾಂವಿಧಾನಿಕ ಕೃತ್ಯ ನಡೆಸುವುದು ಅದರ ಚಾಳಿಯಾಗಿಬಿಟ್ಟಿದೆ. ಪ್ರಬಲ ಗುರಿ ಎಂದರೆ ಧರ್ಮವೊಂದರ ಮತ ಬ್ಯಾಂಕ್ ಅನ್ನು ಗಟ್ಟಿಗೊಳಿಸಿ ಅಡಕವಾಗಿರುವ ಕಾರ್ಯಸೂಚಿಯನ್ನು ಕಾರ್ಯಸಾಧ್ಯವಾಗಿಸಿಕೊಳ್ಳುವುದು. ಇಂಥ ಅನಿಷ್ಟ ಜನವಿರೋಧಿ ಕೃತ್ಯಗಳು ಕಾಲದ ನಡುವೆ ನಡೆಯುತ್ತಲೇ ಇರುತ್ತವೆ.

ಇಲ್ಲಿ ಗಮನಿಸಬೇಕಾದ ಮಹತ್ವದ ಅಂಶವೆಂದರೆ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿರುವ ಯಾವುದೇ ಜಾತಿಯನ್ನು ಹೊರಗೆ ಹಾಕಬೇಕಾದರೂ ಅಥವಾ ಪಟ್ಟಿಗೆ ಸೇರಿಸಬೇಕಾದರೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಭಿಪ್ರಾಯವಿಲ್ಲದಿದ್ದಲ್ಲಿ ಸರಕಾರ ಇಂಥ ಪ್ರಕ್ರಿಯೆಯನ್ನು ಕೈಗೊಳ್ಳುವುದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಾಯ್ದೆ, 1995ರ ಉಲ್ಲಂಘನೆಯಾಗುತ್ತದೆ. ಹಿಂದುಳಿದ ವರ್ಗಗಳ ಆಯೋಗವು ಕೂಡ ಪ್ರತೀ 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ (ಕಾಯ್ದೆ ಕಲಂ 9/2) ಸಮೀಕ್ಷೆಯ ದತ್ತಾಂಶವನ್ನು ಆಧಾರವಾಗಿಟ್ಟುಕೊಂಡು (ಕಾಯ್ದೆ ಕಲಂ 11) ಯಾವುದೇ ಹಿಂದುಳಿದ ಜಾತಿ ಅಥವಾ ವರ್ಗ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ(ಅನುಚ್ಛೇದ 15/4) ಹಿಂದುಳಿದಿವೆ ಮತ್ತು ಸರಕಾರದ ಹುದ್ದೆ ಮತ್ತು ನೇಮಕಾತಿಯಲ್ಲಿ ಸಾಕಷ್ಟು ಪ್ರಾತಿನಿಧ್ಯ(ಅನುಚ್ಛೇದ 16 /4) ಪಡೆದಿವೆ ಎಂಬ ಅಂಶಗಳು ದೃಢಪಟ್ಟಲ್ಲಿ ಮಾತ್ರ ಅಂಥವುಗಳನ್ನು ಮೀಸಲಾತಿ ಪಟ್ಟಿಯಿಂದ ಹೊರಗಿಡಲು ಸಾಧ್ಯ. ಸರಕಾರವು ಮುಸ್ಲಿಮ್ ಸಮುದಾಯವನ್ನು ಮೀಸಲಾತಿ ಪಟ್ಟಿಯಿಂದ ಹೊರಗಿಡಲು ಆದೇಶಿಸುವ ಮುನ್ನ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಅಥವಾ ಸಲಹೆ ಪಡೆದಿದೆಯೇ ಎಂಬುದು ಮಾತ್ರ ನಿಗೂಢ.

ಬಿಜೆಪಿ ಸರಕಾರದ ವಾದ ಏನಿತ್ತು?

ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ, ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದು ಪರಿಗಣಿಸಲು ವೈಜ್ಞಾನಿಕ ದತ್ತಾಂಶಗಳಿಲ್ಲ ಎಂಬ ವಾದವನ್ನು ಭಾಜಪ ಸರಕಾರ ಮುಂದಿಟ್ಟಿತ್ತು. ಆದರೆ ಕೇಂದ್ರ ಸರಕಾರವೇ ಮಂಡಲ್ ವರದಿ ಆಧರಿತ ಮೀಸಲಾತಿ ಅನುಷ್ಠಾನದಲ್ಲಿ ಮುಸ್ಲಿಮರಿಗೂ ಮೀಸಲಾತಿಯನ್ನು ನೀಡಿದೆ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಸುಪ್ರೀಂ ಕೋರ್ಟ್ ತಡೆ

ಮುಸ್ಲಿಮ್ ಸಮುದಾಯದ ಮೀಸಲಾತಿಯನ್ನು ರದ್ದುಗೊಳಿಸಿರುವ ಆದೇಶವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಯಿತು. ಸರ್ವೋಚ್ಚ ನ್ಯಾಯಾಲಯವು ಸರಕಾರದ ಈ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಅಂದರೆ ಕಾನೂನಾತ್ಮಕವಾಗಿ ಪ್ರವರ್ಗ-2 ಬಿ ಮೀಸಲಾತಿ ವ್ಯವಸ್ಥೆಯೇ ಮುಂದುವರಿಯಲಿ ಎಂದಿತು. ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಮುಸ್ಲಿಮ್ ಸಮುದಾಯ ಪ್ರವರ್ಗ-2 ಬಿ ಕೋಟಾದಲ್ಲಿಯೇ ಮೀಸಲಾತಿ ಪಡೆಯುತ್ತಿದೆ.

ಕಾಂಗ್ರೆಸ್ ಪಕ್ಷದ ವಾಗ್ದಾನ

2023ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಮತ್ತು ಪ್ರಚಾರದ ವೇಳೆ ಕಾಂಗ್ರೆಸ್ ನಾಯಕರು ತಾವು ಅಧಿಕಾರಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಮರಿಗೆ ಮೀಸಲಾತಿ ಪಟ್ಟಿಯ ಪ್ರವರ್ಗ- 2 ಬಿ ಯಲ್ಲಿಯೇ ಕಾನೂನು ಬದ್ಧವಾಗಿ ಮರುಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದ್ದರು.

ಮೂರು ವರ್ಷಗಳ ನಂತರದ ಸ್ಥಿತಿ (2026)

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದು ಹೋದರೂ ಮುಸ್ಲಿಮ್ ಸಮುದಾಯಕ್ಕೆ ಈ ಕೋಟಾವನ್ನು ಶಾಸನಾತ್ಮಕವಾಗಿ ಅಥವಾ ಸ್ಪಷ್ಟ ಕ್ಯಾಬಿನೆಟ್ ಆದೇಶದ ಮೂಲಕ ಗಟ್ಟಿಯಾಗಿ ಮರುಸ್ಥಾಪಿಸುವ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಲದ ಮೇಲೆಯೇ ಸದ್ಯಕ್ಕೆ ಪ್ರವೇಶಾತಿಗಳು ಮತ್ತು ನೇಮಕಗಳು ನಡೆಯುತ್ತಿವೆಯೇ ಹೊರತು ಸರಕಾರದ ಕಡೆಯಿಂದ ದೃಢವಾದ ಕಾನೂನು ರಕ್ಷಣೆ ಸಿಕ್ಕಿಲ್ಲ. ಕೇವಲ ಮತ ಬ್ಯಾಂಕ್ ರಾಜಕಾರಣಕ್ಕಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಳಿಕ ಕಾನೂನಾತ್ಮಕ ಹೋರಾಟಕ್ಕೆ ಬೆನ್ನು ತೋರಿಸುವುದು ಪ್ರಜಾಪ್ರಭುತ್ವಕ್ಕೆ ಶ್ರೇಯಸ್ಕರವಲ್ಲ. ಸರಕಾರ ತಕ್ಷಣವೇ ಶಾಸನಾತ್ಮಕ ಆದೇಶ ಹೊರಡಿಸಬೇಕಿದೆ.

ಮುಸ್ಲಿಮ್ ಸಂಘಟನೆಗಳ ಅಸಮಾಧಾನ

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮುಸ್ಲಿಮ್ ಸಮಾವೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಮುಸ್ಲಿಮ್ ಸಂಘಟನೆಗಳ ಒಕ್ಕೂಟವು ಸರಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದೆ. ಸಮಾವೇಶದಲ್ಲಿ ಬಿಡುಗಡೆಯಾದ 76 ಪುಟಗಳ ‘ಹೊಣೆಗಾರಿಕೆ ವರದಿ’ಯಲ್ಲಿ ಕಾಂಗ್ರೆಸ್ ಸರಕಾರ ಮುಸ್ಲಿಮ್ ಸಮುದಾಯಕ್ಕೆ ನೀಡಿದ ಭರವಸೆಗಳನ್ನು ಈಡೇರಿಸದೆ ‘ನಿಧಾನ ದ್ರೋಹ’ ಅಥವಾ ‘ಮೃದು ಹಿಂದುತ್ವ’ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಲಾಗಿದೆ.

ಸಮುದಾಯದ ಆಕ್ರೋಶ ಮತ್ತು ಎಚ್ಚರಿಕೆ

ಇತ್ತೀಚಿನ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಗೆಲುವಿನ ಅಂತರ ಭಾರೀ ಕುಸಿದಿರುವುದು ಮತ್ತು ಮುಸ್ಲಿಮ್ ಸಂಘಟನೆಗಳು ನಮಗೆ ರಾಜಕೀಯ ಪರ್ಯಾಯಗಳಿವೆ ಎಂದು ಎಚ್ಚರಿಕೆ ನೀಡಿರುವುದನ್ನು ತೀವ್ರವಾಗಿ ಸರಕಾರ ಗಮನಿಸಬೇಕಾಗಿದೆ. ಪಾರಂಪರಿಕವಾಗಿ ಮುಸ್ಲಿಮ್ ಸಮುದಾಯವು ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾ ಬಂದಿರುವುದು ಸರ್ವ ವೇದ್ಯವಾಗಿದೆ.

ಸಮಾವೇಶದಲ್ಲಿ ಹತ್ತು ಬೇಡಿಕೆಗಳನ್ನು ಸರಕಾರಕ್ಕೆ ಮುಸ್ಲಿಮ್ ಸಮುದಾಯ ಮಂಡಿಸಿದೆ.

ಕೇವಲ ಚುನಾವಣೆಗಳಿಗಾಗಿ ಮುಸ್ಲಿಮ್ ಸಮುದಾಯವನ್ನು ಬಳಸಿಕೊಂಡು ಹಕ್ಕುಗಳ ಮರುಸ್ಥಾಪನೆಯ ಸರದಿ ಬಂದಾಗ ಜಾಣ ಮೌನವಹಿಸುವುದು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಯಲ್ಲವೇ?

Tags

OBC reservationMuslims
share
ಕೆ.ಎನ್. ಲಿಂಗಪ್ಪ
ಕೆ.ಎನ್. ಲಿಂಗಪ್ಪ
Next Story
X