Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 53 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್,...

53 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 165 ಅಭ್ಯರ್ಥಿಗಳು: ಸಂಜೀವ್ ಕುಮಾರ್

ವಿಧಾನಸಭೆಯ ಉಪಚುನಾವಣೆ

ವಾರ್ತಾಭಾರತಿವಾರ್ತಾಭಾರತಿ21 Nov 2019 9:36 PM IST
share
53 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 165 ಅಭ್ಯರ್ಥಿಗಳು: ಸಂಜೀವ್ ಕುಮಾರ್

ಬೆಂಗಳೂರು, ನ.21: ವಿಧಾನಸಭೆಯ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದ 218 ಅಭ್ಯರ್ಥಿಗಳಲ್ಲಿ 53 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಒಟ್ಟು 165 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಗುರುವಾರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, 15 ಕ್ಷೇತ್ರಗಳ ಉಪಚುನಾವಣೆಗೆ 13 ಮಹಿಳೆಯರು ಸೇರಿ ಒಟ್ಟು 218 ನಾಮಪತ್ರ ಸಲ್ಲಿಕೆಯಾಗಿದ್ದವು. ನಾಮಪತ್ರ ಹಿಂಪಡೆಯುವಿಕೆಗೆ ಅಂತಿಮ ದಿನವಾಗಿದ್ದ ಗುರುವಾರ(ನ.21) 53 ಮಂದಿ ವಾಪಸ್ ಪಡೆದಿದ್ದಾರೆ ಎಂದು ತಿಳಿಸಿದರು.

ಶಿವಾಜಿನಗರದಲ್ಲಿ 19 ಮತ್ತು ಹೊಸಕೋಟೆಯಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದು, ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿರುವ ಕ್ಷೇತ್ರಗಳಾಗಿವೆ. 15 ಹೆಸರುಗಳು ಮಾತ್ರ ಒಂದು ಯಂತ್ರದಲ್ಲಿ ಬರಲಿವೆ. ಹೀಗಾಗಿ ಶಿವಾಜಿನಗರ ಮತ್ತು ಹೊಸಕೋಟೆಯಲ್ಲಿ ಎರಡು ಬ್ಯಾಲೆಟ್ ಯುನಿಟ್ ಬಳಕೆ ಮಾಡಲಾಗುತ್ತದೆ. ಉಳಿದ ಕ್ಷೇತ್ರಗಳಲ್ಲಿ ಒಂದೇ ಬ್ಯಾಲೆಟ್ ಯೂನಿಟ್ ಬಳಕೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ಕಲರ್ ವೋಟರ್ ಐಡಿ: ಹೊಸದಾಗಿ ಕಲರ್ ಮತದಾನದ ಗುರುತಿನ ಚೀಟಿ ವಿತರಣೆ ಮಾಡಲಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ ಸ್ಮಾರ್ಟ್ ಕಾರ್ಡ್ ರೀತಿಯ ವೋಟರ್ ಐಡಿ ನೀಡಲು ಆರಂಭಿಸಿದ್ದೇವೆ. ಬಾರ್ ಕೋಡ್‌ನೊಂದಿಗೆ ಮತದಾರರ ವಿವರ ಇರಲಿದೆ. ಹೊಸ ಮತದಾರರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಈಗಾಗಲೇ ಗುರುತಿನ ಚೀಟಿ(ವೋಟರ್ ಐಡಿ) ಇದ್ದು, ಸ್ಮಾರ್ಟ್ ಕಾರ್ಡ್ ರೀತಿಯ ಗುರುತಿನ ಚೀಟಿ ಬೇಕಾದರೆ 30ರೂ.ಶುಲ್ಕ ನೀಡಿ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಕ್ರಿಮಿನಲ್ ಹಿನ್ನಲೆಯ ಅಭ್ಯರ್ಥಿಗಳು ತಮ್ಮ ಪ್ರಕರಣಗಳ ಬಗ್ಗೆ ಮೂರು ಪ್ರಮುಖ ದಿನಪತ್ರಿಕೆ ಹಾಗು ಸುದ್ದಿ ವಾಹಿನಿಗಳಲ್ಲಿ ಜಾಹೀರಾತು ನೀಡಬೇಕು. ಇದನ್ನು ಕಳೆದ ಚುನಾವಣೆಯಲ್ಲಿ ಪರಿಚಯಿಸಿದ್ದು, ಈ ಬಾರಿಯೂ ಅದನ್ನು ಮುಂದುವರಿಕೆ ಮಾಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ತಮ್ಮ ಪ್ರಕರಣಗಳ ಬಗ್ಗೆ ಜಾಹೀರಾತು ನೀಡುವುದು ಕಡ್ಡಾಯವೆಂದು ಅವರು ಸೂಚಿಸಿದರು.

ಅಕ್ರಮ ನಗದು ವಶ: ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿ ನಗದು, ಮದ್ಯ, ಸೀರೆ ಸೇರಿದಂತೆ ಅಕ್ರಮವಾಗಿ ಸರಬರಾಜು ಮಾಡುತ್ತಿದ್ದ ಸುಮಾರು 4 ಕೋಟಿ 35 ಲಕ್ಷ ರೂ.ಕ್ಕೂ ಹೆಚ್ಚು ಮೌಲ್ಯದ ವಿವಿಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X