Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮ್ಮ ಬೇಡಿಕೆ ಈಡೇರಿಸದೆ ದೌರ್ಜನ್ಯವೇಕೆ:...

ನಮ್ಮ ಬೇಡಿಕೆ ಈಡೇರಿಸದೆ ದೌರ್ಜನ್ಯವೇಕೆ: ಕೇಂದ್ರ ಸರಕಾರಕ್ಕೆ ಮಂಗಳಮುಖಿಯರ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ28 Dec 2018 2:02 PM IST
share
ನಮ್ಮ ಬೇಡಿಕೆ ಈಡೇರಿಸದೆ ದೌರ್ಜನ್ಯವೇಕೆ: ಕೇಂದ್ರ ಸರಕಾರಕ್ಕೆ ಮಂಗಳಮುಖಿಯರ ಪ್ರಶ್ನೆ

ಮಂಗಳೂರು, ಡಿ.28: ‘‘ಮಂಗಳಮುಖಿಯರಾಗಿ ನಾವು ಹಲವು ದಶಕಗಳಿಂದ ನೋವನ್ನು ಸಂಕಷ್ಟವನ್ನು ಎದುರಿಸುತ್ತಾ ಬರುತ್ತಿದ್ದೇವೆ. ಸಮಾಜದ ದೂಷಣೆಯ ಜತೆಗೆ ಸರಕಾರದಿಂದಲೂ ನಾವೀಗ ದೌರ್ಜನ್ಯವನ್ನು ಅನುಭವಿಸುವಂತಾಗಿದೆ. ನಮ್ಮ ಬೇಡಿಕೆ ಈಡೇರಿಸದೆ ಈ ರೀತಿ ಕಾಯ್ದೆ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿರುವುದೇಕೆ?’’

ಇದು ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೇಂದ್ರ ಸರಕಾರದ ಮಂಗಳಮುಖಿ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2016ನ್ನು ವಿರೋಧಿಸಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಮಂಗಳಮುಖಿಯರಿಂದ ಎತ್ತಿರುವ ಪ್ರಶ್ನೆ.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಸಂಜನಾ, ಸಮಾಜದಲ್ಲಿ ನಮಗೆ ಇತರರಂತೆ ಬದುಕಲು ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ನಾವು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ನಮ್ಮ ಬೇಡಿಕೆಗಳು ಈಡೇರಿಲ್ಲ. ಬದಲಿಗೆ ಕೇಂದ್ರ ಸರಕಾರ ಕಾಯ್ದೆ ಮೂಲಕ ಮತ್ತಷ್ಟು ದೌರ್ಜನ್ಯಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಾದಿ ಕಾಲದಿಂದಲೂ ನಮ್ಮನ್ನು ಮಂಗಳಮುಖಿಯರೆಂದು ಹೆಸರಿಸಿ, ಸಮಾಜದಿಂದ ದೂರವಿರಿಸಿ, ಲೈಂಗಿಕ ಕಾರ್ಯಕ್ಕೆ ನಮ್ಮನ್ನು ಬಳಸಿಕೊಂಡು ಇದೀಗ ನೀವು ಅದರಿಂದ ಹೊರಬನ್ನಿ, ನಿಮ್ಮ ಮನೆಯವರ ಜತೆ ಸೇರಿ ಎಂದು ಸರಕಾರ ಹೇಳುತ್ತಿದೆ. ನಮ್ಮನ್ನು ಮನೆಯಿಂದ ದೂರ ಮಾಡಿ ಮತ್ತೆ ನಮ್ಮನ್ನು ಕುಟುಂಬದವರು ಹತ್ತಿರಕ್ಕೆ ಸೇರಿಸುತ್ತಾರೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರ ಸರಕಾರ ಮಂಗಳಮುಖಿಯರಿಗೆ ತೊಂದರೆಯನ್ನು ನೀಡುವ ನಮ್ಮನ್ನು ಇನ್ನೂ ಪಾತಾಳಕ್ಕೆ ತಳ್ಳುವ ಈ ಕಾಯ್ದೆಯನ್ನು ಕೈಬಿಡಬೇಕು ಎಂದು ಟ್ರಸ್ಟಿನ ಕೋಶಾಧಿಕಾರಿ ಶ್ರೀನಿಧಿ ಒತ್ತಾಯಿಸಿದರು.

ಕಾಯ್ದೆ ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರ ಮೊದಲು ನಮಗೆ ನಮ್ಮ ಹಕ್ಕನ್ನು ಒದಗಿಸಿ. ಬದುಕಲು ಯೋಗ್ಯವಾದ ವಾತಾವರಣ ಕಲ್ಪಿಸಿ ಎಂದು ಉಪಾಧ್ಯಕ್ಷೆ ರಮ್ಯಾಗೌಡ ಆಗ್ರಹಿಸಿದರು.

ಸದಸ್ಯೆ ಕುಮಾರಿ ಮಾತನಾಡಿ, ನಮ್ಮನ್ನು ಮನೆಯವರು ದೂರ ಮಾಡಿದ ಬಳಿಕ ನಾವು ನಮ್ಮ ಸಮುದಾಯದವರ ಜತೆ ಸೇರಿ ಒಗ್ಗಟ್ಟಿನ ಬದುಕು ಬದುಕುತ್ತಿದ್ದೇವೆ. ನನಗೀಗ 50 ವರ್ಷ ಪ್ರಾಯ. ಕಳೆದ 35 ವರ್ಷಗಳಿಂದ ನಾನು ನನ್ನ ಕುಟುಂಬದವರಿಂದ ದೂರವಾಗಿ ಬದುಕು ಕಟ್ಟಿಕೊಂಡಿದ್ದೇನೆ. ಇದೀಗ ಆ ಬದುಕನ್ನು ನಮ್ಮಿಂದ ಕಸಿಯುವ ಪ್ರಯತ್ನ ಯಾಕೆ ಎಂದು ಪ್ರಶ್ನಿಸಿದರು.

ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಂಗಳಮುಖಿಯರು ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X