Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ಬಳಿ ಯಾರೂ ಬಂದಿಲ್ಲ, ಲಂಚ ಕೇಳಿಲ್ಲ:...

ನನ್ನ ಬಳಿ ಯಾರೂ ಬಂದಿಲ್ಲ, ಲಂಚ ಕೇಳಿಲ್ಲ: ವಿವಾದದ ಬಳಿಕ ಪಂಡಿತ್ ರಾಜೀವ್‌ ತಾರಾನಾಥ್‌ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ14 Oct 2023 4:03 PM IST
share
ನನ್ನ ಬಳಿ ಯಾರೂ ಬಂದಿಲ್ಲ, ಲಂಚ ಕೇಳಿಲ್ಲ: ವಿವಾದದ ಬಳಿಕ ಪಂಡಿತ್ ರಾಜೀವ್‌ ತಾರಾನಾಥ್‌ ಸ್ಪಷ್ಟನೆ

ಮೈಸೂರು: ʼʼನನ್ನ ಬಳಿ ಯಾವ ಅಧಿಕಾರಿಯೂ ಬಂದಿಲ್ಲ, ಲಂಚ ಕೇಳಿಲ್ಲʼʼ ಎಂದು ಖ್ಯಾತ ಸರೋದ್‌ ವಾದಕ ಪಂಡಿತ್ ರಾಜೀವ್‌ ತಾರಾನಾಥ್‌ ಅವರು ತಮ್ಮನ್ನು ಭೇಟಿ ಮಾಡಿದ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದಾರೆ.

ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಸಂಭಾವನೆಯಲ್ಲಿ ಪಂಡಿತ ರಾಜೀವ್‌ ತಾರಾನಾಥ್‌ ಅವರ ಬಳಿ ಅಧಿಕಾರಿಗಳು ಕಮಿಷನ್'ಗೆ ಬೇಡಿಕೆ ಇಟ್ಟಿದ್ದಾರೆನ್ನಲಾದ ಬಗ್ಗೆ ʼಆಂದೋಲನʼ ಪತ್ರಿಕೆಯಲ್ಲಿ ವರದಿಗಾರ ನಝೀರ್‌ ಅಹ್ಮದ್‌ ಅವರ ವಿಶೇಷ ವರದಿ ಪ್ರಕಟಗೊಂಡಿತ್ತು. ಆದರೆ ವಿವಾದದ ಬಳಿಕ ಇದೀಗ ತಾರಾನಾಥ್‌ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕೆಯ ವರದಿಯಲ್ಲೇನಿದೆ?

ಇಬ್ಬರು ಅಧಿಕಾರಿಗಳು ತಾರಾನಾಥ ಅವರನ್ನು ಸಂಪರ್ಕಿಸಿ “ನೀವು ಕೇಳಿದ ಸಂಭಾವನೆಗಿಂತ 3 ಲಕ್ಷ ರೂ. ಹೆಚ್ಚು ಕೊಡು ತ್ತೇವೆ. ಹಣ ಆರ್‌ಟಿಜಿಎಸ್ ಮೂಲಕ ನಿಮ್ಮ ಖಾತೆಗೆ ಬರುತ್ತದೆ. ಹೆಚ್ಚುವರಿಯಾಗಿ ಜಮೆಯಾಗುವ 3 ಲಕ್ಷ ರೂ. ಹಣವನ್ನು ನಮಗೆ ವಾಪಸ್ ನೀಡಬೇಕು” ಎಂದು ಕೋರಿದರೆನ್ನಲಾಗಿದೆ. ತಮ್ಮ ನೇರ ಮಾತು ಮತ್ತು ನಡವಳಿಕೆಗೆ ಹೆಸರಾದ ಪಂಡಿತ ತಾರಾನಾಥರು ಇದರಿಂದ ವ್ಯಗ್ರ ರಾಗಿ, ಕಮೀಷನ್ ಕೇಳಿದ ಅಧಿಕಾರಿಗಳಿಗೆ ಛೀಮಾರಿ ಹಾಕಿ ವಾಪಸ್ ಕಳಿಸಿ ದರು. ನಂತರದ ಬೆಳವಣಿಗೆಯಲ್ಲಿ ಅವರನ್ನು ದಸರಾ ಕಾರ್ಯಕ್ರಮದಿಂದ ಕೈಬಿಡಲಾಯಿತು ಎಂದು ಆಂದೋಲನ ಪತ್ರಕೆಯ ವರದಿ ತಿಳಿಸಿದೆ.

ಇನ್ನು ಪ್ರಜಾವಾಣಿ ಪತ್ರಿಕೆಯಲ್ಲಿ, ಖ್ಯಾತ ಸಂಗೀತ ಕಲಾವಿದರೊಬ್ಬರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿರುವ ಇಬ್ಬರು ಅಧಿಕಾರಿಗಳು 8ಲಕ್ಷ ಕೇಳಿ, 5 ಲಕ್ಷ ನೀವಿಟ್ಟುಕೊಳ್ಳಿ, 3 ಲಕ್ಷ ನಮಗೆ ಕೊಡಿ' ಎಂದು ಹೇಳಿರುವುದು ಮೂಲಗಳು ತಿಳಿಸಿವೆ. ಅದರಿಂದ ಸಿಟ್ಟಾದ ಕಲಾವಿದರು ಅವರನ್ನು ಇದೆಲ್ಲವೂ ಗಲೀಜು' ಎಂದು ಬೈದು ಮನೆಯಿಂದ ಹೊರ ಕಳುಹಿಸಿದರು ಎಂದು ವರದಿ ಮಾಡಿದೆ.

ಈ ಬಗ್ಗೆ ʼಆಂದೋಲನʼ ಪತ್ರಿಕೆಯ ವರದಿಗಾರ ನಝೀರ್‌ ಅಹ್ಮದ್‌ ಅವರನ್ನು‌ ʼವಾರ್ತಾ ಭಾರತಿʼ ಸಂಪರ್ಕಿಸಿದಾಗ, ʼʼ ಕಮಿಷನ್‌ ಬೇಡಿಕೆ ಬಗ್ಗೆ ತಾರಾನಾಥ್‌ ಅವರು ಅವರ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅವರ ಆಪ್ತರೊಬ್ಬರು ನಮ್ಮ ಪತ್ರಿಕೆಯ ಕಚೇರಿಗೆ ಫೋನ್‌ ಮೂಲಕ ಮಾಹಿತಿ ನೀಡಿದ್ದು, ಈ ವಿಷಯದ ಬಗ್ಗೆ ನಾನು ಖುದ್ದು ತಾರಾನಾಥ್‌ ಅವರನ್ನು ಭೇಟಿಯಾಗಿ ವಿಚಾರಿಸಿದಾಗ, ವ್ಯಾಪಕವಾಗಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಅಸಮಾಧಾನದ ಮಾತುಗಳನ್ನಾಡಿದರು. ಆದರೆ, ತಮ್ಮ ಬಳಿ ಅಧಿಕಾರಿಗಳು ಕಮಿಷನ್‌ ಗೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರುʼʼ ಎಂದು ಹೇಳಿದರು.

ಸಚಿವ ಡಾ. ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ

ʼಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆʼ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ʼʼಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಹಾಗೂ ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕೆಂದುʼʼ ಸಚಿವ ಎಚ್.ಸಿ.ಮಹದೇವಪ್ಪ ಅವರು ಸೂಚನೆ ನೀಡಿದ್ದಾರೆ.

ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಿರುತ್ತೇನೆ. pic.twitter.com/i3a0INu8Jd

— Dr H.C.Mahadevappa (@CMahadevappa) October 14, 2023


share
ವಾರ್ತಾಭಾರತಿ
ವಾರ್ತಾಭಾರತಿ
Next Story
X