Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಡಗಿನಲ್ಲಿ ಜೆಡಿಎಸ್‌ಗೆ ಮರುಜೀವ...

ಕೊಡಗಿನಲ್ಲಿ ಜೆಡಿಎಸ್‌ಗೆ ಮರುಜೀವ ನೀಡುತ್ತಾರಾ ಎಚ್‌ಡಿಕೆ?

ಇಂದು ಸೋಮವಾರಪೇಟೆಯಲ್ಲಿ ಮುಖಂಡರ ಸಭೆ

ಕೆ.ಎಂ.ಇಸ್ಮಾಯಿಲ್ ಕಂಡಕರೆ/ವಾರ್ತಾಭಾರತಿಕೆ.ಎಂ.ಇಸ್ಮಾಯಿಲ್ ಕಂಡಕರೆ/ವಾರ್ತಾಭಾರತಿ22 Nov 2026 6:52 AM IST
share
ಕೊಡಗಿನಲ್ಲಿ ಜೆಡಿಎಸ್‌ಗೆ ಮರುಜೀವ ನೀಡುತ್ತಾರಾ ಎಚ್‌ಡಿಕೆ?

ಮಡಿಕೇರಿ : ಒಂದು ಕಾಲದಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡುತ್ತಿದ್ದ ಜೆಡಿಎಸ್, 2023ರ ವಿಧಾನಸಭಾ ಚುನಾವಣೆಯ ಬಳಿಕ ಕೊಡಗು ಜಿಲ್ಲೆಯಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಹಂತಕ್ಕೆ ತಲುಪಿದೆ. ಎರಡೂ ಕ್ಷೇತ್ರಗಳಲ್ಲಿ ಹೀನಾಯ ಸೋಲು ಕಂಡ ಬಳಿಕ ಪಕ್ಷದ ಸಂಘಟನಾ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿದ್ದು, ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದಿಂದ ದೂರವಾಗಿದ್ದಾರೆ.

2013 ಮತ್ತು 2018ರ ಚುನಾವಣೆಗಳಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದಿದ್ದ ಜೆಡಿಎಸ್, ಬಿ.ಎ. ಜೀವಿಜಯ ಅವರ ನಿರ್ಗಮನದ ಬಳಿಕವೂ ಕೆ.ಎಂ. ಗಣೇಶ್ ಅವರ ನೇತೃತ್ವದಲ್ಲಿ ಅಸ್ತಿತ್ವ ಉಳಿಸಿಕೊಂಡಿತ್ತು. ಆದರೆ 2023ರ ಚುನಾವಣೆಯ ನಂತರ ಅಲ್ಪಸಂಖ್ಯಾತ ಮುಸ್ಲಿಮ್ ಹಾಗೂ ಒಕ್ಕಲಿಗ ಸಮುದಾಯದ ಮತದಾರರ ಬೆಂಬಲವೂ ಕುಸಿದಿದೆ. ಸೋಮವಾರಪೇಟೆ ಮತ್ತು ಕುಶಾಲನಗರ ಭಾಗದಲ್ಲಿ ಪ್ರಬಲ ಕಾರ್ಯಕರ್ತರ ಪಡೆ ಹೊಂದಿದ್ದ ಪಕ್ಷ ಇದೀಗ ಸಂಘಟನೆಯ ಕೊರತೆ ಎದುರಿಸುತ್ತಿದೆ.

ಇನ್ನೊಂದೆಡೆ, ಬಿಜೆಪಿ ಜೊತೆ ರಾಜ್ಯಮಟ್ಟದಲ್ಲಿ ಮೈತ್ರಿ ಮಾಡಿಕೊಂಡಿದ್ದರೂ ಜಿಲ್ಲೆಯಲ್ಲಿ ಎರಡೂ ಪಕ್ಷಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ. ಜಂಟಿ ಸಭೆ ಹಾಗೂ ಪ್ರತಿಭಟನೆಗಳಲ್ಲಿಯೂ ಎರಡೂ ಪಕ್ಷಗಳ ನಾಯಕರು ಒಟ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ:

ಈ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನ.22ರಂದು ಸೋಮವಾರಪೇಟೆಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕಾರ್ಮಾಡು ಸುಬ್ಬಣ್ಣ, ಸಿ.ಎಲ್. ವಿಶ್ವ, ಪ್ರವೀಣ್ ಸೋಮವಾರಪೇಟೆ, ಸಿ.ವಿ. ನಾಗೇಶ್ ಹಾಗೂ ಕಾಟ್ಲೆಮನೆ ವಿಠಲಗೌಡ ಅವರು ಆಕಾಂಕ್ಷಿಗಳಾಗಿದ್ದಾರೆ. ಕೋರ್ ಕಮಿಟಿಯ ಕೆಲವರು ಕಾರ್ಮಾಡು ಸುಬ್ಬಣ್ಣ ಅವರ ಪರ ಒಲವು ಹೊಂದಿದ್ದರೆ, ಕುಮಾರಸ್ವಾಮಿ ಅವರು ಸಿ.ಎಲ್. ವಿಶ್ವ ಅವರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೂರು ವರ್ಷಗಳಿಂದ ನಾವಿಕನಿಲ್ಲದ ಹಡಗಿನಂತಿರುವ ಜೆಡಿಎಸ್‌ಗೆ ಹೊಸ ಜಿಲ್ಲಾಧ್ಯಕ್ಷರ ನೇಮಕದಿಂದ ಚೈತನ್ಯ ಬರಲಿದೆಯೇ? ಪಕ್ಷದಿಂದ ದೂರವಾಗಿರುವ ಕಾರ್ಯಕರ್ತರನ್ನು ಮತ್ತೆ ಸಂಘಟಿಸಲು ಸಾಧ್ಯವಾಗಲಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿದೆ.

ನಾನು ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ಪಕ್ಷ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ. ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಜಾತ್ಯತೀತ ನೆಲೆಗಟ್ಟಿನಲ್ಲಿ ಸಂಘಟಿಸುವ ಶಕ್ತಿ ನನ್ನಲ್ಲಿದೆ.

-ಸಿ.ಎಲ್. ವಿಶ್ವ, ಕೊಡಗು, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ

Tags

HDKJDSKodagu
share
ಕೆ.ಎಂ.ಇಸ್ಮಾಯಿಲ್ ಕಂಡಕರೆ/ವಾರ್ತಾಭಾರತಿ
ಕೆ.ಎಂ.ಇಸ್ಮಾಯಿಲ್ ಕಂಡಕರೆ/ವಾರ್ತಾಭಾರತಿ

ಕೆ.ಎಂ.ಇಸ್ಮಾಯಿಲ್ ಕಂಡಕರೆ ಅವರು ಕಳೆದ ಏಳು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪ್ರಸ್ತುತ ವಾರ್ತಾಭಾರತಿ ದಿನ ಪತ್ರಿಕೆಯ ಕೊಡಗು ಜಿಲ್ಲಾ ವಿಶೇಷ ವರದಿಗಾರರಾಗಿದ್ದಾರೆ. ಕ್ರೀಡೆ,ರಾಜಕೀಯ ಹಾಗೂ ವಿಶೇಷ ವರದಿಗಳನ್ನು ಹೆಚ್ಚಾಗಿ ಮಾಡುತ್ತಾರೆ.

Next Story
X